BigTv News
June 24, 2026
Breaking News
ಮುಂಡಗೋಡ ತಾಲೂಕಿನ ರೌಡಿಶೀಟರ್‌ಗಳು ಹಾಗೂ ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿದ್ದ 14 ಮಂದಿಯ ಮನೆಗಳ ಮೇಲೆ ಪೊಲೀಸರು ಬುಧವಾರ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಶಿರಶಿ ಡಿವೈಎಸ್ಪಿ ಗೀತಾ ಪಾಟೀಲ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ದಾಳಿ ಮಾಡಲಾಗಿದೆ. ಶೋಧದ ವೇಳೆ ನೆಹರು ನಗರದ ತೌಸಿಪ್ ಅಹ್ಮದ್ ಪಣಿಬಂದ ಮನೆದಿಂದ 8 ಚೆಕ್‌ಗಳು ಹಾಗೂ ಬಾಂಡ್‌ಗಳು ಪತ್ತೆಯಾಗಿವೆ. ಅಲ್ಲದೆ ದೇಶಪಾಂಡೆ ನಗರದ ಮಹಮ್ಮದ್ ಇಸ್ಮಾಯಿಲ್ …
Read More »
BigTv News
June 24, 2026
Breaking News
ತುಮಕೂರು ಜಿಲ್ಲೆಯಲ್ಲಿ ಎಲ್‌ಐಸಿ ವಿಮೆ ಹಣಕ್ಕಾಗಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ರಮೇಶ್ (35) ಹೆಸರಿನಲ್ಲಿ 15 ಲಕ್ಷ ರೂ. ವಿಮೆ ಪಾಲಿಸಿ ಮಾಡಿಸಿದ್ದ ಹನುಮಂತರಾಜು, ಅಪಘಾತದಲ್ಲಿ ಮೃತಪಟ್ಟರೆ 30 ಲಕ್ಷ ರೂ. ಸಿಗುತ್ತದೆ ಎಂಬ ಕಾರಣಕ್ಕೆ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 19ರಂದು ನಿಧಿ ಪೂಜೆ ನೆಪದಲ್ಲಿ ರಮೇಶ್‌ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ, ಬಳಿಕ ವೈರ್‌ನಿಂದ ಕುತ್ತಿಗೆ ಬಿಗಿದು …
Read More »
BigTv News
June 24, 2026
Breaking News
ಕೊಳ್ಳೇಗಾಲ: ಬಾಲಕಿಯನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಯುವಕನನ್ನು ನಗರ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ನಗರದ ಬಳೆಪೇಟೆ ಬಡಾವಣೆ ನಿವಾಸಿ ಚಂದನ್ (23) ಬಂಧಿತ. ಈತ ಬಡಾವಣೆಯೊಂದರ ಬಾಲಕಿಯನ್ನು ಪ್ರೀತಿಸುವುದಾಗಿ ಮನೆಯಿಂದ ಕರೆದುಕೊಂಡು ಹೋಗಿದ್ದನು. ಈ ಕುರಿತು ಬಾಲಕಿಯ ಪಾಲಕರು ತಮ್ಮ ಮಗಳು ಕಾಣೆಯಾಗಿದ್ದಾಳೆಂದು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಖಚಿತ ಮಾಹಿತಿ ಸಂಗ್ರಹಿಸಿ, ಯುವಕನೊಂದಿಗೆ ಬಾಲಕಿ ಮೈಸೂರಿನಲ್ಲಿ ವಾಸ್ತವ್ಯ ಮಾಡಿರುವುದನ್ನು …
Read More »
BigTv News
June 24, 2026
Breaking News
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಅಡಿಗೆಬೈಲು ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬಳ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಭೀಕರ ಸ್ವರೂಪ ಪಡೆದುಕೊಂಡಿದೆ. ಶೇಷಗಿರಿ (40) ಹಾಗೂ ಅರುಣ್ (35) ನಡುವೆ ಕಳೆದ ಕೆಲವು ದಿನಗಳಿಂದ ಮನಸ್ತಾಪವಿದ್ದು, ಅದು ಮಾರಾಮಾರಿಗೆ ತಿರುಗಿದೆ. ಜಗಳದ ವೇಳೆ ಶೇಷಗಿರಿ ಲಾಂಗ್‌ನಿಂದ ಅರುಣ್ ಮೇಲೆ ದಾಳಿ ನಡೆಸಿದ್ದಾನೆ. ಜೀವ ಉಳಿಸಿಕೊಳ್ಳಲು ಅರುಣ್ ಕೈ ಅಡ್ಡಹಿಡಿದಾಗ, ಮಣಿಕಟ್ಟಿನಿಂದ ಕೈ ಸಂಪೂರ್ಣವಾಗಿ ತುಂಡಾಗಿ ನೆಲಕ್ಕೆ ಬಿದ್ದಿದೆ. ತೀವ್ರ ರಕ್ತಸ್ರಾವದಿಂದ …
Read More »
BigTv News
June 24, 2026
Breaking News
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಅಡಿಗೆಬೈಲು ಗ್ರಾಮದಲ್ಲಿ ಮಹಿಳೆಯೊಬ್ಬಳ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಭೀಕರ ತಿರುವು ಪಡೆದುಕೊಂಡಿದೆ. ಶೇಷಗಿರಿ ಎಂಬಾತ ಲಾಂಗ್‌ನಿಂದ ದಾಳಿ ನಡೆಸಿದ ವೇಳೆ ಅರುಣ್ ಎಂಬಾತನ ಒಂದು ಕೈ ಮಣಿಕಟ್ಟಿನಿಂದ ಸಂಪೂರ್ಣವಾಗಿ ತುಂಡಾಗಿದೆ. ಗಾಯಾಳುವನ್ನು ಮೊದಲು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read More »
BigTv News
June 24, 2026
Breaking News
ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಮೂರು ವರ್ಷಗಳ ಹಿಂದೆ ನಡೆದಿದ್ದ ಸಾಮೂಹಿಕ ಅತ್ಯಾಚಾರದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ಅಪ್ರಾಪ್ತರು ಈ ಕೃತ್ಯ ಎಸಗಿದ್ದು, ಘಟನೆಯನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದರೆಂದು ಆರೋಪಿಸಲಾಗಿದೆ. ಇತ್ತೀಚೆಗೆ ಆ ವಿಡಿಯೋ ಹೊರಬಂದ ನಂತರ ಪ್ರಕರಣ ಬಹಿರಂಗಗೊಂಡಿದೆ. ಆರೋಪಿಗಳ ಕಡೆಯವರು ಬೆದರಿಕೆ ಒಡ್ಡಿದರೂ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮೂವರು …
Read More »
BigTv News
June 24, 2026
Breaking News
ತುಮಕೂರು: ನೌಕರರ ಗಳಿಕೆ ರಜೆ ನಗದೀಕರಣ ಮಂಜೂರಾತಿ ಪ್ರಕರಣದಲ್ಲಿ 4.24 ಕೋಟಿ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಧುಗಿರಿ ತಾಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯಾ ಮತ್ತು ಅವರ ಪತಿ ಜಿ.ಆರ್. ರಮೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಸೌಮ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆಕ್ರಮದಲ್ಲಿ ಭಾಗಿಯಾಗಿರುವ ಪತಿ ಜೊತೆಗೆ ತಲೆಮರಿಸಿಕೊಂಡಿದ್ದ ಸೌಮ್ಯ ಮತ್ತು ರಮೇಶ್ ಅವರನ್ನು ಸೋಮವಾರ ರಾತ್ರಿ ಮಧುಗಿರಿ ಪೊಲೀಸರು ಬಂಧಿಸಿದ್ದಾರೆ. …
Read More »
BigTv News
June 24, 2026
Breaking News
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪೊಲೀಸರು ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿ, ಆಟೋ ಚಾಲಕ ಸಿದ್ದಾರೆಡ್ಡಿ ಅಲಿಯಾಸ್ ‘ಸ್ಪ್ಲೆಂಡರ್’ ಸಿದ್ದಾರೆಡ್ಡಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 20.50 ಲಕ್ಷ ರೂ. ಮೌಲ್ಯದ 41 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಒಂದೂವರೆ ವರ್ಷದಿಂದ ನಕಲಿ ಕೀ ಬಳಸಿ ಬೈಕ್‌ಗಳನ್ನು ಕದಿಯುತ್ತಿದ್ದ ಆರೋಪಿ, ನಕಲಿ ಆರ್‌ಸಿ ಕಾರ್ಡ್‌ಗಳನ್ನು ಸೃಷ್ಟಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಹಾಗೂ ಆಂಧ್ರಪ್ರದೇಶದಲ್ಲಿ ಒಟ್ಟು 41 ಬೈಕ್‌ಗಳನ್ನು …
Read More »
BigTv News
June 24, 2026
Breaking News
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದ ಉತ್ತರ ಪ್ರದೇಶ ಮೂಲದ 20 ವರ್ಷದ ಸುಹೇಲ್ ಎಂಬ ಶಂಕಿತನನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಅಯೋಧ್ಯೆಯ ರಾಮ ಮಂದಿರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶ ಹೊಂದಿದ್ದಾನೆ ಎಂಬ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಆತನ ಮೊಬೈಲ್‌ನಲ್ಲಿ ಪಾಕಿಸ್ತಾನ ಮೂಲದ …
Read More »
BigTv News
June 24, 2026
Breaking News
ದಿಲ್ಲಿಯಲ್ಲಿ 10 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕ ಬಬ್ಲುವನ್ನು ಪೊಲೀಸರು ಬಂಧಿಸಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು, ನಿರ್ಜನ ಪ್ರದೇಶದಲ್ಲಿ ಅಪರಾಧ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸಿಸಿಟಿವಿ, ಜಿಪಿಎಸ್ ಹಾಗೂ ಮೊಬೈಲ್ ಲೊಕೇಶನ್ ಮಾಹಿತಿ ಆಧರಿಸಿ ಆರೋಪಿಯನ್ನು ನಾಲ್ಕು ಗಂಟೆಗಳೊಳಗೆ ಬಂಧಿಸಲಾಗಿದೆ. ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ …
Read More »