admin
February 20, 2022
Breaking News, ಬಳ್ಳಾರಿ
ಬಳ್ಳಾರಿ: ನಿನ್ನೆ ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಖಡ್ಗ ಹಿಡಿದು ನಿಷೇಧಾಜ್ಞೆ ಇರುವ ಪ್ರದೇಶದಲ್ಲಿ ಬಳ್ಳಾರಿಯ ಸರಳಾದೇವಿ ಕಾಲೇಜು ಮುಂಭಾಗ 20 ಕ್ಕೂ ಹೆಚ್ಚು ಬೈಕ್ಗಳಲ್ಲಿ ಬಂದು ಯುವಕರು ರ್‍ಯಾಲಿ ಮಾಡಿದ್ದರು.ಸದ್ಯ ಸರಳಾದೇವಿ ಕಾಲೇಜು ಬಳ್ಳಾರಿಯಲ್ಲಿ ಹಿಜಾಬ್ ವಿವಾದದ ಕೇಂದ್ರವಾಗಿದೆ. ಹೀಗಾಗಿ ಜಿಲ್ಲಾಡಳಿತ ಕಾಲೇಜಿನ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ ಮಾಡಿದೆ.ಬೈಕ್ ರ್‍ಯಾಲಿ ಮಾಡಿದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಷೇಧಾಜ್ಞೆ ನಡುವೆಯೂ ಬೈಕ್ ರ್‍ಯಾಲಿ ಗಾದಿಲಿಂಗ, ಬಾಲಾಜಿ, ವಿನಯ್, …
Read More »
admin
February 20, 2022
Breaking News, World
ಮುಂಬೈ(ಮಹಾರಾಷ್ಟ್ರ): ಐಆರ್‌ಎಸ್ ಅಧಿಕಾರಿ ಮತ್ತು ಮುಂಬೈ ಎನ್‌ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮುಂಬೈನ ಥಾಣೆಯಲ್ಲಿ ತಮ್ಮ ವಯಸ್ಸನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ನಿರೂಪಿಸಿ ಹೋಟೆಲ್‌ಗೆ ಪರವಾನಗಿ ಪಡೆದ ಆರೋಪದಲ್ಲಿ ಫೋರ್ಜರಿ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೊಪ್ರಿ ಪೊಲೀಸರು ಇಂದು ತಿಳಿಸಿದ್ದಾರೆ. 1996-97ರಲ್ಲಿ ನಗರದ ಸದ್ಗುರು ಬಾರ್‌ಗೆ ಪರವಾನಗಿ ಪಡೆಯುವ ಸಂದರ್ಭದಲ್ಲಿ ವಾಂಖೆಡೆ ಅವರು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರು ಎಂದು ಆರೋಪಿಸಿ, ರಾಜ್ಯ ಅಬಕಾರಿ …
Read More »
admin
February 20, 2022
Breaking News, ಬೆಂಗಳೂರು
ಬೆಂಗಳೂರು :ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ನಾಳೆಯಿಂದ ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎನ್ನಲಾಗಿದೆ. ವೇಳಾಪಟ್ಟಿಯಂತಯೇ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ …
Read More »
admin
February 20, 2022
Breaking News, ಬೆಂಗಳೂರು
ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಡಿ ನೇಮಕ ಮಾಡಲಾಗಿದೆ. ಜೊತೆಗೆ ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ದತಿ ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.
Read More »
admin
February 20, 2022
Breaking News, ದೆಹಲಿ
ನವದೆಹಲಿ: ಇಂದು ಪಂಜಾಬ್ ವಿಧಾನಸಭೆಯ ಎಲ್ಲಾ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 59 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಮೂರನೇ ಹಂತದಲ್ಲಿ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಈ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿಗೂ ಹೆಚ್ಚು ಜನರು ಮತದಾರರಿದ್ದಾರೆ. ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 8 …
Read More »
admin
February 19, 2022
Breaking News, ತುಮಕೂರು
ತುಮಕೂರು: ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಲಾಗಿದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟೌನ್‌ಹಾಲ್ ಬಳಿಯ ಸರ್ಕಾರಿ ಎಂಪ್ರೆಸ್ ಜೂನಿಯರ್ ಪಿಯು ಕಾಲೇಜಿನಲ್ಲಿ ಬುಧವಾರ ಹಿಜಾಬ್ ಮತ್ತು ಬುರ್ಖಾ ಧರಿಸಿದ್ದಕ್ಕಾಗಿ ತರಗತಿಯೊಳಗೆ ಪ್ರವೇಶ ನಿರಾಕರಿಸಿದಾಗ ಸುಮಾರು 40 ವಿದ್ಯಾರ್ಥಿನಿಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಸೆಕ್ಷನ್ 144 ಜಾರಿಯಲ್ಲಿದ್ದರೂ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿ ನಡೆಸಿದರು. …
Read More »
admin
February 19, 2022
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕಾಗಿ ಟೌನ್ ಹಾಲ್ ಮುಂದೆ ಹಾಗೂ ಸುತ್ತಮುತ್ತ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಈ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ವಿರುದ್ಧ ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ನಗರದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೂ ಕಾನೂನು ಬಾಹಿರವಾಗಿ ಫ್ಲೆಕ್ಸ್ ಅಳವಡಿಸಿದ್ದನ್ನು ಕಂಡ ಸಾಮಾಜಿಕ ಕಾರ್ಯಕರ್ತ …
Read More »
admin
February 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದೆಹಲಿಯ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸುವುದಾಗಿ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದ ಘಟನೆ ನಡೆಯಿತು. ನಗರದಲ್ಲಿಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ನಗರ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರುಗಳು ದೇಶಪಾಂಡೆ ನಗರದ ಬಿಜೆಪಿ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದರು. ಈ …
Read More »
admin
February 19, 2022
Breaking News, ಧಾರವಾಡ
ಧಾರವಾಡ: ರಸ್ತೆಯ ತಿರುವಿನಲ್ಲಿದ್ದ ಮನೆಯ ಗೋಡೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿದ್ದ ಮದುವೆಗೆಂದು ಈ ಯುವಕ ಬೈಕ್ ತೆಗೆದುಕೊಂಡು ಬಂದಿದ್ದ ಎಂದು ಗೊತ್ತಾಗಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಸಹಿತ ಕುಸಿದು ಬಿದ್ದಿದೆ. ಘಟನೆ ಸಂಬಂಧ ಧಾರವಾಡ ಗ್ರಾಮೀಣ …
Read More »
admin
February 19, 2022
Breaking News, ಹುಬ್ಬಳ್ಳಿ
ಧಾರವಾಡ: ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಜಾತ್ರೆ ಎನಿಸಿಕೊಂಡಿರುವ ಗರಗ ಮಡಿವಾಳೇಶ್ವರ ಜಾತ್ರೆ ಇಂದು (ಶನಿವಾರ) ನಡೆಯಲಿದ್ದು, ಅದಕ್ಕಾಗಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ. ಹತ್ತು ಜನ ಪೊಲೀಸ್ ಅಧಿಕಾರಿಗಳು ಸೇರಿದಂತೆ ದೊಡ್ಡಮಟ್ಟದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಗರಗ ಜಾತ್ರೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ವಿಡಿಯೋಗ್ರಫಿ ಕೂಡ ಮಾಡಲಾಗುತ್ತದೆ. ಗಲಾಟೆ, ದಾಂಧಲೆ ನಡೆಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು …
Read More »