admin
February 10, 2022
Breaking News, ಬೆಂಗಳೂರು
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಶಾಂತಿ ಕದಡುವ ವಿಚಾರ ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಕಾಯೋಣ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಗೌರವಕೊಡಬೇಕು. ಶಾಂತಿಯುತ ವಾತಾವರಣ ನೆಲೆಸಬೇಕು. ಸಮಸ್ಯೆಗೆ ನ್ಯಾಯಾಲಯದಲ್ಲಿ ಪರಿಹಾರ ಸಿಗಲು ಸಾಧ್ಯವಿದೆ. ನೀಡಬೇಕಿರುವ ಹೇಳಿಕೆಗಳನ್ನು ಎಲ್ಲರೂ ಈಗಾಗಲೇ ನೀಡಿದ್ದಾರೆ ಎಂದು ಹೇಳಿದರು.ಎರಡೂ ಕಡೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ ಎಂದರು.
Read More »
admin
February 10, 2022
Breaking News, World
ಬಿಜೆಪಿ ವಿರುದ್ಧದ ಟೀಕೆಗಳನ್ನು ದೇಶದ ವಿರುದ್ಧ ಟೀಕೆಗಳನ್ನಾಗಿ ಕಾಣುವಂತೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಪಾದನೆ ಮಾಡಿದ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಗಣತಂತ್ರೋತ್ಸವದ ದಿನದಂದು ತಮಿಳು ನಾಡಿದ ಸ್ತಬ್ಧಚಿತ್ರವನ್ನು ಪೆರೇಡ್‌ನಲ್ಲಿ ಭಾಗವಹಿಸಲು ಬಿಡದೇ ಇದ್ದದ್ದಕ್ಕೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿನ ಸ್ವಾತಂತ್ರ‍್ಯ ಹೋರಾಟಗಾರರ ಪ್ರತಿಮೆಗಳನ್ನು ಈ ಬಾರಿ ಗಣತಂತ್ರೋತ್ಸವದ ಪರೇಡ್‌ನಲ್ಲಿ ರಾಜ್ಯದ ಪರವಾಗಿ ಸ್ತಬ್ದಚಿತ್ರವನ್ನಾಗಿ ಮೆರವಣಿಗೆ ಮಾಡಲು …
Read More »
admin
February 10, 2022
Breaking News, ಕರ್ನಾಟಕ
ಬಂಟ್ವಾಳ: ಟಿಕ್ ಟಾಕ್ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಟಿಕ್ಟಾಕ್ ಕಮಲಜ್ಜಿ ನಿನ್ನೆ ಸಂಜೆ ನಿಧನರಾದರು.ಮೃತರು ಆರು ಗಂಡು, ಮೂವರು ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಬಂಧು-ಬಳಗ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಕಳೆದೊಂದು ವಾರದಿಂದ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಟಿಕ್ ಟಾಕ್ ಸ್ಟಾರ್ ಧನರಾಜ್ ಜೊತೆ ಕಮಲಜ್ಜಿ 50ಕ್ಕೂ ಅಧಿಕ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದು, ಇವರ ಕುಟುಂಬ …
Read More »
admin
February 10, 2022
Breaking News, ಬೆಂಗಳೂರು
ಬೆಂಗಳೂರು: ಕೆಲ ಹೋರಾಟಗಾರರು ನಮ್ಮ ಕುಟುಂಬ ರಾಜಕಾರಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಈಗ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ನಾನು ರಾಜಕಾರಣಕ್ಕೆ ಬರದೇ ಇದ್ದಿದ್ದರೆ ಇಂದು ನಮ್ಮ ಪಕ್ಷ ಇರುತ್ತಿರಲಿಲ್ಲ.ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನು ಚುನಾವಣಾ ಕಣಕ್ಕಿಳಿಸಬೇಕಾಯಿತು. ನನಗೆ ಕುಟುಂಬ ವ್ಯಾಮೋಹಕ್ಕಿಂತಲೂ ರಾಜ್ಯದ ಮೇಲೆ ವ್ಯಾಮೋಹ, ಪ್ರೀತಿ ಹೆಚ್ಚು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ …
Read More »
admin
February 10, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಅಂಚೆ ವೃತ್ತದ ನೂತನ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಆಗಿ ಎಸ್. ರಾಜೇಂದ್ರ ಕುಮಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅವರು, ತೆಲಂಗಾಣ ಅಂಚೆ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರ್ ಆಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರಿನವರಾದ ಅವರು, 1990ನೇ ಸಾಲಿನ ಭಾರತೀಯ ಅಂಚೆ ಸೇವೆಯ ಅಧಿಕಾರಿಯಾಗಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ಲೋಹ ವಿಜ್ಞಾನದಲ್ಲಿ ಬಿ.ಟೆಕ್. ಪದವಿ ಪಡೆದಿರುವ ಅವರು, 1987ರಿಂದ 1990ರವರೆಗೆ ಬಿಎಚ್‌ಇಎಲ್‌ನ ಸಂಶೋಧನಾ ಮತ್ತು …
Read More »
admin
February 10, 2022
Breaking News, World
ಚೆನ್ನೈ: ದುಷ್ಕರ್ಮಿಗಳು ದ್ವಿಚಕ್ರ ವಾಹನಗಳಲ್ಲಿ ಬಂದು ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.ಗುರುವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಪೊಲೀಸರ ದಾರಿ ತಪ್ಪಿಸಿ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಚೆನ್ನೈನ ನಂದನಂನಿಂದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿನೋತ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ‘ನಮ್ಮ ಕಚೇರಿಯ ಮೇಲೆ ನಸುಕಿನ 1:30 ರ ಸುಮಾರಿಗೆ ಪೆಟ್ರೋಲ್ …
Read More »
admin
February 10, 2022
Breaking News, ದೆಹಲಿ
ನವದೆಹಲಿ: ‘ಬೀಚ್‌ಗಳಲ್ಲಿ ಅಥವಾ ಈಜುಕೊಳದಲ್ಲಿ ಬಿಕಿನಿ ಧರಿಸಬಹುದು. ಶಾಲೆಗಳಲ್ಲಿ ಅಲ್ಲ. ಪ್ರತಿಯೊಂದು ಸ್ಥಳಕ್ಕೂ ಸಂಬಂಧಪಟ್ಟಂತೆ ವಸ್ತ್ರಸಂಹಿತೆ ಎಂಬುದು ಇದೆ’ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇಲ್ಲಿ ಹೇಳಿದರು. ಹಿಜಾಬ್ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ‘ಮನೆಯಲ್ಲಿ ಧಾರ್ಮಿಕ ಆಚರಣೆಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ಪ್ರತಿಯೊಬ್ಬರು ಶಿಕ್ಷಣಕ್ಕಾಗಿಯೇ ಶಾಲೆಗೆ ಬರುತ್ತಾರೆ’ ಎಂದರು.
Read More »
admin
February 10, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ನಿನ್ನೆ 5 ಸಾವಿರಕ್ಕೂ ಕಡಿಮೆ ಕೇಸ್ ಪತ್ತೆಯಾಗಿದ್ದಂತ ಕೊರೋನಾ ಕೇಸ್ , ಇಂದು ಕೊಂಚ ಏರಿಕೆಯಾಗಿದೆ. ಈ ಮೂಲಕ ರಾಜ್ಯಾಧ್ಯಂತ ಕೋವಿಡ್ ಹಾವು-ಏಣಿಯಾಟ ಮುಂದುವರೆದಿದೆ. ಇಂದು 5,339 ಮಂದಿಗೆ ಕೋವಿಡ್ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ಕಳೆದ 24 ಗಂಟೆಯಲ್ಲಿ 1,28,705 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 2,161 ಸೇರಿ …
Read More »
admin
February 10, 2022
Breaking News, ದಾವಣಗೆರೆ
ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಎಂಬಲ್ಲಿ 23 ವರ್ಷದ ಯುವಕನಿಗೆ ಮೊಳೆಯಿಂದ ಇರಿದು ಘಾಸಿಗೊಳಿಸಲಾಗಿದೆ. ಅಲ್ಲದೆ, ಯುವಕನ ಮೇಲೆ ಉದ್ರಿಕ್ತರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಯಾಳು ಯುವಕನನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣೆ ಎದುರು ಜನರ ಜಮಾವಣೆ ಆಗಿದೆ. 2 ಗುಂಪಿನ ಮುಖಂಡರ …
Read More »
admin
February 10, 2022
Breaking News, ಕರ್ನಾಟಕ
ಬೇಲೂರು: ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಉಮೆಯಾನಿ (30) ಮಂಗಳವಾರ ರಾತ್ರಿ ತಮ್ಮ ತಾಯಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನವರಾದ ಉಮೆಯಾನಿ ಕಳೆದ ಒಂದು ವರ್ಷದಿಂದ ಬೇಲೂರಿನ ವೈಡಿಡಿ ಪ್ರಥಮದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಸರ್ಕಾರ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ …
Read More »