Breaking News

Breaking News

ಭತ್ತದ ಗದ್ದೆಗಳಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ ಅನ್ನದಾತರು

ಗಂಗಾವತಿ : ಭತ್ತದ ಗದ್ದೆಗಳಲ್ಲಿ ರಸಗೊಬ್ಬರದ ಚೀಲವಿಟ್ಟು ರೈತರು ತಾಲ್ಲೂಕಿನ ಆಜಾದ್ ನರಸಾಪುರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಎಪಿಎಂಸಿ ನಿರ್ದೇಶಕ ರೆಡ್ಡಿ ಮಾತನಾಡಿ,ಕಳೆದ 2 3 ತಿಂಗಳ ಇಂದೆ 50 ಕೆ.ಜಿ.  ಪೊಟ್ಯಾಷ್‌ಗೆ 950-1050 ರೂ. ಇದ್ದ ದರ ಇದೀಗ 1,700 ರೂ.ಗೆ ಏರಿಕೆಯಾಗಿದೆ. ಜತೆಗೆ ಮಾರುಕಟ್ಟೆಯಲ್ಲಿ ಕೊರತೆಯೂ ಉಂಟಾಗಿದ್ದು, ಪೊಟ್ಯಾಷ್‌ ಬಳಸಬೇಕಾಗಿರುವ ಬೆಳೆಗಾರರು ಗೊಬ್ಬರ ಸಿಗದೆ ಕಂಗಾಲಾಗಿದ್ದಾರೆ.ಕಳೆದ ತಿಂಗಳಲ್ಲಿ 50 ಕೆ.ಜಿ. ಪೊಟ್ಯಾಷ್‌ಗೆ …

Read More »

ದಾವಣಗೆರೆಯಲ್ಲಿ ನಿನ್ನೆ 216 ಕೊವಿಡ್ ಸೋಂಕು ದೃಢ

ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 216 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 56131 ಕ್ಕೆ ಏರಿಕೆಯಾಗಿದೆ.ಮತ್ತು ಇಂದು ಒಬ್ಬರು ಮೃತಪಟ್ಟಿದ್ದಾರೆ.

Read More »

ಸತೀಶ ಜಾರಕಿಹೊಳಿಗೆ ಸವಾಲು ಹಾಕಿದ ರಮೇಶ ಜಾರಕಿಕೊಳಿ

ಅಥಣಿ: ‘ಗೋಕಾಕ ಕ್ಷೇತ್ರದಲ್ಲಿ ಸರಿಯಾದ ರಸ್ತೆಗಳಿಲ್ಲ; ಅಭಿವೃದ್ಧಿಯಾಗಿಲ್ಲ’ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಕ್ಕೆ ಅಲ್ಲಿನ ಬಿಜೆಪಿ ಶಾಸಕ ರಮೇಶ ಜಾರಕಿಕೊಳಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ‘ಮಾಧ್ಯಮದವರೆಲ್ಲರೂ ಕೂಡಿ ಹೋಗೋಣ. ಸತೀಶ ಹೇಳಿದ ಸ್ಥಿತಿ ಕ್ಷೇತ್ರದಲ್ಲಿದ್ದರೆ ಸ್ಥಳದಲ್ಲೇ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಇದು ಅವರಿಗೂ ಹಾಗೂ ನಿಮಗೂ (ಮಾಧ್ಯಮದವರಿಗೂ) ಸವಾಲು’ ಎಂದು ಹೇಳಿದರು. ‘ಕಬ್ಬಿನ ಗಾಡಿಗಳು ಹೋಗುವ ಕಡೆಗಳಲ್ಲಿ ಎಲ್ಲೋ ಅರ್ಧ ಕಿ.ಮೀ. ಹಾಳಾಗಿರಬಹುದಷ್ಟೆ”ಅಭಿವೃದ್ಧಿ ವಿಚಾ‌ರದಲ್ಲಿ ನೀವೇ …

Read More »

ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು:  ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಪ್ರಾರಂಭವಾಗುವುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.

Read More »

ಗ್ರಾಮೀಣ ಜನತೆಗೆ ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ಜ. 26 ರಂದು ಲೋಕಾರ್ಪಣೆಗೊಂಡಿದ್ದು, ಫೆಬ್ರವರಿ ಅಂತ್ಯದೊಳಗೆ ಗ್ರಾಮ ಒನ್ ರಾಜ್ಯದಾದ್ಯಂತ ವಿಸ್ತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಸೂಚಿಸಿದ್ದಾರೆ. ಈ ಕುರಿತು ಇ-ಆಡಳಿತ, ಆರ್ ಡಿ ಪಿ ಆರ್, ಕಂದಾಯ ಇಲಾಖೆಗಳ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಗ್ರಾಮ ಒನ್ ಪರಿಶೀಲನೆಗೆ ವಾರಕ್ಕೊಮ್ಮೆ ಖುದ್ದು ಗ್ರಾಮ ಒನ್ ಆಪರೇಟರ್ …

Read More »

ಸಿಎಂ ನೇತೃತ್ವದ ಸಭೆ : ಜ.31ರಿಂದ ನೈಟ್ ಲಾಕ್ ರದ್ದು

ಸಿಎಂ  ನೇತೃತ್ವದಲ್ಲಿ ಇಂದು ಕೋವಿಡ್  ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ನೈಟ್​ ಕರ್ಫ್ಯೂ  ರದ್ದು ಮಾಡಲು ನಿರ್ಧರಿಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಸಚಿವ ಆರ್ ಅಶೋಕ್, ಬಿ.ಸಿ ನಾಗೇಶ್, ಬಿ.ಸಿ ಪಾಟೀಲ್, ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿ ಪ್ರಮುಖರು ಭಾಗವಹಿಸಿದ್ದರು. ಸಭೆಯ ನಂತರ ಮಾತನಾಡಿದ ಸಚಿವ …

Read More »

ಸಿದ್ದರಾಮಯ್ಯ ವಿರುದ್ಧ ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ಚಟವಿದೆ. ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ ಅವರಿಗೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಅವರಿಗೆ ತಾನು ಮಾಡಿದ್ದೇ ಸರಿ ಎಂಬ ಭಾವನೆ, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ ಎಂಬ ಅಹಂ. ಹಾಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಸರ್ಕಾರ ಏನೂ ಸಾಧನೆ ಮಾಡಿಲ್ಲ ಎಂದು ಆರೋಪಿಸುತ್ತಿದ್ದಾರೆ …

Read More »

ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು : ಪ್ರತಾಪ್ ಸಿಂಹ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಡುಗೆ ಅನಿಲ ಕೊಳವೆ ಮಾರ್ಗ ಅಳವಡಿಸುವ ವಿಷಯದಲ್ಲಿ ಸ್ವಪಕ್ಷೀಯರಿಂದ ಟೀಕೆಗೆ ಒಳಗಾಗಿರುವ ಮೈಸೂರು-ಕೊಡಗು ಸಂಸದೀಯ ಕ್ಷೇತ್ರಕ್ಕೆ ಎರಡು ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಮೈಸೂರಿನ ಶಾಸಕರಿಗೆ ಸಿಂಹ ಸವಾಲು ಹಾಕಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್​ ತಮ್ಮಕ್ಷೇತ್ರದಲ್ಲಿ ಬೆಳವಣಿಗೆಗಳು, ಅಭಿವೃದ್ಧಿ ಕಾರ್ಯಗಳ ಅಗಲಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದಾರೆ. ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು..! ಎಂದು ಘಂಟಾಘೋಷವಾಗಿ ಹೇಳಿರುವ ಸಂಸದ ಪ್ರತಾಪ್ …

Read More »

ಸಿಎಂ ನೇತೃತ್ವದಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆ ಪ್ರಮುಖ ನಿರ್ಧಾರಗಳು

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ನಿಯಂತ್ರಣ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎನ್ನುವ ಮುಖ್ಯಾಂಶಗಳು ಈ ಕೆಳಗಿನಂತಿವೆ. 1. ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ.2. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು.3. ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು ಪಡಿಸಲು …

Read More »

ಸಿ.ಟಿ. ರವಿಗೆ ಪಿತೃವಿಯೋಗ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ತಿಮ್ಮೇಗೌಡ(92) ವಯೋ ಸಹಜ ಅನಾರೋಗ್ಯದಿಂದಾಗಿ ಇಂದು ಸಾವನ್ನಪ್ಪಿದ್ದಾರೆ ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. ಮೊದಲ ಬಾರಿಗೆ ಅಪ್ಪನಿಲ್ಲದೆ, ಲೋಕವನ್ನು ನಾನೆದುರಿಸಬೇಕಾಗಿದೆ.ಓಂಶಾಂತಿ ಅಣ್ಣ ಎಂದು ಬರೆದುಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Read More »