Breaking News

Breaking News

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ , ಹಾಕಿ ತಂಡದ ನಾಯಕಚರಂಜಿತ್ ಸಿಂಗ್ ನಿಧನ

ನವದೆಹಲಿ: ಚರಂಜಿತ್ ಸಿಂಗ್ ಅವರು ಹೃದಯ ಸ್ತಂಭನದಿಂದ ಹಿಮಾಚಲ ಪ್ರದೇಶದ ಉನಾದಲ್ಲಿನ 91 ವರ್ಷಕ್ಕೆ ಕಾಲಿಡುವ ಮುನ್ನ ಇಂದು ತಮ್ಮ ಮನೆಯಲ್ಲಿ  ನಿಧನರಾದರು. ಭಾರತದ 1964 ರ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ತಂಡದ ನಾಯಕರಾಗಿ ಕಾರ್ಯ ನಿರ್ವಹಿಸಿದರು.ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

Read More »

ದೇಶದಲ್ಲಿ 2,86,384 ಕೋವಿಡ್ ಪತ್ತೆ

ನವದೆಹಲಿ: ದೇಶದಲ್ಲಿ ದೈನಂದಿನ ಕೊರೊನಾ ಸೋಂಕಿತರ ಸಂಖ್ಯೆ ಸದ್ಯ 3 ಲಕ್ಷದ ಗಡಿಯಿಂದ ಕೆಳಗೆ ಇಳಿದಿದೆ. ಅಷ್ಟೇ ಅಲ್ಲದೆ ನಿನ್ನೆ (ಬುಧವಾರ)ಕ್ಕಿಂತ ಇಂದು ಸಾವಿನ ಸಂಖ್ಯೆ ಕೊಂಚ ಕಡಿಮೆಯಾಗಿದೆ. ನಿನ್ನೆ 665 ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದರು. ಕೇಂದ್ರ ಆರೋಗ್ಯ ಇಲಾಖೆ ಇಂದು ನೀಡಿದ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 2,86,384 ಜನರಿಗೆ ಸೋಂಕು ಕಾಣಿಸಿಕೊಂಡಿದೆ, 573 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ಏರಿದೆ. ಸೋಂಕು …

Read More »

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು : ಇಬ್ಬರಿಗೆ ಗಾಯ

ಬೆಂಗಳೂರು: ಬುಧವಾರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನೋವಾ ಕ್ರಿಸ್ಟಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ನಗರದ ಮಂತ್ರಿ ಮಾಲ್ ಬಳಿ ನಡೆದಿದೆ. ಇನೋವಾ ಕ್ರಿಸ್ಟಾ ಕಾರಿನಲ್ಲಿ ಓವರ್ ಸ್ಪೀಡ್ ಆಗಿ ಬಂದ ಚಾಲಕ ರಸ್ತೆ ಡಿವೈಡರ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಎರಡು ಏರ್ ಬ್ಯಾಗ್‌ಗಳು ಓಪನ್ ಆಗಿದೆ. ಅಲ್ಲದೇ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. …

Read More »

ಕೋವಿಡ್‌ ನಿರ್ವಹಣೆಯಲ್ಲಿ ದೇಶದಲ್ಲೆ ಕರ್ನಾಟಕ ಮೊದಲ ಸ್ಥಾನ : ಥಾವರ್‌ಚಂದ ಗೆಹಲೋತ್‌

ಬೆಂಗಳೂರು: ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ,ಕೊರೋನಾ  ವಿರುದ್ಧದ ಹೋರಾಟದಲ್ಲಿ ರಾಜ್ಯ ಯಶಸ್ವಿಯಾಗಿದ್ದು, ಕೋವಿಡ್‌  ನಿರ್ವಹಣೆಯಲ್ಲಿ ಕರ್ನಾಟಕ ದೇಶದಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಕಾರ್ಮಿಕರಿಗೆ 236 ಕೋಟಿ ರು.ಹಾಗೂ ಅಸಂಘಟಿತ ಕಾರ್ಮಿಕರಿಗೆ 628 ಕೋಟಿ ಪರಿಹಾರ ನೀಡಲಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ ಗೆಹಲೋತ್‌ ಹೇಳಿದರು. ಬುಧವಾರ ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ …

Read More »

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 734 ಕೋವಿಡ್ ಪತ್ತೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಸೋಂಕಿತರ ಸಂಖ್ಯೆ ಮಂಗಳವಾರ 4,922ಕ್ಕೆ ತಲುಪಿದೆ. ಮಂಗಳವಾರ 734 ಜನರಿಗೆ ಸೋಂಕು ತಗುಲಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ 80 ವರ್ಷದ ಪುರುಷ ಹಾಗೂ ಗುಡಿಬಂಡೆ ತಾಲ್ಲೂಕಿನ 74 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಇದೇ ದಿನ 496 ರೋಗಿಗಳು ಗುಣವಾಗಿದ್ದಾರೆ.ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 201, ಬಾಗೇಪಲ್ಲಿ 65, ಚಿಂತಾಮಣಿ 129, ಗೌರಿಬಿದನೂರು 133, ಗುಡಿಬಂಡೆ 55 ಮತ್ತು ಶಿಡ್ಲಘಟ್ಟ ತಾಲ್ಲೂಕಿನ 151 ಮಂದಿಗೆ ಬುಧವಾರ ಸೋಂಕು ದೃಢಪಟ್ಟಿದೆ.

Read More »

ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ‌ ಅಧಿಕಾರ ಸ್ವೀಕರಿಸಿ ನಾಳೆಗೆ(ಜ.28) ಆರು ತಿಂಗಳು. ಅದೇ ದಿನ ಸಿಎಂ ಬರ್ತ್​ ಡೇ ಕೂಡ. ಅಂದು 62ನೇ ವಸಂತಕ್ಕೆ ಬಸವರಾಜ ಬೊಮ್ಮಾಯಿ ಕಾಲಿಡಲಿದ್ದಾರೆ. ಆರ್​ಟಿ ನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ನಾನು ಯಾವತ್ತೂ ಜನ್ಮ ದಿನ ಆಚರಿಸಿಕೊಂಡಿಲ್ಲ, ನಾಳೆಯೂ ಆಚರಿಸಿಕೊಳ್ಳುವುದಿಲ್ಲ. ಪದಗ್ರಹಣ ಮಾಡಿ ನಾಳೆಗೆ ಆರು ತಿಂಗಳ ಪೂರೈಸಲಿರುವ ಕಾರಣಕ್ಕೆ ಅಚ್ಚರಿ, ಮಹತ್ವದ ಘೋಷಣೆಗಳನ್ನು ಮಾಡುವುದಿಲ್ಲ ಎಂದರು.

Read More »

ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ : ಇಬ್ರಾಹಿಂ

ಬೆಂಗಳೂರು : ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಕಾಂಗ್ರೆಸ್ ಗೂ ನಮಗೂ ಇನ್ನೂ ಮುಗಿದ ಅಧ್ಯಾಯ ಎಂದು ಎಂ.ಎಲ್.ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟೆವು. …

Read More »

ಕೋವಿಡ್ ನಿಯಮ ಉಲ್ಲಂಘನೆ : ಬಿಜೆಪಿ ಶಾಸಕ ವಿರುದ್ಧ ಎಫ್‌ಐಆರ್

ಬೀದರ್: ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ, ಹೆಚ್ಚು ಜನರು ಸೇರುವಂತ ಯಾವುದೇ ಕಾರ್ಯಕ್ರಮ ನಿಷಿದ್ಧವಾಗಿದೆ. ಹೀಗಿದ್ದೂ ಮೂರು ದಿನಗಳ ಹಿಂದೆ ಈ ನಿಯಮ ಮೀರಿ ಕಳೆದ ಮೂರು ದಿನಗಳ ಹಿಂದೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಪಾದಯಾತ್ರೆಯಲ್ಲಿ ಮಾಸ್ಕ್, ದೈಹಿಕ ಅಂತರ ಕೂಡ ಕಾಪಾಡಿರಲಿಲ್ಲ.ಈ ಕಾರಣಕ್ಕೆ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ನಿಯಮ ಉಲ್ಲಂಘಿಸಿ …

Read More »

ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ ಉತ್ತರ ನೀಡಿದ ಸಿಸಿ ಪಾಟೀಲ್

ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಮತ್ತೆ ಪಕ್ಷಾಂತರದ ಗುಲ್ಲು ಎದ್ದಿರುವಾಗ ನಾಯಕರ ನಡುವೆ ವಾಕ್ ಸಮರಕ್ಕೂ ವೇದಿಕೆ ಸಿಕ್ಕಿದೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಸಿ.ಸಿ. ಪಾಟೀಲ್ ಟಾಂಗ್ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಿಸಿ ಪಾಟೀಲ್ ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗದ ಉತ್ತರ ನೀಡಿದರು. ಯಾವ ಕಾರಣಕ್ಕೂ ಅವರನ್ನ ವಾಪಸ್ ತಗೊಳೋದಿಲ್ಲ ಅಂತ ಹೇಳಿದ್ದು ಯಾರು..? ಬಿಟ್ಟು ಹೋದವರನ್ನ ವಾಪಸ್ ತಗೊಳೋದಿಲ್ಲ ಅಂತ ಗುದ್ದಿ ಹೇಳಿದವರು ಯಾರು? ಬಿಟ್ಟು ಹೋದವನ್ನ ಯಾವ ಕಾಲಕ್ಕೂ …

Read More »

ಬಿಸಿ ಊಟ ಮಾಡುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ವಿಜಯಪುರ: ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆ ಉಪ್ಪಿನಕಾಯಿ ನೀಡುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.

Read More »