ಬೆಂಗಳೂರು- ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವರಾದ ಡಾ. ಬಿ.ಟಿ.ಲಲಿತಾನಾಯಕ್ ನೇಮಕವಾಗಿದ್ದಾರೆ. ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜಯಪ್ರಕಾಶ್ ಬಂಧುರವರು ಲಲಿತಾ ನಾಯಕ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ.
Read More »
ಬೆಂಗಳೂರು- ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವರಾದ ಡಾ. ಬಿ.ಟಿ.ಲಲಿತಾನಾಯಕ್ ನೇಮಕವಾಗಿದ್ದಾರೆ. ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜಯಪ್ರಕಾಶ್ ಬಂಧುರವರು ಲಲಿತಾ ನಾಯಕ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ.
Read More »ಧಾರವಾಡ: ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್‌ಡಿಎಂ ಆಸ್ಪತ್ರೆಯು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ. ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿತ್ತು. ಅಲ್ಲಿಂದ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ. ಮಂಗಳವಾರ 8 ಲೀ ಆಮ್ಲಜನವನ್ನು ಅವರಿಗೆ ನೀಡಲಾಗಿದೆ.
Read More »ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬಿಗ್ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಅವರಿಗೆ ಅಪಘಾತ ಸಂಭವಿಸಿದ್ದು, ದಿವ್ಯಾ ಸುರೇಶ್ ಗಾಯಗೊಂಡಿದ್ದಾರೆ. ಸೋಮವಾರ ಅಪಘಾತವಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಿವ್ಯಾ ಸುರೇಶ್ ಕೈ ಕಾಲು ಮುಖಕ್ಕೆ ಗಂಭೀರ ಗಾಯಗಳಾಗಿವೆ. ಈ ವಿಚಾರವನ್ನು ದಿವ್ಯಾ ಸುರೇಶ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.
Read More »ಬೆಂಗಳೂರು: ನೀವೇನಾದ್ರೂ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬಂದರೆ, ಇಡೀ ಕರ್ನಾಟಕದ ಉದ್ದಗಲಕ್ಕೂ ತಮಿಳುನಾಡು ಗಡಿ ಬಂದ್ ಮಾಡು ತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವ ರು, ಬರೀ ಪಾದಯಾತ್ರೆ ಮಾಡಿದ್ರೆ ಸಾಧ್ಯವಿಲ್ಲ.ತಮಿಳುನಾಡಿಗೆ ಅಂತಿಮವಾಗಿ ಎಚ್ಚರಿಕೆ ಕೊಡುತ್ತೇನೆ. ಕಾಲು ಕೆರೆದು ಕೊಂಡು ಬಂದರೆ ತಮಿಳು ಸಿನಿಮಾ ಬ್ಯಾನ್ ಮಾಡುತ್ತೇವೆ. ಒಂದು ವಾಹನವನ್ನೂ ಒಳಗಡೆ …
Read More »ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ಕೇಸ್ ಸ್ಫೋಟಿಸುವ ಆತಂಕ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಜನವರಿ 26ರ ಸುಮಾರಿಗೆ ರಾಜ್ಯದಲ್ಲಿ ಕೇಸ್ ಹೆಚ್ವಳವಾಗುವ ನಿರೀಕ್ಷೆ ಇದೆ. ಇದನ್ನೇ ತಜ್ಞರು ಅಂದಾಜಿಸಿದ್ದಾರೆ ಎಂದು ಹೇಳಿದರು.
Read More »ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮದಲ್ಲಿ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಸುಟ್ಟ ಕರಕಲಾದ ಘಟನೆ ಇಂದು ಬೆಳಗಿನಜಾವ ನಡೆದಿದೆ. ಲಕಮಾಪುರ ಗ್ರಾಮದ ಅಶೋಕ ಹುಡೇದ ಎಂಬುವವರಿಗೆ ಸೇರಿದ ಒಂದು ಕಣಕಿ ಬಣವಿ ಹಾಗೂ ಒಂದು ಹೊಟ್ಟಿನ ಬಣವಿ ಬೆಂಕಿಗೆ ಆಹುತಿಯಾಗಿವೆ. ಇದರಿಂದ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ಮೇವು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ. ಈ ಹಿಂದೆಯೂ ಕಿಡಿಗೇಡಿಗಳು ಇದೇ ರೀತಿ ಅಶೋಕ …
Read More »ಹುಬ್ಬಳ್ಳಿ : ಇವರೆಲ್ಲ ವರ್ಷಾನುಗಟ್ಟಲೆ ಅಲ್ಲೆ ಇಲ್ಲಿ ಚಿಂದಿ ಆರಿಸಿ ತಮ್ಮ ದಿನದ ಬದುಕನ್ನು ಕಟ್ಟಿಕೊಳ್ಳುವವರು. ತಮ್ಮ ಹೊಟ್ಟೆಗೆ ಬಟ್ಟಿಕಟ್ಟಿಕೊಂಡು ಅಷ್ಟು ಇಷ್ಟು ಹಣ, ಚಿನ್ನ ಮಾಡಿಕೊಂಡಿದ್ದರು. ಆದರೆ ಹೆತ್ತ ಮಗಳು ಇವೆಲ್ಲವನ್ನು ತೆಗೆದುಕೊಂಡು ಪ್ರೀಯಕರಣ ಜೊತೆ ಪರಾರಿಯಾಗಿದ್ದಾಳೆ. ಇದಕ್ಕೆ ನೊಂದ ಪಾಲಕರು ಪೊಲೀಸ್ ಠಾಣೆಗೆ ದೂರು ಕೊಡಲು ಹೋದರೆ ಅಲ್ಲಿನ ಪೊಲೀಸರು ಹಾಗೂ ಇನ್ಸ್ಪೆಕ್ಟರ್ ನಾಳೆ ಬಾ ಎಂದು ಬೋರ್ಡ್ ಹಾಕುತ್ತಿದ್ದಾರೆಂದು ಆ ನೊಂದ ಜೀವಗಳು ಆರೋಪ ಮಾಡುತ್ತಿದ್ದಾರೆ. …
Read More »ಬೆಂಗಳೂರು: ತಾಂತ್ರಿಕ ತೊಂದರೆಯ ಕಾರಣ ನೀಡಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಿದ್ದರಿಂದ ನೂರಾರು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಂಗಳವಾರ ಕೌನ್ಸೆಲಿಂಗ್ ಗೆ ಹಾಜರಾಗಿದ್ದ ಶಿಕ್ಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆಯ ಕಾರಣ ನೀಡಿ ದಿಢೀರನೆ ವರ್ಗಾವಣೆ ಪ್ರಕ್ರಿಯೆ ರದ್ದುಗೊಳಿಸಿರುವುದಕ್ಕೆ ಶಿಕ್ಷಕ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಸುಮಾರು ಒಂದು ತಿಂಗಳಿನಿಂದ ಸ್ಥಗಿತವಾಗಿದ್ದ ವರ್ಗಾವಣೆ ಪ್ರಕ್ರಿಯೆ ಕಳೆದ ವಾರ …
Read More »ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 15 ರಿಂದ 20 ದಿನಗಳ ಕಾಲ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳನ್ನು ಮುಚ್ಚುವುದು ಸೂಕ್ತ . ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಈ ನಿಯಮವನ್ನು ಪಾಲಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಇಂತಹ ಕ್ರಮ ಕೈಗೊಳ್ಳದೇ ಇದ್ದರೆ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕುವ ಅಪಾಯ ಇದೆ ಎಂದು ಹೇಳಿದರು.
Read More »ಬೆಳಗಾವಿ: ನಗರದಲ್ಲಿ ಕೊರೋನಾ ತನ್ನ ಹಾವಳಿಯನ್ನು ದಿನದಿಂದ ದಿನಕ್ಕೆ ಏರಿಕೆ ಕ್ರಮದಲ್ಲಿ ಸಾಗುತ್ತಿದೆ. ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ. ‘ಅವರಿಗೆ ರೋಗದ ಲಕ್ಷಣಗಳಿಲ್ಲ. ಹೀಗಾಗಿ, ಹೋಂ ಕ್ವಾರಂಟೈನ್ ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದವರಿಗೆ ನಿಗಾ ವಹಿಸುವಂತೆ ತಿಳಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.ಠಾಣೆ ಆವರಣದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ರಾಜ್ಯದ ವಿವಿಧೆಡೆ ಪೊಲೀಸರಲ್ಲಿ ಸೋಂಕು ದೃಢಪಡುತ್ತಿದ್ದ ಹಿನ್ನೆಲೆಯಲ್ಲಿ ನಗರದಲ್ಲೂ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.
Read More »