admin
February 2, 2022
Breaking News, World
ಯುವಕರು, ಮಧ್ಯಮ ವರ್ಗ ಹಾಗೂ ಬಡವರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ.ಬಜೆಟ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳಿವೆ.ಇದು ಉತ್ತಮ ಬಜೆಟ್ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಬಜೆಟ್ ಬಗ್ಗೆ ಮಾತನಾಡಿ, ಕೊರೋನಾ ಈಗಲೂ ಹೋಗಿಲ್ಲ. ವಿಶ್ವವೇ ಕೊರೋನಾದಿಂದ ಕಂಗಾಲಾಗಿದೆ. ಈ ನಡುವೆ ಬಜೆಟ್ ಆರ್ಥಿಕವಾಗಿ ಆಶಾದಾಯಕವಾಗಿದೆ. ಆಧುನಿಕ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದಿದ್ದಾರೆ.
Read More »
admin
February 2, 2022
Breaking News, ಬೆಂಗಳೂರು
ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ.pue.kar.nic.in ವೆಬ್ಸೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ. ವಿದ್ಯಾರ್ಥಿಗಳು ಗಮನಿಸಬಹುದಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಎನ್ನಲಾಗಿದೆ.
Read More »
admin
February 2, 2022
Breaking News, ಧಾರವಾಡ
ಧಾರವಾಡ : ಚಾಣಾಕ್ಷತನದಿಂದ ಕಳ್ಳರನ್ನು ಸೆರೆ ಹಿಡಿಯುವ ಪೋಲಿಸ್ ರ ವಾಹನವನ್ನು ಕಳ್ಳತನ ಮಾಡಿರುವ ಘಟನೆ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ. ಪ್ರತಿದಿನ ಪೊಲೀಸ್ ವಾಹನವನ್ನು ಕ್ಲೀನ್ ಮಾಡಲು ಠಾಣೆ ಗೆ ಬರುತ್ತಿದ್ದ ವ್ಯಕ್ತಿ ಪೊಲೀಸ್ ಠಾಣೆ ಯಿಂದ ಪೊಲೀಸ್ ಜೀಪ್ ನೊಂದಿಗೆ ಎಸ್ಕೇಪ್ ಆಗಿದ್ದಾನೆ. ಅಣ್ಣಿಗೇರಿ ಪಟ್ಟಣದ ನಿವಾಸಿ ನಾಗಪ್ಪ ಹಡಪದ ಎಂಬುವರಿಂದ ಕಳ್ಳತನವಾಗಿದೆ. ಪೊಲೀಸ್ ಜೀಪ್ ನೊಂದಿಗೆ ನಾಗಪ್ಪ ನ ಬಂಧನ ಮಾಡಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆ ಯಲ್ಲಿ …
Read More »
admin
February 2, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್ ತಿಂಗಳಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ವಿವಿಧ ಗ್ರಾಮಗಳಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ವೇಳೆ ಶಿವಮೊಗ್ಗ ಜಿಲ್ಲೆಯ ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ. ಅತ್ಯುತ್ತಮ ಗ್ರಾಮ ಪ್ರಶಸ್ತಿ ಪಡೆದ ಆಯ್ದ ಗ್ರಾಮಕ್ಕೆ ಪ್ರಧಾನಿಗಳು ಭೇಟಿ ನೀಡಲಿದ್ದಾರೆ ಎಂದರು.
Read More »
admin
February 2, 2022
Breaking News, ಕರ್ನಾಟಕ
ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಸಿದ್ದರಾಮಯ್ಯ ಗೋವಾದಲ್ಲಿ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ . ಫೆಬ್ರವರಿ 8, 9ರಂದು ಗೋವಾದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಗೋವಾದಲ್ಲಿ ಕನ್ನಡಿಗರು ಹೆಚ್ಚಿರುವ ಕಡೆ ಸಿದ್ದರಾಮಯ್ಯ ಪ್ರಚಾರಕ್ಕಿಳಿಯಲಿದ್ದಾರೆ. ಫೆಬ್ರವರಿ 7 ರಂದು ಬಳ್ಳಾರಿಯಲ್ಲಿ ಭೀಮಾ ನಾಯ್ಕ್ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಳಿಕ ಗೋವಾದ ವಿಧಾನಸಭಾ ಚುನಾವಣೆಯ ಅಂಗವಾಗಿ ಅಲ್ಲಿಗೆ ಪ್ರಚಾರಕ್ಕೆ ತೆರಳಲಿದ್ದಾರೆ.
Read More »
admin
February 2, 2022
Breaking News, ಬೆಳಗಾವಿ
ಬೆಳಗಾವಿ: ರಾಜ್ಯದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹವಾ ಮುಗಿದಿದೆ. ಇನ್ನೂ ಮೂರು ನಾಲ್ಕು ಜನರು ಇದದಾರೆ. ಅವರ ಹವಾ ಕೂಡ ಸದ್ಯದಲ್ಲೇ ಮುಗಿಯಲಿದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಂದು ಮಾತನಾಡಿದಂತ ಅವರು, ನಾನು ಎಲ್ಲಿಯೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಕೇವಲ 2ನೇ ನಾಯಕತ್ವದ ಬಗ್ಗೆ ಮಾತನಾಡಿದ್ದೇನೆ. ಈಗ ಪಕ್ಷಕ್ಕೆ 2ನೇ ನಾಯಕತ್ವ ಬೇಕಾಗಿದೆ. ಬಿಜೆಪಿ ಹೈಕಮಾಂಡ್ ಆ …
Read More »
admin
February 2, 2022
Breaking News, ಬೆಂಗಳೂರು
ಬೆಂಗಳೂರು: ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇವಿವಿಧ ಇಲಾಖೆಗಳೊಂದಿಗೆಳಿದರು.
Read More »
admin
February 2, 2022
Breaking News, ಬೆಂಗಳೂರು
ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದ ನದಿ ಜೋಡಣೆ ವಿಚಾರದಲ್ಲಿ ನಮಗೆ ಅನ್ಯಾಯವಾದರೆ ನಾವು ಒಪ್ಪುವುದಿಲ್ಲ. ನಮ್ಮ ರಾಜ್ಯದ ನೀರಿಗೆ ತೊಂದರೆಯಾಗಬಾರದು. ನೀರು ಹಂಚಿಕೆಯಲ್ಲಿ ಸಮಸ್ಯೆ ಆದ್ರೆ ನಾವು ಅನುಮತಿ ಕೊಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿ ಜೋಡಣೆ ಯೋಜನೆಗೆ ರಾಜ್ಯ ಸರ್ಕಾರದ ಅನುಮತಿ ಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ನಮಗೆ ಅನ್ಯಾಯವಾಗುವ ರೀತಿಯಿದ್ದರೆ ನಾವು ಒಪ್ಪುವುದಿಲ್ಲ ಎಂದರು.
Read More »
admin
February 2, 2022
Breaking News, ಧಾರವಾಡ
ಧಾರವಾಡ: ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಡೆಸಲಾಗುವ 3 ತಿಂಗಳ KAS ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ತರಗತಿಗಳಿಗೆ ಇಂದು ಚಾಲನೆ ನೀಡಲಾಯಿತು. ಧಾರವಾಡದ ಸಿ ಬಿ ನಗರದಲ್ಲಿ ನಿರ್ಮಿಸಲಾಗಿರುವ ನೂತನ ಸ್ಟುಡಿಯೊದಲ್ಲಿ ಆನ್‌ಲೈನ್ ತರಗತಿಗಳಿಗೆ ಮಾಜಿ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ಬಡ ಮತ್ತು ಪ್ರತಿಭಾವಂತ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಕಡಿಮೆ ದರದಲ್ಲಿ ತರಬೇತಿ …
Read More »
admin
February 2, 2022
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನಿಸಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಕರೆ ನೀಡಿದ್ದ ನಗರ ಬಂದ್ ಭಾಗಶಃ ಯಶಸ್ವಿಯಾಯಿತು. ದಲಿತ ಸಂಘರ್ಷ ಸಮಿತಿ, ಬಿವಿಎಸ್, ಎಸ್‌ಡಿಪಿಐ, ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಸಂಘದ ಕಾರ್ಯಕರ್ತರು ಬೆಳಿಗ್ಗೆಯೇ ರಸ್ತೆಗಿಳಿದು ದ್ವಿಚಕ್ರ ವಾಹನಗಳಲ್ಲಿ ನಗರದಲ್ಲಿ ಸುತ್ತಿದರು.ಅಂಗಡಿ ಮುಂಗಟ್ಟು ತೆರೆಯದಂತೆ ಮಾಲೀಕರಿಗೆ ಮನವಿ ಮಾಡಿ, ಬಾಗಿಲು ಮುಚ್ಚಿಸಿದರು. ನಗರದ ಐಜಿ ರಸ್ತೆ, ಎಂ.ಜಿ ರಸ್ತೆ, …
Read More »