BigTv News
January 4, 2022
Breaking News, ಕರ್ನಾಟಕ, ಜಿಲ್ಲೆ, ರಾಜಕೀಯ ಸುದ್ದಿ
ಕೊಪ್ಪಳ: ಕೊರೋನಾ ಮತ್ತು ಓಮಿಕ್ರಾನ್ ಉಲ್ಬಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಂದ್ ಮಾಡುವುದಾಗಿ ಚರ್ಚೆ ಮಾಡಲಾಗುತ್ತಿದ್ದು, ಅಂಗನವಾಡಿ ಬಂದ್ ಮಾಡುವ ಪ್ರಸ್ತಾಪ ಇಲ್ಲ. ಯಾವುದೇ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ತಜ್ಞರ ಸಮಿತಿ ಅಭಿಪ್ರಾಯ, ಸಲಹೆ ಪಡೆಯಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವ್ಯಾರೂ ವೈದ್ಯರು, ವಿಜ್ಞಾನಿಗಳಲ್ಲ. ತಜ್ಞರ ಸಮಿತಿ ನೀಡುವ ವರದಿ ಮೇಲೆ ನಾವು ನಿರ್ಧಾರ …
Read More »
admin
January 4, 2022
Breaking News, SPECIAL NEWS, ಕರ್ನಾಟಕ
ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಸಂಬಂಧಿಸಿದ ಬೃಹತ್ ಕಾರ್ಯಕ್ರಮವನ್ನು ರಾಮನಗರ ಜಿಲ್ಲೆಯಲ್ಲಿ ಆಯೋಜಿಸಲಾಗಿತ್ತು. ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ಭಾಷಣದ ಸಂದರ್ಭದಲ್ಲಿ ಅವಾಚ್ಯ ಶಬ್ಧಗಳನ್ನು ಬಳಸುವ ಜತೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಕೂಡಾ ಭಾಗಿಯಾಗಿದ್ದರು. ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ಮಾತನಾಡಿರುವ ಹಾಗೂ ಗೂಂಡಾ …
Read More »
BigTv News
January 4, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ಜಿಲ್ಲೆಯಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ ಎಂಬುವುದು ಎಲ್ಲರಿಗೂ ಭಯವನ್ನು ಉಂಟಿಸಿದೆ. ಎಲ್ಲರೂ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಈ ಕುರಿತು ಮಾಹಿತಿ ನೀಡಿದರು, “ಸೋಂಕಿತ 53 ವರ್ಷದ ಮಹಿಳೆ ಹಾಗೂ 14 ವರ್ಷದ ಬಾಲಕಿಗೆ ಈಗಾಗಲೇ ಅಗತ್ಯ ಚಿಕಿತ್ಸೆ ನೀಡಿ ಆರೋಗ್ಯದ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ” .ಸೋಂಕಿತರಿಗೆ ಹೋಂ ಐಸೋಲೇಷ್‍ನ್‍ದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ ಎಂದರು.
Read More »
BigTv News
January 4, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ವೈರೆಸ್ ಗಳ ಹಾವಳಿ ಹೆಚ್ಚಾಗುತ್ತಿದಂತೆ ಎಲ್ಲರಿಗೂ ಭಯ ಉಂಟಾಗಿದೆ.ಕೊರೊನಾ , ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ತಡೆಗೆ ಬೇಕಾದ ಕ್ರಮಕೈಗೊಳ್ಳಲು ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ …
Read More »
admin
January 3, 2022
Breaking News, ಕ್ರಿಕೆಟ್, ಕ್ರೀಡೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಇಂದಿನಿಂದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಈ ಸುದ್ದಿ ಭಾರತಕ್ಕೆ ಆಘಾತ ತಂದಿದೆ. ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ. ಇದಕ್ಕೂ ಮುನ್ನ ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, ಅವರು ಜೋಹಾನ್ಸ್‌ಬರ್ಗ್‌ನಲ್ಲಿ …
Read More »
admin
January 3, 2022
Breaking News, ಕ್ರಿಕೆಟ್, ಕ್ರೀಡೆ
ಒಂದು ವರ್ಷದಲ್ಲಿ ತಾನು ಟೀಂ ಇಂಡಿಯಾ ಟೆಸ್ಟ್ ತಂಡವನ್ನ ಮುನ್ನಡೆಸಲಿದ್ದಾರೆ. ಒಂದು ವರ್ಷದ ಹಿಂದೆ ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್‌ನಲ್ಲಿ ಸ್ಥಾನ ಪಡೆಯುವಲ್ಲಿ ಹಿಂದೆ ಬಿದ್ದಿದ್ದ ಓಪನರ್ ಕೆ.ಎಲ್ ರಾಹುಲ್. ಅಂತದ್ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ತಂಡವನ್ನ ಮುನ್ನೆಡೆಸುತ್ತಿದ್ದಾರೆ. ಪಂದ್ಯ ಶುರುವಾಗುವ ಕೆಲ ಕ್ಷಣದಲ್ಲಿ ವಿರಾಟ್ ಕೊಹ್ಲಿ ಗಾಯಾಳು ಎಂದು ಘೋಷಣೆಯಾಗಿದ್ದು, ಕೆ.ಎಲ್ ರಾಹುಲ್ ಟೀಂ ಇಂಡಿಯಾವನ್ನ ಮುನ್ನಡೆಸಿದ್ದಾರೆ. ದುರದೃಷ್ಟವಶಾತ್ ವಿರಾಟ್‌ಗೆ ಬೆನ್ನುಮೂಳೆಯ ನೋವಿನ ಸೆಳೆತದಿಂದ ಬಳಲುತ್ತಿದ್ದು, …
Read More »
admin
January 3, 2022
Breaking News, News, World, ದೆಹಲಿ, ದೇಶ-ವಿದೇಶ
ನವದೆಹಲಿ: ದೇಶದಲ್ಲಿ ಕೊರೋನಾ ಹೆಚ್ಚಿದಂತೆ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ದೊರಕಿದೆ. COVID19 | CoWIN ಪೋರ್ಟಲ್‌ನ ಪ್ರಕಾರ ಮಕ್ಕಳಿಗೆ COVID19 ಲಸಿಕೆ ಹಾಕಿದ ಮೊದಲ ದಿನದಂದು ಸಂಜೆ 7 ಗಂಟೆಯವರೆಗೆ 15-18 …
Read More »
BigTv News
January 3, 2022
Breaking News, News, ರಾಜಕೀಯ, ಹಾವೇರಿ
ಹಾವೇರಿ: ರಾಜ್ಯದಲ್ಲಿ ಲಾಕ್‌ಡೌನ್ ಮಾಡಬಾರದು ಎಂಬುದು ಸರ್ಕಾರದ ಉದ್ದೇಶ. ಆದರೆ ಜನರು ಕೊರೊನಾ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ, ಸಹಕಾರ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕೋವಿಡ್ ಕಡಿಮೆಯಿದೆ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.
Read More »
admin
January 3, 2022
Breaking News, News
ರಾಮನಗರ: ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿಯೇ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ.ಸುರೇಶ್, ಸಚಿವರಿಂದಲೇ ತಪ್ಪಾಗಿರುವುದು. ವೈಯಕ್ತಿಕವಾಗಿ ನಿಂದಿಸುವ ಮಾತು ಆರಂಭಿಸಿದರು.ಹಾಗಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಸಚಿವ ಅಶ್ವತ್ಥನಾರಾಯಣ ವೇದಿಕೆ ಮೇಲೆ ಮಾತನಾಡುತ್ತಾ ಅನಗತ್ಯವಾಗಿ ಪರೋಕ್ಷವಾಗಿ ಹೇಳಿಕೆಗಳನ್ನು ನೀಡಲಾಂಭಿಸಿದರು. ಸಚಿವರು ಸವಾಲಿಗೆ ಕರೆದರೆ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ವೇದಿಕೆ ಮೇಲೆ ಪ್ರತಿಭಟನೆ ಮಾಡಿದ್ದೇವೆ ಎಂದರು.
Read More »
admin
January 3, 2022
Breaking News, SPECIAL NEWS
ಹೈದರಾಬಾದ್: ಕೊರೋನಾ ಹಾವಳಿ ಹೆಚ್ಚಿದಂತೆ ಜನರಲ್ಲಿ ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ನಿಯಮಗಳನ್ನು ಜಾರಿ ಗೊಳಿಸಿದೆ. ಆದರೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆಯೇ ಸರಿ ಎಂಬುದಾಗಿ ಕಿಡಿಕಾರಿದ್ದಾರೆ.
Read More »