Breaking News

Breaking News

ಈಶ್ವರಪ್ಪ ಸಂಪುಟದಿಂದ ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಕೇಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುವ ಹೇಳಿಕೆ ನೀಡಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಕಾಂಗ್ರೆಸ್‌ ಶಾಸಕರ ನಿಯೋಗವು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹಾಗೂ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲ ತಾವರಚಂದ್‌ ಗೆಹ್ಲೋತ್‌ ಅವರಿಗೆ ಮನವಿ ಸಲ್ಲಿಸಿತು.

Read More »

ಕಾಂಗ್ರೆಸ್ ಪಕ್ಷ ವಿರುದ್ದ ವಾಗ್ದಾಳಿ ನಡೆಸಿದ ಸಿಎಂ

ಬೆಂಗಳೂರು: ರಾಜಕಾರಣದ ಮುಸುಕು ಕಾಂಗ್ರೆಸ್‌ ಮುಖಂಡರು ಮತ್ತವರ ಪಕ್ಷದ ಮೇಲೆ ಬಿದ್ದಿದ್ದು, ಅವರಿಗೆ ಭವಿಷ್ಯ ಇಲ್ಲ. ಕನಿಷ್ಠ ಪ್ರತಿಪಕ್ಷವಾಗಿಯಾದರೂ ಕೆಲಸ ಮಾಡುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಾಪ್ರಹಾರ ನಡೆಸಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಡಳಿತ ಪಕ್ಷವಾಗಿ ಕೆಲಸ ಮಾಡಲು ಯೋಗ್ಯರಲ್ಲ ಎಂದು ಕಾಂಗ್ರೆಸ್‌ ಅನ್ನು 2018ರಲ್ಲಿ ಜನರು ತೀರ್ಮಾನಿಸಿ ತಿರಸ್ಕರಿಸಿದರು. ಕನಿಷ್ಠ ಪ್ರತಿಪಕ್ಷವಾಗಿ ಕೆಲಸ ಮಾಡಬೇಕಿತ್ತು. ಆದರೆ, ಪ್ರತಿಪಕ್ಷವಾಗಿಯೂ ವಿಫಲವಾಗಿದೆ. ರಾಜಕಾರಣದ(Politics) ಮುಸುಕು …

Read More »

ಗ್ರಾಮೀಣ ಜನತೆಗೆ ಸಿಹಿ ಸುದ್ದಿ

ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಡಿ ನೇಮಕ ಮಾಡಲಾಗಿದೆ. ಜೊತೆಗೆ ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ದತಿ ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.

Read More »

ಮಲಯಾಳಂ ಚಿತ್ರರಂಗದ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನ

ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನರಾಗಿದ್ದಾರೆ.ಅವರಿಗೆ 74 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದಾಗಿ ಲಲಿತಾ ಅವರನ್ನು ಕೆಲವು ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆಸೆಯಂತೆ ಮನೆಗೆ ಕರೆತರಲಾಯಿತು. ಇದೀಗ ತಮ್ಮ ಪುತ್ರ ಸಿದ್ಧಾರ್ಥ್ ಅವರ ಕೊಚ್ಚಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

Read More »

ಅಪರೂಪದ ಕಾಯಿಲೆ 31 ಲಕ್ಷ ರೂ. ನೀಡಿ ಮಾನವೀಯತೆ ಮರೆದ ಭಾರತ ಕ್ರಿಕೆಟಿಗ

ಮುಂಬಯಿ: ಅಪರೂಪದ ರಕ್ತದ ಕಾಯಿಲೆಗೆ ಚಿಕಿತ್ಸೆ ನೀಡಲು ಅಸ್ಥಿ ಮಜ್ಜೆಯ ಕಸಿ ಅಗತ್ಯವಿರುವ 11 ವರ್ಷದ ಉದಯೋನ್ಮುಖ ಕ್ರಿಕೆಟಿಗನಿಗೆ 31 ಲಕ್ಷ. ರೂ. ನೆರವು ನೀಡುವ ಮೂಲಕ ಭಾರತ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಕೆ.ಎಲ್‌. ರಾಹುಲ್‌ ಮಾನವೀಯತೆ ಮೆರೆದಿದ್ದಾರೆ. “ವರದ್‌ ನಲವಡೆ ಅವರ ಸ್ಥಿತಿಯ ಬಗ್ಗೆ ನನಗೆ ತಿಳಿದಾಗ ನನ್ನ ತಂಡವು “ಗಿವ್‌ ಇಂಡಿಯಾ’ದೊಂದಿಗೆ ಸಂಪರ್ಕದಲ್ಲಿತ್ತು. ಇದರಿಂದ ನಾವು ಅವರಿಗೆ ಸಹಾಯ ಮಾಡಲು ಸಾಧ್ಯವಾಯಿತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದಕ್ಕೆ ನನಗೆ …

Read More »

ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು : ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್‌, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ ಎಂದರು.

Read More »

ಟ್ವೀಟ್ ಆರೋಪ : ನಟ ಚೇತನ್ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ನ್ಯಾಯಾಧೀಶರನ್ನು ನಿಂಧಿಸಿದಂತ ಪ್ರಕರಣ ಸಂಬಂಧ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ. 8 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಅಕ್ಷೇಪಾರ್ಯ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ನಿನ್ನೆ ನಟ ಚೇತನ್ ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ 8 ನೇ ಎಸಿಎಂಎಂ ಕೋರ್ಟ್ ನಟ ಚೇತನ್ ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Read More »

ಮಾ. 4ಕ್ಕೆ ರಾಜ್ಯ ಬಜೆಟ್ ಮಂಡನೆ : ಬೊಮ್ಮಾಯಿ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಗದ್ದಲದ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ಮಾರ್ಚ್ 4ಕ್ಕೆ ರಾಜ್ಯ ಬಜೆಟ್ ಮಂಡಿಸೋದಾಗಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಆರೋಪಿಸಿದಂತ ಬಿಜೆಪಿ ನಾಯಕರ ವಿರುದ್ಧ ಸದನದಲ್ಲಿ ಭಾವಿಗಿಳಿದು ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ತನಿಖೆಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಈ …

Read More »

ಹರ್ಷ ಹತ್ಯೆ ಪ್ರಕರಣ : 6 ಆರೋಪಿಗಳ ಬಂಧನ, 13 ಎಫ್​ಐಆರ್​ ದಾಖಲು

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು. ಇದೀಗ ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 13 ಎಫ್​ಐಆರ್​ ದಾಖಲಾಗಿವೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದರ ಅವರು, ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ …

Read More »

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಧಾರವಾಡದ ಕುವರಿ ಆಯ್ಕೆ

ಧಾರವಾಡ: ನಗರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಕೆ.ಇ.ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿನಿ ಅಮೂಲ್ಯ ಬಸಯ್ಯ ಹಿರೇಮಠ ಪ್ರಥಮ ಸ್ಥಾನ ಪಡೆದಿದ್ದಾಳೆ. ಈ ಮೂಲಕ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಕಸ ಗುಡಿಸುವ ಆಧುನಿಕ ಯಂತ್ರ ಆವಿಷ್ಕರಿಸಿರುವ ಈ ವಿದ್ಯಾರ್ಥಿನಿ, ಅದರ ಪ್ರಯೋಜನ ಮತ್ತು ಆವಿಷ್ಕಾರದ ಕುರಿತು ವಿವರಣೆ ನೀಡಿ ನಿರ್ಣಾಯಕರ ಗಮನಸೆಳೆದು ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ. ಸ್ವಚ್ಛ ಭಾರತ ಆಂದೋಲನದ ಘೋಷವಾಕ್ಯದ …

Read More »