Breaking News

Breaking News

ಯೋಗಿ ಆದಿತ್ಯನಾಥ್ ವಿರುದ್ಧ ದೂರು ನೀಡಿದ ಸಮಾಜವಾದಿ ಪಕ್ಷ

ಲಖನೌ: ಚುನಾವಣಾ ಪ್ರಚಾರದ ಭಾಷಣಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವಹೇಳನಕಾರಿ ಹಾಗೂ ಬೆದರಿಕೆಯೊಡ್ಡುವಂಥ ಭಾಷೆ ಬಳಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷವು (ಎಸ್‌ಪಿ) ಆರೋಪಿಸಿದೆ. ಈ ಕುರಿತು ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅಂಥ ಭಾಷೆ ಬಳಕೆಯನ್ನು ತಕ್ಷಣವೇ ನಿಷೇಧಿಸಬೇಕು ಎಂದು ಒತ್ತಾಯಿಸಿದೆ. ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಎಸ್‌ಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ವಕ್ತಾರ ರಾಜೇಂದ್ರ ಚೌಧರಿ ಪತ್ರ ಬರೆದಿದ್ದು, ಯೋಗಿ ಅವರು ಚುನಾವಣಾ ಭಾಷಣಗಳಲ್ಲಿ …

Read More »

2022 ರ NEET PG ಪರೀಕ್ಷೆ ಮುಂದೂಡಿಕೆ

ಕೊರೊನಾ ಮೂರನೇ ಅಲೆ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ 2022 ರ NEET PG ಪರೀಕ್ಷೆಯನ್ನು 6 ರಿಂದ 8 ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದೆ. ಈ ಪರೀಕ್ಷೆಗಳನ್ನು ಮಾರ್ಚ್‌ 12 ರಂದು ನಡೆಯಲು ನಿಗದಿಪಡಿಸಲಾಗಿದ್ದು, ಇದೀಗ 6 ರಿಂದ 8 ವಾರಗಳ ಕಾಲ ಮುಂದೂಡಿಕೆಯಾಗಿದೆ.ಪರಿಷ್ಕೃತ ವೇಳಾಪಟ್ಟಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

Read More »

ರಾಜ್ಯದ ಎಲ್ಲ ಅಧಿಕಾರಿಗಳಿಗೆ ತಾಕೀತು ಮಾಡಿದ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಅಧಿಕಾರಿಗಳು, ಪಿಡಿಒಗಳು ಪರಸ್ಪರ ಉತ್ತಮ ಸಂಬಂಧ ಇಟ್ಟುಕೊಂಡು ಜನಸಾಮಾನ್ಯರ ಸೇವೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಾಕೀತು ಮಾಡಿದರು. ನಗರದಲ್ಲಿ ಸುದ್ದಿಗಾರರ ಮಾತನಾಡಿದ ಅವರು, ಪಿಡಿಒಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡದೇ ಇರುವವರ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧವೂ …

Read More »

ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಗಮನಾರ್ಹ ಇಳಿಕೆಯಾಗಿದೆ. ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,49,394 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1072 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,00,055ಕ್ಕೆ ಏರಿಕೆಯಾಗಿದೆ.

Read More »

ಸಿಎಂ ಇಬ್ರಾಹಿಂ ಅವರನ್ನು ಕಾಂಗ್ರೆಸ್‌ನಲ್ಲಿಯೇ ವಿರುವಂತೆ ಮನವರಿಕೆ ಮಾಡಲಾಗುವುದು : ತನ್ವೀರ್ ಸೇಠ್

ಮೈಸೂರು: ಅತೃಪ್ತ ಎಂಎಲ್‌ಸಿ ಹಾಗೂ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನಲ್ಲಿಯೇ ಇರುವಂತೆ ಮನವರಿಕೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರಿಗೆ ಅವರ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಉನ್ನತ ಹುದ್ದೆಗಳನ್ನು ನೀಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿ ಇಲ್ಲ. ಶೀಘ್ರದಲ್ಲೇ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಅವರು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಚರ್ಚಿಸಿ …

Read More »

ಫೆ.25ರಂದು ಓಲ್ಡ್‌ಮಾಂಕ್‌ ಚಿತ್ರ ಬಿಡುಗಡೆ

ಶ್ರೀನಿ ನಿರ್ದೇಶನ ಮತ್ತು ನಟನೆಯ ಬಹುನಿರೀಕ್ಷಿತ ಚಿತ್ರ ‘ಓಲ್ಡ್‌ಮಾಂಕ್‌’ ಫೆ.25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಅದೇ ಥರ ‘ವಿಕ್ರಾಂತ್‌ ರೋಣ’ ರಿಲೀಸ್‌ ಮುಂದಕ್ಕೆ ಹೋಗಿರುವುದರಿಂದ ಅವತ್ತೇ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿ ಕೊಟ್ಟಮಾತನ್ನು ಉಳಿಸಿಕೊಂಡಿದೆ. ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗಿನಲ್ಲಿಯೇ ಫೆ.25ರಂದೇ ಸಿನಿಮಾ ಬಿಡುಗಡೆ ಆಗಲಿದೆ.

Read More »

ಉತ್ತರ ಪ್ರದೇಶ ಚುನಾವಣೆ : ಕೇಂದ್ರ ಗೃಹರೊಂದಿಗೆ ಯೋಗಿ ಆದಿತ್ಯನಾಥ್ ನಾಮ ಪತ್ರ ಸಲ್ಲಿಕೆ

ದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾಚಣೆ ಯು ಚುರುಕುಗೊಂಡಿದೆ. ಮೊದಲ ಹಂತದ ಮತದಾನ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು‌ ಜೋರಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ತೆರಳಲಿದ್ದಾರೆ.ದೇ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧೆ ಮಾಡುತ್ತಿರುವ ಯೋಗಿ ಆದಿತ್ಯನಾಥ್ ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಮೇದಾರನಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

Read More »

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ವಿಡಿಯೋ ವೈರೆಲ್

ಮಂಗಳೂರು: ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಫೆಬ್ರವರಿ 3 ರಂದು ಸಂಜೆ 4 ಗಂಟೆಗೆ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಕಾರಿನ ಚಾಲಕ ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ, ಲೇಡಿಹಿಲ್‌ನಿಂದ ಉರ್ವಾ ಸ್ಟೋರ್ಸ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಆಕ್ಟಿವಾದಲ್ಲಿದ್ದ ಇಬ್ಬರು …

Read More »

ಸಿಎಂ ಇಬ್ರಾಹಿಂ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಿ.ಎಂ. ಇಬ್ರಾಹಿಂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರ ಧೂಳು ಕೂಡ ಬಿಜೆಪಿಗೆ ಬರಬಾರದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ಇಬ್ರಾಹಿಂ ಅವರನ್ನು ಯಾವ ಕಾರಣಕ್ಕೂ ಬಿಜೆಪಿಗೆ ಸೇರಿಸಲ್ಲ.ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರು. ಇದೇ ವೇಳೆ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ, ಕಾಂಗ್ರೆಸ್ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಆಗಿಲ್ಲ, 17 …

Read More »

ಕೇಂದ್ರ ಬಜೆಟ್​ನಲ್ಲಿ ರೈಲ್ವೆ ವಲಯಕ್ಕೆ ಲಭಿಸಿದ ಭರ್ಜರಿ ಅನುದಾನ

ಹುಬ್ಬಳ್ಳಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಹೊಸ ವರ್ಷದ 2022  ಬಜೆಟ್ ಮಂಡಿಸಿದ್ದಾರೆ.ಆದರೆ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ನಲ್ಲಿ ನೈಋತ್ಯ ರೈಲ್ವೆ ವಲಯಕ್ಕೆ 6,900 ಕೋಟಿ ರೂ. ಅನುದಾನ ಲಭಿಸಿದೆ. ಕರ್ನಾಟಕದ ಪಾಲಿಗೇ 6 ಸಾವಿರ ಕೋಟಿ ರೂ. ದೊರಕಿದೆ. ನೈಋತ್ಯ ರೈಲ್ವೆಗೆ ಈವರೆಗೆ ದೊರೆತ ಅತಿ ಹೆಚ್ಚಿನ ಅನುದಾನ ಇದಾಗಿದೆ. ಇದರಲ್ಲಿ ಕರ್ನಾಟಕ ಸರ್ಕಾರ ಜೋಡಿಸಿಕೊಡಬೇಕಿರುವ 780 ಕೋಟಿ ರೂ. ಸೇರಿದೆ. 2020-21ನೇ ಸಾಲಿನ ಬಜೆಟ್​ನಲ್ಲಿ ನೈಋತ್ಯ …

Read More »