Breaking News

Breaking News

ಪಾದಯಾತ್ರೆಯಿಂದ ನೀರಿಗಿಂತ, ಕುರ್ಚಿಗಾಗಿ ಹೋರಾಟ ನಡೆಸುತ್ತಿದ್ದಾರೆ

ಚಿತ್ರದುರ್ಗ: ಪಾದಯಾತ್ರೆ ಮೂಲಕ ಸಿದ್ದರಾಮಯ್ಯ, ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಹಣಿಯುವ ತಂತ್ರ ಮಾಡಿದ್ದಾರೆ .ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಮೂಲಕ ಒಂದೇ ಕಲ್ಲಿನಿಂದ ಮೂರು ಹಕ್ಕಿ ಹೊಡೆಯುವ ತಂತ್ರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪಾದಯಾತ್ರೆಯಿಂದ ನೀರಿಗಿಂತ, ಕುರ್ಚಿಗಾಗಿ ನಡೆಸುತ್ತಿದ್ದಾರೆ. ಇದೊಂದು ರೀತಿಯಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಪಾದಯಾತ್ರೆ ಎಂದು ಕುಟಕಿದರು.

Read More »

ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ

ರಾಮನಗರ: ಒಂದು ವೇಳೆ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಲು ಸೂಚಿಸಿದರೆ, ನಾವು ಕೋರ್ಟ್ ಗೆ ತಲೆ ಬಾಗುತ್ತೇವೆ.  ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಯಾವಾಗಲೂ ಕಾನೂನನ್ನು ಗೌರವಿಸುತ್ತದೆ. ಆದರೆ, ಬಿಜೆಪಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದು, ಬಿಜೆಪಿಯೇ ಹೊರತು, ಕಾಂಗ್ರೆಸ್ ಅಲ್ಲ. ಬಿಜೆಪಿ ನಾಯಕರಿಂದಲೇ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಕಾನೂನು ಎತ್ತಿ ಹಿಡಿಯಬೇಕಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ …

Read More »

ಕಾಂಗ್ರೆಸ್​ ರಾಜ್ಯದ ಜನತೆಯ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ

ಪುತ್ತೂರು(ದಕ್ಷಿಣ ಕನ್ನಡ):  ಇದು ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಹೋರಾಟವಾಗಿದ್ದು, ಕಾಂಗ್ರೆಸ್​ ರಾಜ್ಯದ ಜನತೆಯ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ಮೇಕೆದಾಟಿಗೂ ಈ ಪಾದಯಾತ್ರೆಗೂ ಯಾವುದೇ ಸಂಬಂಧವಿಲ್ಲ ಎಂದರು. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಕಾಂಗ್ರೆಸ್​ ಪಾದಯಾತ್ರೆ ಮಾಡುವ ಮೂಲಕ ಮತ್ತಷ್ಟು ಕೊರೊನಾ ಹರಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ …

Read More »

ಹುಟ್ಟುಹಬ್ಬ ಆಚರಣೆ : ಕೋವಿಡ್ ನಿಯಮ ಉಲ್ಲಂಘಿಸಿದ ಜನಾರ್ದನರೆಡ್ಡಿ

ಬಳ್ಳಾರಿ: ನೂರಾರು ಸಂಖ್ಯೆಯಲ್ಲಿದ್ದ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರ ನಡುವೆ ಇಲ್ಲಿನ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾಜಿ ಸಚಿವ ಜಿ. ಜನಾರ್ದನರೆಡ್ಡಿ ಹುಟ್ಟುಹಬ್ಬದ ವೇಳೆ ಕೋವಿಡ್‌ ನಿಯಮಾವಳಿ ಉಲ್ಲಂಘಿಸಿದ್ದರೂ ಕಾನೂನು ಕ್ರಮ ಕೈಗೊಳ್ಳದೆ ಜಿಲ್ಲಾಡಳಿತ ‘ಕಣ್ಣಿದ್ದು ಕುರುಡುತನ’ ಪ್ರದರ್ಶಿಸುತ್ತಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ಸಾರಿಗೆ ಸಚಿವ ಬಿ. ಶ್ರೀರಾಮುಲು, ಬಳ್ಳಾರಿ ನಗರದ ಶಾಸಕ ಸೋಮಶೇಖರರೆಡ್ಡಿ, ಬಳ್ಳಾರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಾಲಣ್ಣ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಈ …

Read More »

ಹತ್ತು ಜನ ಪೊಲೀಸರಿಗೆ ಅಂಟಿದ ಕೊರೊನಾ

ಧಾರವಾಡ: ಜಿಲ್ಲೆಯಾದ್ಯಂತ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಶಾಲಾ ಮಕ್ಕಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸರಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಹತ್ತು ಜನ ಪೊಲೀಸರಿಗೆ ಸೋಂಕು ತಾಕಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಸದ್ಯ ಹತ್ತು ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಸೋಂಕು …

Read More »

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಪುಷ್ಪ‌ ನಮನ

ಧಾರವಾಡ : ಸ್ವಾಮಿ ವಿವೇಕಾನಂದ ಅವರ ಜಯಂತಿ ಅಂಗವಾಗಿ ಇಂದು ಧಾರವಾಡದ ವಿವೇಕಾನಂದ ವೃತ್ತದ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಬಿಜೆಪಿ ನಗರ ಘಟಕ 71ರ ವತಿಯಿಂದ ಮಾಲಾರ್ಪಣೆ ಮಾಡಿ ಪುಷ್ಪ‌ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಮಂಡಳ ಅಧ್ಯಕ್ಷ ಸುನೀಲ ಮೋರೆ, ಶ್ರೀನಿವಾಸ ಕೋಟ್ಯಾನ ರವಿ ಎಲಿಗಾರ ಮಂಜುನಾಥ ಕಮ್ಮಾರ ರಜತ ನಗರ ಸೋಮಲಿಂಗ ಹಿರೇಮನಿ …

Read More »

ವಿದ್ಯಾಕಾಶಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ: ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಕ್ಷೇತ್ರ, ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಸೇರಿದಂತೆ 1 ರಿಂದ 8ನೇ ತರಗತಿವರೆಗೆ ರಜೆ ಘೋಷಣೆ ಮಾಡಿದ್ದಾರೆ. ನಾಳೆಯಿಂದಲೇ ಈ ಆದೇಶ ಅನ್ವಯವಾಗಲಿದ್ದು, ಮುಂದಿನ ಆದೇಶದವರೆಗೂ ಶಾಲೆಗಳನ್ನು ಪುನರಾರಂಭಿಸದಂತೆ ಸೂಚನೆ ನೀಡಲಾಗಿದೆ. ಈ ತಾಲೂಕಿನಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿದ್ದು, ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. …

Read More »

ರಾಜ್ಯದ ಶಾಲೆಗಳ ಸ್ಥಿತಿಗತಿ ಕುರಿತು ಮಹತ್ವದ ಸಭೆ

ಬೆಂಗಳೂರು:  ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೀಟಿಂಗ್ ಮಾಡಲಾಗಿತ್ತು. ಬೆಂಗಳೂರಿನ ಕೆ ಆರ್ ಸರ್ಕಲ್ ನಲ್ಲಿರುವ ಸಮಗ್ರ ಶಿಕ್ಷಣದಲ್ಲಿ ಇಲಾಖೆಯಲ್ಲಿ ಶಿಕ್ಷಣ ಸಚಿವರಿಂದ ಮಹತ್ವದ ಸಭೆ ನಡೆಸಲಾಗಿತ್ತು. ಇನ್ನೂ ಸಭೆಯಲ್ಲಿ ರಾಜ್ಯದ ಡಿಡಿಪಿಐ, ಬಿಇಓಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್ ಆಗಿವೆ. ಹೀಗಾಗಿ ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ …

Read More »

ಕೊರೋನಾ ಏರಿಕೆ : ಪ್ರಧಾನಿ ನಾಳೆ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಫೆಬ್ರವರಿಯಲ್ಲಿ ಗರಿಷ್ಠ ಪ್ರಮಾಣಕ್ಕೆ ಕೊರೊನಾ 3ನೇ ಅಲೆ ಹೋಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಸಭೆ ಮಹತ್ವ ಪಡೆದಿದೆ.

Read More »

ಅಮ್ಮಿನಬಾವಿ ಗ್ರಾಮದ 11 ವಿದ್ಯಾರ್ಥಿಗಳಿಗೆ ಕೋವಿಡ್​​ ದೃಢ

ಧಾರವಾಡ: ಜಿಲ್ಲೆಯಲ್ಲಿ ಮಹಾಮಾರಿಯ ಕಾಟಾ ದಿನೇ  ದಿನೆ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಎಡಬಿಡದೆ ಕಾಡುತ್ತಿದೆ. ಈಗಷ್ಟೇ ಚೇತರಿಸಿಕೊಂಡಿದ್ದ ಜನರು ಮತ್ತೆ ಗೋಳಾಡುವಂತಾಗಿದೆ.  ಗ್ರಾಮೀಣ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಅನುದಾನಿತ ಪ್ರೌಢ ಶಾಲೆಯ ಓರ್ವ ಮಹಿಳೆ ಸೇರಿದಂತೆ 11 ವಿದ್ಯಾರ್ಥಿಗಳಲ್ಲಿ ಕೋವಿಡ್​​ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

Read More »