admin
February 17, 2022
Breaking News, World
ಪ್ರಮುಖ ಉದ್ಯಮಿ ಹಾಗೂ ಟಾಟಾ ಟ್ರಸ್ಟ್ನ ಅಧ್ಯಕ್ಷರಾದ ರತನ್ ಟಾಟಾ ಅವರಿಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ ‘ಅಸ್ಸಾಂ ಬೈಭವ್’ ನೀಡಿದರು. ಮುಂಬೈನ ಕೊಲಾಬದಲ್ಲಿ ಈ ಕಾರ್ಯಕ್ರಮ ನಡೆಯಿತು. ಅಸ್ಸಾಂನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ರತನ್ ಟಾಟಾ ಅವರಿಗೆ ಈ ಗೌರವ ನೀಡಲಾಯಿತು. ಪ್ರಶಸ್ತಿಯು …
Read More »
admin
February 17, 2022
Breaking News, ಬೆಂಗಳೂರು
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ 2,645 …
Read More »
admin
February 17, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಗಲಕೋಟೆಯ ಮಾಜಿ ಶಾಸಕ ಜಿ.ವಿ.ಮಂಟೂರ (92) ಗುರುವಾರ ಬೆಳಗ್ಗೆ 5.30ಕ್ಕೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟೆ ತಾಲೂಕಿನ ಸ್ವಗ್ರಾಮ ಖಜ್ಜಿಡೋಣಿಯಲ್ಲಿ ಮಂಟೂರ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಕ್ಕೆ ನಡೆಯಲಿದೆ. ಮಂಟೂರ ಅವರರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಜಿ.ವಿ.ಮಂಟೂರ ಬಾಗಲಕೋಟೆ ಕ್ಷೇತ್ರದಲ್ಲಿ ಎರಡು ಸಲ ಶಾಸಕರಾಗಿದ್ದರು.
Read More »
admin
February 17, 2022
Breaking News, ಬೆಂಗಳೂರು
ಬೆಂಗಳೂರು: ಕೇಸರಿ ಧ್ವಜ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತಂತೆ ಈಗಾಗಲೇ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಕೇಸರಿ ಧ್ವಜವನ್ನು 300-400 ವರ್ಷಗಳ ನಂತರ ಹಾರಿಸಲು ಸಾಧ್ಯವಾಗಬಹುದು ಎಂಬುದಾಗಿ ಹೇಳುವ ಜೊತೆಗೆ ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದು, ಎಲ್ಲರೂ ಗೌರವ ನೀಡಬೇಕು ಎಂಬುದನ್ನೂ ತಿಳಿಸಿದ್ದಾರೆ. ಆದರೆ, ಅವರ ಹೇಳಿಕೆಯ ಆಯ್ದ ಭಾಗಗಳನ್ನು …
Read More »
admin
February 16, 2022
Breaking News, ಧಾರವಾಡ
ಧಾರವಾಡ: ಇಂದು ನಿಧನರಾದ ಕವಿ ನಾಡೋಜ ಚೆನ್ನವೀರ ಕಣವಿ ಅವರ ಅಂತ್ಯಸಂಸ್ಕಾರ ಧಾರವಾಡ ಹೊರವಲಯದಲ್ಲಿರುವ ಕಣವಿ ಕುಟುಂಬದ ಸೃಷ್ಟಿ ಫಾರ್ಮ್ ಹೌಸ್ನಲ್ಲಿ ವೀರಶೈವ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಅವರ ಹಿರಿಯ ಪುತ್ರ ಶಿವಾನಂದ ಕಣವಿ ಅವರು ಅಂತಿಮ ವಿಧಿ-ವಿಧಾನಗಳನ್ನು ಕೈಗೊಂಡರು. ಕಣವಿ ಅವರ ಇಚ್ಛೆಯಂತೆ ಪತ್ನಿ ಶಾಂತಾದೇವಿ ಅವರ ಸಮಾಧಿ ಬಳಿಯೇ ಅವರ ಅಂತಿಮಕ್ರಿಯೆ ನಡೆಸಲಾಯಿತು. ಸರ್ಕಾರದ ಸಕಲ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ನಡೆದಿದ್ದು, ಪೊಲೀಸರು ಗಾಳಿಯಲ್ಲಿ …
Read More »
admin
February 16, 2022
Breaking News, ಧಾರವಾಡ
ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕವಿ ಕಣವಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮಧ್ಯಾಹ್ನ 1 ರಿಂದ 3ರವರೆಗೆ ಅಂತಿಮ ದರ್ಶನ ಪಡೆಯಬಹುದಾಗಿದೆ. ಕಣವಿ ಅವರ ಅಂತ್ಯಕ್ರಿಯೆ ಸಂಜೆ 5ಕ್ಕೆ ಕೆಲಗೇರಿ ಸಮೀಪದಲ್ಲಿರುವ ಅವರ ಫಾರ್ಮ್ ಹೌಸದಲ್ಲಿ ನಡೆಸಲು ಅವರ ಕುಟುಂಬ …
Read More »
admin
February 16, 2022
Breaking News, ಧಾರವಾಡ
ಧಾರವಾಡ: ಕವಿ ಡಾ. ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು. ಕಣವಿ ಅವರ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣವಿ ಅವರ ಕುಟುಂಬ ವರ್ಗದವರ ಇಚ್ಛೆಯಂತೆ ಕೆಲಗೇರಿಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು. ಬಸವರಾಜ ಬೊಮ್ಮಾಯಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಧಾರವಾಡಕ್ಕೆ ಬರಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು. ಹೆಲಿಕಾಪ್ಟರ್ ನಲ್ಲಿ …
Read More »
admin
February 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿಯ ಜೆಸಿ ನಗರದಲ್ಲಿರುವ ವುಮೆನ್ಸ್ ಕಾಲೇಜ್ ನಲ್ಲಿ ಆರಂಭವಾದ ಹಿಜಾಬ್ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಸದ್ಯ ಕಾಲೇಜಿಗೆ ಭೇಟಿ ಕೊಟ್ಟ ಪೊಲೀಸ್ ಕಮೀಷನರ್ ಲಾಬುರಾಮ ಕಾಲೇಜಿನ ಸುತ್ತ ಸೆಕ್ಷನ್ 144 ಜಾರಿ ಮಾಡಿದ್ದಾರೆ. ಕಾಲೇಜು ಆಡಳಿತ ಮಂಡಳಿ ಒಂದು ದಿನ ರಜೆ ಘೋಷಣೆ ಮಾಡಿದ್ದ ಹಿನ್ನೆಲೆಯಲ್ಲಿ, ಪೊಲೀಸ್ ಕಮೀಷನರ್ ಕಾಲೇಜಿಗೆ ಭೇಟಿ ನೀಡಿ ಬಿಗಿ ಬಂದು ಬಸ್ತ್ ಮಾಡಿದ್ದಾರೆ. ಬಳಿಕ ಕಾಲೇಜು …
Read More »
admin
February 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಾವು ನೀವೆಲ್ಲಾ ಒಂದೇ ಎನ್ನುವ ಭಾವೈಕ್ಯತೆ ಸಾರವನ್ನು ಸಾರುವ ಮೂಲಕ ಇತರರಿಗೆ ಮಾದರಿಯಾಗಿದ್ದ ಹುಬ್ಬಳ್ಳಿ ಧಾರವಾಡ ಏಕಾಏಕಿ ಆರಂಭವಾದ ಹಿಜಾಬ್ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಲ್ಲಿಯ ಜೆಸಿ ನಗರದಲ್ಲಿರುವ ವುಮೆನ್ಸ್ ಕಾಲೇಜಿನಲ್ಲಿ ಇಂದು ಬೆಳಗ್ಗೆಯಿಂದ ಆರಂಭವಾದ ಹಿಜಾಬ್ ಗಲಾಟೆಯಿಂದಾಗಿ ಸದ್ಯ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಇನ್ನು ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರಿಗೆ ಕಾಲೇಜಿನಲ್ಲಿ ಎಂಟ್ರಿ ನೀಡದಕ್ಕೆ ವಿದ್ಯಾರ್ಥಿನಿಯರು ಹೋರಾಟ ಆರಂಭಿಸುತ್ತಿದ್ದಂತೆ …
Read More »
admin
February 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಿಜಾಬ್ ವಿವಾದದ ನಡೆವೆಯೂ ಕಾಲೇಜುಗಳ ಪುನಾರಂಭವಾಗಿದ್ದು, ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ ಘಟನೆ ಇಲ್ಲಿನ ಜೆ.ಸಿ. ನಗರದ ವುಮೇನ್ಸ್ ಕಾಲೇಜಿನ ಆವರಣದಲ್ಲಿ ನಡೆದಿದೆ. ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ಒಳಗೆ ಬನ್ನಿ ಇಲ್ಲದಿದ್ದರೆ ಕಾಲೇಜು ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ಹೇಳಿದ್ದನ್ನು ಖಂಡಿಸಿ ವಿದ್ಯಾರ್ಥಿನಿಯರು ಕಾಲೇಜು ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿ ವಾಂಟ್ …
Read More »