Breaking News

Breaking News

‌ ಬಸ್ ಮರಕ್ಕೆ ಡಿಕ್ಕಿ: 20 ಜನರಿಗೆ ಗಾಯ

ಕೋಲಾರ: ಪಾರ್ಶ್ವಗಾನಹಳ್ಳಿ ಗ್ರಾಮದ‌ ಬಳಿ‌ ಖಾಸಗಿ‌ ಬಸ್ ಮರಕ್ಕೆ ಡಿಕ್ಕಿಯಾಗಿ ಸುಮಾರು 20 ಮಂದಿಗೆ ಗಾಯವಾಗಿದೆ. ಕೋಲಾರ ಹೊರವಲಯದ ಪ್ಲಿಪ್ ಕಾರ್ಟ್ ಕಂಪನಿಗೆ ಸೇರಿದ್ದ ಬಸ್, ಕೆಲಸ ನಿರ್ಮಿತ ತೆರಳುತ್ತಿದ್ದರು. ಚಾಲಕನ‌ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

Read More »

ದೇಶದಲ್ಲಿ 44,877 ಜನರಿಗೆ ಕೊರೋನಾ ದೃಢ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 44,877 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 44,877 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ಪ್ರೀತಿಸಿ ಮದುವೆಯಾದ ಪತಿಯ ಕೈಯಲೇ ಪ್ರಾಣ ಬಿಟ್ಟ ಪತ್ನಿ

ಮೈಸೂರು: ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಎ.ಕೆ ಕಾಲೋನಿಯಲ್ಲಿ ನಡೆದಿದೆ. ಸಂಧ್ಯಾ (23) ಕೊಲೆಯಾದ ದುರ್ದೈವಿ. ಪತಿ ಕಿರಣ್ (27) ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.ಸಂಧ್ಯಾ ಹಾಗೂ ಕಿರಣ್​ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಿರಣ್ ಮೂರು ತಿಂಗಳು ಪುನರ್ವಸತಿ ಕೇಂದ್ರದಲ್ಲಿದ್ದು ಮತ್ತೆ ಮನೆಗೆ ವಾಪಸ್​ ಆಗಿದ್ದ.ಇನ್ನು ಇಬ್ಬರ ಮಧ್ಯೆ ಯಾವುದೋ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, …

Read More »

ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ, ಈಗಾಗಲೇ ಜಿಲ್ಲಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವ್ಯವಸ್ಥೆಯನ್ನು ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನ ಹಾಗೇ ಸೌರ್ಹದಯುತವಾಗಿ ಶಾಲಾ ಕಾಲೇಜುಗಳನ್ನ ಆರಂಭಿಸುತ್ತೆವೆ. ಶಾಲಾ ಕಾಲೇಜುಗಳನ್ನ ಆರಂಭಿಸೋದು ನಮ್ಮ‌ ಮೊದಲ ಆಧ್ಯತೆವಾಗಿದೆ ಎಂದರು. ಹಿಜಾಬ್ …

Read More »

ರಾಜ್ಯದಲ್ಲಿ ಮತ್ತಷ್ಟು ಇಳಿಮುಖ ಕಂಡ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖವಾಗಿದ್ದು, ಇಂದು ಪಾಸಿಟಿವಿಟಿ ದರ ಶೇಕಡ 3 ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95 ರಷ್ಟು ಇದೆ. 38,747 ಸಕ್ರಿಯ ಪ್ರಕರಣಗಳಿವೆ.38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 1,08,534 ಪರೀಕ್ಷೆ ನಡೆಸಲಾಗಿದೆ. 8988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 1293 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇಕಡ 2.49 ರಷ್ಟು …

Read More »

ಕೆಎಲ್ ಇ ಕಾಲೇಜು, ಆಸ್ಪತ್ರೆ ನಿರ್ಮಾಣಕ್ಕೆ ಕುತ್ತು ತಂದ ಗಾಂಜಾ ಬೆಳೆ : 5 ಜನ ಬಂಧನ

ಹುಬ್ಬಳ್ಳಿ:ವಿದ್ಯಾರ್ಥಿಗಳಿಗೆ ಕಲಿಕೆಗೆ ಸಹಾಯ ವಾಗುವಂತಹ ಕಾಲೇಜು ಹಾಗೂ ರೋಗಿಗಳ ಜೀವವನ್ನು ಕಾಪಾಡಬೇಕಾದ ಆಸ್ಪತ್ರೆ ನೀರ್ಮಾಣವಾಗ ಬೇಕಾದ ಸ್ಥಳದಲ್ಲಿ ಗಾಂಜಾ ಬೆಳೆದ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಕೆಎಲ್ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರ ಮಠ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಸ್ಥಳದಲ್ಲಿಯೇ ಗಾಂಜಾ ಬೆಳೆದ ಪ್ರಕರಣವನ್ನು ಕಸಬಾಪೇಟೆ ಠಾಣೆಯ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಎರಡ್ಮೂರು ತಿಂಗಳ ಹಿಂದೇನೆ ಗಾಂಜಾ ಬೆಳೆದಿದ್ದರೆಂದು ಗೊತ್ತಾಗಿದೆ. ಖಚಿತ …

Read More »

ಹುಬ್ಬಳ್ಳಿ ಹಿಜಾಬ್ ವಿವಾದ ಬಗೆಹರಿಸುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲ ಸಲೀಂ ಅಹ್ಮದ್ ಹೇಳಿಕೆ

Read More »

ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ ತೀರ್ಪು ಬರುವವರೆಗೂ ಶಾಂತಿಯಿಂದ ವಿರಬೇಕು : ಕಾರಜೋಳ

ಧಾರವಾಡ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಈಗಾಗಲೇ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ತೀರ್ಪು ಬರುವವರೆಗೂ ಎಲ್ಲರೂ ಶಾಂತಿಯಿಂದ ಇರಬೇಕು. ನಾವೆಲ್ಲರೂ ಸೇರಿ ಸುಂದರ ಸಮಾಜ ನಿರ್ಮಾಣ ಮಾಡೋಣ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬರುವವರೆಗೂ ನಾವೆಲ್ಲರೂ ಕಾಯಬೇಕಷ್ಟೇ ಎಂದರು. ಇನ್ನು ರಮೇಶ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ಸಚಿವ ಸ್ಥಾನ …

Read More »

ಖ್ಯಾತ ಉದ್ಯಮಿ ರಾಹುಲ್ ಬಜಾಜ್ ನಿಧನ

ಪುಣೆ: ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು (ಶನಿವಾರ) ಪುಣೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.

Read More »

ಸಿಡಿ ಪ್ರಕರಣ : ಮತ್ತೇ ಸಂಕಷ್ಟಕ್ಕೆ ಸಿಲುಕಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಬಗ್ಗೆ ಎಸ್‌ಐಟಿ ನೀಡಿರುವ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ನೀಡಿದ ಅನುಮತಿ ಆದೇಶ ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್, ಅರ್ಜಿ ವಿಚಾರಣೆಯನ್ನು ಫೆ.14 ರ ಸೋಮವಾರದಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಆರೋಪಿ ರಮೇಶ್ ಜಾರಕಿಹೊಳಿ ಕೋರಿಕೆ ಮೇರೆಗೆ ಎಸ್‌ಐಟಿ ರಚಿಸಿರುವುದು ಅಸಿಂಧು, …

Read More »