Breaking News

Breaking News

ರಾಜ್ಯವನ್ನೇ ಬೆಚ್ಚಿಬೀಳಿಸಿದ ಕೆಆರ್‌ ಪುರಂ ತ್ರಿಬಲ್ ಮರ್ಡರ್ ಕೇಸ್, ಕೊನೆಗೂ ಪಾಪಿ ಮಗಳು ಅರೆಸ್ಟ್, ಸಿಕ್ಕಿದ್ದೆಲ್ಲಿ ಗೊತ್ತಾ

ಬೆಂಗಳೂರು ಕೆಆರ್ ಪುರಂ ತ್ರಿಬಲ್ ಮರ್ಡರ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ವೇತಾಳನ್ನು ಪೊಲೀಸರು ಪುದುಚೇರಿಯಲ್ಲಿ ಬಂಧಿಸಿದ್ದಾರೆ. ಪ್ರಿಯಕರ ಕೆನತ್ ಜೊತೆ ಸೇರಿ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆ ಮಾಡಿದ ಆರೋಪ ಆಕೆಯ ಮೇಲಿದೆ. ತನಿಖೆ ವೇಳೆ ಶ್ವೇತಾ ಬರೆದಿದ್ದ ಡೈರಿ ಪತ್ತೆಯಾಗಿದ್ದು, ಅದರಲ್ಲಿ ತನ್ನ ಮನಸ್ಥಿತಿಗೆ ಸಂಬಂಧಿಸಿದ ಹಲವು ಬರಹಗಳು ಕಂಡುಬಂದಿವೆ. ಪ್ರಕರಣದ ಸಂಬಂಧ ಪೊಲೀಸರು ಮನೆದಿಂದ ಹಲವು ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಶ್ವೇತಾ ಮತ್ತು ಕೆನತ್ ಕಾಲೇಜು …

Read More »

ಕರೆಂಟ್‌ ಕಟ್‌ ಮಾಡಿದ್ದಕ್ಕೆ ಜೆಸ್ಕಾಂ ಕಚೇರಿಗೇ ಬೆಂಕಿ ಹಚ್ಚಿ ಸುಟ್ಟ ರೈತ!

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದ ಜೆಸ್ಕಾಂ ಉಪ ಕಚೇರಿಗೆ ರೈತನೊಬ್ಬ ಬೆಂಕಿ ಹಚ್ಚಿದ ಘಟನೆ ನಡೆದಿದೆ. ₹11 ಸಾವಿರ ವಿದ್ಯುತ್ ಬಿಲ್‌ ಬಾಕಿ ಉಳಿಸಿಕೊಂಡಿದ್ದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಆತ ಆಕ್ರೋಶಗೊಂಡಿದ್ದಾನೆ ಎನ್ನಲಾಗಿದೆ. ಹಳ್ಳಿಹೊಸೂರು ಗ್ರಾಮದ ಶಿವಪ್ಪ ಬಸನಗೌಡ ಗಡಿಗಿ ಎಂಬಾತ ಜೆಸ್ಕಾಂ ಕಚೇರಿಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ದಾಖಲೆಗಳು, ಕಂಪ್ಯೂಟರ್, …

Read More »

ಯುವತಿ ಆತ್ಮಹತ್ಯೆ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ

ಸುರತ್ಕಲ್‌ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಅನೀಶ್ ಪೂಜಾರಿ ವಿರುದ್ಧ ಪೋಕ್ಸೊ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗರ್ಭಧಾರಣೆಯ ವಿಷಯ ತಿಳಿಸಿದಾಗ ಯುವಕ ನಿರಾಕರಿಸಿ ನಿಂದಿಸಿದ್ದಾನೆ ಎನ್ನಲಾಗಿದ್ದು, ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ …

Read More »

ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಮಾರಾಟ; ಮೂವರ ಬಂಧನ

ಚಿಕ್ಕಬಳ್ಳಾಪುರ ನಗರದ ನಿಮ್ಮಾಕಲಕುಂಟೆ–ಗಂಗಮ್ಮನ ಮಿದ್ದೆ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 10.790 ಕೆ.ಜಿ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ. ರಾಜಸ್ಥಾನದ ಬುದ್ದಾರಾಂ (30), ಅರವಿಂದ್ ಕುಮಾರ್ (19) ಹಾಗೂ ಚಿಕ್ಕಬಳ್ಳಾಪುರದ ಸೈಯದ್ ಅಹಮದ್ (26) ಬಂಧಿತರಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆಂಧ್ರಪ್ರದೇಶದಿಂದ ಗಾಂಜಾ ತಂದು ಚಿಲ್ಲರೆ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ …

Read More »

ಭೀಕರ ಅಪಘಾತ- ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರಾದಾಳ ಗ್ರಾಮದ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದೇವರಾಜ್ (19), ಲಕ್ಷ್ಮಿಕಾಂತ್ (20) ಹಾಗೂ ಪ್ರಕಾಶ್ (23) ಎಂದು ಗುರುತಿಸಲಾಗಿದೆ. ಚಿತ್ತಾಪುರದಿಂದ ಸನ್ನತಿ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಬಸ್‌ನ ಚಕ್ರಗಳು ಯುವಕರ ಮೇಲೆ …

Read More »

ವಳಚ್ಚಿಲ್ ದಾರಿ ಕೇಳಲು ಹೋಗಿದ್ದ ವ್ಯಕ್ತಿಯ ಸುಲಿಗೆ

ಮಂಗಳೂರಿನ ವಳಚ್ಚಿಲ್ ರೈಲ್ವೇ ಗೇಟ್ ಸಮೀಪ ಅಡ್ಯಾರ್ ಫಾಲ್ಸ್‌ಗೆ ದಾರಿ ಕೇಳಲು ಹೋದ ವ್ಯಕ್ತಿಯೊಬ್ಬನನ್ನು ಬೆದರಿಸಿ ಸುಲಿಗೆ ಮಾಡಿದ ಘಟನೆ ನಡೆದಿದೆ. ಪ್ರಜ್ವಲ್ ಎಂಬವರು ತಮ್ಮ ಗೆಳತಿಯೊಂದಿಗೆ ಬೈಕ್‌ನಲ್ಲಿ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ದಾರಿ ಕೇಳಲು ಮನೆಯೊಂದರ ಬಳಿ ಹೋದಾಗ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚೂರಿ ತೋರಿಸಿ ಜೀವಬೆದರಿಕೆ ಹಾಕಿದ್ದಾನೆ. ಬಳಿಕ ಪ್ರಜ್ವಲ್ ಕೈಯಲ್ಲಿದ್ದ ಬೆಳ್ಳಿಯ ಬ್ರಾಸ್‌ಲೆಟ್ ಹಾಗೂ ಉಂಗುರವನ್ನು ಕಿತ್ತುಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. …

Read More »

ಆಮ್ಲೆಟ್ ವಿಚಾರಕ್ಕೆ ಜಗಳ : ಆಟೋ ಚಾಲಕನ ಹತ್ಯೆ

ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿ ಆಮ್ಲೆಟ್ ವಿಚಾರವಾಗಿ ನಡೆದ ಮಾತಿನ ಚಕಮಕಿ ಆಟೋ ಚಾಲಕನೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡಿದೆ. ನೂರ್‌ಬಾಗ್ ಬಡಾವಣೆಯ ನಿವಾಸಿ ಹಾಗೂ ಆಟೋ ಚಾಲಕ ಮುಹಮ್ಮದ್ ರಯೀಸ್ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಆಮ್ಲೆಟ್ ಅಂಗಡಿಯಲ್ಲಿ ಕೆಲ ಯುವಕರೊಂದಿಗೆ ವಾಗ್ವಾದ ನಡೆದಿದ್ದು, ಅದು ತೀವ್ರ ಸ್ವರೂಪ ಪಡೆದುಕೊಂಡಿದೆ. ಕೋಪಗೊಂಡ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ರಯೀಸ್ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ …

Read More »

PWD ಎಂಜಿನಿಯರ್ ಗೆ ಹಣಕ್ಕೆ ಬೇಡಿಕೆ ಇಟ್ಟ ನಕಲಿ ಲೋಕಾಯುಕ್ತ ಅಧಿಕಾರಿ ಅರೆಸ್ಟ್

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಯ ಹೆಸರಿನಲ್ಲಿ ವಾಟ್ಸಾಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ವಂಚಿಸಲು ಯತ್ನಿಸಿದ್ದ ಆಂಧ್ರಪ್ರದೇಶ ಮೂಲದ ಧನಂಜಯ ರೆಡ್ಡಿ (33) ಎಂಬ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ತಾನು ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡು, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಸಲು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಆಧಾರದಲ್ಲಿ …

Read More »

ವಿಜಯನಗರ ಜಿಲ್ಲೆಯ ಶಾಲೆಯಲ್ಲೇ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ; ಗ್ರಾಮಸ್ಥರಿಂದ ಧರ್ಮದೇಟು

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ಹನುಮಂತಪ್ಪ (54)ನನ್ನು ಪೊಲೀಸರು ಬಂಧಿಸಿದ್ದಾರೆ. “ಯೂನಿಫಾರ್ಮ್ ಕೊಡಿಸುತ್ತೇನೆ” ಎಂದು ಹೇಳಿ ವಿದ್ಯಾರ್ಥಿನಿಯನ್ನು ಪ್ರತ್ಯೇಕ ಕೋಣೆಗೆ ಕರೆದೊಯ್ದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಘಟನೆಯ ಬಳಿಕ ವಿದ್ಯಾರ್ಥಿನಿ ಮನೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ತೆರಳಿ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಹಿತಿ …

Read More »

ಪ್ರೀತಿ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ, ಗರ್ಭಿಣಿಯಾದ ಬಾಲಕಿ ನೊಂದು ಆತ್ಮಹತ್ಯೆ!

ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಮನೀಶ್ ಪೂಜಾರಿ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ಸುಳ್ಳು ಹೇಳಿ ದೈಹಿಕ ಸಂಪರ್ಕವನ್ನು ಬೆಳೆಸಿದ್ದ ಎನ್ನಲಾಗಿದ್ದು, ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಈ ಆತಂಕಕಾರಿ ವಿಷಯ ತನಗೆ ತಿಳಿಯುತ್ತಿದ್ದಂತೆಯೇ ಬಾಲಕಿ, ಮನೀಶ್ ಬಳಿ ಹೋಗಿ ತಾನು ಗರ್ಭಿಣಿಯಾಗಿರುವ ಸಂಗತಿಯನ್ನು ಹೇಳಿಕೊಂಡಿದ್ದಾಳೆ. ಆದರೆ ಆರೋಪಿ, ಬಾಲಕಿಗೆ ಸಾಂತ್ವನ ಹೇಳುವ ಬದಲು ಅವಾಚ್ಯ ಶಬ್ದಗಳಿಂದ ನಿಂದಿಸಿ, ತೀವ್ರವಾಗಿ ಅವಮಾನ ಮಾಡಿದ್ದಾನೆ. ಆರೋಪಿಯ ಈ ಧೋರಣೆಯಿಂದ ತೀವ್ರ ಆಘಾತಕ್ಕೊಳಗಾದ ಬಾಲಕಿ, ಜೂನ್ …

Read More »