Breaking News

Breaking News

2 ಕೋಟಿ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ : ಮನ್‌ಸುಖ್‌ ಮಾಂಡವೀಯಾ

ನವದೆಹಲಿ: ದೇಶದಾದ್ಯಂತ 15ರಿಂದ 18ರ ವಯೋಮಾನದ ಸುಮಾರು 2 ಕೋಟಿ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯಾ ತಿಳಿಸಿದ್ದಾರೆ. ಈ ವಯೋಮಾನದ 2 ಕೋಟಿ ಯುವಜನರು ಕೋವಿಡ್‌ ವಿರುದ್ಧ ಈಗ ಲಸಿಕೆ ಪಡೆಯುವ ಮೂಲಕ ಯುವ ಭಾರತವು ವಿಶ್ವದಲ್ಲೇ ಅತಿ ದೊಡ್ಡ ಲಸಿಕಾ ಅಭಿಯಾನ ನಡೆಸಿದಂತಾಗಿದೆ ಎಂದು ಮಾಂಡವೀಯಾ ಟ್ವೀಟ್‌ ಮಾಡಿದ್ದಾರೆ.

Read More »

ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು : ಬಿ.ಸಿ.ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಗಲಾಟೆ ಎಲ್ಲವೂ ಸರಿಯಾಗಲಿದೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1 ರಿಂದ 12 ನೇ ತರಗತಿ ಮಕ್ಕಳಿಗೆ ಸಮವಸ್ತ್ರ ಇದೆ.ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಸ್ವಲ್ಪ ಗೊಂದಲ ಇದೆ. ನಿನ್ನೆ ಮುಸ್ಲಿಂ ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಅವರು ಕೋರ್ಟ್ ಆದೇಶ ಪಾಲಿಸಲು ಮುಖಂಡರಿಗೆ ಹೇಳಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸುವ …

Read More »

ಸಿಡಿ ಪ್ರಕರಣ : ಮತ್ತೇ ಸಂಕಷ್ಟಕ್ಕೆ ಸಿಲಿಕಿದ ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ಕ್ಲೀನ್ ಚಿಟ್ ನೀಡಿ ಹೈಕೋರ್ಟ್ ಗೆ ಸಲ್ಲಿಸಿರುವ ವರದಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಳು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ನೀಡಿದೆ. ಎಸ್ ಐಟಿ ರಚನೆ ಸಮರ್ಪಕವಾಗಿ ಆಗಿಲ್ಲ. ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ. …

Read More »

ಹಿಜಾಬ್ ಬಗ್ಗೆ ವಿವಾದಾತ್ಮಕ ಹೇಳಿಕೆ : ಕಾಂಗ್ರೆಸ್ ನಾಯಕ ವಿರುದ್ಧ ಎಫ್​ಐಆರ್ ದಾಖಲು

ಕಲಬುರಗಿ: ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ಮುಕ್ರಂಖಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಗಂಭೀರ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ಮೇಲೆ‌ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂತೆಯೇ ಕಾಂಗ್ರೆಸ್ ಮುಖಂಡನ ವಿರುದ್ಧ ಐಪಿಸಿ 153,294 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮುಕ್ರಂಖಾನ್ ಹೇಳಿಕೆ‌ ಖಂಡಿಸಿ ಹಿಂದೂಪರ ಸಂಘಟನೆಗಳು ಠಾಣೆಯ …

Read More »

ನಳೀನ್ ಕುಮಾರ್ ಕಟೀಲ್ ವಿರುದ್ಧ ಗಂಭೀರ ಆರೋಪ ಮಾಡಿದ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನನಗೆ ನೇರವಾಗಿ ಜೀವ ಬೆದರಿಕೆ ಕರೆ ಕೊಟ್ಟಿದ್ದಾರೆ. ಕಾರ್ಯಕರ್ತರಿಗೆ ಕರೆ ಮಾಡಿ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ನಳೀನ್ ಕುಮಾರ್ ಕಟೀಲ್ ನೇರವಾಗಿ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕರು ಬೆದರಿಕೆಗಳಿಗೆ ಹೆದರುವವರಲ್ಲ. ನಮ್ಮ ಪೂರ್ವಜರೇ ಬ್ರಿಟೀಷರ ಗುಂಡಿಗೆ ಹೆದರಿಲ್ಲ ಇನ್ನು …

Read More »

ಈಶ್ವರಪ್ಪ ರಾಜೀನಾಮೆಗೆ ಒತ್ತಾಯ : ಸೋಮವಾರಕ್ಕೆ ಮುಂದೂಡಿದ ವಿಧಾನಪರಿಷತ್ ಕಲಾಪ

ಬೆಂಗಳೂರು: ಇಂದು ಸದನ ಆರಂಭವಾಗುತ್ತಿದ್ದಂತೆ ಆಡಳಿತ, ವಿಪಕ್ಷಗಳ ಗಲಾಟೆ ಜೋರಾಗಿದ್ದು, ಆ ಕಾರಣಕ್ಕಾಗಿ ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು. ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪಟ್ಟು ಹಿಡಿದರು.ಇದರಿಂದ ವಾಗ್ವಾದ ಏರ್ಪಟ್ಟಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಸದಸ್ಯರು, ಸಚಿವ ಈಶ್ವರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆಗ ಬಿಜೆಪಿ …

Read More »

ಪವಿತ್ರ ರಂಜಾನ್ ಹಬ್ಬಕ್ಕೆ ಹಿಜಾನ್ ಧರಿಸಲು ಅವಕಾಶ ನೀಡಿ ಎಂದು ಹೈಕೋರ್ಟ್‌ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಪೀಠ, ಈ ಅರ್ಜಿಯನ್ನು ಪರಿಗಣಿಸಲು ಸಮ್ಮತಿಸಿದೆ. ಕರ್ನಾಟಕದಲ್ಲಿನ ಹಿಜಾಬ್‌ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಹಿಜಾಬ್‌ ನಿಷೇಧದ ವಿರುದ್ಧದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ನಡುವೆ ಹೊಸ ಅರ್ಜಿ …

Read More »

ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ : ಬಿ.ಸಿ ನಾಗೇಶ್‌

ಬೆಂಗಳೂರು : ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಪದವಿ ಕಾಲೇಜುಗಳಲ್ಲಿ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು. ನಿನ್ನೆ ಮಲ್ಲೇಶ್ವರಂ ಕಾಲೇಜಿನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಹೋಗಿದ್ದರಂತೆ, ಯಾರು ಪ್ರಚೋದಿಸ್ತಿದ್ದಾರೆ ಅನ್ನೋದು ತನಿಖೆಯಾಗ್ತಿದೆ’ ಎಂದರು.

Read More »

ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸದನದಲ್ಲಿ ಅಹೋರಾತ್ರಿ ಹೋರಾಟ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ.ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು ಸಡಿಲಿಸದ ಕಾಂಗ್ರೆಸ್ …

Read More »

500 ಕೋಟಿ ರೂ. ವೆಚ್ಚದ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಗ್ರಿನ್ ಸಿಗ್ನಲ್

ಚಿತ್ರದುರ್ಗ : ಚಿತ್ರದುರ್ಗದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆನೀಡಿದೆ. ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದರು.

Read More »