Breaking News

Breaking News

ಕರ್ಫ್ಯೂ ಜಾರಿ ಕುರಿತು ಸರ್ಕಾರ ಕ್ಕೆ ಪ್ರಶ್ನಿಸಿದ ಪ್ರತಾಪಸಿಂಹ

ಮೈಸೂರು: ‘ಕೊರೊನಾ ಹೆಸರಲ್ಲಿ ಲಾಕ್‌ಡೌನ್‌, ನೈಟ್‌ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಾದರೆ ಕೋವಿಡ್‌ ಲಸಿಕೆ ಏಕೆ ನೀಡಬೇಕಿತ್ತು’.ಈಗ ಬೂಸ್ಟರ್‌ ಡೋಸ್‌ ಬಂದಿದ್ದು, ಕೊರೊನಾ ಸೋಂಕು ಪ್ರಸರಣದ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗಿದೆ  ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಡೋಸ್‌ನಲ್ಲಿ ಶೇ 99 ಹಾಗೂ ಎರಡನೇ ಡೋಸ್‌ನಲ್ಲಿ ಶೇ 80 ಸಾಧನೆ ಮಾಡಲಾಗಿದೆ.  ಆಸ್ಪತ್ರೆಗಳಲ್ಲಿ ಮತ್ತಷ್ಟು ಬೆಡ್‌ ವ್ಯವಸ್ಥೆ ಮಾಡಿ, ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ. …

Read More »

ಜ. 26 ರಂದು ‘ಬಡವ ರಾಸ್ಕಲ್‌’ ವೂಟ್‌ ಸೆಲೆಕ್ಟ್‌ನಲ್ಲಿ ಬಿಡುಗಡೆ

ಧನಂಜಯ್‌ ನಟಿಸಿ, ನಿರ್ಮಾಣ ಮಾಡಿದ ಮೊದಲ ಚಿತ್ರ ಕಳೆದ ಡಿ.24ರಂದು ತೆರೆ ಕಂಡಿದ್ದ ಶಂಕರ್‌ ಗುರು ನಿರ್ದೇಶನದ, ‘ಡಾಲಿ’ ಧನಂಜಯ್‌ ನಟನೆಯ ‘ಬಡವ ರಾಸ್ಕಲ್‌’ ಸಿನಿಮಾ ಜ.26ರಂದು ಒಟಿಟಿ ವೇದಿಕೆ ವೂಟ್‌ ಸೆಲೆಕ್ಟ್‌ನಲ್ಲಿ ಬಿಡುಗಡೆಯಾಗಲಿದೆ. ಮಾಸ್‌ ಸಿನಿಮಾಗಳ ಜೊತೆಗೆ ಭಾವನಾತ್ಮಕ ಸಿನಿಮಾಗಳಲ್ಲೂ ಧನಂಜಯ್‌ ಮಿಂಚುತ್ತಾರೆ ಎನ್ನುವುದಕ್ಕೆ ಸಾಕ್ಷ್ಯವಾಗಿ ‘ರತ್ನನ್‌ ಪ್ರಪಂಚ’ ಹಾಗೂ ‘ಬಡವ ರಾಸ್ಕಲ್‌’ ಪ್ರೇಕ್ಷಕರ ಎದುರಿಗಿತ್ತು. ಧನಂಜಯ್‌ ಅವರಿಗೆ ಜೋಡಿಯಾಗಿ ಈ ಸಿನಿಮಾದಲ್ಲಿ ಅಮೃತ ಅಯ್ಯಂಗಾರ್‌ ನಟಿಸಿದ್ದರು. ಧನಂಜಯ್‌ …

Read More »

ಬಳ್ಳಾರಿಯಲ್ಲಿ 46 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಬಳ್ಳಾರಿ :  ಜಿಲ್ಲೆಯ ಕುರಗೋಡು ತಾಲೂಕಿನ ಯರಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವಸತಿ ಶಾಲೆಯ 236 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿನಿಯರು, 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ಕಿರಾತಕ ನಿರ್ದೇಶಕ ಪ್ರದೀಪ್ ರಾಜ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ನಿರ್ದೇಶಕ ಪ್ರದೀಪ್ ರಾಜ್(46) ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಪ್ರದೀಪ್ ರಾಜ್ ನಿಧನರಾಗಿದ್ದಾರೆ. ‘ಕಿರಾತಕ’, ‘ಅಂಜದಗಂಡು’, ‘ಬೆಂಗಳೂರು 23’ ಸೇರಿದಂತೆ ಹಲವು ಸಿನಿಮಾಗಳನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಪ್ರದೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಇಂದು ಅಂತ್ಯಕ್ರಿಯೆ ನೆರವೇರಲಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಗಾಂಜಾ ಮಾರಾಟ : ಇನ್ಸ್​ಪೆಕ್ಟರ್, ಸಬ್ ಇನ್ಸ್​ಪೆಕ್ಟರ್ ಅಮಾನತು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಮುಂದಿನ‌ ರಸ್ತೆಯಲ್ಲಿ ಇಬ್ಬರು ಕಾನ್ಸ್​ಟೇಬಲ್‌ ಗಾಂಜಾ ಮಾರಾಟ ಪ್ರಕರಣ ಸಂಬಂಧ‌ ಆರ್.ಟಿ.ನಗರ ಇನ್ಸ್​ಪೆಕ್ಟರ್ ಹಾಗೂ ಸಬ್ ಇನ್ಸ್​ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಿಲ್ಲ‌ ಎಂದು ಇನ್ಸ್​ಪೆಕ್ಟರ್ ಅಶ್ವತ್ಥ್ ಗೌಡ ಹಾಗೂ ಸಬ್ ಇನ್ಸ್​ಪೆಕ್ಟರ್ ವೀರಭದ್ರಯ್ಯ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ. ಜನವರಿ 13ರಂದು ಸಿಎಂ ಮನೆ ಮುಂದೆ ಭದ್ರತೆಗೆ ನಿಯೋಜನೆಯಾಗಿದ್ದ ಕೋರಮಂಗಲ …

Read More »

ವಿವಾದಾತ್ಮಕ ಹೇಳಿಕೆ : ಋಷಿಕುಮಾರ ಸ್ವಾಮಿಜಿಗೆ ಜಾಮೀನು

ಮಂಡ್ಯ: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮಿಜಿಗೆ ಜಾಮೀನು ನೀಡಿದ ಶ್ರೀರಂಗ ಪಟ್ಟಣದ JMFC ನ್ಯಾಯಲಯ. ಸ್ವಾಮೀಜಿ ಪರ ವಕೀಲರಾದ ಬಾಲರಾಜ್ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆಯೇ ಜಾಮೀನು ಅರ್ಜಿ ವಿಚಾರಣೆ ನಡಿಸಿದ ನ್ಯಾಯಲಯ ಇಂದಿಗೆ ಆದೇಶ ಕಾಯ್ದಿರಿಸಿದ್ದು ಇಂದು ಸ್ವಾಮೀಜಿಗೆ ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕಬೇಕು, ತನಿಖೆಗೆ ಸಹಕಾರ ನೀಡುವಂತೆ ಷರತ್ತು ಬಂದ ಜಾಮೀನು ನೀಡಿದೆ. ಮಂಡ್ಯ …

Read More »

57 ಪೊಲೀಸ್ ರಿಗೆ ಕೊರೋನಾ ದೃಢ

ಬೆಳಗಾವಿ:  ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಇನ್ಸಪೆಕ್ಟರ್ ಸೇರಿ 35, ಜಿಲ್ಲೆಯ 8 ಹಾಗೂ ಕೆಎಸ್‌ಆರ್‌ಪಿ ತುಕಡಿಯ 14 ಪೊಲೀಸ್ ಪೇದೆಗಳು ಸೇರಿ ಒಟ್ಟು 57 ಮಂದಿಗೆ ಕೋವಿಡ್ ಸೋಂಕು ವಕ್ಕರಿಸಿದೆ.ಈ ಪೈಕಿ ಇಬ್ಬರು ಗುಣಮುಖರಾಗಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ 11 ಮಂದಿಗೆ ಸೋಂಕು ತಗುಲಿದೆ. ಮಂಗಳವಾರ ಇಡೀ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಸೋಂಕು ತಗುಲಿದ ಎಲ್ಲರೂ ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದುಕೊಂಡಿದ್ದಾರೆ. ಕೆಲವರಿಗೆ …

Read More »

ತಜ್ಞರ ಸಲಹೆ ಮೇರೆಗೆ ವೀಕೆಂಡ್ ಕರ್ಪ್ಯೂ ಕುರಿತು ನಿರ್ಧಾರ ತೆಗೆದುಕೊಳ್ಳಿ

ಬೆಂಗಳೂರು : ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ತೆಗೆಯುವ ವಿಚಾರದಲ್ಲಿ ತಜ್ಞರ ಸಲಹೆ ಪಡೆದೇ ಮುಂದಿನ‌ ಹೆಜ್ಜೆ ಇಡುವುದು ಸೂಕ್ತ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರಿಗೆ ಈ ಹೇಳಿಕೆ ನೀಡಿದ್ದಾರೆ.ವಿಕೆಂಡ್ ಕರ್ಪ್ಯೂ, ನೈಟ್ ಕರ್ಫ್ಯೂ ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Read More »

24 ಗಂಟೆಯಲ್ಲಿ 2,38,018 ಕೊರೊನಾ ಪತ್ತೆ

ಕಳೆದ 24 ಗಂಟೆಯಲ್ಲಿ 2,38,018 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ 238 ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 17 ಲಕ್ಷ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,76,18,271ಕ್ಕೆ ಏರಿಕೆಯಾಗಿದೆ.

Read More »

ತುಮಕೂರು ಜಿಲ್ಲೆಯ 600 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ತುಮಕೂರು: ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 600 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 246 ವಿದ್ಯಾರ್ಥಿಗಳಲ್ಲಿ ಹಾಗೂ ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Read More »