Breaking News

Breaking News

ಭೀಕರ ಅಪಘಾತ : ಸ್ಥಳದಲ್ಲಿಯೇ ವ್ಯಕ್ತಿ ಸಾವು

ಗದಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ  ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದ ಘಟನೆ  ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಯಲ್ಲಪ್ಪಗೌಡ ವೆಂಕನಗೌಡ (50) ಸ್ಥಳದಲ್ಲೇ ಸಾವಿಗೀಡಾದರೆ, ಲೋಕೇಶ್ ಗುಡಕೇರಿ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಸಾವಿಗೀಡಾದ ಯಲ್ಲಪ್ಲಗೌಡ ಹಾಗೂ ಲೋಕೇಶ್ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ನಿವಾಸಿಗಳು. ಇಬ್ಬರೂ ಒಂದೇ ಬೈಕ್​ನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »

ನಿಯಂತ್ರಣ ತಪ್ಪಿದ ಚಾಲಕ : ವಿದ್ಯಾರ್ಥಿಗೆ ಗಂಭೀರ ಗಾಯ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವೃತ್ತಕ್ಕೆ ಡಿಕ್ಕಿಯಾಗಿ ಧಾರವಾಡ ಎಸ್​ಡಿಎಂ ಎಂಬಿಬಿಎಸ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲಾಧಿಕಾರಿ ನಿವಾಸದ ಬಳಿ ನಡೆದಿದೆ. ವಿದ್ಯಾರ್ಥಿ ಅತೀ ವೇಗವಾಗಿ ಕಾರು ಚಲಾಯಿಸಿದ್ದು, ನಿಯಂತ್ರಣ ತಪ್ಪಿ ವೃತ್ತಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸದ್ಯ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ …

Read More »

ತಂದೆಯ ಆಸ್ತಿಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮಹತ್ವದ ತೀರ್ಪಿನಲ್ಲಿ, ಪುರುಷ ಹಿಂದೂಗಳ ಹೆಣ್ಣುಮಕ್ಕಳು, ಸಾಯುತ್ತಿರುವ ತಂದೆಯು ವಿಭಜನೆಯಲ್ಲಿ ಪಡೆದ ಸ್ವಯಂ-ಸ್ವಾಧೀನ ಮತ್ತು ಇತರ ಆಸ್ತಿಗಳನ್ನು ಉತ್ತರಾಧಿಕಾರಿಯಾಗಿ ಪಡೆಯಲು ಮತ್ತು ಇತರ ಮೇಲಾಧಾರ ಸದಸ್ಯರಿಗಿಂತ ಆದ್ಯತೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ, ಹಿಂದೂ ಉತ್ತರಾಧಿಕಾರ ಕಾಯ್ದೆಯಡಿಯಲ್ಲಿ ಹಿಂದೂ ಮಹಿಳೆಯರು ಮತ್ತು ವಿಧವೆಯರ ಆಸ್ತಿ ಹಕ್ಕುಗಳ ಬಗ್ಗೆ ವ್ಯವಹರಿಸಿದೆ.

Read More »

ಒಟಿಟಿನಲ್ಲಿ ಪವರ್ ಸ್ಟಾರ್ ಸಿನಿಮಾ ರಿಲೀಸ್ : ಅಭಿಮಾನಿಗಳು ಫುಲ್ ಖುಷ್

ಹಲವು ಸಿನಿಮಾಗಳು ನೇರವಾಗಿ ಒಟಿಟಿ ಹಾದಿ ಹಿಡಿಯುತ್ತಿವೆ. ಈಗ ಪುನೀತ್​ ರಾಜ್​ಕುಮಾರ್  ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಅವರ ನಿರ್ಮಾಣದ ಮೂರು ಚಿತ್ರಗಳು ನೇರವಾಗಿ ಇಂತಹ ಸಂದರ್ಭದಲ್ಲಿ ಎಲ್ಲರೂ ಒಟಿಟಿ ಮೇಲೆ ಕಣ್ಣಿಟ್ಟಿದ್ದಾರೆ.   ಹಾದಿ ಹಿಡಿದಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್ ನಟನೆ ಜತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಪಿಆರ್​ಕೆ ಸಂಸ್ಥೆ ಸ್ಥಾಪಿಸಿ ನಾಲ್ಕು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈಗ ಮೂರು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಈ …

Read More »

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು

ಬೆಂಗಳೂರು: ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತ ವೀಕೆಂಡ್ ಕರ್ಪ್ಯೂವನ್ನು ಮುಂದುವರೆಸಲಾಗುತ್ತದೆ. ಇದೀಗರಾಜ್ಯದಲ್ಲಿ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂವನ್ನು  ರದ್ಧುಗೊಳಿಸಲಾಗುತ್ತಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತೆ ಮುಂದುವರೆಸಲಾಗುತ್ತದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆಯ ಆಧಾರದ ಮೇಲೆ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ …

Read More »

ಡಾ.ಶಿವಕುಮಾರ ಸ್ವಾಮೀಜಿ 3ನೇ ಪುಣ್ಯ ಸ್ಮರಣೆ : ಐಜಿಪಿಗೆ ಗುಡುಗಿದ ಸಿಎಂ

ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು.ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ. ಐಜಿಪಿ ಬಳಿ ಸೀನಿಯರ್ ಆಫೀಸರ್ ಆಗಿದ್ದೀಯಾ ಅಷ್ಟು ಗೊತ್ತಾಗೊಲ್ವಾ ನಿನಗೆ ಜನ ದೂರ ನಿಲ್ಲುವಂತೆ ಹೇಳು ಎಂದು ಏರುದ್ವನಿಯಲ್ಲಿ ಗುಡುಗಿದ್ದಾರೆ.ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಆಗಮಿಸಿದ್ದ ಹಿನ್ನೆಲೆಯಲ್ಲಿ  ಈ ಘಟನೆ ಸಂಭವಿಸಿದೆ.

Read More »

22 ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಅನುದಾನ ಬಿಡುಗಡೆ

ಹುಬ್ಬಳ್ಳಿ:  ಧಾರವಾಡ ಜಿಲ್ಲೆಯ 22 ದೇವಸ್ಥಾನಗಳುಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಿನ್ನಲೆ ಗುಡಿಗಳಜೀರ್ಣೋದ್ಧಾರಕ್ಕಾಗಿ ರಾಜ್ಯದ ಮುಜರಾಯಿ ಇಲಾಖೆಯು ₹1.11 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲೆಯ ಪುರಾತನ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುವುದಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಿರ್ದೇಶನ ನೀಡಿದ್ದೆ. ಅದರಂತೆ, ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More »

ವಿಜಯಲಕ್ಷ್ಮಿ ಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ

ಚೆನ್ನೈ : 2020ರಲ್ಲಿ ನಟಿ ವಿಜಯಲಕ್ಷ್ಮಿ ಗೆ  ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಆತನನ್ನು ಬಂಧಿಸಲಾಗಿದೆ.ಲೈಂಗಿಕ ಕಿರುಕುಳ  ನೀಡಿದ್ದ ಪ್ರಕರಣದಲ್ಲಿ ಪನನ್‌ಗಟ್ಟು ಪದೈ ಕಟ್ಚಿ ಪಕ್ಷದ ಸ್ಥಾಪಕ ಹರಿ ನಾಡಾರ್‌  ಎಂಬಾತನನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬುಧವಾರ ಬಂಧಿಸಿದ್ದಾರೆ. 2020ರಲ್ಲಿ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದಕ್ಕೆ ಲೈಂಗಿಕ ಕಿರುಕುಳವೇ ಕಾರಣ ಎನ್ನಲಾಗಿತ್ತು. 2020ರ ಜುಲೈನಲ್ಲಿ ನಾಮ್‌ ತಮಿಳರ್‌ ಕಟ್ಚಿ (ಎನ್‌ಟಿಕೆ) ಪಕ್ಷದ ನಾಯಕ ಸೀಮನ್‌ ಕುಮ್ಮಕ್ಕಿನ …

Read More »

ಕೊರೋನಾ ನಿಯಂತ್ರಣಕ್ಕೆ ಸಲಹೆ ಕೊಟ್ಟ ಮಾಜಿ ಸಿಎಂ

ಬೆಂಗಳೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.

Read More »

ರಾತ್ರೋರಾತ್ರಿ ಪ್ರತಿಭಟನೆಗಿಳಿದ ರೈತರು: ಬೇಗನೆ ಹೋಟೆಲ್ ಬಂದ್ ಮಾಡಿಸಿದ್ದಕ್ಕೆ ಉಟಕ್ಕಾಗಿ ಪರದಾಡಿದ ಅನ್ನದಾತನ….!

ಹುಬ್ಬಳ್ಳಿ: ಪೊಲೀಸರು ಬೇಗನೆ ಹೊಟೇಲುಗಳನ್ನು ಬಂದ್ ಮಾಡಿಸಿದ್ದರಿಂದ ಊಟ ಸಿಕ್ಕಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ನೂರಾರು ರೈತರು ಇಲ್ಲಿನ ಎಪಿಎಂಸಿ ಎದುರು ಹು-ಧಾ ಮುಖ್ಯ ರಸ್ತೆ ಹಾಗೂ ಬಿಆರ್ ಟಿಎಸ್ ರಸ್ತೆ ಬಂದ್ ಮಾಡಿ ರಾತ್ರಿ ಪ್ರತಿಭಟಿಸಿದರು. ಮೆಣಸಿನಕಾಯಿ ಮಾರಾಟಕ್ಕೆ ಧಾರವಾಡ ಸೇರಿದಂತೆ ಗದಗ, ಬಾಗಲಕೋಟೆ ಜಿಲ್ಲೆ ಹಾಗೂ ಬೇರೆ ಬೇರೆ ಊರುಗಳಿಂದ ರೈತರು ಬಂದಿದ್ದರು. ಮೆಣಸಿನಕಾಯಿ ತೂಕ ಆಗಿಲ್ಲ. ಪೊಲೀಸರು ಬೇಗನೇ ಎಲ್ಲ ಹೋಟೆಲ್ ಗಳನ್ನು ಬಂದ್ ಮಾಡಿಸಿದ್ದಾರೆ. ಹೀಗಾಗಿ …

Read More »