Breaking News

Breaking News

ಬಜೆಟ್ 2022 : ಶಿಕ್ಷಣ ಕುರಿತು ಮಹತ್ವದ ಹೆಜ್ಜೆ

ನವದೆಹಲಿ: ಕೇಂದ್ರ ಬಜೆಟ್ 2022ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಮಾಡಿದ್ದು, ಉದ್ಯೋಗ ಸೃಷ್ಟಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಮಹತ್ವ ನೀಡಿದ್ದಾರೆ. ಆತ್ಮನಿರ್ಭರ್‌ಗೆ ಹೆಚ್ಚು ಒತ್ತು ನೀಡಿದ್ದು, 25 ವರ್ಷಗಳ ಬ್ಲೂಪ್ರಿಂಟ್ ತಯಾರು ಮಾಡಿರುವ ಬಗ್ಗೆ ವಿವರಣೆ ನೀಡಿದ್ದಾರೆ. ಜೊತೆಗೆ ಆಂತರಿಕವಾಗಿ 30 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದಾರೆ. ಈ ವರ್ಷದ ಬಜೆಟ್ ಶಿಕ್ಷಣ ಕ್ಷೇತ್ರಕ್ಕೂ …

Read More »

ಐಟಿ ದಾಳಿಗೆ ಬಲಿಯಾದವರಿಗೆ ಶಾಕ್ ನೀಡಿದ ಬಜೆಟ್ 2022

ದೆಹಲಿ : ಇತ್ತೀಚೆಗೆ ಸಾಕಷ್ಟು ಐಟಿ ದಾಳಿಗಳು ನಡೆಯುತ್ತಲೇ ಇವೆ. ಇನ್ಮುಂದೆ ದಾಳಿ ವೇಳೆ ಸಿಕ್ಕ ಸಂಪತ್ತಿಗೆ ತೆರಿಗೆ ಕಟ್ಟೋದು ಅನಿವಾರ್ಯ. ಐಟಿ ದಾಳಿ ವೇಳೆ ಸೀಜ್ ಮಾಡಲಾದ ಆಸ್ತಿಯನ್ನು ನಷ್ಟವೆಂದು ಪರಿಗಣಿಸುವಂತಿಲ್ಲ.

Read More »

ಹೊಸ ವರ್ಷದ ಬಜೆಟ್ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ ಪಟ್ಟಿ ಇಲ್ಲಿದೆ ನೋಡಿ

ಇಂದು ಬಜೆಟ್ ಮಂಡನೆ ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ. 2022-23ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವರು ಪ್ರಸ್ತಾಪಿಸಿದಂತೆ, ಮೊಬೈಲ್ ಫೋನ್‌ಗಳು ಮತ್ತು ಮೊಬೈಲ್ ಫೋನ್ ಚಾರ್ಜರ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾನ್ಯವಾಗಿ ಬಳಸುವ ವಸ್ತುಗಳು ಅಗ್ಗವಾಗಲಿವೆ. ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು ಹಾಗೂ ರತ್ನದ ಕಲ್ಲುಗಳ ಮೇಲಿನ ಸೀಮಾ ಸುಂಕವನ್ನು ಶೇ 5ಕ್ಕೆ ಇಳಿಸಲಾಗಿದೆ. ಆ ನಂತರದಲ್ಲಿ 350ಕ್ಕೂ ಹೆಚ್ಚು ಸೀಮಾ ಸುಂಕ ವಿನಾಯಿತಿಗಳನ್ನು ಹಂತಹಂತವಾಗಿ ತೆಗೆದುಹಾಕಲು ಪ್ರಸ್ತಾಪಿಸಲಾಗಿದೆ ಎಂದು …

Read More »

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಇಂದು (ಫೆ.1) ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಬೆಳಿಗ್ಗೆ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಮಡಿವಾಳರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆಯ …

Read More »

ದಲಿತಪರ ಸಂಘಟನೆಗಳ ಒಕ್ಕೂಟಗಳ ಪ್ರತಿಭಟನೆ

ಧಾರವಾಡ: ಜಿಲ್ಲಾವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವನ ಮೇಲೆ ಎಸ್.ಸಿ/ಎಸ್.ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವನನ್ನು ದೇಶದಿಂದ ತಡಿಪಾರ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಕಲಾಭವನದಿಂದ ಆರಂಭಗೊಂಡ ಮೆರವಣಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು. ಡಿಎಸ್.ಎಸ್ ಮುಖಂಡರಾದ ಪರಮೇಶ್ವರ ಕಾಳೆ, ರಾಜು ಕೋಟೆನ್ನವರ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.

Read More »

ದಲಿತಪರ ಸಂಘಟನೆಗಳ ಒಕ್ಕೂಟಗಳ ಪ್ರತಿಭಟನೆ

ಧಾರವಾಡ: ಜಿಲ್ಲಾವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವನ ಮೇಲೆ ಎಸ್.ಸಿ/ಎಸ್.ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವನನ್ನು ದೇಶದಿಂದ ತಡಿಪಾರ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಕಲಾಭವನದಿಂದ ಆರಂಭಗೊಂಡ ಮೆರವಣಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು. ಡಿಎಸ್.ಎಸ್ ಮುಖಂಡರಾದ ಪರಮೇಶ್ವರ ಕಾಳೆ, ರಾಜು ಕೋಟೆನ್ನವರ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.

Read More »

ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಉದ್ಘಾಟನೆ

ಧಾರವಾಡ : ಕೆಎಎಸ್‌ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಆನ್‌ಲೈನ್‌ ಕ್ಲಾಸ್‌ಗಳ ಉದ್ಘಾಟನಾ ಸಮಾರಂಭ ನಡೆಯುತ್ತು. ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಡೆಸಲಾಗುವ 3 ತಿಂಗಳ KAS ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ತರಗತಿಗಳು ಫೆಬ್ರುವರಿ 02 ರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿವೆ. ಈ ಸಂಬಂಧ ತರಗತಿಗಳ ಅಧಿಕೃತ ಉದ್ಘಾಟನಾ ಸಮಾರಂಭವು ಬೆಳಗ್ಗೆ 7 ಗಂಟೆಗೆ ನಡೆಯಲಿದೆ.ಈ ತರಗತಿಗಳ ಉದ್ಘಾಟನಾ ಸಮಾರಂಭವು ಧಾರವಾಡದ ಸಿಬಿ …

Read More »

ಹಿಜಾಬ್‌ ಧರಿಸುವುದ ಕುರಿತು ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿಗಳು

ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸುವುದನ್ನು ನಿರಾಕರಿಸಿದ ವಿಷಯ ಹೈಕೋರ್ಟ್‌ ಮೆಟ್ಟಿಲೇರಿದೆ. ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಅರ್ಜಿ ಸಲ್ಲಿಸಿದ್ದು, ಹಿಜಾಬ್‌ ಧರಿಸುವುದು ಸಂವಿಧಾನದ ಕಲಂ 14 ಮತ್ತು 25ರ ಅನ್ವಯ ಮೂಲಭೂತ ಹಕ್ಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾಳೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್‌ ಧರಿಸಲಾಗುತ್ತಿದೆ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅವರಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದು ಅರ್ಜಿಯಲ್ಲಿ …

Read More »

ಸಂಸತ್‌ ಭವನ ತಲುಪಿದ ನಿರ್ಮಲಾ ಸೀತಾರಾಮನ್‌

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಮ್ಮ ನಾಲ್ಕನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. 2022ರ ಸಂಸತ್‌ ಬಜೆಟ್‌ ಅಧಿವೇಶನದ ಎರಡನೇ ದಿನವಾದ ಇಂದು 2022-2023ನೇ ಸಾಲಿನ ಬಜೆಟ್‌ ಮಂಡನೆಯಾಗಲಿದೆ. ಬಜೆಟ್ ಮಂಡನೆಗೆ ಕೆಲವೇ ಹೊತ್ತು ಬಾಕಿ ಇರುವಾಗ ಸಂಸತ್‌ ಭವನ ತಲುಪಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ ಮಂಡನೆಗೆ ಅನುಮೋದನೆ ಪಡೆಯಲಿದ್ದಾರೆ. ಕಳೆದ ಎರಡು ವರ್ಷಗಳ ಡಿಜಿಟಲ್ ಸಂಪ್ರದಾಯವನ್ನು ಕೇಂದ್ರ …

Read More »

ಮಾಜಿ ಶಾಸಕ ಎಂ.ಎಂ.ಸಜ್ಜನ್ ನಿಧನ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ಎಂ.ಎಂ.ಸಜ್ಜನ್ (95) ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಸಜ್ಜನ್ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಮಂಗಳವಾರ ಸಂಜೆ 4 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Read More »