admin
January 19, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ತಮ್ಮ ಪಕ್ಷ ಆಯೋಜಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 26ರಿಂದ ರಾಜ್ಯದ 51 ಪ್ರಮುಖ ನದಿಗಳ ನೀರು ಸಂಗ್ರಹ ಮಾಡಿ ಜಲಧಾರೆ ಕಾರ್ಯಕ್ರಮ ದ ಮೂಲಕ ತಿಳುವಳಿಕೆ ಮೂಡಿಸಲು ಕಾರ್ಯಕ್ರಮ ಆಯೋಜಿಸಿದ್ದೆವು.ಕಳಸದ ಮೂಲಕ 180 ತಾಲೂಕು ಪ್ರವಾಸ ಮಾಡಲು ಯೋಚಿಸಿದ್ದೆವು. ಆದರೆ ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಜನತಾ ಜಲಧಾರೆ …
Read More »
admin
January 19, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರ ಮುನ್ನೆಚ್ಚರಿಕೆ ಲಸಿಕೆ ಅಭಿಯಾನಕ್ಕೆ ನಿರೀಕ್ಷೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮುನ್ನೆಚ್ಚರಿಕೆ ಲಸಿಕೆ ಡೋಸ್ ಅನ್ನು ಮುಂಚೂಣಿ ಕಾರ್ಯಕರ್ತರು ಎಲ್ಲರೂ ಪಡೆಯಬೇಕು. ಸದ್ಯ ರಾಜ್ಯದಲ್ಲಿ ಶೇ.39ರಷ್ಟು ಮಾತ್ರ ಗುರಿ ಸಾಧನೆಯಾಗಿದೆ.ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆ ಬಳಿಕ ಮಾತನಾಡಿದ ಅವರು, ಮುನ್ನೆಚ್ಚರಿಕೆ ಡೋಸ್ ಲಸಿಕಾರಣವನ್ನು ದೊಡ್ಡ ಅಭಿಯಾನದಂತೆ ಮಾಡಲು ತೀರ್ಮಾನಿಸಲಾಗಿದ್ದು, ಅರ್ಹ …
Read More »
admin
January 19, 2022
Breaking News, ಕರ್ನಾಟಕ
ಹೊಸಪೇಟೆ(ವಿಜಯನಗರ): ‘ಗಣರಾಜ್ಯೋತ್ಸವದ ದಿನ ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣ ಉದ್ಘಾಟನೆ ಹಾಗೂ ಗುಂಡಾ ಸಸ್ಯ ಉದ್ಯಾನದಲ್ಲಿ ₹32 ಲಕ್ಷದಲ್ಲಿ ಅಭಿವೃದ್ಧಿಪಡಿಸಲಾಗಿರುವ ‘ಅಕ್ವೇರಿಯಂ’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಉದ್ಘಾಟಿಸುವರು.ಬೆಳಿಗ್ಗೆ 9ಕ್ಕೆ ನಗರದ ಕ್ರೀಡಾಂಗಣದಲ್ಲಿ ಸಚಿವರು ತ್ರಿವರ್ಣ ಧ್ವಜಾರೋಹಣ ನೆರವೇರಿಸುವರು. ಬಳಿಕ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸುವರುಎಂದು ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ತಿಳಿಸಿದರು. ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ …
Read More »
admin
January 19, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ‘ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಾಹಿತಿ ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ‘ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದು, ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಗೌರವ …
Read More »
admin
January 19, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ. ಎಲ್ಲಾ ಶಾಲೆ – ಕಾಲೇಜುಗಳಲ್ಲಿ ಅರ್ಥ ಪೂರ್ಣವಾಗಿ ಆಚರಣೆ ಮಾಡಬೇಕು. ಹೀಗಾಗಿ ಸುಭಾಷ ಚಂದ್ರ ಬೋಸ್‌ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ …
Read More »
admin
January 19, 2022
Breaking News, ದೆಹಲಿ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,82,970 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 441 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
Read More »
admin
January 19, 2022
Breaking News, World
ಲಂಡನ್: ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ರೂಪಾಯಿ ಸಾಲ ಕೊಡದೇ ಪರಾರಿಯಾದ ಉದ್ಯಮಿ ವಿಜಯ ಮಲ್ಯ ಅವರನ್ನು ಕುಟುಂಬ ಸಮೇತ ಲಂಡನ್ ನಲ್ಲಿರುವ ಐಷಾರಾಮಿ ಮನೆಯಿಂದ ಹೊರಹಾಕಲು ಸ್ಥಳೀಯ ನ್ಯಾಯಾಲಯ ಆದೇಶಿಸಿದೆ. ಸ್ವಿಸ್ ಬ್ಯಾಂಕಿನ 200 ಕೋಟಿ ರೂಪಾಯಿ ಸಾಲ ವಸೂಲಿಗೆ ಮನೆಯನ್ನು ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ. ಸಾಲ ಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಮಲ್ಯ ಅವರ ಲಂಡನ್ ನಿವಾಸವನ್ನು ವಶಕ್ಕೆ ಪಡೆಯಲು ಸ್ವಿಸ್ ಬ್ಯಾಂಕ್ ಸಲ್ಲಿಸಿದ್ದ …
Read More »
admin
January 18, 2022
Breaking News, ಧಾರವಾಡ
ಧಾರವಾಡ : ಹಿರಿಯ ಕವಿ ಡಾ.ಚನ್ನವೀರ ಕಣವಿ ಅವರ ಆರೋಗ್ಯದಲ್ಲಿ ತುಸು ಮಟ್ಟಿನ ಏರುಪೇರು ಉಂಟಾಗಿದ್ದು, ವೈದ್ಯಕೀಯ. ಆಮ್ಲಜನಕ ಪ್ರಮಾಣವನ್ನು ಮಂಗಳವಾರ 8 ಲೀ. ಗೆ ಹೆಚ್ಚಿಸಲಾಗಿದೆ ಎಂದು ಎಸ್. ಡಿ. ಎಂ. ಆಸ್ಪತ್ರೆ ಹೆಲ್ತ್ ಬುಲೆಟಿನ್ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಡಳಿತ, ಡಾ. ಕಣವಿ ಅವರು ಪ್ರತಿದಿನದಂತೆ ಇಂದೂ ಸಹ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡಳಿತ, ಎಸ್.ಡಿ.ಎಮ್ ಆಸ್ಪತ್ರೆಯ ಆಡಳಿತ …
Read More »
admin
January 18, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಿಸಿದ್ದೆವು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಸುಳ್ಳು. ಕಾಂಗ್ರೆಸ್ ಅಧಿಕಾರದಲ್ಲಿ ಯಾವುದೇ ಡಿಪಿಆರ್ ಮಾಡಿಲ್ಲ. ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಗ್ಗೆ ನನಗೆ ಯಾವುದೇ ಆತಂಕವಿಲ್ಲ, ಅವರು ಇನ್ನು 5 ವರ್ಷ ಬೇಕಾದರೂ ಪಾದಯಾತ್ರೆ ಮಾಡಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಸಿಎಂ ಆಗಿದ್ದಾಗ ಹಲವು ನೀರಾವರಿ ಯೋಜನೆ ಜಾರಿಗೆ ತಂದಿದ್ದೆ ಎಂದರು. ಜನವರಿ 26ರಿಂದ ಜೆಡಿಎಸ್ …
Read More »
admin
January 18, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಿರುತೆರೆ ನಟಿ ಅಮೃತಾ ಅವರ ಪುತ್ರಿ, ಖ್ಯಾತ ಹರಿಕಥಾ ವಿದ್ವಾಂಸ ಗುರುರಾಜಲು ನಾಯ್ಡು ಅವರ ಮರಿ ಮೊಮ್ಮಗಳು ಸಮನ್ವಿಯ ಗುಬ್ಬಲಾಳ ಸಮೀಪದ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ …
Read More »