Breaking News

Breaking News

ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

ಚಂಡೀಗಢ: ಭದ್ರತಾ ಸಿಬ್ಬಂದಿ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡ ಘಟನೆ ನಡೆದಿದೆ. ಪ್ರತಿಭಟನೆ ಕಾರಣದಿಂದಾಗಿ ಪಿಎಂ ಮೋದಿ ಅವರ ಸುಗಮ ಸಂಚಾರಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಬಟಿಂಡಾದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಪ್ರಧಾನಿ ಮೋದಿ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿ ಪಂಜಾಬ್ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ. ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಬಟಿಂಡಾಗೆ …

Read More »

ಕಾಂಗ್ರೇಸ್ಸಿನವರಿಗೆ ಪ್ರತ್ಯೇಕ ನಿಯಮ ರೂಪಿಸಿಲ್ಲ-ಎಲ್ಲರೂ ಕೋವಿಡ್‌ ನಿಯಮ ಪಾಲಿಸಬೇಕು-ಅರಗ ಜ್ಞಾನೇಂದ್ರ

ಶಿವಮೊಗ್ಗ : ಕೊರೊನಾ ಟಫ್ ರೂಲ್ಸ್ ಜನ ಸಾಮಾನ್ಯರಿಗೆ ಅನ್ವಯವಾಗುವಂತೆ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಸಹ ಪ್ರತಿ ದಿನ ಸಾವಿರಾರ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿವೆ. ರಾಜ್ಯ ಸರ್ಕಾರ ತಜ್ಞರ ಸಲಹೆ ಪಡೆದು ಕಠಿಣ ನಿಯಮ ಜಾರಿ ಮಾಡಲಾಗಿದೆ. ನೈಟ್ ಕಫ್ರ್ಯೂ …

Read More »

ಹಾಡಹಗಲೇ ಮನೆ ಕೀಲಿ ಮುರಿದು ಕಳ್ಳತನ-ಆದರ್ಶ ಲೇಔಟ್‌ನಲ್ಲಿ ಘಟನೆ

ಹುಬ್ಬಳ್ಳಿ: ಹಾಡಹಗಲೇ ಕೇಶ್ವಾಪುರ ಆದರ್ಶ ಲೇಔಟ್‌ನ ಮನೆಯೊಂದರ ಕೀಲಿ ಮುಂದು 45 ಗ್ರಾಂ ಚಿನ್ನಾಭರಣ ಹಾಗೂ 6,400 ರೂ. ನಗದು ಕಳವು ಮಾಡಿರುವ ಘಟನೆ ಇತ್ತೀಚೆಗೆ ನಡೆದಿದೆ. ರೈಲ್ವೆ ಉದ್ಯೋಗಿ ಪುಷ್ಪಲತಾ ಮೋಚರಲ ಡಿ .28 ರಂದು ಮನೆಗೆ ಕೀಲಿ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದಾಗ ಕಳವಾಗಿದೆ . ಕುರಿತು ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ರಾಮನಗರಕ್ಕೆ ನಿಮ್ಮ ಕೊಡುಗೆ ಏನು?: ಡಿಕೆ ಸಹೋದರರಿಗೆ ಅಶ್ವತ್ಥನಾರಾಯಣ ಪ್ರಶ್ನೆ

ಬೆಳಗಾವಿ: ರಾಮನಗರದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳೇನು ಎನ್ನುವ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್ ಉತ್ತರಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸವಾಲು ಹಾಕಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಇದುವರೆಗೂ ಮನಬಂದಂತೆ ಮತ್ತು ಏನು ಮಾಡಿದರೂ ಜಯಿಸಿಕೊಳ್ಳುತ್ತೇವೆ ಎನ್ನುವಂತೆ ಅವರು ನಡೆದುಕೊಂಡು ಬಂದಿದ್ದಾರೆ. ನಮ್ಮ ತಾಳ್ಮೆಯ ಮಿತಿ ಮೀರುವಂತೆ ಮಾಡಿದ್ದಾರೆ. ಆದ್ದರಿಂದ ಬಹಳ ಸ್ಪಷ್ಟವಾಗಿ ಅವರಿಗೆ ಸಂದೇಶ ಕೊಡಬೇಕಾಗಿತ್ತು, …

Read More »

ಆಟೋ – ಕಾರ್‌ ನಡುವಿನ ಅಪಘಾತದಲ್ಲಿ ಮಹಿಳೆ, ಮಗು ಸಾವು

ಚಿತ್ರದುರ್ಗ: ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಮಗು ಹಾಗೂ ಮಹಿಳೆ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಈ ಘಟನೆ ಹೊಸದುರ್ಗ ತಾಲೂಕಿನ ನೀರಗುಂದ ಪೀಲಾಪುರ ಗೇಟ್ ಹತ್ತಿರ ನಡೆದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ತರೀಕೆರೆ ತಾಲೂಕಿನ ತೀರು ಮುರುಡಿ ದೇವಸ್ಥಾನಕ್ಕೆ ತೆರಳಿ, ಜವಳ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಬರುತ್ತಿತ್ತು. ಈ ಸಂದರ್ಭದಲ್ಲಿಯೇ ಆಟೋಗೆ ಡಿಕ್ಕಿ ಹೊಡೆದಿದೆ. …

Read More »

ಕುಡಿದ ಮತ್ತಿನಲ್ಲಿ ಓರ್ವ ವ್ಯಕ್ತಿಯ ಬರ್ಬರ ಹತ್ಯೆ..!

ವಿಜಯಪುರ : ವ್ಯಕ್ತಿಯೊರ್ವನನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ .. ಇಂಡಿ ಪಟ್ಟಣದ ವಿಜಯಪುರ ರಸ್ತೆಯ ಅಮೃತ ಡಾಭಾ ಹತ್ತಿರ ಸೊಲ್ಲಾಪುರ ನಿವಾಸಿ ನಿತಿನ್ ಸಂತೋಷ ಮಾಷಾಳಕರ ಕೊಲೆಯಾದ ದುರ್ದೈವಿ , ನಿತೀನ್ ಇಂಡಿಯ ಮಾವನ ಮನೆಗೆ ಬಂದಿದ್ದ ಎನ್ನಲಾಗಿದ್ದು ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿ ಕಿರಿಕ್ ಮಾಡಿದ್ದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ , ಇನ್ನೂ ಮಾತಿನಲ್ಲಿ …

Read More »

ಒಮಿಕ್ರಾನ್ ಹೆಚ್ಚಳವಾದರೂ ಅಂತರರಾಜ್ಯ ಗಡಿ ಬಂದ್ ಇಲ್ಲ: ಸಚಿವ ಡಾ.ಅಶ್ವತ್ಥನಾರಾಯಣ

ಬೆಳಗಾವಿ: ಕೊರೊನ ಮತ್ತು ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ …

Read More »

ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ, ನಾವು ಜನರನ್ನು ಉಳಿಸುವ ಕೆಲಸ ಮಾಡುತ್ತೇವೆ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿಯೇ ತೀರುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ. ನಾವು ಜನರನ್ನ ಉಳಿಸುವ ಕೆಲಸವನ್ನೂ‌ ಮಾಡ್ತೇವೆ. ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. ಸ್ಯಾನಿಟೈಸ್ ಮಾಡಿಕೊಳ್ಳಬೇಕು, ಅಂತರ ಕಾಯ್ದುಕೊಳ್ಳಬೇಕು ಎಂಬ ಕೊರೋನಾ ನಿಯಮ ಪಾಲಿಸುತ್ತೇವೆ ಎಂದರು. ವೀಕೆಂಡ್ ಲಾಕ್ ಡೌನ್ ಇದ್ದರೂ ಜನವರಿ 9ರಿಂದ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ, ಇದರಲ್ಲಿ ಯಾವುದೇ ಬದಲಾವಣೆ …

Read More »

‘ವಿಧಾನಸೌಧ, ವಿಕಾಸಸೌಧ, MS ಕಟ್ಟಡ’ಗಳಿಗೆ ‘ಸಾರ್ವಜನಿಕರ ಪ್ರವೇಶ’ಕ್ಕೆ ನಿರ್ಬಂಧ

ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳದ ಕಾರಣದಿಂದಾಗಿ, ವಿಧಾನಸೌಧ ವಿಕಾಸಸೌಧಹಾಗೂ ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. 2 ಡೋಸ್ ಕೊರೋನಾ ಲಸಿಕೆ ಪಡೆದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕೊರೋನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕಾರಣದಿಂದಾಗಿ ರಾಜ್ಯ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ವಿಧಾನಸೌಧ, …

Read More »

ಆಂಧ್ರಪ್ರದೇಶದ ಶಾಲೆಯಲ್ಲಿ ಕೊರೋನಾ ಸ್ಪೋಟ, 60 ರಲ್ಲಿ 19 ವಿದ್ಯಾರ್ಥಿಗಳಿಗೆ ಸೋಂಕು..!

ಆಂಧ್ರಪ್ರದೇಶ: ಕೊರೋನಾ ನಿಯಂತ್ರಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರಗಳಿಗೆ ಶಾಲೆಗಳು ಮತ್ತು ಕಾಲೇಜುಗಳು ತಲೆನೋವಾಗಿ ಪರಿಣಮಿಸಿದೆ‌. ಹೀಗಾಗಿಯೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನ ಬಂದ್ ಮಾಡಲಾಗಿದೆ‌. ಶಾಲೆಗಳು ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿವೆ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಆಂಧ್ರ ಪ್ರದೇಶದ ಶಾಲೆಯೊಂದರಲ್ಲಿ 19 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ‌. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕೋತವಲಸದಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 19 ವಿದ್ಯಾರ್ಥಿಗಳು ಮತ್ತು ಒಬ್ಬ ಶಿಕ್ಷಕರಲ್ಲಿ ಸೋಂಕು …

Read More »