admin
February 10, 2022
Breaking News, ಕರ್ನಾಟಕ
ಬೇಲೂರು: ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಉಮೆಯಾನಿ (30) ಮಂಗಳವಾರ ರಾತ್ರಿ ತಮ್ಮ ತಾಯಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನವರಾದ ಉಮೆಯಾನಿ ಕಳೆದ ಒಂದು ವರ್ಷದಿಂದ ಬೇಲೂರಿನ ವೈಡಿಡಿ ಪ್ರಥಮದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಸರ್ಕಾರ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ …
Read More »
admin
February 10, 2022
Breaking News, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಜೆಟ್ ಪೂರ್ವಭಾವಿ ಸಭೆಯನ್ನು ಆರಂಭಿಸಿದ್ದಾರೆ. ಈಗಾಗಲೇ ಕಂದಾಯ ಇಲಾಖೆ, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಲೋಕೋಪಯೋಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜೊತೆಗೆ ಸಿಎಂ ಸಭೆ ನಡೆಸಿ, ಪ್ರಸ್ತಾವನೆ, ಬೇಡಿಕೆಗಳನ್ನು ಆಲಿಸಿದ್ದಾರೆ. ನಿನ್ನೆ 8 ಇಲಾಖೆಯೊಂದಿಗೆ ಸಭೆ ನಡೆಸಿದಂತ ಅವರು, ಇಂದು 12 ಇಲಾಖೆಗಳೊಂದಿಗೆ ಬಜೆಟ್ ತಯಾರಿಯ ಪೂರ್ವಭಾವಿ ಸಭೆಯನ್ನ ನಡೆಸಲಿದ್ದಾರೆ. ಈ …
Read More »
admin
February 10, 2022
Breaking News, ಚಾಮರಾಜನಗರ
ಚಾಮರಾಜನಗರ: ತಾಲೂಕಿನ ಬಾಣಳ್ಳಿ ಗೇಟ್ ಬಳಿಯಲ್ಲಿ ಕಳೆದ ರಾತ್ರಿ ಕೊಳ್ಳೇಗಾಲದ ಮಾಜಿ ಶಾಸಕ ಎಸ್ ಬಾಲರಾಜು ಅವರ ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮದಿಂದಾಗಿ ಮಾಜಿ ಶಾಸಕ ಬಾಲರಾಜು ಹಾಗೂ ಕಾರು ಚಾಲಕ ಮೋಹನ್ ಮತ್ತು ಕ್ಲೀನರ್ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಅಪಘಾತದಲ್ಲಿ ಮಾಜಿ ಶಾಸಕ ಸೇರಿ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮಾಜಿ ಶಾಸಕ ಎಸ್ ಬಾಲರಾಜು ಪ್ರಾಣಾಪಾಯದಿಂದ ಪಾರಾಗಿದ್ದರೇ, …
Read More »
admin
February 9, 2022
Breaking News, ಬೆಂಗಳೂರು
ಬೆಂಗಳೂರು : ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜುಗಳ ಸುತ್ತಲೂ 200 ಮೀಟರ್ವರೆಗೆ ಜನರು ಗುಂಪುಗೂಡದಂತೆ ಇಂದಿನಿಂದ ಫೆಬ್ರುವರಿ.22ರವರೆಗೆ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಕಳೆದೆರಡು ದಿನಗಳಿಂದ ಶಿವಮೊಗ್ಗ, ಉಡುಪಿ ಸೇರಿದಂತೆ ಕೆಲ ಶಾಲಾ-ಕಾಲೇಜುಗಳ ಮುಂದೆ ಹಿಜಾಬ್-ಕೇಸರಿ ವಿಚಾರವಾಗಿ ಸಂಘರ್ಷಕ್ಕೆ ಕಾರಣವಾಗಿತ್ತು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನಗಳ ಕಾಲ ಸರ್ಕಾರ ರಜೆ …
Read More »
admin
February 9, 2022
Breaking News, World
ಭಾರತದಲ್ಲಿ ಹಿಜಾಬ್ ಗಲಾಟೆ ನಡೀತಿದ್ದಂತೇ ಅತ್ತ ಪಾಕಿಸ್ತಾನದಲ್ಲಿ ಹಿಂದೂ ದೇವಸ್ಥಾನ ಸಿಂದ್ ಪ್ರಾಂತ್ಯದ ಸುಕ್ಕುರ್ ಜಿಲ್ಲೆಯ ರೋಹ್ರಿ ನಗರ ಸಮೀಪ ಐತಿಹಾಸಿಕ ಶೆರಾವಲಿ ಮಟ ದೇವಸ್ಥಾನದ ಮೇಲೆ ದಾಳಿ ನಡೆದಿದೆ. ದಾಳಿಕೋರರು ದೇವಸ್ಥಾನದಲ್ಲಿದ್ದ ಐದು ದೇವರ ಮೂರ್ತಿಗಳನ್ನ ಧ್ವಂಸ ಮಾಡಿದ್ದಾರೆ. ಜೊತೆಗೆ ದೇವಸ್ಥಾನದಲ್ಲಿದ್ದ ನಗದು, ಚಿನ್ನದ ಕಿರೀಟ, ಆಭರಣ ಮತ್ತು ಭಕ್ತರ ಮೂರು ಬೈಕ್ಗಳನ್ನ ದೋಚಿ ಪರಾರಿಯಾಗಿದ್ದಾರೆ ಆಲ್ ಪಾಕಿಸ್ತಾನ ಹಿಂದೂ ಪಚಾಯತ್ ಹೇಳಿದೆ.
Read More »
admin
February 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಹೊರವಲಯದ ಬೈಪಾಸ್ ನಲ್ಲಿ ಚಲಿಸುತ್ತಿದ್ದ ಲಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ನಡೆದಿದ್ದು, ಚಾಲಕ ಕುಳಿತ ಜಾಗದಲ್ಲಿಯೇ ಸಾವಿಗೀಡಾಗಿದ್ದಾನೆ. ಆಂದ್ರಪ್ರದೇಶ ಮೂಲದ ಲಾರಿಯೂ ಕಟ್ಟಿಗೆಯನ್ನ ಹೇರಿಕೊಂಡು ದಾಂಡೇಲಿಯತ್ತ ಹೋಗುವ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಯಾವ ಸಮಯದಲ್ಲಿ ಅಪಘಾತ ಸಂಭವಿಸಿದೆ ಎಂಬ ಕುರಿತು ಮಾಹಿತಿ ಲಭ್ಯವಾಗಬೇಕಿದೆ. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಈಗ ಪರಿಶೀಲನೆಗೆ ಮುಂದಾಗಿದ್ದಾರೆ. ಚಾಲಕನ ಶವ …
Read More »
admin
February 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೆಯ ಮನೆ ತೆರವು ಕಾರ್ಯಾಚರಣೆ ವೇಳೆ ಗೋಡೆ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಘಂಟಿಕೇರಿಯ ಪಗಡಿ ಗಲ್ಲಿಯಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಶಿವಪ್ಪ ಮುಂದಿನಮನಿ (60) ಮೃತಪಟ್ಟ ಕಾರ್ಮಿಕ, ಗುತ್ತಿಗೆದಾರ ಗಣೇಶರಾವ್ ಶಿಂಧೆ ಎಂಬುವರು ರಾಜು ಹುನಗುಂದ ಎಂಬುವರ ಹಳೆಯ ಮನೆ ಗೋಡೆ ತೆರವು ಮಾಡಿಸುತ್ತಿದ್ದರು. ಈ ವೇಳೆ ಗೋಡೆ ಶಿವಪ್ಪನ ಮೈಮೇಲೆ ಕುಸಿದು ಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ಶಿವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …
Read More »
admin
February 9, 2022
Breaking News, ಬೆಂಗಳೂರು
ಬೆಂಗಳೂರು : ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ, ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಪ್ರೇರಪಣೆ ನೀಡುತ್ತಿದೆ ಎಂದು ಕಂದಾಯ ಸಚಿವ ಅರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಕರ್ನಾಟಕದಲ್ಲಿ ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಪಕ್ಷ ಒಂದು ವರ್ಗಕ್ಕೆ ಪ್ರೇರಪಣೆ ನೀಡುತ್ತಿದೆ. ಕಾಂಗ್ರೆಸ್ ನ ಇನ್ನೊಂದು ವರ್ಗ ಎರಡೂ ಕಡೆ ಇದೆ. ಕಾಂಗ್ರೆಸ್ ಪಕ್ಷ ಎರಡೂ ಕಡೆ ಇರುವುದು ಒಳ್ಳೆಯದಲ್ಲ. ಕಾಂಗ್ರೆಸ್ ಯಾರ ಪರ …
Read More »
admin
February 9, 2022
Breaking News, World
ನೊಬೆಲ್ ಪ್ರಶಸ್ತಿ ಪುರಸ್ಕೃತೆ, ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ, ಪಾಕಿಸ್ತಾನ ಮೂಲದ ಮಲಾಲಾ ಯೂಸುಫ್ ಝಾಯಿ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಲಾಲಾ ಟ್ವೀಟ್ ಮಾಡಿದ್ದು, ಹಿಜಾಬ್ ಅಥವಾ ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜುಗಳು ಬಲವಂತ ಮಾಡುತ್ತಿವೆ. ಹಿಜಾಬ್ ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗಿಟ್ಟಿದ್ದು ನಿಜಕ್ಕೂ ಭಯನಾಕ. ಹುಡುಗಿಯರು ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವುದಕ್ಕೆ ಆಕ್ಷೇಪಣೆ ಮಾಡುತ್ತಿರುವುದು …
Read More »
admin
February 9, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) ಇನಾಂಗಳ ರದ್ದಿಯಾತಿ ಅಧಿನಿಯಮ 1976 ಕ್ಕೆ ತಿದ್ದುಪಡಿ ತಂದು ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ.
Read More »