Breaking News

Breaking News

ಮಾ. 22ಕ್ಕೆ ಶಿವಮೊಗ್ಗ ಮಾರಿಕಾಂಬ ಜಾತ್ರೆ

ಶಿವಮೊಗ್ಗ: ಕೋವಿಡ್‌ ಕಾರಣ ಮಾರ್ಚ್‌ 22ಕ್ಕೆ ಮುಂದೂಡಲಾಗಿದೆ.  ಫೆ. 22ರಿಂದ ಆರಂಭವಾಗಬೇಕಿದ್ದ ಶಿವಮೊಗ್ಗ ಮಾರಿಕಾಂಬ ಜಾತ್ರೆ ಸ್ಥಗಿತಗೊಳಿಸಿ ಮಾರ್ಚ್ ನಲ್ಲಿ ಮಾಡುವುದಾಗಿಹೇಳಲಾಗಿದೆ. ಜಾತ್ರೆ ಮುಂದೂಡಿದರೂ ಸಿದ್ಧತೆಗಳು ಮುಂದುವರಿಯಲಿವೆ. ಕೋವಿಡ್‌ ನಿಯಮಗಳು, ಮಾರ್ಗಸೂಚಿ ಅನುಸರಿಸಿ ಮಾರಿಕಾಂಬ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೋಟೆ ಶ್ರೀಮಾರಿಕಾಂಬ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ, ಕಾರ್ಯದರ್ಶಿ ಎನ್. ಮಂಜುನಾಥ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Read More »

ಯಾವುದೇ ಲ್ಯಾಬ್‌ ತಪ್ಪು ವರದಿ ನೀಡಿದ್ದರೆ ಲೈಸನ್ಸ್ ರದ್ದು : ಡಾ. ಸುಧಾಕರ್

ಚಿತ್ರದುರ್ಗ :ಯಾವುದೇ ಲ್ಯಾಬ್‌ ತಪ್ಪು ವರದಿ ನೀಡಿದ್ದರೆ ಲೈಸನ್ಸ್(License) ರದ್ದು ಮಾಡಲಾಗುತ್ತದೆ. ವಿಮಾನ ನಿಲ್ದಾಣವೇ ಆಗಿರಲಿ, ಎಲ್ಲೇ ತಪ್ಪು ಆಗಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಡಾ. ಸುಧಾಕರ್ ಹೇಳಿದರು. ಏರ್​ಪೋರ್ಟ್​ನಲ್ಲಿ ಕೊವಿಡ್‌ ಟೆಸ್ಟ್ ರಿಪೋರ್ಟಗೋಲ್ ಮಾಲ್ ವಿಚಾರದ ಬಗ್ಗೆ ಚಿತ್ರದುರ್ಗದಲ್ಲಿ  ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಪ್ರತಿಕ್ರಿಯೆ ನೀಡಿದರು.  ಈ ವಿಚಾರ ಈವರೆಗೆ ನನ್ನ ಗಮನಕ್ಕೆ ಬಂದಿಲ್ಲ. ತಪ್ಪು ವರದಿ ಕೊಟ್ಟಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.

Read More »

ರಾಮನಗರದ ನೂತನ ಎಸ್ಪಿಯಾಗಿ ಸಂತೋಷ್‌ ಬಾಬು ನೇಮಕ

ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಎಸ್‌. ಗಿರೀಶ್ ಅವರನ್ನು ಬುಧವಾರ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಮತ್ತೊಬ್ಬ ಐಪಿಎಸ್ ಅಧಿಕಾರಿ ಸಂತೋಷ್‌ ಬಾಬು ಅವರನ್ನು ನೇಮಿಸಿದೆ.ಸಂತೋಷ್ ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನವರೇ ಆಗಿರುವುದು ವಿಶೇಷ. ಗಿರೀಶ್ ಬೆಂಗಳೂರಿನ ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿಯಾಗಿ ತೆರಳಲಿದ್ದು, ಬೆಂಗಳೂರಿನಲ್ಲಿ ಗುಪ್ತಚರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್‌ ರಾಮನಗರ ಎಸ್ಪಿಯಾಗಿ ಬರಲಿದ್ದಾರೆ.

Read More »

ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಬಂಧನ

ಚಿತ್ರದುರ್ಗ: ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಘಟಕದ ಅಧ್ಯಕ್ಷ ಎಚ್‌. ಶ್ರೀನಿವಾಸ್‌ ಅಲಿಯಾಸ್‌ ಬಾಳೆಕಾಯಿ ಸೀನ ಎಂಬುವರನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ‘ಶ್ರೀನಿವಾಸ್‌ ಅವರು ಅಪರಾಧ ಚಟುವಟಿಕೆಯ ಹಿನ್ನೆಲೆ ಹೊಂದಿದ್ದಾರೆ. ಮರಳು ದಂಧೆಯಲ್ಲಿ ಭಾಗಿಯಾಗಿದ್ದ ಅವರ ವಿರುದ್ಧ ಹತ್ತಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿವೆ. ವಿವಿಧ ಕೋಮುಗಳ ನಡುವೆ ಸಂಘರ್ಷ ಉಂಟು ಮಾಡುವ ಅಪಾರಾಧ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಹೀಗಾಗಿ, ರೌಡಿ ಪಟ್ಟಿಗೆ ಸೇರ್ಪಡೆಗೊಂಡಿದ್ದರು’ . ಗೂಂಡಾ ಕಾಯ್ದೆಯಡಿ …

Read More »

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ವೆಚ್ಚದ ಮಿತಿ ಇಲ್ಲದೆ 1527 ವೈದ್ಯಕೀಯ ಚಿಕಿತ್ಸೆ/ಶಸ್ತ್ರ ಚಿಕಿತ್ಸೆಗಳ ನಗದು ರಹಿತ ಸೌಲಭ್ಯ ನೀಡುವ ಆರೋಗ್ಯ ಸಿರಿ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು ಆರೋಗ್ಯ ಸಿರಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆ ಮೂಲಕ ನೌಕರರು ಮತ್ತು ಅವಲಂಬಿತ ಕುಟುಂಬಸ್ಥರು ಸೇರಿ ರಾಜ್ಯದ 28 ಲಕ್ಷ ಜನರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ 5.40 ಲಕ್ಷ …

Read More »

ಕರ್ಫ್ಯೂ ಜಾರಿ ಕುರಿತು ಸರ್ಕಾರ ಕ್ಕೆ ಪ್ರಶ್ನಿಸಿದ ಪ್ರತಾಪಸಿಂಹ

ಮೈಸೂರು: ‘ಕೊರೊನಾ ಹೆಸರಲ್ಲಿ ಲಾಕ್‌ಡೌನ್‌, ನೈಟ್‌ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಾದರೆ ಕೋವಿಡ್‌ ಲಸಿಕೆ ಏಕೆ ನೀಡಬೇಕಿತ್ತು’.ಈಗ ಬೂಸ್ಟರ್‌ ಡೋಸ್‌ ಬಂದಿದ್ದು, ಕೊರೊನಾ ಸೋಂಕು ಪ್ರಸರಣದ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗಿದೆ  ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಡೋಸ್‌ನಲ್ಲಿ ಶೇ 99 ಹಾಗೂ ಎರಡನೇ ಡೋಸ್‌ನಲ್ಲಿ ಶೇ 80 ಸಾಧನೆ ಮಾಡಲಾಗಿದೆ.  ಆಸ್ಪತ್ರೆಗಳಲ್ಲಿ ಮತ್ತಷ್ಟು ಬೆಡ್‌ ವ್ಯವಸ್ಥೆ ಮಾಡಿ, ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ. …

Read More »

ಜ. 26 ರಂದು ‘ಬಡವ ರಾಸ್ಕಲ್‌’ ವೂಟ್‌ ಸೆಲೆಕ್ಟ್‌ನಲ್ಲಿ ಬಿಡುಗಡೆ

ಧನಂಜಯ್‌ ನಟಿಸಿ, ನಿರ್ಮಾಣ ಮಾಡಿದ ಮೊದಲ ಚಿತ್ರ ಕಳೆದ ಡಿ.24ರಂದು ತೆರೆ ಕಂಡಿದ್ದ ಶಂಕರ್‌ ಗುರು ನಿರ್ದೇಶನದ, ‘ಡಾಲಿ’ ಧನಂಜಯ್‌ ನಟನೆಯ ‘ಬಡವ ರಾಸ್ಕಲ್‌’ ಸಿನಿಮಾ ಜ.26ರಂದು ಒಟಿಟಿ ವೇದಿಕೆ ವೂಟ್‌ ಸೆಲೆಕ್ಟ್‌ನಲ್ಲಿ ಬಿಡುಗಡೆಯಾಗಲಿದೆ. ಮಾಸ್‌ ಸಿನಿಮಾಗಳ ಜೊತೆಗೆ ಭಾವನಾತ್ಮಕ ಸಿನಿಮಾಗಳಲ್ಲೂ ಧನಂಜಯ್‌ ಮಿಂಚುತ್ತಾರೆ ಎನ್ನುವುದಕ್ಕೆ ಸಾಕ್ಷ್ಯವಾಗಿ ‘ರತ್ನನ್‌ ಪ್ರಪಂಚ’ ಹಾಗೂ ‘ಬಡವ ರಾಸ್ಕಲ್‌’ ಪ್ರೇಕ್ಷಕರ ಎದುರಿಗಿತ್ತು. ಧನಂಜಯ್‌ ಅವರಿಗೆ ಜೋಡಿಯಾಗಿ ಈ ಸಿನಿಮಾದಲ್ಲಿ ಅಮೃತ ಅಯ್ಯಂಗಾರ್‌ ನಟಿಸಿದ್ದರು. ಧನಂಜಯ್‌ …

Read More »

ಬಳ್ಳಾರಿಯಲ್ಲಿ 46 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಬಳ್ಳಾರಿ :  ಜಿಲ್ಲೆಯ ಕುರಗೋಡು ತಾಲೂಕಿನ ಯರಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವಸತಿ ಶಾಲೆಯ 236 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿನಿಯರು, 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ಕಿರಾತಕ ನಿರ್ದೇಶಕ ಪ್ರದೀಪ್ ರಾಜ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ನಿರ್ದೇಶಕ ಪ್ರದೀಪ್ ರಾಜ್(46) ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಪ್ರದೀಪ್ ರಾಜ್ ನಿಧನರಾಗಿದ್ದಾರೆ. ‘ಕಿರಾತಕ’, ‘ಅಂಜದಗಂಡು’, ‘ಬೆಂಗಳೂರು 23’ ಸೇರಿದಂತೆ ಹಲವು ಸಿನಿಮಾಗಳನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಪ್ರದೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಇಂದು ಅಂತ್ಯಕ್ರಿಯೆ ನೆರವೇರಲಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಗಾಂಜಾ ಮಾರಾಟ : ಇನ್ಸ್​ಪೆಕ್ಟರ್, ಸಬ್ ಇನ್ಸ್​ಪೆಕ್ಟರ್ ಅಮಾನತು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಮುಂದಿನ‌ ರಸ್ತೆಯಲ್ಲಿ ಇಬ್ಬರು ಕಾನ್ಸ್​ಟೇಬಲ್‌ ಗಾಂಜಾ ಮಾರಾಟ ಪ್ರಕರಣ ಸಂಬಂಧ‌ ಆರ್.ಟಿ.ನಗರ ಇನ್ಸ್​ಪೆಕ್ಟರ್ ಹಾಗೂ ಸಬ್ ಇನ್ಸ್​ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಿಲ್ಲ‌ ಎಂದು ಇನ್ಸ್​ಪೆಕ್ಟರ್ ಅಶ್ವತ್ಥ್ ಗೌಡ ಹಾಗೂ ಸಬ್ ಇನ್ಸ್​ಪೆಕ್ಟರ್ ವೀರಭದ್ರಯ್ಯ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ. ಜನವರಿ 13ರಂದು ಸಿಎಂ ಮನೆ ಮುಂದೆ ಭದ್ರತೆಗೆ ನಿಯೋಜನೆಯಾಗಿದ್ದ ಕೋರಮಂಗಲ …

Read More »