Breaking News

Breaking News

ಪಂಜಾನ್ ನಲ್ಲಿ ಶಾಂತಿ, ಸರಳೆಯಿಂದ ನಡೆದ ಮತದಾನ

ಚಂಡೀಗಡ/ಲಖನೌ: ಪಂಜಾಬ್ ವಿಧಾನಸಭೆಯ ಎಲ್ಲ 117 ಕ್ಷೇತ್ರಗಳು ಹಾಗೂ ಉತ್ತರ ಪ್ರದೇಶದ 59 ಕ್ಷೇತ್ರಗಳಿಗೆ ಭಾನುವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು.ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಶೇ 68ರಷ್ಟು ಮತ ಚಲಾವಣೆಯಾಗಿದೆ.2017ರಲ್ಲಿ ಶೇ 77.36ರಷ್ಟು ಮತದಾನವಾಗಿತ್ತು. ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಶೇ 57ರಷ್ಟು ಮತದಾನವಾಗಿದೆ. ಈ ಕ್ಷೇತ್ರಗಳಲ್ಲಿ 2017ರಲ್ಲಿ ಶೇ 62ರಷ್ಟು ಮತದಾನವಾಗಿತ್ತು. ಐದು ಪ್ರಮುಖ ಪಕ್ಷಗಳು ಸ್ಪರ್ಧಿಸುವ ಕಾರಣ …

Read More »

ಇಂದಿನಿಂದ ಪಿಯು ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆ ಪ್ರಾರಂಭಬಾಗಲ

ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷ ಹೊತ್ತಿ ಉರಿಯುತ್ತಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಜಿಲ್ಲೆಯಲ್ಲಿ ಇಂದು ನಡೆಯಬೇಕಿರುವ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.ಈ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಅಷ್ಟೇ ಅಲ್ಲದೇ ಶಾಲಾ-ಕಾಲೇಜುಗಳ ಸುತ್ತಮುತ್ತ ಪೊಲೀಸ್‌ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Read More »

ದೆಹಲಿಯಲ್ಲಿ ಫೆ. 25 ರಂದು ಕಾಂಗ್ರೆಸ್‌ ನಾಯಕರ ಮೀಟಂಗ್

ಬೆಂಗಳೂರು: ಕಾರ್ಯತಂತ್ರ ರೂಪಿಸಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌, ಈ ಬಗ್ಗೆ ಚರ್ಚಿಸಲು ಇದೇ 25ರಂದು ದೆಹಲಿಗೆ ಬರುವಂತೆ ಪಕ್ಷದ ರಾಜ್ಯ ಮುಖಂಡರಿಗೆ ಆಹ್ವಾನ ನೀಡಿದೆ. 25ರಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಜ್ಯಸಭೆ ಕಾಂಗ್ರೆಸ್‌ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. …

Read More »

ಕಾಂಗ್ರೆಸ್ ನಾಯಕರ ಹೋರಾಟಕ್ಕೆ ನಾನು ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ : ಈಶ್ವರಪ್ಪ

ಶಿವಮೊಗ್ಗ: ಕಲಾಪ ಸಂದರ್ಭ ನಾನು ಆಡಿದ ಮಾತನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಹೋರಾಟ ಮಾಡುತ್ತಿದ್ದಾರೆ. ಅದಕ್ಕೆ ನಾನು ಯಾವುದೇ ಕಾರಣಕ್ಕೆ ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಧ್ವಜ ನನ್ನ ತಾಯಿ ಸಮಾನ. ಅದಕ್ಕೆ ಯಾರಾದರೂ ಅವಮಾನ ಮಾಡಿದರೆ ಸಹಿಸಲಾಗದು. ಅಂತಹವರು ರಾಷ್ಟ್ರದ್ರೋಹಿ ಎನಿಸಿಕೊಳ್ಳುತ್ತಾರೆ. ಹೀಗಾಗಿ, ದೇಶದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೇನೆ. ಇದೇ ವಿಚಾರವನ್ನು ಇಟ್ಟುಕೊಂಡು ಕಲಾಪದ ಸಮಯ ಹಾಳು ಮಾಡುವುದು …

Read More »

ಮೇಕೆದಾಟು ಪಾದಯಾತ್ರೆ 5 ದಿನಕ್ಕೆ ಮಾತ್ರ ಸೀಮಿತ : ಡಿ.ಕೆ. ಸುರೇಶ್‌

ರಾಮನಗರ: ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಇದೇ 27ರಂದು ಬೆಳಿಗ್ಗೆ 9ಕ್ಕೆ ರಾಮನಗರದಲ್ಲಿ ಚಾಲನೆ ದೊರೆಯಲಿದ್ದು, 7 ದಿನಗಳ ಬದಲಿಗೆ 5 ದಿನಕ್ಕೆ ನಡಿಗೆಯನ್ನು ಸೀಮಿತಗೊಳಿಸಲಾಗುವುದು ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ತಿಳಿಸಿದರು. ಭಾನುವಾರ ಸಂಜೆ ಕೆಂಗಲ್‌ನಲ್ಲಿ ನಡೆದ ಪಾದಯಾತ್ರೆ ಪೂರ್ವಭಾವಿ ಸಭೆಯ ವೇಳೆ ಪತ್ರಕರ್ತರಿಗೆ ಅವರು ಮಾಹಿತಿ ನೀಡಿದರು. ‘ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆಗೆ ನಿರ್ಧರಿಸಿದ್ದೆವು. ಆದರೆ ರಾಜ್ಯ ಬಜೆಟ್‌ ಇರುವ ಕಾರಣ ಅಲ್ಲಿ ಮೂರು …

Read More »

ಅಶ್ವಿನಿ ಪುನೀತ ರಾಜಕುಮಾರ್ ಗೆ ಪಿತೃ ವಿಯೋಗ

ಬೆಂಗಳೂರು: ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಶ್ವಿನಿ ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವನಾಥ್ ನಿಧನರಾಗಿದ್ದಾರೆ. ಪುನೀತ್ ರಾಜಕುಮಾರ್ ಅಗಲಿಕೆ ಆಘಾತದಿಂದ ಹೊರ ಬರುವ ಮೊದಲೇ ತಂದೆಯನ್ನು ಅಶ್ವಿನಿ ಕಳೆದುಕೊಂಡಿದ್ದಾರೆ. ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚಿಕ್ಕಮಗಳೂರು ಮೂಲದ ರೇವನಾಥ್ ಅವರು ಅಳಿಯ ಪುನೀತ್ ಅಗಲಿಕೆ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

Read More »

ಬಣ್ಣ ಲೋಕಕ್ಕೆ ಪಾದಾರ್ಪಣೆ ಮಾಡಿದ ಮಾಜಿ ಸಿಎಂ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಕನ್ನಡದ ತನುಜಾ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತನುಜಾ ಎಂಬ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಕೂಡ ಆರಂಭ ಆಗಿದ್ದು, ಶೂಟಿಂಗ್​ನಲ್ಲಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿರುವ ಫೋಟೋಗಳು ಲಭ್ಯವಾಗಿವೆ. ತುನುಜಾ ನೈಜ ಘಟನೆ ಆಧರಿಸಿದ ಸಿನಿಮಾ. ಕೊವಿಡ್​ ಸಂದರ್ಭದಲ್ಲಿ ನೀಟ್​ ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ …

Read More »

ಡಿ.ಕೆ. ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ : ಯುವಕರ ವಿರುದ್ಧ FIR ದಾಖಲು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ ಎಫ್​ಐಆರ್​ ದಾಖಲಾಗಿದೆ. ಮಂಜುನಾಥ್ ಎಂಬ ಪೊಲೀಸ್ ಪೇದೆ ಕೊಟ್ಟ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿದೆ. ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಮಹದಾಯಿ ಯೋಜನೆ ಮೂಲಕ ಗೋವಾಗೆ ನೀರು‌ ಹರಿಸುವ ಪ್ರಸ್ತಾಪ ಹಿನ್ನಲೆಯಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯರಾದ ಡಾ. ರವಿಶೇಟ್ಟಿ ಬೆಂದೂರ, ನಾಗಮಂಗಲದ ಕುಮಾರ್, ಕೆ.ಎನ್.ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದರು.

Read More »

ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಹೆಸರಿಡುವ ವಿಚಾರದಲ್ಲಿ ನನ್ನದೇನೂ ಅಭ್ಯಂತರ ಇಲ್ಲ : ಯದುವೀರ್ ಕೃಷ್ಣದತ್ತ

ಮೈಸೂರು : ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿರುವ ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಹೆಸರಿಡುವ ವಿಚಾರದಲ್ಲಿ ನನ್ನದೇನೂ ಅಭ್ಯಂತರ ಇಲ್ಲ. ಸರ್ಕಾರದ ಇಚ್ಛೆ ಇದ್ದರೆ ನಾಮಕರಣ ಮಾಡಬಹುದು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಖಾಸಗಿಯಾಗಿ ರೈಲ್ವೆ ಹಳಿ ತರಬೇಕು ಎನ್ನುವುದರ ಬಗ್ಗೆ 10ನೇ ಚಾಮರಾಜ ಒಡೆಯರ್ ಆಸಕ್ತಿ …

Read More »

ರೈತ ಸಮುದಾಯಕ್ಕೆ ಸಿಹಿಸುದ್ದಿ

ಉಡುಪಿ : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಹಣಿ ಸೇರಿದಂತೆ ಕಂದಾಯ ಇಲಾಖೆಯ ದಾಖಲೆಗಳು ಮನೆ ಬಾಗಿಲಿಗೆ ತಲುಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಈ ತಿಂಗಳಲ್ಲೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕಂದೂರು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣಿಗಳಲ್ಲಿ ರಾಜ್ಯದ 247 ಕಡೆಗಳಲ್‌ಇ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಆರ್.ಅಶೋಕ್,ರಾಝ್ಯದ …

Read More »