Breaking News

Breaking News

ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿಕೆ ಮಾಜಿ ಸಿಎಂ

ಬೆಂಗಳೂರು: ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಯಾರು ಸಹ ಹಾಳು ಮಾಡಬಾರದು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಮತ್ತು ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಆದರೆ, ಬಿಜೆಪಿ ಆರ್‌ಎಸ್‌ಎಸ್‌ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟ ಇಟ್ಟುಕೊಂಡು ಹೋರಾಟ ಮಾಡುತ್ತಿವೆ. …

Read More »

ಮನಮೋಹನ್ ಸಿಂಗ್ ವಿರುದ್ಧ ನಿರ್ಮಲಾ ಸೀತಾರಾಮನ್ ತೀವ್ರ ವಾಗ್ದಾಳಿ

ನವದೆಹಲಿ: ಯುಪಿಎ ಆಡಳಿತಾವಧಿಯಲ್ಲಿ ಆರ್ಥಿಕತೆಯನ್ನು ಹಳಿಗೆ ತರಲು ಸಾಕಷ್ಟು ಪ್ರಯತ್ನಗಳನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಇದು ನನಗೆ ನೋವುಂಟುಮಾಡುತ್ತದೆ” ಎಂದು ಹೇಳಿರುವ ಸೀತಾರಾಮನ್‌, ಚುನಾವಣಾ ರಾಜಕೀಯವನ್ನು ಗಮನದಲ್ಲಿಟ್ಟುಕೊಂಡು ನೀಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆಗಳು ಭಾರತವನ್ನು ಕೆಳಕ್ಕೆ ತಲುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ …

Read More »

ವಿಧಿ ಆಟ : ಕಲ್ಲು ಕುಸಿದು ಕಾರ್ಮಿಕ ಸಾವು

ರಾಯಚೂರು: ಕಲ್ಲು ಕುಸಿದು ಕಾರ್ಮಿಕ ಮೃತಪಟ್ಟಿದ್ದಾರೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ಸೇರಿದ ಊಟಿ ಚಿನ್ನದ ಗಣಿಯಲ್ಲಿ ಸುಮಾರು 800 ಅಡಿ ಆಳದಲ್ಲಿ ಕೆಲಸ ಮಾಡುವ ವೇಳೆ ದುರ್ಘಟನೆರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಚಿನ್ನದ ಗಣಿಯಲ್ಲಿ ನಡೆದಿದೆ. ಮೇಲ್ಭಾಗದಿಂದ ಕಲ್ಲು ಕುಸಿದು ಕಾರ್ಮಿಕ ಯಲ್ಲಪ್ಪ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಗೆ ಅಧಿಕಾರಿಗಳ ನಿರ್ಲಕ್ಷ ಕಾರಣವೆಂದು ಆರೋಪಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ …

Read More »

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂರನೇ ಅಲೆಯಲ್ಲಿ ಜನರು ನಿಟ್ಟುಸಿರುಬಿಡುವಂತಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 492 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,905 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 292092 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 66,254 ಜನರು …

Read More »

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ 2,645 …

Read More »

ಮೂಕ ಪ್ರಾಣಿಯನ್ನು ಬೀಡಿದ ಕಾಮುಕ : ವಿಡಿಯೋ ವೈರೆಲ್

ರಾಜಸ್ಥಾನ : ಪಾಪಿಗಳು ಕರುವಿನ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆಯು ರಾಜಸ್ಥಾನದ ಅಲ್ವಾರ್​​ನಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ನಾಲ್ವರು ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ವಾರ್​ ಜಿಲ್ಲೆಯ ಭಿವಾಡಿ ಪ್ರದೇಶದ ಚುಹಾದ್​​ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಹಸುವಿನ ಜೊತೆ ನಾಲ್ವರು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜಸ್ಥಾನ ಪೊಲೀಸರು ನಾಲ್ವರನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ರಸ್ತೆಯಲ್ಲಿ ಮಲಗಿದ್ದ ಕರುವಿನ …

Read More »

ಈಶ್ವರಪ್ಪ ರಾಜೀನಾಮೆ ನೀಡುವದಷ್ಟೇ ಅಲ್ಲ, ಸಂಪುಟದಿಂದ ವಜಾ ಮಾಡಬೇಕು : ಡಿಕಶಿ

ಬೆಂಗಳೂರು : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಸದನದಲ್ಲೇ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾನು ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನಮಗೆ ಬೇಕಾಗಿಲ್ಲ. ಸಿಎಂ, ಗವರ್ನರ್‌ ಈಶ್ವರಪ್ಪರನ್ನು ವಜಾ ಮಾಡಬೇಕು. ರಾಜೀನಾಮೆ ಎಂಬುದು ಬಹಳ ಗೌರವಯುತವಾದ ಪದ ಎಂದು ಹೇಳಿದ್ದಾರೆ.

Read More »

ಹಗರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು : ಬೊಮ್ಮಾಯಿ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಐಎಂಎ ಪ್ರಕರಣದ ಕುರಿತು ಪ್ರಶ್ನೆ ಮಾಡಿದರು. ಐಎಂಎ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾರನ್ನೂ ರಕ್ಷಣೆ ಮಾಡಬಾರದು ಅಂತ …

Read More »

ರಾಜ್ಯದಲ್ಲಿ 1,579 ಕೋವಿಡ್ ದೃಢ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದ್ದು, ಇಂದು 1,579 ಮಂದಿಗೆ ಕೋವಿಡ್ ದೃಢಪಟ್ಟಿದ್ರೆ,23 ಜನ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 769 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 1,579 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 1.74 %ಕ್ಕೆ ತಲುಪಿದೆ’ ಎಂದಿದ್ದಾರೆ. ಬೆಂಗಳೂರಿನಲ್ಲಿ 7 …

Read More »

ಬಸ್ಸು ಬೈಕ್ ಗೆ ಡಿಕ್ಕಿ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವು

ಆಲಮಟ್ಟಿ: ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ  ಸಂಭವಿಸಿದೆ. ಮೃತರನ್ನು ನಿಡಗುಂದಿ ತಾಲ್ಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ.ಮಲ್ಲಪ್ಪ. ಮಂಕಣಿ(23) ಹಾಗೂ ಯಲ್ಲನಗೌಡ.ಬಸವರಾಜ. ಮಂಕಣಿ(20) ಎಂದು ಗುರುತಿಸಲಾಗಿದೆ. ಯಲಗೂರ ಕ್ರಾಸ್ ನಿಂದ ಆಲಮಟ್ಟಿ ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಖಾಸಗಿ ಬಸ್ಸು ಮತ್ತು ಆಲಮಟ್ಟಿಯಿಂದ ಅಬ್ಬಿಹಾಳ ಗ್ರಾಮಕ್ಕೆ ಹೋಗುತ್ತಿದ್ದ ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದಿರುವದರಿಂದ …

Read More »