Breaking News

Breaking News

ಎಕ್ಸಾಂ ಹಾಲ್‍ನಲ್ಲಿ ಮೊಬೈಲ್ ಬಳಸಿದ್ದ ಇಬ್ಬರು ಶಿಕ್ಷಕರ ಅಮಾನತು

ಭುವನೇಶ್ವರ: ಒಡಿಶಾದ ಜಾಜ್‍ಪುರ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆ ವೇಳೆ ಕೊಠಡಿಯಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ ಇಬ್ಬರು ಇನ್‌ವಿಜಿಲೇಟರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ಎರಡು ವಿಭಿನ್ನ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಶಿಕ್ಷಕರು ಮೊಬೈಲ್ ಬಳಸುತ್ತಿರುವುದನ್ನು ತಪಾಸಣೆ ವೇಳೆ ಗಮನಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ರಂಜನ್ ಗಿರಿ ತಕ್ಷಣ ಇಬ್ಬರನ್ನು ಅಮಾನತುಗೊಳಿಸಿದ್ದಾರೆ. ಎರಡು ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಮತ್ತು ಉಪ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಕೇಂದ್ರದ …

Read More »

ಬಣ್ಣದ ಲೋಕಕ್ಕೆ ಮೇಘನಾ ಕಮ್ ಬ್ಯಾಕ್

😍 ಬೆಂಗಳೂರು: ಚಿರು ಸರ್ಜಾ ನಿಧನದ ಬಳಿಕ, ಮಗ ರಾಯನ್ ಜನಿಸಿದ ಮೇಲೆ ಮೇಘನಾ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು.ಆದರೇ ಮತ್ತೇ ಜೀವನದಲ್ಲಿ ಹೊಸ ಹೆಜ್ಜೆಯನ್ನು ಇಡಲು ರೆಡಿ ಆಗಿದ್ದಾರೆ. ಈ ರಿಯಾಲಿಟಿ ಶೋನಲ್ಲಿ ಈ ವಾರ ಮೇಘನಾ ತೀರ್ಪುಗಾರರಾಗಿ ಭಾಗಿಯಾಗಲಿದ್ದಾರೆ. ಇದು ಮೇಘನಾ ಪಾಲಿಗೆ ಮೊದಲ ಕಿರುತೆರೆ ಡ್ಯಾನ್ಸ್ ಶೋ. ಆದರೆ ಬಹಳ ದಿನಗಳ ನಂತರ ಬಣ್ಣದ ಲೋಕಕ್ಕೆ ಮರಳಿದ ಮೇಘನಾರನ್ನು ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಕಲರ್ಸ್ ಕನ್ನಡ …

Read More »

ಕಳೆದ ಒಂದೆ ದಿನದಲ್ಲಿ 377 ಒಮಿಕ್ರಾನ್ ಪ್ರಕರಣ ಪತ್ತೆ

ಬೆಂಗಳೂರು: ಕೋವಿಡ್ ಹೆಚ್ಚಾಗುತ್ತಿದ್ದುದರಿಂದ ಹಿನ್ನಲೆ ಮತ್ತಷ್ಟು ಜನರಿಗೆ ಸೋಂಕು ತಗಲುತ್ತಿದೆ. ಕಳೆದ ಒಂದು ದಿನದಲ್ಲಿ 377 ಒಮಿಕ್ರಾನ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3007ಕ್ಕೇರಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರ ಒಂದೇ ದಿನ 1199 ಸೋಂಕಿತರು ಗುಣಮುಖಿತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Read More »

ಆರ್.ಅಶೋಕ ಗೆ ಕೋವಿಡ್ ದೃಢ

ಬೆಂಗಳೂರು: ಕೋವಿಡ್ ಹೆಚ್ಚಾಗುತ್ತಿದ್ದುದರಿಂದ ಹಿನ್ನಲೆ ಮತ್ತಷ್ಟು ಜನರಿಗೆ ಸೋಂಕು ತಗಲುತ್ತಿದೆ.ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಶೀತ, ಜ್ವರದಿಂದ ಬಳಲುತ್ತಿರುವ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಲಾಲ್‌ ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ರದ್ದು

ಬೆಂಗಳೂರು: ಲಾಲ್‌ ಬಾಗ್‌ನಲ್ಲಿ ನಡೆಯುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಬೆಂಗಳೂರು ನಗರ ಮತ್ತು ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದಈ ಹಿನ್ನಲೆಯಲ್ಲಿ  ಈ ವರ್ಷವೂ ರದ್ದಾಗಿದೆ. ಕರ್ನಾಟಕ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದ ಬಳಿಕ ತೋಟಗಾರಿಕಾ ಇಲಾಖೆ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಫಲಪುಷ್ಪ ಪ್ರದರ್ಶನ ರದ್ದುಗೊಳಿಸಿದೆ. ಸತತ ಎರಡು ವರ್ಷಗಳಿಂದ ಫಲಪುಷ್ಪ ಪ್ರದರ್ಶನ ನಡೆಯುತ್ತಿಲ್ಲ.

Read More »

ರೂಪಾಂತರಿ ಓಮಿಕ್ರಾನ್ : ಮೈಸೂರು ಹೈ ಅಲರ್ಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೋವಿಡ್ ಏರಿಕೆ ಆಗಿದ್ದು ಆತಂಕ ಸೃಷ್ಟಿಸಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಕೋವಿಡ್ ರೂಪಾಂತರಿ ಓಮಿಕ್ರಾನ್ ಮಣಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುತ್ತಿದೆ.ಕರ್ನಾಟಕದ ರಾಜಾಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ.. ಉದ್ಯೋಗ ಹಾಗೂ ಶಿಕ್ಷಣಕ್ಕೆ ಮೈಸೂರಿನ ಬಹುತೇಕರು ಬೆಂಗಳೂರನ್ನು ಆಶ್ರಯಿಸಿದ್ದಾರೆ. ಹೀಗಾಗಿ ರೋಗ ಲಕ್ಷಣ ರಹಿತರು ಏನಾದರೂ ನಗರದಲ್ಲಿ ಓಡಾಡಿದರೆ ಇದರಿಂದ ಸೋಂಕು ಮತ್ತಷ್ಟು ಜನರಿಗೆ ಹರಡುವ ಸಾಧ್ಯತೆ ಇದೆ.

Read More »

ಕಂದಾಯ ಸಚಿವ ಆರ್‌ ಅಶೋಕಗೆ ಕೊವಿಡ್‌ ದೃಢ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಶೋಕ್ ಅವರಿಗೆ ಕೊರೊನಾ ಸೋಂಕು ತಗಲಿರುವ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಗುರುವಾರ ಇದ್ದ ಬಿಜೆಪಿ ಕ್ಯಾಬಿನೆಟ್ ಸಭೆಗೂ ಸಹ ಅಶೋಕ್ ಅವರು ಗೈರಾಗಿದ್ದರು. ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜನ ಸಾಮಾನ್ಯರಿಗೆ ಕೊರೊನಾ ಬಂದರೆ …

Read More »

ಎಲ್ಲಾ ರಾಜ್ಯದ ಸಿಎಂ ಜೊತೆ ಪ್ರಧಾನಿ ಸಭೆ

ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.

Read More »

ವೇಗವಾಗಿ ಹರಡುತ್ತಿದೆ ಒಮಿಕ್ರಾನ್ ಸೋಂಕು : ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದ್ದು, ರಾಜ್ಯದ 5 ಜಿಲ್ಲೆಗಳಿಗೆ ಕಂಟಕವಾಗಲಿದೆ,ಕೊರೊನಾ 3 ನೇ ಅಲೆಯಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. 2 ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ, ಮೈಸೂರು, ಮಂಡ್ಯ, ಉಡುಪಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ …

Read More »

ದಟ್ಟವಾದ ಮಂಜು : ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ

ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಜನವರಿ 11ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ, ಇನ್ನುಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಬಿಸಿಲಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 28.0 ಡಿಗ್ರಿ …

Read More »