BigTv News
June 23, 2026
Breaking News
ವಿಯೆಟ್ನಾಂನ ವಿನ್ ಸನ್ ವಿಲೇಜ್ ಗ್ರಾಮವನ್ನು “ಕೋಬ್ರಾ ವಿಲೇಜ್” ಎಂದು ಕರೆಯಲಾಗುತ್ತದೆ. ಇಲ್ಲಿ 600ಕ್ಕೂ ಹೆಚ್ಚು ಕುಟುಂಬಗಳು ನಾಗರಹಾವು ಸಾಕಾಣಿಕೆಯನ್ನು ಜೀವನೋಪಾಯವನ್ನಾಗಿ ಮಾಡಿಕೊಂಡಿವೆ. ಗ್ರಾಮಸ್ಥರು ಸಾವಿರಾರು ನಾಗರಹಾವುಗಳನ್ನು ಸಾಕಿ, ಅವುಗಳ ಮಾಂಸ, ಚರ್ಮ, ಮೊಟ್ಟೆ ಹಾಗೂ ವಿಷವನ್ನು ಮಾರಾಟ ಮಾಡುತ್ತಾರೆ. ಈ ಉದ್ಯಮದಿಂದ ಗ್ರಾಮಕ್ಕೆ ಉತ್ತಮ ಆದಾಯ ದೊರೆಯುತ್ತದೆ. ಆದರೆ ವಿಷಕಾರಿ ಹಾವುಗಳೊಂದಿಗೆ ಕೆಲಸ ಮಾಡುವುದು ಅಪಾಯಕಾರಿಯಾಗಿದೆ. ಹಾವು ಕಡಿತ ಮತ್ತು ರೋಗ ಹರಡುವ ಭೀತಿ ಇದ್ದರೂ, ತಲೆಮಾರುಗಳಿಂದ ಈ …
Read More »
BigTv News
June 23, 2026
Breaking News
ಸಿಲಿಕಾನ್ ಸಿಟಿಯಲ್ಲಿ ಎಟಿಎಂ ಗ್ರಾಹಕರನ್ನು ಗುರಿಯಾಗಿಸಿಕೊಂಡು ವಂಚನೆಗೆ ಇಳಿದಿದ್ದ ಇಬ್ಬರು ಖದೀಮರಿಗೆ ಸ್ಥಳೀಯ ಸಾರ್ವಜನಿಕರೇ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿ ವೃತ್ತದ ಬಳಿ ನಡೆದಿದೆ.ಇಲ್ಲಿನ ರಾಜಕುಮಾರ್ ಪ್ರತಿಮೆ ಬಳಿ ಇರುವ ಎಟಿಎಂ ಕೇಂದ್ರಗಳಲ್ಲಿ ಹಣ ಡ್ರಾ ಮಾಡಲು ಬರುವ ಸಾರ್ವಜನಿಕರನ್ನು, ಅದರಲ್ಲೂ ವಿಶೇಷವಾಗಿ ವಯಸ್ಸಾದವರನ್ನು ಮತ್ತು ಕಾರ್ಡ್ ಬಳಸಲು ಸರಿಯಾಗಿ ತಿಳಿಯದವರನ್ನು ಈ ಇಬ್ಬರು ಯುವಕರು ವಂಚಿಸಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಸಹಾಯ ಮಾಡುವ ನೆಪದಲ್ಲಿ ಎಟಿಎಂ …
Read More »
BigTv News
June 22, 2026
Breaking News
ವಿಜಯಪುರ ಜಿಲ್ಲೆಯ ಭೀಮಾತೀರ ಪ್ರದೇಶದಲ್ಲಿ ನಡೆದಿದ್ದ ಆರು ಮಂದಿಯ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ಚಂದ್ರಕಾಂತ್ ತಳವಾರ್ (29) ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಬಂಧನಕ್ಕೊಳಗಾಗಿದ್ದಾನೆ. ಇಟ್ಟಿಂಗಿಹಾಳ ಗ್ರಾಮದ ಬಳಿ ಅಡಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಗಾಳಿಯಲ್ಲಿ ಎಚ್ಚರಿಕೆ ಗುಂಡು ಹಾರಿಸಿದರೂ ಶರಣಾಗದ ಕಾರಣ, ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡು ಆರೋಪಿಯ ಬಲಗಾಲಿಗೆ ತಗುಲಿದೆ. …
Read More »
BigTv News
June 22, 2026
Breaking News
ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಬಂಗಾರ ಬಿಡಿಸಿಕೊಳ್ಳುವ ವಿಚಾರಕ್ಕೆ ನಡೆದ ಜಗಳ ಶೂಟೌಟ್‌ಗೆ ತಿರುಗಿದ್ದು, ಜ್ಯುವೆಲ್ಲರಿ ಅಂಗಡಿ ಮಾಲೀಕ ಮೌನೇಶ್ ಪತ್ತಾರ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಘಟನೆಯಲ್ಲಿ ರೈತರಾದ ಸಿದ್ದಪ್ಪ ಮತ್ತು ನಿಂಗಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶ್ರದ್ಧಾ ಬೈಯಪ್ಪನವರ ಎಂಬ ಬಾಲಕಿಗೂ ಗುಂಡು ತಗುಲಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡು ಹಾರಿಸಿದ ಬಳಿಕ ಆರೋಪಿ ಪರಾರಿಯಾಗಿದ್ದು, ಗರಗ ಪೊಲೀಸರು ಪ್ರಕರಣ ದಾಖಲಿಸಿ …
Read More »
BigTv News
June 22, 2026
Breaking News
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತರ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡ ಇಬ್ಬರ ವಿರುದ್ಧ ಚಿಕ್ಕಮಗಳೂರಿನ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಚಿಕ್ಕಮಗಳೂರು ಮಾರ್ಕೆಟ್ ರಸ್ತೆಯ ತಮಿಳು ಕಾಲನಿಯ ಜೀನತ್ ಬಾನು ಎಂಬುವರು ಅಪ್ರಾಪ್ತ ವಯಸ್ಸಿನ ಗಂಡು ಮಗುವಿನ ಖಾಸಗಿ ಅಂಗಗಳನ್ನು ತೋರಿಸುತ್ತಾ ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿರುವ 17 ಸೆಕೆಂಡ್ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಸಿಇಎನ್ ಪೊಲೀಸರು ಜೀನತ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ …
Read More »
BigTv News
June 22, 2026
Breaking News
ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಬೆದರಿಸಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ನಯಿಂ (20) ಮತ್ತು ಸೈಯದ್ ವಸೀಂ (26) ಎಂದು ಗುರುತಿಸಲಾಗಿದೆ. ಅಮೃತಹಳ್ಳಿಯ ಕೃಷ್ಣಸ್ವಾಮಿ (70) ಅವರಿಗೆ ಚಾಕು ತೋರಿಸಿ ನಗದು ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಡಿಜೆ ಹಳ್ಳಿ ಮಸೀದಿ ಬಳಿ ಗಸ್ತಿನ ವೇಳೆ ಇಬ್ಬರನ್ನು ವಶಕ್ಕೆ …
Read More »
BigTv News
June 22, 2026
Breaking News
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕರಿಕಲ್ ಗ್ರಾಮದ 70 ವರ್ಷದ ರಾಜೇಸಾಬ್ ವಾಲಿಕಾರ್ ಅವರು ಪೊಲೀಸ್ ಕಸ್ಟಡಿಯಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಅವರನ್ನು ನಾರಾಯಣಪುರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ವಿಚಾರಣೆ ವೇಳೆ ಕರ್ತವ್ಯದಲ್ಲಿದ್ದ ಎಎಸ್‌ಐ ಸಂಗಪ್ಪ ಅವರು ರಾಜೇಸಾಬ್ ಅವರಿಗೆ ದೈಹಿಕ ಹಿಂಸೆ ನೀಡಿದ್ದಾರೆ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ಹಲ್ಲೆಯಿಂದಲೇ ಅವರು ಠಾಣೆಯಲ್ಲೇ ಪ್ರಜ್ಞೆ ತಪ್ಪಿ …
Read More »
BigTv News
June 22, 2026
Breaking News
ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಹೆಣ್ಣು ಮಗುವನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 12 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಗು ಕಾಣೆಯಾದ ಬಳಿಕ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಮನೆ ಸಮೀಪದ ಹೊಲದಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ. ವಿಚಾರಣೆ ವೇಳೆ ಬಾಲಕ ತಪ್ಪೊಪ್ಪಿಕೊಂಡಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ …
Read More »
BigTv News
June 22, 2026
Breaking News
ಉಡುಪಿ ಜಿಲ್ಲೆಯಲ್ಲಿ ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ ಹಾಗೂ ಎಸ್. ಪ್ರಕಾಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಲ್ಲದ ದಂಪತಿಗೆ ಆಸ್ಪತ್ರೆ ಮೂಲಕ ಹೆಣ್ಣು ಮಗುವನ್ನು ನೀಡಲಾಗಿದ್ದು, ಮಗುವಿನ ಜನನ ಪ್ರಮಾಣ ಪತ್ರ ಸೇರಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
BigTv News
June 22, 2026
Breaking News
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ ಮೂರು ಮಹಡಿಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಕಟ್ಟಡದಲ್ಲಿ ಕೋಚಿಂಗ್ ಸೆಂಟರ್, ಲೈಬ್ರರಿ ಹಾಗೂ ಇತರೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದವು. ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದ ವಿದ್ಯಾರ್ಥಿಗಳು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಪರಿಣಾಮ ಹಲವರಿಗೆ ಗಂಭೀರ ಗಾಯಗಳಾಗಿವೆ. ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. …
Read More »