Breaking News

Breaking News

ಜಾರಕಿಹೊಳಿ ಸಿಎಂ ಭೇಟಿ : ಕುತೂಹಲ ಮೂಡಿಸಿದ ಮೀಟಿಂಗ್

ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ  ಚರ್ಚೆ ಜೋರಾಗಿದೆ. ಸಂಕ್ರಾಂತಿ ವೇಳೆಗೆ ಹೊಸ ಸಂಪುಟ ರಚನೆಯಾಗಬಹುದು ಎಂಬ ಗುಸು ಗುಸು ಕೇಳಿಬರುತ್ತಿದೆ. ಅಲ್ಲದೇ ಕೆಲ ಹಳಬರಿಗೆ ಕೊಕ್ ನೀಡಿ ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಸುದ್ದಿಯು ಜೋರಾಗಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ ರಮೇಶ್ ಜಾರಕಿಹೊಳಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Read More »

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್

ಬೆಂಗಳೂರು : ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ.

Read More »

ಖಾಕಿಪಡೆ ಆ್ಯಂಡ್ ಪ್ರೆಸ್ ಕ್ರಿಕೆಟ್: ಟಾಸ್ ಗೆದ್ದ ಮೀಡಿಯಾ ಇಲೆವೆನ್

ಪೊಲೀಸ್ ಆ್ಯಂಡ್ ಪ್ರೆಸ್ ಕ್ರಿಕೆಟ್: ಟಾಸ್ ಗೆದ್ದ ಮೀಡಿಯಾ ಇಲೆವೆನ್ ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಡುವೆ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಹುಬ್ಬಳ್ಳಿ ಜಿಮಖಾನಾ ಮೈದಾನದಲ್ಲಿ ಹಮ್ಮಿಕೊಳ್ಳಲಾಯಿತು. ಮೀಡಿಯಾ ಇಲೆವೆನ್ ಹಾಗೂ ಕಮೀಷನರೇಟ್ ಇಲೆವೆನ್ ತಂಡದ ನಡುವೆ ಬಾರಿ ಪಂದ್ಯ ನಡೆದಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಮೀಡಿಯಾ ಇಲೆವೆನ್ ತಂಡ 12 ಓವರ್ ನಲ್ಲಿ …

Read More »

ಮೇಕೆದಾಟು ಯೋಜನೆಯ ಪಾದಯಾತ್ರೆ ಮಾಡುವುದಾಗಿ ಕಾಂಗ್ರೆಸ್ ಪಟ್ಟು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ.6.45ಕ್ಕೆ ಜಿಗಿತಕಂಡು ಸಂಭಾವ್ಯ ಅನಾಹುತದ ಮುನ್ಸೂಚನೆ ನೀಡಿರುವ ಹೊರತಾಗಿಯೂ ಮೇಕೆದಾಟು ಯೋಜನೆಗಾಗಿ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ನಡೆಸಿಯೇ ಸಿದ್ಧ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಕೋವಿಡ್ ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಸಭೆ, ಸಮಾರಂಭ, ರಾಜಕೀಯ ರ್ಯಾಲಿಗಳಿಗೆ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ಬುಧವಾರ ಮಧ್ಯಾಹ್ನ ಕಾಂಗ್ರೆಸ್ ನಾಯಕರು ಸಭೆ ನಡೆಸಿ, ಪಾದಯಾತ್ರೆ ನಿಲ್ಲಿಸುವುದು ಬೇಡ ಎಂಬ ನಿರ್ಣಯಕ್ಕೆ ಬಂದರು.

Read More »

ಭದ್ರತಾ ಲೋಪ: ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್ ಸರ್ಕಾರ

ಚಂಡೀಗಡ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಫಿರೋಜ್‌ಪುರ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪಗಳ ತನಿಖೆಗಾಗಿ ಪಂಜಾಬ್ ಸರ್ಕಾರವು ಗುರುವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ನ್ಯಾಯಮೂರ್ತಿ (ನಿವೃತ್ತ) ಮೆಹ್ತಾಬ್ ಸಿಂಗ್ ಗಿಲ್, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ನ್ಯಾಯಮೂರ್ತಿ ಅನುರಾಗ್ ವರ್ಮಾ ಅವರನ್ನು ಸಮಿತಿಯು ಒಳಗೊಂಡಿದೆ.

Read More »

ಪಂಚಮಸಾಲಿ ಹಿತ ಕಾಪಾಡುತ್ತಾರೋ ಅವರೇ ಮುಂದಿನ ಸಿಎಂ ಅಗುತ್ತಾರೆ

ಧಾರವಾಡ: ಈಗಾಗಲೇ ಪಂಚಾಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಾ ಬಂದಿದೆ. ಇದರ ಕುರಿತು ಸದನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ‌ ಅವರು ಕೂಡಾ ಧ್ವನಿ ಎತ್ತಿದ್ದಾರೆ. ಇವರ ಹೊರತು ಯಾರು ಕೂಡಾ ಸದನದಲ್ಲಿ ಮೀಸಲಾತಿ ವಿಚಾರವಾಗಿ ಧ್ವನಿ ಎತ್ತಿರಲಿಲ್ಲ. ಈಗ ನಮ್ಮ ಸಮುದಾಯವರೇ ಸಿಎಂ ಆಗಿದ್ದಾರೆ. ಅವರು ಸಮುದಾಯದ ಹಿತ ಕಾಪಾಡುತ್ತಾರೆ ಎಂದು ಅಂದುಕೊಂಡಿದ್ದೇವೆ, ನೋಡೋಣ. ಯಾರು ಬಹು ಸಂಖ್ಯಾತ ಸಮುದಾಯವಾದ ಪಂಚಮಸಾಲಿ ಹಿತ ಕಾಪಾಡುತ್ತಾರೋ ಅವರೇ ಮುಂದಿನ ಸಿಎಂ ಅಗುತ್ತಾರೆ …

Read More »

ವಿಧಾನಪರಿಷತ್‌ ಸದಸ್ಯರಿಗೆ ಬೀಳ್ಕೊಡುಗೆ

ಬೆಂಗಳೂರು : ವಿಧಾನಪರಿಷತ್‌ ಸದಸ್ಯರ ಪಾತ್ರದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ವಿಕಾಸಸೌಧದಲ್ಲಿ ಪರಿಷತ್‌ ಅವಧಿ ಮುಕ್ತಾಯವಾಗಿರುವ ಸದಸ್ಯರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಾದ ನಿರ್ಣಯಗಳನ್ನು ಮರು ದೃಢೀಕರಣ ಮಾಡುವ ಗುರುತರ ಜವಾಬ್ದಾರಿ ವಿಧಾನಪರಿಷತ್‌ನದ್ದಾಗಿದೆ . ಪರಿಷತ್‌ಗೆ ತನ್ನದೇ ಆದ ಇತಿಹಾಸ, ಪರಂಪರೆ ಇದೆ ಎಂಬುದನ್ನು ಯಾರೂ ಮರೆಯುವಂತಿಲ್ಲ. ಪರಿಷತ್‌ನ ಇತಿಹಾಸ, ಪರಂಪರೆಯನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ …

Read More »

ಹಸೆಮಣೆ ಏರಿದ ಮೊಗ್ಗಿನ ಮನಸ್ಸಿನ ಹುಡುಗಿ ಶುಭಾ ಪೂಂಜಾ

ಉಡುಪಿ:ಕೋವಿಡ್ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸರಳವಾಗಿ ವಿವಾಹ ಮಾಡಿಕೊಂಡ. ಕನ್ನಡ ಚಿತ್ರರಂಗದ ಮೊಗ್ಗಿನ ಮನಸ್ಸಿನ ಹುಡುಗಿ ಶುಭಾ ಪೂಂಜಾ ಬುಧವಾರ(ಜನವರಿ 05) ಶಿರ್ವದ ನಿವಾಸದಲ್ಲಿ ಸುಮಂತ್ ಜತೆ ಹಸೆಮಣೆ ಏರಿದ್ದಾರೆ. ಕಾರ್ಯಕ್ರಮ ನೆರವೇರಿರುವುದಾಗಿ  ಗೆ ಮೂಲಗಳು ತಿಳಿಸಿವೆ.ಕಳೆದ ವರ್ಷವೇ ವಿವಾಹವಾಗುವ ವದಂತಿ ಇತ್ತು, ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡಲಾಗಿತ್ತು. ಇಂದು ಸುಮಂತ್ ಮತ್ತು ಶುಭಾ ಪೂಂಜಾ ಹಸೆಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಿರ್ವದ ಮಜಲಬೆಟ್ಟು ಬೀಡುವಿನಲ್ಲಿರುವ …

Read More »

ನಾನು ಬದುಕಿದ್ದೇನೆ ಸತ್ತಿಲ್ಲಾ : ನಟ ಅವಿನಾಶ್ ಸ್ಪಷ್ಟನೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅವಿನಾಶ್ ಇನ್ನಿಲ್ಲ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ  ಸುದ್ದಿಯೊಂದು ವೈರಲ್ ಆಗಿತ್ತು. ಆದ್ರೇ ಇದೊಂದು ಸುಳ್ಳು ಸುದ್ದಿಯಾಗಿದೆ. ನಾನು ಅರಾಮಾಗಿದ್ದೇನೆ ಎಂಬುದಾಗಿ ನಟ ಅವಿನಾಶ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರಿಗೆ ಇಂದು ಪ್ರತಿಕ್ರಿಯಿಸಿರುವಂತ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ಸುದ್ದಿ ಸುಳ್ಳು. ನಾನು ಅರಾಮಾಗಿದ್ದೇನೆ. ಬೆಳಿಗ್ಗೆ ವರ್ಕೌಟ್ ಕೂಡ ಮಾಡಿದ್ದೇನೆ. ಅಭಿಮಾನಿಗಳು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ತಿಳಿಸಿದ್ದಾರೆ

Read More »

ನೇತ್ರಾವತಿ ನದಿಗೆ ನೂತನ ಸೇತುವೆ

ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಅರ್ಧಕ್ಕೆ ನಿಂತಿದ್ದ ಹೆದ್ದಾರಿ ಕಾಮಗಾರಿಯು ಕೆಲವು ತಿಂಗಳ ಹಿಂದೆ ಆರಂಭಗೊಂಡಿದ್ದು, ಕಾಮಗಾರಿ ಗಳನ್ನು ಎರಡು ವಿಭಾಗ ಗಳನ್ನಾಗಿ ಮಾಡಿ ಪ್ರತ್ಯೇಕ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಬಿ.ಸಿ.ರೋಡ್‌- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ-75 ಅಭಿವೃದ್ಧಿಯ ಭಾಗವಾಗಿ ಪಾಣೆ ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನೂತನ ಸೇತುವೆ ರಚನೆಯ ಕಾಮಗಾರಿ ಇದೀಗ ಆರಂಭಗೊಂಡಿದೆ. ನಿರೀಕ್ಷೆಯಂತೆ ನಡೆದರೆ ಎರಡು ವರ್ಷಗಳಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ 386 ಮೀ.ಉದ್ದದ ಹೊಸ ಸೇತುವೆಯೂ ಸಂಚಾರಕ್ಕೆ ಮುಕ್ತಗೊಳ್ಳಲಿದೆ. …

Read More »