Breaking News

Breaking News

ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ನಿಧನ

ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ಇಂದು ನಿಧನ ಹೊಂದಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ನಟ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅಶ್ವಥ್ ನಾರಾಯಣ್, ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಅವರ ಬೆಂಗಳೂರಿನ ನಿವಾಸದಲ್ಲಿ ಹಿರಿಯ ನಟ ಅಶ್ವಥ್ ನಾರಾಯಣ್ ನಿಧನರಾಗಿದ್ದಾರೆ. ಕನ್ನಡದ ಹಲವು ನಟರೊಂದಿಗೆ, ನಟಿಯರೊಂದಿಗೆ ವಿಶಿಷ್ಠ ನಟನೆಯ ಮೂಲಕ ಗುರ್ತಿಸಿಕೊಂಡಿದ್ದಂತವರು ನಟ ಅಶ್ವಥ್ …

Read More »

ಇಂದು ಸಂಜೆ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅಂತ್ಯಕ್ರಿಯೆ

ಮುಂಬೈ: ಭಾರತ ರತ್ನ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ 92 ವರ್ಷದ ಲತಾ ಮಂಗೇಶ್ಕರ್, ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಕೊನೆಯುಸಿರೆಳೆದಿದ್ದಾರೆ. ಲತಾ ಅವರ ಪಾರ್ಥಿವ ಶರೀರವನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಕೊಂಡಯ್ಯಲಾಗುತ್ತಿದ್ದು, ಅಲ್ಲಿಯೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಇಂದು ಸಂಜೆ ಶಿವಾಜಿ ಪಾರ್ಕ್ ನಲ್ಲಿ ಸಕಲ …

Read More »

ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,07,474 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,07,474 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ಬಾಲಮಂದಿರ ಕೇಂದ್ರದಿಂದ ಬಾಲಕ ಎಸ್ಕೇಪ್: ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲು

ಹುಬ್ಬಳ್ಳಿ: ಇಲ್ಲಿಯ ಉಣಕಲ್ ನ ಬಾಲಮಂದಿರ ಕೇಂದ್ರದಿಂದ ರಿಜ್ವಾನ್ ಮಸ್ತಾನಖಾನ(೧೩) ಬಾಲಕ ತಪ್ಪಿಸಿಕೊಂಡು ಹೋಗಿದ್ದಾನೆ. ಈ ಬಾಲಕ ಮೂಲತಃ ಬೆಂಗಳೂರಿನ ಓಸ್ವಾಲ್ ನಗರದ ಎಂ.ಎಂ.ಎಸ್ ಪಾಳ್ಯ ವೃತ್ತ ಸಮೀಪದ ನಿವಾಸಿ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Read More »

ಗಾನ ಕೋಗಿಲೆ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

ನವದೆಹಲಿ: ಕೋವಿಡ್‌-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದು, ದೇಶದಲ್ಲಿ ಸಂಗೀತದ ಕಳೆ ಕಳಿಚಿದಂತಾಗಿದೆ. ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More »

ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿ ದ ಪ್ರಧಾನಿ

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾ ಮಂಗೇಶ್ಕರ್ ಅವರು ನಮ್ಮ ದೇಶಕ್ಕೆ ತುಂಬಲಾಗದ ನಷ್ಟ ಎಂದು ಅವರು ಟ್ವೀಟ್ ಮಾಡಿದ್ದಾರೆ. ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರವು ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

Read More »

ಗೋವಿಂದ ರೆಡ್ಡಿ ನೂತನ ಜಿಲ್ಲಾಧಿಕಾರಿಯಾಗಿ ನೇಮಕ

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ವಿಜಯಪುರ ಜಿಲ್ಲಾ ಪಂಚಾಯಿತಿ ಗೋವಿಂದ ರೆಡ್ಡಿ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

Read More »

ಗಾನ ಕೋಗಿಲೆ ನಿಧನ ಹಿನ್ನಲೆ ದೇಶದಲ್ಲಿ 2 ದಿನಗಳ ಶೋಕಾಚರಣೆ

ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಹೊಂದಿದ್ದಾರೆ. ದೇಶದಲ್ಲಿ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಅವರ ಅಂತ್ಯಸಂಸ್ಕಾರ ನೆರವೇರಲಿದೆ.ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದ ಹಿನ್ನಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Read More »

ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಕೊರೋನಾ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ ಸಂಖ್ಯೆಯಲ್ಲಿ ಕೊರೋನಾ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 12,009 ಮಂದಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ. ಸೋಂಕಿನಿಂದಾಗಿ 50 ಮಂದಿಗೆ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,32,796 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 4,535 ಸೇರಿದಂತೆ ಕರ್ನಾಟಕದಲ್ಲಿ 12,009 ಜನರಿಗೆ …

Read More »

ಹಿಜಾದ್ ವಿವಾದ ಕುರಿತು ಮಹತ್ವದ ತೀರ್ಮಾನ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವರ್ಸರ್ ಕೇಸರಿ ಶಾಲು ವಿವಾದದ ಬೆನ್ನಲ್ಲೇ, ರಾಜ್ಯ ಸರ್ಕಾರ ಸಮವಸ್ತ್ರ ಕುರಿತಂತೆ ಮಹತ್ವದ ಆದೇಶ ಹೊರಡಿಸಿದೆ. ಅದೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿ ಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಆದೇಶಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜ್ಯದ ಎಲ್ಲಾ ಕಾಲೇಜುಗಳಿಗೆ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಏಕರೂಪದ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ …

Read More »