Breaking News

Breaking News

ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಆನವೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.9ನೇ ತರಗತಿ ವಿದ್ಯಾರ್ಥಿ ಸುಮಂತ್ ಮೇಲೆ ಶಿಕ್ಷಕ ಹಲ್ಲೆ ಮಾಡಿದ್ದಾನೆ. ಪೇಪರ್ ಅನ್ನು ಕಸದ ಬುಟ್ಟಿಗೆ ಎಸೆಯುವಾಗ ವಿದ್ಯಾರ್ಥಿನಿಗೆ ತಾಗಿತ್ತು.ಹುಡುಗರು ತೊಂದರೆ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಕಂಪ್ಯೂಟರ್ ಶಿಕ್ಷಕನ ಬಳಿ ದೂರು ನೀಡಿದ್ದರು. ವಿದ್ಯಾರ್ಥಿ ಸುಮಂತನಿಗೆ ಶಿಕ್ಷಕ ಥಳಿಸಿದ್ದಾನೆ. ಸುಮಂತ್ ತೀವ್ರವಾಗಿ ಗಾಯಗೊಂಡು ರಕ್ತ ಹೆಪ್ಪುಗಟ್ಟಿ ಜ್ವರ …

Read More »

ಕೊಪ್ಪಳದಲ್ಲಿ ಭೀಕರ ರಸ್ತೆ ದುರಂತ..! 3 ಸಾವು, 6 ಮಂದಿಗೆ ಗಂಭೀರ ಗಾಯ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ, ನಿಯಂತ್ರಣ ತಪ್ಪಿದ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಓಮಿನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ …

Read More »

ಸುಟ್ಟ ಸ್ಥಿತಿಯಲ್ಲಿ ಯುವತಿಯ ಕಳೇಬರ ಪತ್ತೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬೈಪಾಸ್ ರಸ್ತೆಯ ಜವನಗಹಳ್ಳಿ ಗುಡ್ಡದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟಿರುವ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಬುಧವಾರ ರಾತ್ರಿ ಪತ್ತೆಯಾಗಿದೆ. ಸರಕು ಸಾಗಣೆ ಲಾರಿ ಚಾಲಕ ರಸ್ತೆ ಬದಿಗೆ ತೆರಳಿದ್ದ ವೇಳೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮೃತದೇಹ ಕಂಡುಬಂದಿದ್ದು, ತಕ್ಷಣ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ಮೇರೆಗೆ ಬೆಳಕವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ …

Read More »

ಬೆಂಗಳೂರು: ನಕಲಿ ಚಿನ್ನ ನೀಡಿ ₹23 ಲಕ್ಷ ದೋಚಿದ್ದ ಆರೋಪಿ ಸೆರೆ

ಬೆಂಗಳೂರು: ಜಮೀನಿನಲ್ಲಿ ಕೊಳವೆಬಾವಿ ಕೊರೆಸುವ ವೇಳೆ 1.5 ಕೆ.ಜಿ. ಚಿನ್ನ ಸಿಕ್ಕಿದೆ ಎಂದು ನಂಬಿಸಿ ನಕಲಿ ಚಿನ್ನ ನೀಡಿ ₹23 ಲಕ್ಷ ವಂಚಿಸಿದ್ದ ಪ್ರಕರಣದಲ್ಲಿ ಬಳ್ಳಾರಿಯ ಹನುಮಂತಪ್ಪ (41)ನನ್ನು ತಿಲಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹19.93 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಕಾರು ಡೀಲರ್ ಶಿಶಿರ್‌ಗೆ ಆರೋಪಿ ಚಿನ್ನದ ಫೋಟೊಗಳನ್ನು ಕಳುಹಿಸಿ ನಂಬಿಕೆ ಮೂಡಿಸಿದ್ದ. ಬಳಿಕ 2 ಗ್ರಾಂ ಅಸಲಿ ಚಿನ್ನ ತೋರಿಸಿ ವಿಶ್ವಾಸ ಗಳಿಸಿದ ನಂತರ, 1.5 …

Read More »

ಶಿರಸಿಯಲ್ಲಿ ನೆತ್ತರು ಹರಿಸಿದ ಹಂತಕರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕತ್ತು ಕೊಯ್ದು ಬರ್ಬರ ಹತ್ಯೆ!

ಶಿರಸಿ: ತಾಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಂಗನಮನೆಯಲ್ಲಿ 35 ವರ್ಷದ ಪರಮೇಶ್ವರ ಬಾಬು ನಾಯ್ಕ ಅವರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅದೇ ಗ್ರಾಮದ ಪರಮೇಶ್ವರ ತಿಮ್ಮ ನಾಯ್ಕ (27)ನನ್ನು ಬಂಧಿಸಿದ್ದಾರೆ. ಮೊಬೈಲ್ ಕರೆ ಬಂದ ಹಿನ್ನೆಲೆಯಲ್ಲಿ ಮನೆಯಿಂದ ಹೊರಟಿದ್ದ ಪರಮೇಶ್ವರ ರಾತ್ರಿ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗಿದ್ದು, ಶುಕ್ರವಾರ ಬೆಳಗ್ಗೆ ಅರಣ್ಯ ಪ್ರದೇಶದಲ್ಲಿ ಅವರ ಶವ ಪತ್ತೆಯಾಗಿದೆ. ಅಕ್ರಮ …

Read More »

ಮುಂಬೈ ರೈಲಿನಲ್ಲಿ ಭೀಕರ ಹತ್ಯೆ :ಮಂಗಳೂರಿಗೆ ಪರಾರಿಯಾಗಲು ಮುಂದಾಗಿದ್ದ ರೋಷನ್ ಸುವರ್ಣ

ಮುಂಬೈ: ಲೋಕಲ್ ರೈಲಿನಲ್ಲಿ 22 ವರ್ಷದ ಮಯಾಂಕ್ ಲೋಹರ್ ಹತ್ಯೆ ಪ್ರಕರಣದ ಆರೋಪಿ ರೋಷನ್ ಸುವರ್ಣ (30)ನನ್ನು ಮುಂಬೈ ಪೊಲೀಸರು ಕೇವಲ 15 ಗಂಟೆಗಳಲ್ಲೇ ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಆರೋಪಿಯ ಶರ್ಟ್ ಮೇಲಿದ್ದ ಕಂಪನಿಯ ಲೋಗೋ ಪೊಲೀಸರಿಗೆ ಮಹತ್ವದ ಸುಳಿವಾಯಿತು. ಮಳೆಯ ವೇಳೆ ರೈಲಿನ ಬಾಗಿಲು ಮುಚ್ಚುವ ವಿಚಾರಕ್ಕೆ ಮಯಾಂಕ್ ಮತ್ತು ರೋಷನ್ ನಡುವೆ ವಾಗ್ವಾದ ನಡೆದಿದ್ದು, ಕೋಪಗೊಂಡ ರೋಷನ್ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದಾನೆ. ಬಳಿಕ ಮಂಗಳೂರಿಗೆ …

Read More »

ನಂದಿಕೂರಿನಲ್ಲಿ 73 ಕೆ.ಜಿ. ಗಾಂಜಾ ನಾಶ

ಪಡುಬಿದ್ರಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡಿದ್ದ 73 ಕೆ.ಜಿ. ಗಾಂಜಾವನ್ನು ಶುಕ್ರವಾರ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ವೈಜ್ಞಾನಿಕವಾಗಿ ನಾಶಪಡಿಸಲಾಯಿತು. 36.29 ಲಕ್ಷ ರೂ. ಮೌಲ್ಯದ ಈ ಗಾಂಜಾವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ನೇತೃತ್ವದಲ್ಲಿ, ಹೆಚ್ಚುವರಿ ಎಸ್‌ಪಿ ಸುಧಾಕರ್ ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲನೆ ನಡೆಸಿ ನ್ಯಾಯಾಲಯದ ಆದೇಶದಂತೆ ವಿಲೇವಾರಿ ಮಾಡಲಾಯಿತು. ಮಲ್ಪೆ, ಮಣಿಪಾಲ, ಶಿರ್ವ, ಕೋಟ, ಕಾಪು, ಉಡುಪಿ ನಗರ ಹಾಗೂ …

Read More »

ಬೆಂಗಳೂರಲ್ಲಿ ಮೆಟ್ರೋ ಕಾಮಗಾರಿ ವೇಳೆ ಭೀಕರ ದುರಂತ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಬೆಂಗಳೂರು: ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ನಮ್ಮ ಮೆಟ್ರೋ ಪಿಲ್ಲರ್‌ಗಳ ವಿದ್ಯುತ್ ಕಾಮಗಾರಿ ವೇಳೆ ಗುತ್ತಿಗೆ ಕಾರ್ಮಿಕರೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಸಂಭವಿಸಿದೆ. ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾರ್ಮಿಕ ಲೈವ್ ವಿದ್ಯುತ್ ಸಂಪರ್ಕಕ್ಕೆ ಬಂದಿದ್ದು, ಗಂಭೀರ ಗಾಯಗೊಂಡ ಅವರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ಬಿಎಂಆರ್‌ಸಿಎಲ್ …

Read More »

ಕರ್ನಾಟಕದಲ್ಲೇ ಸಿಂಥೆಟಿಕ್ ಡ್ರಗ್ಸ್ ತಯಾರಿಕೆ ಅಡ್ಡೆಗಳು

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಪೂರೈಕೆಯ ಜೊತೆಗೆ ಉತ್ಪಾದನೆಯೂ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಮತ್ತು ಮೈಸೂರು ಹೊರವಲಯಗಳಲ್ಲಿ ಗುಪ್ತವಾಗಿ ಸಿಂಥೆಟಿಕ್ ಡ್ರಗ್ಸ್ ತಯಾರಿಕಾ ಘಟಕಗಳು ಕಾರ್ಯನಿರ್ವಹಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಮೈಸೂರು ಭಾಗದಲ್ಲಿ ಸುಮಾರು ₹390 ಕೋಟಿ ಹಾಗೂ ಬೆಂಗಳೂರಿನಲ್ಲಿ ₹51 ಕೋಟಿ ಮೌಲ್ಯದ ಡ್ರಗ್ಸ್ ಮತ್ತು ತಯಾರಿಕಾ ಸಾಮಗ್ರಿ ಪತ್ತೆಯಾಗಿದ್ದು, ಹೊರರಾಜ್ಯದ ಆರೋಪಿಗಳು ಫಾರ್ಮ್‌ಹೌಸ್ ಹಾಗೂ ಬಾಡಿಗೆ ಶೆಡ್‌ಗಳನ್ನು ಬಳಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿರುವುದು ಬಹಿರಂಗವಾಗಿದೆ. ಡ್ರಗ್ಸ್ ಉತ್ಪಾದನಾ …

Read More »

ಬೀದರ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 9.41 ಕೋಟಿ ಮೌಲ್ಯದ ಗಾಂಜಾ, ಮಾದಕ ವಸ್ತುಗಳು ನಾಶ!

ಬೀದರ್: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ 22 ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ಸುಮಾರು ₹9.41 ಕೋಟಿ ಮೌಲ್ಯದ ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿ ಗುರುವಾರ ನಾಶಪಡಿಸಿದೆ. ಭಾಲ್ಕಿ ತಾಲೂಕಿನ ಧನ್ನೂರ್ ಗ್ರಾಮದ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದ ಕುಲುಮೆಯಲ್ಲಿ 997 ಕೆಜಿ 764 ಗ್ರಾಂ ಗಾಂಜಾ, 51,638 ಮಾದಕ ಗುಳಿಗೆಗಳು ಹಾಗೂ 743 ಸಿರಫ್ ಬಾಟಲ್‌ಗಳನ್ನು ಪರಿಸರ ನಿಯಮ …

Read More »