Breaking News

Breaking News

ಮಕ್ಕಳಿಗೆ ಭಾದಿಸುತ್ತೀರುವ ಕೊರೋನಾ : 9 ದಿನ ಶಾಲೆ ಬಂದ್

ಕೊಪ್ಪಳ: ಕೊರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ಆತಂಕದ ಮಧ್ಯೆ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಸೋಂಕು ನಿವಾರಣೆಗೆ ಹಗಲಿರುಳು ಶ್ರಮಿಸುತ್ತಿದ್ದರೂ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿ ಒಂದೇ ದಿನ 73 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಜಿಲ್ಲೆಯ ವಿವಿಧ ಶಾಲೆಗಳಲ್ಲಿ 73 ವಿದ್ಯಾರ್ಥಿಗಳು, 6 ಶಿಕ್ಷಕರು ಹಾಗೂ ಒಬ್ಬ ಅಡುಗೆ ಸಹಾಯಕರಿಗೆ ಸೋಂಕು ದೃಢ ಪಟ್ಟಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತವು 9 ಶಾಲೆಗಳಿಗೆ ರಜೆ ನೀಡಿದೆ. ಕೊಪ್ಪಳ ಜಿಲ್ಲೆ …

Read More »

ಗೋವಿಂದ ಶೇರಿಗಾರ್‌ ನಿಧನ

ಯಕ್ಷಗಾನದ ಪ್ರಸಿದ್ಧ ಹಿರಿಯ ಸ್ತ್ರೀ ವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್‌(96)ಅವರು ಜ. 23ರಂದು ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಲಾವಿದ ಮಾರ್ಗೋಳಿಯವರ ಅಗಲುವಿಕೆಗೆ ಯಕ್ಷಗಾನ ಕಲಾರಂಗ ಗಾಢ ಸಂತಾಪ ವ್ಯಕ್ತಪಡಿಸಿದೆ.

Read More »

ಬಸ್​ಗೆ ಡಿಕ್ಕಿ : ಬೈಕ್ ಸವಾರ ಸಾವು

ಬೆಂಗಳೂರು: ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿ ನಡೆದಿದೆ. ಲಕ್ಷ್ಮಿದೇವಿ ನಗರ ನಿವಾಸಿ ಸುರೇಶ್ ಬಾಬು(45)ಮೃತ ದುರ್ದೈವಿ. ವೇಗವಾಗಿ ಬಂದ ಬಿಎಂಟಿಸಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಬೈಕ್​ಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ಹೆಲ್ಮೆಟ್ ಧರಿಸದೆ ಇದ್ದ ಕಾರಣ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲೇಶ್ವರಂ ಸಂಚಾರಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More »

ಒಂದು ವರ್ಷದೊಳಗೆ ಪೊಲೀಸ್ ಕಚೇರಿ ನಿರ್ಮಾಣ : ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ

ಕುಷ್ಟಗಿ: ‘ಪಟ್ಟಣದಲ್ಲಿ ಹೊಸ ಮಾದರಿಯಲ್ಲಿ ನಿರ್ಮಾಣಗೊಳ್ಳಲಿರುವ ಪೊಲೀಸ್ ಕಚೇರಿ ಕಟ್ಟಡ ಕಾಮಗಾರಿ ಆರಂಭಗೊಂಡ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ’ ಎಂದು ಗಂಗಾವತಿ ಉಪ ವಿಭಾಗದ ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಹೇಳಿದರು. ಇಲ್ಲಿನ ಹೊಸ ಕಟ್ಟಡ ನಿರ್ಮಾಣಗೊ ಳ್ಳಲಿರುವುದರಿಂದ ತಾತ್ಕಾಲಿಕ ಸಿಪಿಐ ಕಚೇರಿ ಉದ್ಘಾಟನೆ ವೇಳೆ ಮಾತನಾಡಿದರು. ‘ಹೊಸ ಕಟ್ಟಡ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಗೊಳ್ಳಲಿದೆ. ಪೊಲೀಸ್‌ ಠಾಣೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ ಹಾಗೂ ಸಭಾಂಗಣಗಳನ್ನು ಒಳಗೊಳ್ಳಲಿದೆ. ಇದರಿಂದ ಎಲ್ಲ ಸಿಬ್ಬಂದಿ ಒಂದೇ ಕಡೆ …

Read More »

ಕಬ್ಬಿನ ಹೊಲಕ್ಕೆ ಆಕಸ್ಮಿಕ ಬೆಂಕಿ

ಕೊಪ್ಪಳ: ಆಕಸ್ಮಿಕ ಬೆಂಕಿ ತಗುಲಿ ಸುಮಾರು 5.50 ಲಕ್ಷ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದ ರೈತ ಈರಣ್ಣ ಬುಲ್ಟಿ ಎಂಬುವವರಿಗೆ ಸೇರಿದ ಕಬ್ಬು ಬೆಂಕಿಗಾಹುತಿಯಾಗಿದೆ. ಸುಮಾರು 6 ಎಕೆರೆ ಪ್ರದೆಶದಲ್ಲಿ ರೈತ ಈರಣ್ಣ ಕಬ್ಬು ಬೆಳೆದಿದ್ದರು. ಬೆಳೆ ಕಟಾವುವಿಗೆ ಬಂದಿತ್ತು. ಆದರೆ ಆಕಸ್ಮಿಕ ಬೆಂಕಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

Read More »

ದೂರು ಕೊಡಲು ಹೋದಾಗ PSI ಧಮ್ಕಿ : ಕುಟುಂಬದ ಸದಸ್ಯರು ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ ದೂರು ನೀಡಲು ಠಾಣೆಗೆ ಹೋದಾಗ ಪಿಎಸ್‌ಐ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದ್ದು, ಮನನೊಂದ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ  ಯತ್ನಿಸಿದ್ದಾರೆ.  ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮೂವರಿಗೆ ಹುಬ್ಬಳ್ಳಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತರ್ಲಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ ಅಂತ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ, ಮಾಜಿ ಅಧ್ಯಕ್ಷ ನಾಗನಗೌಡ …

Read More »

ಸಾವಿನಲ್ಲಿಯೋ ತಾಯಿ ಮಡಿಲ ಸೇರಿದ ಮಗ

ಮಂಡ್ಯ: ಲೋ ಬಿಪಿಯಿಂದ ಮನೆಯಲ್ಲೇ ಮಗ ಕುಶ ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿದ ಐದೇ ನಿಮಿಷದಲ್ಲಿ ತಾಯಿ ಲಕ್ಷ್ಮಮ್ಮ ಕೂಡ ಕೊನೆಯುಸಿರೆಳೆದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನಹೊಸಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಲಕ್ಷ್ಮಮ್ಮ (70), ಕುಶ (43) ವಿಧಿ ಆಟಕ್ಕೆ ಬಲಿಯಾದತಾಯಿ ಮಗ. ಮೃತ ಕುಶ ಅವರು ಬೆಂಗಳೂರಿನಲ್ಲಿ ಸ್ವಂತ ಸ್ಟುಡಿಯೋ ಇಟ್ಟುಕೊಂಡಿದ್ದರು. ಅನಾರೋಗ್ಯದಿಂದಾಗಿ 4 ತಿಂಗಳ ಹಿಂದೆ ಊರಿಗೆ ವಾಪಸ್ಸಾಗಿದ್ದರು. ತಾಯಿ, ಮಗನ …

Read More »

ಕ್ಯಾಂಟರ್‌ಗೆ ದ್ವಿಚಕ್ರವಾಹನ ಡಿಕ್ಕಿ : ಇಬ್ಬರು ಸಾವು

ಬೆಂಗಳೂರು: ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದ,  ಚಲಿಸುತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದು ಘಟನೆ ನಗರದ ಕಂಠೀರವ ಸ್ಟುಡಿಯೋ ಬಳಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ಮೃತಪಟ್ಟಿದ್ದಾರೆ. …

Read More »

ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ

ಕೇಪ್‌ಟೌನ್:ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ಮೂರನೇ ಹಾಗೂ ಅಂತಿಮ ಹಣಾಹಣಿ ಆರಂಭಕ್ಕೂ ಮುನ್ನ ಇಂಥದ್ದೊಂದು ಘಟನೆ ನಡೆದಿದೆ. ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುತ್ತಿದ್ದಾಗ ವಿರಾಟ್‌ ಕೊಹ್ಲಿ ಚೂಯಿಂಗ್‌ ಗಮ್‌ ಜಗಿಯುತ್ತಾ ನಿಂತ್ತಿದ್ದರು.  ಕೇಪ್‌ಟೌನ್‌ನ ನ್ಯೂಲೆಂಡ್ಸ್‌ ಕ್ರೀಡಾಂಗಣದಲ್ಲಿ ಭಾನುವಾರ ಕ್ರಿಕೆಟ್‌ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇವರೀಗ ಭಾರಿ ಟ್ರೋಲ್‌ …

Read More »

ರಾಜ್ಯದ ಜನತೆಗೆ ಸಿಹಿ ಸುದ್ದಿ

ಬೆಂಗಳೂರು: ಭೂದಾಖಲೆಗಳ ಅಕ್ರಮ ತಡೆಗೆ ಮತ್ತು ಸುಗಮ ನಿರ್ವಹಣೆಗಾಗಿ ಏಕೀಕೃತ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲು ಕಂದಾಯ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಒಂದು ಆಸ್ತಿಗೆ ಒಂದು ನಂಬರ್ ನೀಡಲು ಮುಂದಾಗಿದೆ. ಆಧಾರ್ ಮಾದರಿಯಲ್ಲಿ ಏಕೀಕೃತ ನಿರ್ವಹಣ ವ್ಯವಸ್ಥೆ ನಂಬರ್ ನೀಡಲಾಗುತ್ತದೆ. ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದಾಗಿದೆ. ಶೀಘ್ರವೇ ಒಂದು ಆಸ್ತಿಗೆ ಒಂದು …

Read More »