Breaking News

Breaking News

ಬಸ್‌ಗಳಲ್ಲಿ ಹೆಚ್ಚಿದ ಬೆಂಕಿ ಅವಘಡ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗದ ಸಾರಿಗೆ ಅಧಿಕಾರಿಗಳು!

ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಐದು ಬಸ್‌ಗಳು ಬೆಂಕಿಗಾಹುತಿಯಾಗಿದ್ದರೂ, ಬೆಂಗಳೂರು–ಮಂಗಳೂರು ಮಾರ್ಗದ ಖಾಸಗಿ ಬಸ್‌ಗಳಲ್ಲಿ ಅಕ್ರಮ ಸರಕು ಸಾಗಾಟ ಮುಂದುವರಿದಿದೆ. ಬಸ್‌ಗಳ ಡಿಕ್ಕಿ ಹಾಗೂ ಮೇಲ್ಭಾಗದಲ್ಲಿ ಅಪಾಯಕಾರಿ ವಸ್ತುಗಳನ್ನು ಸಾಗಿಸುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಅಪಾಯ ತಂದೊಡ್ಡಿದೆ. ಜಿಎಸ್‌ಟಿ ತಪ್ಪಿಸಲು ಎಲೆಕ್ಟ್ರಾನಿಕ್ ವಸ್ತುಗಳು, ಪೇಂಟ್ ಸಿಲಿಂಡರ್‌ ಸೇರಿದಂತೆ ವಿವಿಧ ಸರಕುಗಳನ್ನು ಖಾಸಗಿ ಬಸ್‌ಗಳಲ್ಲಿ ಸಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಮಂಗಳೂರು, ಉಡುಪಿ ಸೇರಿದಂತೆ ಹಲವು ಕಡೆಗಳಲ್ಲಿ ಈ ಸರಕುಗಳನ್ನು ಬಸ್‌ಗಳಿಂದ ಇಳಿಸಲಾಗುತ್ತಿರುವುದು …

Read More »

ಗಾಂಜಾ ಪ್ರಕರಣದಲ್ಲಿ ಇಬ್ಬರ ಬಂಧನ

ಶ್ರೀರಂಗಪಟ್ಟಣ: ತಾಲೂಕಿನ ಬಳ್ಳೆಕೆರೆ ಗ್ರಾಮ ಹೊರವಲಯದ ಸಿಡಿಎಸ್ ನಾಲೆ ಏರಿ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಮಾಲು ಸಮೇತ ಅರಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬಳ್ಳೆಕೆರೆ ಗ್ರಾಮದ ಸುನೀಲ್ (46) 850ಗ್ರಾಂ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದು, ಇದನ್ನು ಖರಿದೀಸಲು ಆಗಮಿಸಿದ್ದ ಮಾಕನಹಳ್ಳಿ ಗ್ರಾಮದ ತಿಲಕ್ (27) ನನ್ನು ಗುರುವಾರ ರಾತ್ರಿ ಪೊಲೀರು ಬಂಧಿಸಿದ್ದಾರೆ. ಅರಕೆರೆ ಠಾಣೆಯ ಸಬ್ ಇನ್ ಸ್ಪೆಕ್ಟರ್ ವಿನೋದ್ ಕುಮಾರ್ ಅವರ ನೇತೃತ್ವದಲ್ಲಿ …

Read More »

ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: ಅತ್ಯಂಕ ವಿಷಕಾರಿ 14,900 ಕ್ಯಾಪ್ಸುಲ್‌ ವಶಕ್ಕೆ: ಓರ್ವ ಅರೆಸ್ಟ್

ಮೊಹರಂ ಮೆರವಣಿಗೆಯ ವೇಳೆ ಸಾಮೂಹಿಕ ವಿಷಪ್ರಾಶನ ನಡೆಸುವ ಶಂಕಿತ ಸಂಚನ್ನು ಮುಂಬೈ ಪೊಲೀಸರು ಭೇದಿಸಿದ್ದು, 14,900 ವಿಷಕಾರಿ ಕ್ಯಾಪ್ಸುಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಮೂಲದ ಫಯಾಜ್ ಪ್ರೇಮ್‌ಜಿ ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರ ಮಾಹಿತಿ ಮೇರೆಗೆ ಡೋಂಗ್ರಿಯಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದು, ಜಿಂಕ್ ಫಾಸ್ಫೈಡ್‌ ತುಂಬಿದ ಕ್ಯಾಪ್ಸುಲ್‌ಗಳು, ಆಧಾರ್ ಹಾಗೂ ಪಾಸ್‌ಪೋರ್ಟ್ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಕ್ಯಾಪ್ಸುಲ್‌ಗಳನ್ನು ವಿತರಿಸುವ ಮುನ್ನವೇ ಕಾರ್ಯಾಚರಣೆ ನಡೆಸಿದ್ದರಿಂದ ಸಂಭವಿಸಬಹುದಾದ ದೊಡ್ಡ ದುರಂತ ತಪ್ಪಿದೆ ಎಂದು ಪೊಲೀಸರು …

Read More »

ಡ್ರಗ್ಸ್ ಪ್ರಕರಣ: ರಾಜಧಾನಿ ಬೆಂಗಳೂರಿಗೆ ಮೊದಲ ಸ್ಥಾನ; ಎರಡು ಮತ್ತು ಮೂರನೇ ಸ್ಥಾನದಲ್ಲಿ ಮಂಗಳೂರು ಹಾಗೂ ಶಿವಮೊಗ್ಗ

ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ, ಡ್ರಗ್ಸ್ ಜಾಲ ರಾಜ್ಯದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಕಳೆದ ಐದು ತಿಂಗಳ ಅಂಕಿ-ಅಂಶಗಳ ಪ್ರಕಾರ ಡ್ರಗ್ಸ್ ಪ್ರಕರಣಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ಮಂಗಳೂರು ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನದಲ್ಲಿವೆ. ಜನವರಿಯಿಂದ ಮೇ ತಿಂಗಳವರೆಗೆ ಬೆಂಗಳೂರಿನಲ್ಲಿ ಒಟ್ಟು 2,351 ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ. ಮಂಗಳೂರು ಮತ್ತು ಶಿವಮೊಗ್ಗದಲ್ಲೂ ಗಮನಾರ್ಹ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದ ಪ್ರಮುಖ ಡ್ರಗ್ಸ್ ಹಾಟ್‌ಸ್ಪಾಟ್‌ಗಳಾಗಿ …

Read More »

ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಕಾರಿನಲ್ಲಿ ನಾಡಬಾಂಬ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ನಾಡಬಾಂಬ್ ಸ್ಫೋಟಗೊಂಡು ನಾಗೇಂದ್ರ ಎಂಬ ಯುವಕ ಮೃತಪಟ್ಟಿದ್ದಾನೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆತ ಬೆಂಗಳೂರಿನಿಂದ ಯುವತಿಯನ್ನು ಬಲವಂತವಾಗಿ ಕರೆತಂದಿದ್ದ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಜಗಳದ ವೇಳೆ ನಾಗೇಂದ್ರ ಯುವತಿಗೆ ಚಾಕುವಿನಿಂದ ಇರಿದಿದ್ದು, ಪ್ರಾಣಭಯದಿಂದ ಆಕೆ ಕಾರಿನಿಂದ ಜಿಗಿದು ತಪ್ಪಿಸಿಕೊಂಡಿದ್ದಾಳೆ. ಬಳಿಕ ಚಾಲಕ ಕೆಳಗಿಳಿದ ತಕ್ಷಣ ಕಾರಿನ ಡೋರ್‌ಗಳನ್ನು ಲಾಕ್ ಮಾಡಿಕೊಂಡ ನಾಗೇಂದ್ರ, ಕಾರಿನೊಳಗೇ …

Read More »

ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್

ಹಾಸನ: ನಗರದ ಚನ್ನಪಟ್ಟಣ ಬಡಾವಣೆಯ ನೂತನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆದರಿಕೆ ಇ-ಮೇಲ್ ಆಧರಿಸಿ ಬಾಂಬ್ ನಿಷ್ಕ್ರಿಯ ದಳದಿಂದ ನ್ಯಾಯಾಲಯ ಆವರಣದಲ್ಲಿ ಪರಿಶೀಲನೆ ನಡೆಸಲಾಗಿದೆ. ಇ-ಮೇಲ್‌ನಲ್ಲಿ ನ್ಯಾಯಾಲಯದ ದಾಖಲೆ ಕೊಠಡಿಗಳು ಹಾಗೂ ಇ-ಸೇವೆ ಕೇಂದ್ರಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಉಲ್ಲೇಖಿಸಿ, ಮಧ್ಯಾಹ್ನ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು. ನ್ಯಾಯಾಧೀಶರನ್ನು ಸ್ಥಳಾಂತರಿಸುವಂತೆಯೂ ಸೂಚನೆ ನೀಡಲಾಗಿತ್ತು. ಈ ಸಂಬಂಧ …

Read More »

ಕಲಬುರಗಿ, ರಾಯಚೂರಿನಲ್ಲಿ ಕೃತಕ ಶೇಂದಿ ದಂಧೆ: 1,500 ಕೆಜಿ ಮರಣಾಂತಿಕ ಕೆಮಿಕಲ್ ಸೀಜ್ ಮಾಡಿದ ಅಬಕಾರಿ ಇಲಾಖೆ

ಹುಬ್ಬಳ್ಳಿ: ಕಲ್ಯಾಣ ಕರ್ನಾಟಕ ಸೇರಿ ರಾಜ್ಯದಲ್ಲಿ ವಿಷಕಾರಿ ನಕಲಿ ಕಳ್ಳಿನ ದಂಧೆ ವಿರುದ್ಧ ಅಬಕಾರಿ ಇಲಾಖೆ ಭಾರಿ ಕಾರ್ಯಾಚರಣೆ ನಡೆಸಿದ್ದು, ಕಳೆದ ಮೂರು ವರ್ಷಗಳಲ್ಲಿ 1,500 ಕೆಜಿ ಕ್ಲೋರಲ್ ಹೈಡ್ರೇಟ್ ರಾಸಾಯನಿಕ ಪುಡಿ ವಶಪಡಿಸಿಕೊಂಡಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 771 ಮಂದಿಯನ್ನು ಬಂಧಿಸಲಾಗಿದೆ. ರಾಯಚೂರು ಜಿಲ್ಲೆಯಲ್ಲೇ 1,033 ಕೆಜಿ ಕ್ಲೋರಲ್ ಹೈಡ್ರೇಟ್ ಹಾಗೂ 16,905 ಲೀಟರ್ ಕೃತಕ ಕಳ್ಳು ಜಪ್ತಿ ಮಾಡಲಾಗಿದೆ. ಕಡಿಮೆ ಬೆಲೆ ಮತ್ತು ಹೆಚ್ಚು ಅಮಲಿನ ಕಾರಣ …

Read More »

ಬೆಂಗಳೂರು: ಶೆಡ್‌ ಒಂದರಲ್ಲಿ ಇಟ್ಟಿದ್ದ ಬರೋಬ್ಬರಿ 3 ಕೋಟಿ ನಗದು ಹಣ ಪತ್ತೆ! ಹಣದ ಮೂಟೆ ನೋಡಿ ಪೊಲೀಸರೇ ಶಾಕ್

ಬೆಂಗಳೂರು: ನಗರದ ಕುರುಬರಹಳ್ಳಿಯ ಶೆಡ್‌ ಒಂದರ ಮೇಲೆ ದಾಳಿ ನಡೆಸಿದ ಮಹಾಲಕ್ಷ್ಮೀ ಲೇಔಟ್ ಪೊಲೀಸರು ದಾಖಲೆಗಳಿಲ್ಲದ ₹2.98 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ನಾಲ್ಕು ಬ್ಯಾಗ್‌ಗಳಲ್ಲಿ ಕಂತೆ ಕಂತೆ ನೋಟುಗಳನ್ನು ಅಡಗಿಸಿಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಹಾಗೂ ವೆಂಕಟೇಶ್ ಎಂಬುವವರನ್ನು ಬಂಧಿಸಲಾಗಿದೆ. ಜೂನ್‌ 2ರಂದು ಖಚಿತ ಮಾಹಿತಿಯ ಮೇರೆಗೆ ‘ಶೇಷಾದ್ರಿ ಇಂಡಸ್ಟ್ರೀಸ್’ ಶೆಡ್‌ಗೆ ದಾಳಿ ನಡೆಸಿದ ವೇಳೆ ಭಾರಿ ಪ್ರಮಾಣದ ನಗದು ಪತ್ತೆಯಾಯಿತು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ರಾತ್ರಿ ಪೂರ್ತಿ ನೋಟು …

Read More »

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರು ಭೀಕರ ಅಪಘಾತ; ನಾಲ್ವರು ದುರ್ಮರಣ

ಕೊಪ್ಪಳ: ಮಂತ್ರಾಲಯಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಕುಟುಂಬದ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದ್ದು, ಕುಕನೂರು ತಾಲೂಕಿನ ಭಾನಾಪೂರ ಸಮೀಪ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ಕು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಎದುರು ದಿಕ್ಕಿನಿಂದ ಬಂದ ಭಾರೀ ವಾಹನ ಡಿವೈಡರ್ ದಾಟಿ ಓಮ್ನಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ …

Read More »

ಹೋಟೆಲ್ ನಲ್ಲಿ ಪುಂಡರ ಅಟ್ಟಹಾಸ – ದೂರು ನೀಡಿದ ಮಾಲಿಕನ ಮೇಲೆ ಪೊಲೀಸ್ ದಬ್ಬಾಳಿಕೆ!

ಬೆಂಗಳೂರು: ಕೆಂಗೇರಿಯ ರಾಜರತ್ನ ಹೋಟೆಲ್‌ನಲ್ಲಿ ತಡರಾತ್ರಿ ಹೋಟೆಲ್ ಬಂದ್ ಆದ ಬಳಿಕ ನುಗ್ಗಿದ ಕಿಡಿಗೇಡಿಗಳು ಊಟ ಕೇಳಿದ್ದು, ನಿರಾಕರಿಸಿದ ಹಿನ್ನೆಲೆ ಸಿಬ್ಬಂದಿಗೆ ಬೆದರಿಕೆ ಹಾಕಿ ದಾಂಧಲೆ ನಡೆಸಿದ್ದಾರೆ. ಹೋಟೆಲ್ ಮಾಲೀಕ ಮಧುಕಿರಣ್ 112ಕ್ಕೆ ಕರೆ ಮಾಡಿದ ಬಳಿಕ ಹೊಯ್ಸಳ ಪೊಲೀಸರು ಸ್ಥಳಕ್ಕೆ ಬಂದು ಕೆಲವರನ್ನು ವಶಕ್ಕೆ ಪಡೆದಿದ್ದರು. ಆದರೆ, ದೂರು ನೀಡುವ ಸಂಬಂಧ ಕೆಂಗೇರಿ ಇನ್ಸ್‌ಪೆಕ್ಟರ್‌ಗೆ ಕರೆ ಮಾಡಿದಾಗ ಅವಾಚ್ಯವಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಸ್ಥಳೀಯ ಪೊಲೀಸರು ಸರಿಯಾಗಿ …

Read More »