Breaking News

Breaking News

ಯಥಾಸ್ಥಯಾಗಿ ಉಳಿದ 9 ದಿನಗಳು ಪಾದಯಾತ್ರೆ ನಡೆಯುತ್ತದೆ : ಡಿಕೆಶಿ

ರಾಮನಗರ: ಪಾದಯಾತ್ರೆ ಮಾಡಬಾರದು ಎಂದು ನೋಟೀಸ್ ನೀಡಿದ್ದು ನಿಜ. ಅದು ಕಾನೂನು ಬದ್ಧ ನೋಟೀಸ್ ಅಲ್ಲ. ಸೆಕ್ಷನ್ 144 ಅನ್ನು ಯಾವ ರೀತಿ ಜಾರಿಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಿದ್ದರಾಮಯ್ಯ ಅವರು ಆರೋಗ್ಯ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆ ಬರುವುದಾಗಿ ತಿಳಿಸಿದರು. ನಾನೇ ಅವರಿಗೆ ವಿಶ್ರಾಂತಿ ಪಡೆದು ನಾಳೆ ಬರುವಂತೆ ಹೇಳಿದೆ. ಉಳಿದ 9 ದಿನಗಳ ಪಾದಯಾತ್ರೆಗೆ ಸರ್ಕಾರ ಅವಕಾಶ ನೀಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, …

Read More »

ಪ್ರಧಾನಿ ಅವರಿಂದ ಜ.12ರಂದು 11 ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆ

ನವದೆಹಲಿ: ತಮಿಳುನಾಡಿನಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಜನವರಿ 12) 11 ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಚೆನ್ನೈನಲ್ಲಿ ಶಾಸ್ತ್ರೀಯ ತಮಿಳು ಭಾಷಾ ಕೇಂದ್ರದ ನೂತನ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ವರದಿ ತಿಳಿಸಿದೆ. ಪ್ರಧಾನಮಂತ್ರಿ ಕಚೇರಿ ಬಿಡುಗಡೆಗೊಳಿಸಿದ ಪತ್ರಿಕಾ ಪ್ರಕಟಣೆ ಪ್ರಕಾರ, ಸುಮಾರು 4,000 ಕೋಟಿ ರೂಪಾಯಿ ಅಂದಾಜು ವೆಚ್ಚದ ನೂತನ ಮೆಡಿಕಲ್ ಕಾಲೇಜುಗಳನ್ನು ತಮಿಳುನಾಡಿನಲ್ಲಿ ಕಟ್ಟಲಾಗಿದೆ. ಇದರಲ್ಲಿ 2,145 ಕೋಟಿ ರೂಪಾಯಿ …

Read More »

ಕೋವಿಡ್ ಪಾಸಿಟಿವ್ ಇರುವ ಅಧಿಕಾರಿಯನ್ನು ನನ್ನ ಕಡೆ ಕಳಸಿದ್ದಾರೆ : ಡಿಕೆಶಿ

ರಾಮನಗರ: ಪಾದಯಾತ್ರೆ ನಿಲ್ಲಿಸಲು ಸರ್ಕಾರ ದೊಡ್ಡ ಸಂಚು ರೂಪಿಸಿದೆ. ಇದರ ಭಾಗವಾಗಿ ಶಿವಕುಮಾರ್ ಗೆ ಕೋವಿಡ್ ಪಾಸಿಟಿವ್ ಮಾಡಿಸಲು ಬೇಕಂತಲೇ ಆ ಅಧಿಕಾರಿಯನ್ನು ಕಳುಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ಪಾದಯಾತ್ರೆ ಮಾರ್ಗ ಮಧ್ಯೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ರಾಜ್ಯ ಸರ್ಕಾರ ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದು, ಕೋವಿಡ್ ಪಾಸಿಟಿವ್ ಇರುವ ಅಧಿಕಾರಿಯನ್ನು ಬೇಕಂತಲೇ ನನ್ನ ಪರೀಕ್ಷೆಗೆ ಕಳುಹಿಸಿದೆ. ಇದರ ಹಿಂದೆ ಆರೋಗ್ಯ ಹಾಗೂ ಗೃಹ ಸಚಿವರ …

Read More »

ಪಾದಯಾತ್ರೆಯುಂದಾಗಿ ಜನರಿಗೆ ನೀರ ಸಿಗುವುದಿಲ್ಲ ಕೋವಿಡ್ ಸಿಗುತ್ತದೆ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಕೋವಿಡ್ ಹೆಚ್ಚುವ ಅಧಿಕಾರವನ್ನು ಸೋನಿಯಾ ಗಾಂಧಿ ಕೊಟ್ರಾ? ಕಾಂಗ್ರೆಸ್ ನವರ ಈ ಪಾದಯಾತ್ರೆಯಿಂದ ಜನರಿಗೆ ಒಳ್ಳೆಯದಾಗುವುದಿಲ್ಲ. ನೀರು ಸಿಗಲ್ಲ ಆದರೆ ಕೋವಿಡ್ ಸಿಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ಆಗುವ ಭ್ರಮೆಯಲ್ಲಿ ರಾಜ್ಯದ ಜನರಿಗೆ ಕೋವಿಡ್ ಹರಡುವ ಪ್ರಯತ್ನ ಒಳ್ಳೆಯದು ಮಾಡಲ್ಲ. ಮೊದಲನೆಯದಾಗಿ ನೀವು …

Read More »

ಕೇಂದ್ರ ರಕ್ಷಣಾ ಸಚಿವ ರಾಜನಾತ್ ಸಿಂಗ್ ಗೆ ಕೊರೋನಾ ಪಾಸಿಟಿವ್

ದೆಹಲಿ : ಕೇಂದ್ರ ರಕ್ಷಣಾ ಸಚಿವ ರಾಜನಾತ್ ಸಿಂಗ್  ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕುರಿತಂತೆ ಇಂದು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು, ನನಗೂ ಕೊರೋನಾ ಸೋಂಕು ಪತ್ತೆ ಪರೀಕ್ಷೆಯಿಂದ ಪಾಸಿಟಿವ್ ಎಂದು ದೃಢಪಟ್ಟಿದೆ. ಇದರಿಂದಾಗಿ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದೇನೆ. ನನ್ನ ಸಂಪರ್ಕಿತರು ಕೊರೋನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Read More »

ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಗೆ ಭಾಗಿಯಾಗುವುದಿಲ್ಲಾ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯೂ ರಾಜ್ಯದಲ್ಲಿ ಜೋರಾಗಿ ಸದ್ದನ್ನು ಮಾಡುತ್ತಿದೆ. ನಿನ್ನೆ ವಿಕೆಂಡ್ ಲಾಕ್ ಇದ್ದರೂ ಕೂಡಾ ಪಾದಯಾತ್ರೆಯನ್ನು ಮುಂದುವರೆಸಲಾಗಿತ್ತು. ಆದರೇ ಇದೀಗ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ ಇಂದು ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಇಂದು ಅವರು ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ. ರವಿವಾರ ಆರಂಭದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನಂತರ ಜ್ವರ ಕಾಣಿಸಿಕೊಂಡ ಕಾರಣ ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರೆಳಿದ್ದರು.

Read More »

ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಬಿಜೆಪಿ ಹೊಸ ಪ್ಲಾನ್ : ಸಿಎಂ ವಿರುದ್ಧ ಗುಡಿಗಿದ ಡಿಕೆಶಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಕಳುಹಿಸಿದ್ದ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಕೋವಿಡ್ ಟೆಸ್ಟ್ ನಿರಾಕರಿಸಿ, ಆರೋಗ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳದೇ ಬಾಯಿಗೆ ಬಂದಂತೆ ಮಾತನಾಡಿರುವುದು ಡಿಕೆಶಿ ಕಲ್ಚರ್ ನ್ನು ತೋರಿಸುತ್ತದೆ ಎಂದಿದ್ದಾರೆ. ಮತ್ತೆ ಮುಂದುವರೆದು ಮಾತನಾಡಿದ ಅವರು,ನನ್ನನ್ನು ನೋಡಿದರೆ ಕೊರೊನಾ ಲಕ್ಷಣಗಳು ಇದೆ ಅನಿಸುತ್ತಿದೆಯೇ ? ನನಗೆ ಕೋವಿಡ್ ಟೆಸ್ಟು …

Read More »

ಸಕಲ ಸರ್ಕಾರಿ ಗೌರವದೊಂದಿಗೆ ಚಂಪಾ ಅಂತ್ಯ ಕ್ರಿಯೆ

ಬೆಂಗಳೂರು: ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) 83 ವರ್ಷ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅಲೇ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು. ಚಂಪಾ ಎಂದೇ ಪ್ರಸಿದ್ಧರಾದ ಇವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಸ್ವತಂತ್ರ ಚಿಂತನೆಯ ಲೇಖನದಲ್ಲಿ ಮೊನಚು ಇರುತ್ತಿತ್ತು. …

Read More »

ಬೂಸ್ಟರ್ ಡೋಸ್ ವಿತರಣೆಗೆ ಚಾಲನೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಈ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದಕ್ಕಾಗಿ ಶುಕ್ರವಾರದಿಂದಲೇ ಕೋವಿನ್​ ವೆಬ್​​​​​ಸೈಟ್​ನಲ್ಲಿ ನೋಂದಣಿ ಕೂಡಾ ಆರಂಭವಾಗಿದೆ. ಡಿಸೆಂಬರ್​25 ರಂದು ದಿಢೀರ್​ ಆಗಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, …

Read More »

ಬೂಸ್ಟರ್ ಡೋಸ್ ಹೆಸರಲ್ಲಿ ಮೋಸ

ನವದೆಹಲಿ :ವಂಚಕರು ಹೊಸ ರೀತಿಯಲ್ಲಿ ಜನರನ್ನ ಮೋಸಗೊಳಿಸಲು ಯತ್ನಿಸುತ್ತಿದ್ದಾರೆ. ಸಧ್ಯ ಕೊರೊನಾದ 3ನೇ ಅಲೆಯಲ್ಲಿ, ಸೈಬರ್ ದರೋಡೆಕೋರರು ಬೂಸ್ಟರ್ ಡೋಸ್ ಹೆಸರಿನಲ್ಲಿ ಮೋಸ ಮಾಡಲು ಪ್ರಾರಂಭಿಸಿದ್ದಾರೆ.ದೇಶದಲ್ಲಿ ಸೈಬರ್ ವಂಚನೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಬೂಸ್ಟರ್ ಡೋಸ್ ಕೊಡಿಸುವ ಹೆಸರಿನಲ್ಲಿ ಪುಂಡರು ಜನರನ್ನ ಬಲಿಪಶುಗಳನ್ನಾಗಿಸಲು ಮಾಡುತ್ತಿದ್ದಾರೆ. ಅವ್ರು ಬೂಸ್ಟರ್ ಡೋಸ್‌ಗಾಗಿ ನೋಂದಾಯಿಸುವ ನೆಪದಲ್ಲಿ ಜನರಿಗೆ ಕರೆ ಮಾಡಿ OTP ಸಂಖ್ಯೆಗಳನ್ನ ಕೇಳುತ್ತಾರೆ ಮತ್ತು ಅದರ ಮೂಲಕ ಅವ್ರು ತಮ್ಮ ಬ್ಯಾಂಕ್ ಖಾತೆಗಳನ್ನ …

Read More »