Breaking News

Breaking News

ಪವರ್ ಸ್ಟಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಪುನೀತ್​ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್​ ಒಂದನ್ನ ಬಿಡುಗಡೆ ಮಾಡಿದ್ದ ಚಿತ್ರ ತಂಡ ಈಗ ಸಿನಿಮಾ ಟೀಸರ್​ ಬಿಡುಗಡೆಗೆ ದಿನಾಂಕ ಫಿಕ್ಸ್​ ಮಾಡಿದೆ. ಫೆಬ್ರವರಿ 11 ರಂದು ಸರಿಯಾಗಿ 11 ಗಂಟೆ 11 ನಿಮಿಷಕ್ಕೆ ಜೇಮ್ಸ್​ ಸಿನಿಮಾದ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನೂ ಜೇಮ್ಸ್​ ಸಿನಿಮಾದಲ್ಲಿ ಪ್ರಿಯಾ ಆನಂದ್​ ಹಿರೋಯಿನ್​ ಆಗಿ ನಟಿಸಿದ್ದು, ತೆಲುಗು ನಟ ಶ್ರೀಕಾಂತ್​, ಶರತ್​ ಕುಮಾರ್​ ರಾಘವೇಂದ್ರ ರಾಜ್​ಕುಮಾರ್​, ಮುಂತಾದ ಕಲಾವಿದರು …

Read More »

ಪ್ರವಾಸಕ್ಕೆ ಹೋದ ವಿಮಾನ ಪತನ : 7 ಜನ ಸಾವು

ಲಿಮಾ: ವಿಶ್ವ ಪಾರಂಪರಿಕ ತಾಣ ಪೆರು ದೇಶದ ನಾಜ್ಕಾ ರೇಖೆಗಳನ್ನು ನೋಡಲು ಹೊರಟಿದ್ದ ವಿಮಾನವೊಂದು ಪತನವಾಗಿ ಏಳು ಜನ ಮೃತಪಟ್ಟ ಘಟನೆ ನಡೆದಿದೆ.ಪ್ರವಾಸಿಗರನ್ನು ಹೊತ್ತ ಲಘು ವಿಮಾನ ಇದಾಗಿತ್ತು. ಏರೋ ಸ್ಯಾಂಟೋಸ್ ಎಂಬ ಟೂರ್ ಸಂಸ್ಥೆಯ ವಿಮಾನ ಇದಾಗಿದೆ. ಐವರು ಪ್ರವಾಸಿಗರು, ಓರ್ವ ಪೈಲಟ್ ಮತ್ತು ಸಹ ಪೈಲಟ್ ಸೇರಿ ಏಳು ಜನ ಮೃತಪಟ್ಟಿದ್ದಾರೆ. ಪ್ರವಾಸಿಗರ ಗುರುತು ಮತ್ತು ದೇಶ ಪತ್ತೆ ಹಚ್ಚಲಾಗುತ್ತಿದೆ. 1500 ರಿಂದ 2000 ವರ್ಷಗಳ ಹಿಂದೆ …

Read More »

ಕೋವಿಡ್ ಸೋಂಕು ಇಳಿಕೆ : ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧ ಸಡಿಲ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಸೋಮವಾರದಿಂದ ಜಾರಿಗೆ ಬರುವಂತೆ ಹೊಸ ಎಸ್‌ಒಪಿ ಹೊರಡಿಸಲಾಗಿದೆ. ಹೈಕೋರ್ಟ್ ಕಲಾಪಗಳಿಗೆ ಸಂಬಂಧಿಸಿದಂತೆ ನೂತನ ಎಸ್‌ಒಪಿ ಪ್ರಕಟಿಸಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದು, ಬೆಂಗಳೂರು ಪ್ರಧಾನ ಪೀಠದಲ್ಲಿ ಭೌತಿಕ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.

Read More »

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2020 ಮಾರ್ಚ್‌1ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು  ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ), ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿ) 2018-19 ಮತ್ತು 2020-21ರ ಅವಧಿಯಲ್ಲಿ 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ ಸಚಿವರು …

Read More »

ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ನಿಧನ

ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ.ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ …

Read More »

ರಾಜ್ಯಾದ್ಯಂತ 15 ದಿನಗಳ ಕಾಲ ಮಾಜಿ ಸಿಎಂ ಪ್ರವಾಸ

ಬೆಂಗಳೂರು: 15 ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕನಿಷ್ಠ 130ರಿಂದ 140 ಸೀಟುಗಳನ್ನು ಗೆದ್ದು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಜ್ಜಾಗಿದ್ದಾರೆ. ಬಿಜೆಪಿ ಭಾರಿ ಅಂತರದಲ್ಲಿ ಗೆಲುವುನ್ನು ಸಾಧಿಸಲು ಪ್ರವಾಸ ಕೈಗೊಂಡಿದ್ದಾರೆ.

Read More »

ಉತ್ತರ ಕನ್ನಡ ಜಿಲ್ಲೆಯ 101 ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ವಿವಿಧ ಪಕ್ಷಗಳ 101 ಮುಖಂಡರು ಶುಕ್ರವಾರ ಕಾಂಗ್ರೆಸ್‌ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಕಾಂಗ್ರೆಸ್‌ಗೆ ಸ್ವಾಗತಿಸಲಾಯಿತು. ಭಾಸ್ಕರ ಪಟಗಾರ್, ಶಂಕರ್‌ ಗೌಡ, ಅಶೋಕ್‌ ಗೌಡ, ಕೃಷ್ಣ ಗೌಡ, ರಾಜೇಶ್‌ ಗೌಡ, ಮುಕುಂದ ಗೌಡ, ಬಲೀಂದ್ರ ಗೌಡ, ಸುಕ್ರು ಗೌಡ, ಬೊಮ್ಮಣ್ಣ ಪಡಿಗಾರ್‌, ಜಗದೀಶ್ ನಾಯ್ಕ, ನಾಗು ಹಳ್ಳೀರ ಮತ್ತು ಉದಯ ಮಕ್ಕಿ ಶುಕ್ರವಾರ ಕಾಂಗ್ರೆಸ್‌ ಸೇರಿದವರಲ್ಲಿ ಪ್ರಮುಖರು.

Read More »

ಹಿಜಾಬ್ ವಿವಾದ : ಬಿಜೆಪಿ ಮತ್ತು RSS ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ

ಬೆಂಗಳೂರು: ಉಡುಪಿ ಜಿಲ್ಲೆಯ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಜೆಪಿ ಮತ್ತು RSS ವಿಎಎರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ’ ಅಂತಾ ಹೇಳುವ ಮೂಲಕ ಹಿಜಾಬ್ ಪರ ಬ್ಯಾಟಿಂಗ್ ಮಾಡಿದ್ದಾರೆ. ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ …

Read More »

ಆರೋಗ್ಯ ತಜ್ಞರಿಂದ ಒಮಿಕ್ರಾನ್ ಕುರಿತು ಮಹತ್ವದ ಮಾಹಿತಿ ಬಿಡುಗಡೆ

ದೆಹಲಿ: ದೇಶದಲ್ಲೀಗ ಒಮಿಕ್ರಾನ್​ ಚಾಲಿತ ಕೊರೊನಾ ಸೋಂಕಿನ ಮೂರನೇ ಅಲೆ ಎದ್ದಿದೆ. ಒಂದು ದಿನದಲ್ಲಿ ಮೂರು ಲಕ್ಷದವರೆಗಿನ ಪ್ರಕರಣಗಳು ಪತ್ತೆಯಾಗಿ ಇದೀಗ ಮತ್ತೆ ಇಳಿಮುಖಗೊಂಡಿದೆ. ದಿನಕ್ಕೆ ಒಂದು ಲಕ್ಷದಷ್ಟು ಸೋಂಕಿತರು ದಾಖಲಾಗುತ್ತಿದ್ದಾರೆ. ಆದರೆ ಈ ಮೂರನೇ ಅಲೆ ಇದೊಂದು ತಿಂಗಳು ಕಾಡಲಿದೆ. ಭಾರತದಲ್ಲಿ ಮಾರ್ಚ್​ ತಿಂಗಳ ಹೊತ್ತಿಗೆ ಕೊವಿಡ್​ 19 ಮೂರನೇ ಅಲೆ ಪ್ರಮಾಣ ತುಸು ತಗ್ಗಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರ, ದೆಹಲಿ, ಪಶ್ಚಿಮ …

Read More »

ಪದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್‌.ಸುತಾರ ನಿಧನ

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್‌.ಸುತಾರ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿತ್ತು ಎನ್ನಲಾಗಿದೆ. ಇಬ್ರಾಹಿಂ ಎನ್. ಸುತಾರ್ (ಇಬ್ರಾಹಿಂ ನಬೀ ಸಾಹೇಬ್ ಸುತಾರ್) (ಹುಟ್ಟು-10 ಮೇ 1940) ವೈದಿಕ, ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿರುವ ತತ್ವಪದಕಾರರು ಮತ್ತು ಪ್ರವಚನಕಾರರು.ಇವರಿಗೆ 2018ರ ಪದ್ಮಶ್ರೀ ಪ್ರಶಸ್ತಿಯನ್ನು ಕೊಡಲಾಗಿದೆ.

Read More »