Breaking News

Breaking News

ಕೊರೊನಾ ಹೆಚ್ಚಾದರೇ ಶಾಲಾ ಕಾಲೇಜುಗಳಿಗೆ ರಜೆ

ಹಾಸನ : ಕೊರೊನಾ ಸೋಂಕು ಹೆಚ್ಚಾದರೇ ಶಾಲಾ ಕಾಲೇಜುಗಳಿಗೆ ರಜೆ ನೀಡುವುದು ಅನಿವಾರ್ಯ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.ಗಿರೀಶ್, ಹಾಸನ ಜಿಲ್ಲೆಯಲ್ಲಿಯೂ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿವೆ ಎಂದರು.

Read More »

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೋವಿಡ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರಿಕೆ ಕ್ರಮದಲ್ಲಿ ಸಾಗುತ್ತಿದೆ.ಈಗ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್  ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.

Read More »

ಫೆಬ್ರವರಿ ಅಂತ್ಯದೊಳಗೆ ಪಾಲಿಕೆ ಅಸ್ಥಿತ್ವಕ್ಕೆ: ಟೆಂಗಿನಕಾಯಿ

ಹುಬ್ಬಳ್ಳಿ: ಫೆಬ್ರವರಿ ಅಂತ್ಯದ ಒಳಗೆ ಹು-ಧಾ ಮಹಾನಗರ ಪಾಲಿಕೆ ಆಡಳಿತ ಅಸ್ತಿತ್ವಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ನಾಲ್ಕು ತಿಂಗಳಿಂದ ಪಾಲಿಕೆ ಚುನಾವಣೆ ನಡೆದಿದ್ದು, ನೂತನವಾಗಿ ಆಯ್ಕೆಯಾದ ಪಾಲಿಕೆ ಸದಸ್ಯರಿಗೆ ಅಧಿಕಾರ ಹಸ್ತಾಂತರ ಆಗಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಜಗದೀಶ್ ಶೆಟ್ಟರ್ ಸೇರಿದಂತೆ ಸಂಬಂಧಿಸಿದ …

Read More »

ವೀಕೆಂಡ್ ಕರ್ಫ್ಯೂ : ಬೆಂಗಳೂರುನಲ್ಲಿ ಕೋವಿಡ್ ಇಳಿಮುಖ

ಬೆಂಗಳೂರು: ಒಂದೇ ದಿನ 18622 ಸೋಂಕಿತರು ಮಾತ್ರ ಪತ್ತೆಯಾಗಿದ್ದಾರೆ.ಇದು ನಿನ್ನೆ ದಾಖಲಾಗಿದ್ದ ಸೋಂಕಿತರಿಗಿಂತ 3 ಸಾವಿರ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ.ವೀಕೆಂಡ್ ಕರ್ಫ್ಯೂ ಜಾರಿಯಿಂದಾಗಿ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖವಾಗಿದೆ. ಶನಿವಾರ ಬೆಂಗಳೂರಿನಲ್ಲಿ 22317 ಸೋಂಕಿತರು ಪತ್ತೆಯಾಗಿದ್ದರು, ವಿಕೇಂಡ್ ಕರ್ಫ್ಯೂ ಆರಂಭದ ಮೊದಲ ದಿನ ಅಂದರೆ ನಿನ್ನೆ 21092 ಸೋಂಕಿತರು ಪತ್ತೆಯಾಗಿದ್ದರು. ಇಂದು ನಿನ್ನೆಗಿಂತ 3 ಸಾವಿರ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ವಾರದ ಆರಂಭದಲ್ಲಿ ಅಬ್ಬರಿಸುವ ಕೊರೊನಾ ಸೋಂಕಿನ …

Read More »

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ನಿಧನ

ಒಡಿಶಾ: ಒಡಿಶಾದ ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ 88ವರ್ಷ ಭಾನುವಾರ ರಾತ್ರಿ, ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು, ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಹೇಳಿದ್ದಾಗಿ ಶಾಂತಿ ದೇವಿ ಕುಟುಂಬಸ್ಥರು ತಿಳಿಸಿದ್ದಾರೆ.

Read More »

ಜನರ ಹಿತ ಮುಖ್ಯ : ಇನ್ನೊಬ್ಬರ ಹಿತಕ್ಕಾಗಿ ನಿಯಮ ಬದಲಾವಣೆ ಮಾಡುವುದಿಲ್ಲ

ಬೆಂಗಳೂರು: ನಮಗೆ ಜನರ ಹಿತವನ್ನು ಕಾಪಾಡುವುದು ಮುಖ್ಯ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ .ರಾಜ್ಯದಲ್ಲಿ ಜನರ ಹಿತದೃಷ್ಠಿಯಿಂದ, ಆರೋಗ್ಯದ ಹಿತದೃಷ್ಠಿಯಿಂದ ವೀಕೆಂಡ್ , ನೈಟ್ ಕರ್ಪ್ಯೂ  ಜಾರಿಗೊಳಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್  ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಜನವರಿ 31ರ ಬಳಿಕ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರೆಸೋದಾ …

Read More »

ಮಾ.15 ರಿಂದ 15 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆ

ನವದೆಹಲಿ : ಮಾರ್ಚ್ ತಿಂಗಳಿನಿಂದ 15 ವರ್ಷದವರೆಗಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನ ದೇಶದಲ್ಲಿ ಪರಿಚಯಿಸಲಾಗುವುದು ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ  ಮುಖ್ಯಸ್ಥ ಎನ್.ಕೆ. ಅರೋರಾ ಹೇಳಿದ್ದಾರೆ. ‘ಲಸಿಕೆಯ ಮೊದಲ ಡೋಸ್ʼನ್ನ ಜನವರಿ ಅಂತ್ಯದ ವೇಳೆಗೆ 15 ರಿಂದ 18 ವರ್ಷ ವಯಸ್ಸಿನ ಎಲ್ಲಾ 74 ದಶಲಕ್ಷ ಹದಿಹರೆಯದವರಿಗೆ ಫೆಬ್ರವರಿಯಲ್ಲಿ ಎರಡನೇ ಡೋಸ್ ನೀಡುವ ಗುರಿಯನ್ನ ಹೊಂದಿದೆ. ಇದರ ನಂತರ ಮಾರ್ಚ್ ಆರಂಭದಿಂದ 12 ರಿಂದ 15 ವರ್ಷ ವಯಸ್ಸಿನ …

Read More »

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಲ್ಲ : ಆರ್ ಅಶೋಕ್

ಬೆಂಗಳೂರು: ಜನವರಿ 25ರ ನಂತ್ರ ರಾಜ್ಯದಲ್ಲಿ ಕೊರೋನಾ ಪೀಕ್ ಗೆ ತಲುಪಲಿದೆ ಎಂದು ತಜ್ಞರು ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಅಂತ್ಯ, ಮುಂದುವರಿಕೆ ಬಗ್ಗೆ ಶುಕ್ರವಾರ ಮತ್ತೆ ಸಭೆ ಕರೆಯಲಾಗುತ್ತದೆ. ಆ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೆ ರಾಜ್ಯದಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್  ಇಲ್ಲ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪಷ್ಟ ಪಡಿಸಿದರು. ಈ …

Read More »

ಸಿಎಂ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ

ಚಿತ್ರದುರ್ಗ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದರು. ಮೊಳಕಾಲ್ಮೂರು ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಖುದ್ದು ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ . ನಮ್ಮ ಜಿಲ್ಲೆಯಲ್ಲೂ ಸಹ, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ, 755 …

Read More »

ರಾಜ್ಯದಲ್ಲಿ 287 ಜನರಿಗೆ ಒಮಿಕ್ರಾನ್‌ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಗಳ ಸಂಖ್ಯೆ ಹೆಚ್ಚಳವಾಗ್ತಿವೆ. ಈ ನಡುವೆ ಒಮಿಕ್ರಾನ್‌ ಆತಂಕವೂ ಶುರುವಾಗಿದೆ. ರಾಜ್ಯದಲ್ಲಿ ಇಂದು  ಒಮಿಕ್ರಾನ್‌ ಸ್ಪೋಟವಾಗಿದ್ದು, ಬರೋಬ್ಬರಿ 287 ಮಂದಿಗೆ ಹೊಸ ವೈರಸ್‌ ವಕ್ಕರಿಸಿಕೊಂಡಿರುವುದು ಪತ್ತೆಯಾಗಿದೆ.‌ ಈ ಮೂಲಕ ರಾಜ್ಯದಲ್ಲಿ ಒಟ್ಟು ಒಮಿಕ್ರಾನ್‌ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

Read More »