admin
January 20, 2022
Breaking News
ಕೋಲಾರ: ಶಾಲಾ ಮಕ್ಕಳು ಸೇರಿದಂತೆ 3 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ವಿಪರೀತವಾಗಿ ಹರಡುತ್ತಿದೆ. ಈ ಪೈಕಿ ಬಹುತೇಕ ಸೋಂಕಿತರು ಮನೆಗಳಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಆಸ್ಪತ್ರೆಗಳ ಮೇಲೆ ಒತ್ತಡ ಇಲ್ಲವಾಗಿದೆ. ಮಾರಣಾಂತಿಕವಲ್ಲದ ಕೊರೊನಾ 3ನೇ ಅಲೆ ಎದುರಿಸಲು ಜಿಲ್ಲಾಡಳಿತ ಮನೆಗಳಿಗೆ ಔಷಧಿ ವಿತರಿಸಲು, ರೋಗಿಗಳ ಮಾಹಿತಿ ಸಂಗ್ರಹಿಸಲು ಮತ್ತು ಕೋವಿಡ್ ಮಾರ್ಗಸೂಚಿ ಪಾಲನೆ ನಿಗಾವಹಿಸಲು ವ್ಯವಸ್ಥೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
Read More »
admin
January 20, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೊಹಮ್ಮದ್ ನಲಪಾಡ್ ವಿರುದ್ಧ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಯಾವ ಗಲಾಟೆನೂ ಇಲ್ಲ, ಏನು ಇಲ್ಲ. ನಾನು ಕ್ರಾಸ್ ಚೆಕ್ ಮಾಡಿದೆ. ಆ ಥರ ಏನೂ ಇಲ್ಲ. ಯಾವ ಗಲಾಟೆನೂ ಇಲ್ಲ. ಯಾರೋ ಮಿಸ್ ಗೈಡ್ ಮಾಡಿದ್ದಾರೆ. ನಾನು ಸಿದ್ದು ಹಳ್ಳೇಗೌಡರ ಜೊತೆ ಪೋನ್ನಲ್ಲಿ ಮಾತನಾಡಿದೆ. ನನ್ನ ಪೋನ್ ತಗೊಂಡು ಯಾರೋ …
Read More »
admin
January 20, 2022
Breaking News, ಬೆಳಗಾವಿ
ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ರಾಕ್ಷಸರಿಗೆ ಹೋಲಿಸುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದರು. ತಾಲೂಕಿನ ಮಾವಿನಕಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುದ್ದಲಿ ಪೂಜೆ ನೆರವೇರಿಸಿದರು ಈ ರೀತಿ ಮಾತನಾಡಿದರು. ಗುದ್ದಲಿ ಪೂಜೆ ಬಳಿಕ ಮಾತನಾಡಿದ ಅವರು, ನಾಲ್ಕೂವರೆ ಕೋಟಿ ರೂಪಾಯಿಯ ಪ್ಯಾಕೇಜ್ ಇದು. ಎರಡು ವರ್ಷಗಳ ಹಿಂದೆಯೇ ನಾಲ್ಕೂವರೆ ಕೋಟಿ ರೂಪಾಯಿ ಟೆಂಡರ್ ಆಗಿ ವರ್ಕ್ ಆರ್ಡರ್ ಆಗಿತ್ತು. …
Read More »
admin
January 20, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ:ಆಕೆ ನಿಜಕ್ಕೂ ಕಿತ್ತು ತಿನ್ನುವ ಬಡತನದಲ್ಲಿ ಹುಟ್ಟಿದ ಹೆಣ್ಣುಮಗಳು. ಈಗ ಆಕೆ ವಿಶ್ವ ದಾಖಲೆಯಲ್ಲಿ ತನ್ನ ಹೆಸರನ್ನು ಬರೆದಿದ್ದಾಳೆ. ತೊಟ್ಟಿಲನ್ನು ತೂಗುವ ಕೈ ಜಗತ್ತನೇ ಆಳಬಲ್ಲದು ಎಂಬುವಂತ ಗಾದೆಗೆ ನಿದರ್ಶನ ಎಂಬಂತೆ ಈ ಮಹಿಳೆ ಸಾಧನೆ ಮಾಡಿದ್ದಾಳೆ. ಸಾಮಾನ್ಯವಾಗಿ ದೊಡ್ಡ ದೊಡ್ಡ ಬಾರ್ ಗಳಲ್ಲಿ ಬಾರ್ ಟೆಂಡರ್ ಗಳನ್ನು ನೀವು ನೋಡಿರ್ತೀರಾ. ಅದರಲ್ಲಿ ಬಾರ್ ಟೆಂಡರ್ ಗಳ ಬಾಟಲಿ ತಿರುಗಿಸುವುದನ್ನು ನೋಡಿಯೇ ಹೌ ಹಾರಿರುತ್ತೇವೆ. ಅಂಥದ್ದರಲ್ಲಿ ಇಲ್ಲೊರ್ವ ಯುವತಿ ಗ್ರಾಮೀಣ …
Read More »
admin
January 20, 2022
Breaking News, ಕೊಪ್ಪಳ
ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳೆ ಎಂದೇ ಪ್ರಸಿದ್ಧಿ ಪಡೆದ ನಗರದ ಗವಿ ಮಠದ ಅಜ್ಜನ ಜಾತ್ರಾಮಹೋತ್ಸವ ಇಂದು(ಬುಧವಾರ) ಬೆಳಗ್ಗೆ 4.30ಕ್ಕೆ ಸಲ್ಲುವ ಬ್ರಾಹ್ಮಿ ಮುಹೂರ್ತದಲ್ಲಿ ನೆರವೇರಿತು. ಪ್ರತಿ ವರ್ಷ 5 ಲಕ್ಷ ಜನ ಸೇರುತ್ತಿದ್ದ ಈ ಜಾತ್ರೆ ಸಂಜೆ ವೇಳೆ ನಡೆಯುತ್ತಿತ್ತು. ಕರೊನಾ 3ನೇ ಅಲೆ ಇರುವ ಕಾರಣ ಜಿಲ್ಲಾಡಳಿತ ಜಾತ್ರೆಗೆ ನಿರ್ಬಂಧ ವಿಧಿಸಿದ್ದರಿಂದ ಯಾರಿಗೂ ನಿಗದಿತ ಸಮಯವನ್ನು ತಿಳಿಸದೇ ಇಂದು ನಸುಕಿನಲ್ಲಿ ಅತ್ಯಂತ ಸರಳವಾಗಿ ರಥೋತ್ಸವ ನಡೆಸಲಾಗಿದೆ.
Read More »
admin
January 20, 2022
Breaking News, ಶಿವಮೊಗ್ಗ
ಶಿವಮೊಗ್ಗ: ಕೋವಿಡ್ ಕಾರಣ ಮಾರ್ಚ್ 22ಕ್ಕೆ ಮುಂದೂಡಲಾಗಿದೆ. ಫೆ. 22ರಿಂದ ಆರಂಭವಾಗಬೇಕಿದ್ದ ಶಿವಮೊಗ್ಗ ಮಾರಿಕಾಂಬ ಜಾತ್ರೆ ಸ್ಥಗಿತಗೊಳಿಸಿ ಮಾರ್ಚ್ ನಲ್ಲಿ ಮಾಡುವುದಾಗಿಹೇಳಲಾಗಿದೆ. ಜಾತ್ರೆ ಮುಂದೂಡಿದರೂ ಸಿದ್ಧತೆಗಳು ಮುಂದುವರಿಯಲಿವೆ. ಕೋವಿಡ್ ನಿಯಮಗಳು, ಮಾರ್ಗಸೂಚಿ ಅನುಸರಿಸಿ ಮಾರಿಕಾಂಬ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೋಟೆ ಶ್ರೀಮಾರಿಕಾಂಬ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ, ಕಾರ್ಯದರ್ಶಿ ಎನ್. ಮಂಜುನಾಥ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
Read More »
admin
January 20, 2022
Breaking News, ಚಿತ್ರದುರ್ಗ
ಚಿತ್ರದುರ್ಗ :ಯಾವುದೇ ಲ್ಯಾಬ್ ತಪ್ಪು ವರದಿ ನೀಡಿದ್ದರೆ ಲೈಸನ್ಸ್(License) ರದ್ದು ಮಾಡಲಾಗುತ್ತದೆ. ವಿಮಾನ ನಿಲ್ದಾಣವೇ ಆಗಿರಲಿ, ಎಲ್ಲೇ ತಪ್ಪು ಆಗಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಡಾ. ಸುಧಾಕರ್ ಹೇಳಿದರು. ಏರ್ಪೋರ್ಟ್ನಲ್ಲಿ ಕೊವಿಡ್ ಟೆಸ್ಟ್ ರಿಪೋರ್ಟಗೋಲ್ ಮಾಲ್ ವಿಚಾರದ ಬಗ್ಗೆ ಚಿತ್ರದುರ್ಗದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಪ್ರತಿಕ್ರಿಯೆ ನೀಡಿದರು. ಈ ವಿಚಾರ ಈವರೆಗೆ ನನ್ನ ಗಮನಕ್ಕೆ ಬಂದಿಲ್ಲ. ತಪ್ಪು ವರದಿ ಕೊಟ್ಟಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
Read More »
admin
January 20, 2022
Breaking News, ರಾಮನಗರ
ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಸ್. ಗಿರೀಶ್ ಅವರನ್ನು ಬುಧವಾರ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಮತ್ತೊಬ್ಬ ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಅವರನ್ನು ನೇಮಿಸಿದೆ.ಸಂತೋಷ್ ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನವರೇ ಆಗಿರುವುದು ವಿಶೇಷ. ಗಿರೀಶ್ ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಡಿಸಿಪಿಯಾಗಿ ತೆರಳಲಿದ್ದು, ಬೆಂಗಳೂರಿನಲ್ಲಿ ಗುಪ್ತಚರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್ ರಾಮನಗರ ಎಸ್ಪಿಯಾಗಿ ಬರಲಿದ್ದಾರೆ.
Read More »
admin
January 20, 2022
Breaking News, ಕರ್ನಾಟಕ, ಚಿತ್ರದುರ್ಗ
ಚಿತ್ರದುರ್ಗ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಘಟಕದ ಅಧ್ಯಕ್ಷ ಎಚ್. ಶ್ರೀನಿವಾಸ್ ಅಲಿಯಾಸ್ ಬಾಳೆಕಾಯಿ ಸೀನ ಎಂಬುವರನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ‘ಶ್ರೀನಿವಾಸ್ ಅವರು ಅಪರಾಧ ಚಟುವಟಿಕೆಯ ಹಿನ್ನೆಲೆ ಹೊಂದಿದ್ದಾರೆ. ಮರಳು ದಂಧೆಯಲ್ಲಿ ಭಾಗಿಯಾಗಿದ್ದ ಅವರ ವಿರುದ್ಧ ಹತ್ತಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿವೆ. ವಿವಿಧ ಕೋಮುಗಳ ನಡುವೆ ಸಂಘರ್ಷ ಉಂಟು ಮಾಡುವ ಅಪಾರಾಧ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಹೀಗಾಗಿ, ರೌಡಿ ಪಟ್ಟಿಗೆ ಸೇರ್ಪಡೆಗೊಂಡಿದ್ದರು’ . ಗೂಂಡಾ ಕಾಯ್ದೆಯಡಿ …
Read More »
admin
January 20, 2022
Breaking News, ದೆಹಲಿ
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ವೆಚ್ಚದ ಮಿತಿ ಇಲ್ಲದೆ 1527 ವೈದ್ಯಕೀಯ ಚಿಕಿತ್ಸೆ/ಶಸ್ತ್ರ ಚಿಕಿತ್ಸೆಗಳ ನಗದು ರಹಿತ ಸೌಲಭ್ಯ ನೀಡುವ ಆರೋಗ್ಯ ಸಿರಿ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು ಆರೋಗ್ಯ ಸಿರಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆ ಮೂಲಕ ನೌಕರರು ಮತ್ತು ಅವಲಂಬಿತ ಕುಟುಂಬಸ್ಥರು ಸೇರಿ ರಾಜ್ಯದ 28 ಲಕ್ಷ ಜನರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ 5.40 ಲಕ್ಷ …
Read More »