admin
January 3, 2022
Breaking News, News, SPECIAL NEWS, ಚಾಮರಾಜನಗರ
ಚಾಮರಾಜನಗರ: ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು’ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಪಕ್ಷದ ನಿಲುವಿನ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದರು. ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೇಕೆದಾಟು ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಹಿಂದೆ ಕಾಂಗ್ರೆಸ್ ಸರ್ಕಾರ ಇತ್ತು, ನಂತರ ಮೈತ್ರಿ ಸರ್ಕಾರ ಬಂತು. ಆಗ ಏನೂ ಮಾಡಲಿಲ್ಲ. ಈಗ ಕಾಂಗ್ರೆಸ್‌ನವರು ಪಾದಯಾತ್ರೆ ಮಾಡುವುದಕ್ಕೆ ಹೊರಟಿದ್ದಾರೆ. ಇದು …
Read More »
admin
January 3, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ರಾಜ್ಯ ಇತರೆ ಐತಿಹಾಸಿಕ ಸ್ಥಳಗಳ ಪುಸ್ತಕ ಸಹ ತರುತ್ತೇವೆ. ಸರಣಿ ಗ್ರಂಥವನ್ನು ತರಲಾಗುವುದು. ರಾಜಕಾರಣಕ್ಕಾಗಿ ಪಾದಯಾತ್ರೆ, ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸಮಾಡ್ತಾರೆ. ಇಂಥವರಿಂದ ಪಾಠ ಕಲಿಯಬೇಕಾದ ಅವಶ್ಯಕತೆ ನಮಗಿಲ್ಲ. ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು. ಇತಿಹಾಸ ತಿರುಚುವವರು ಹೆಚ್ಚಾಗಿದ್ದಾರೆ. ನೀವು ಚರಿತ್ರೆ ಒಂದು …
Read More »
admin
January 3, 2022
Breaking News, ಉಡುಪಿ
ಉಡುಪಿ: ಕೇಂದ್ರ ಸರಕಾರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಧಾರ್ಮಿಕ ಕೇಂದ್ರ ಗಳಲ್ಲಿ ದೊರೆಯುವ ಪ್ರಸಾದದ ಗುಣಮಟ್ಟ ಪರಿಶೀಲನೆಗೆ “ಭೋಗ್’ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದು, ಕರಾವಳಿಯ 4 ದೇವಸ್ಥಾನಗಳಲ್ಲಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ. ಈ ಮೂಲಕ ಭಕ್ತರಿಗೆ ಉತ್ತಮ ಗುಣಮಟ್ಟ ಖಾತರಿಪಡಿಸಿದ ಪ್ರಸಾದವನ್ನು ನೀಡುವ ಉದ್ದೇಶವನ್ನು ಸರಕಾರ ಹೊಂದಿದೆ. ಪ್ರಾರಂಭಿಕ ಹಂತದಲ್ಲಿ ಕರಾವಳಿಯ ನಾಲ್ಕು ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸಾದಗಳಲ್ಲಿ …
Read More »
admin
January 3, 2022
Breaking News, SPECIAL NEWS, ಚಿಕ್ಕಮಗಳೂರು
ಚಿಕ್ಕಮಗಳೂರು:ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜಿಗೆ ಸ್ಕಾರ್ಫ್ ಧರಿಸಿ ಬರುವುದನ್ನು ಖಂಡಿಸಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ …
Read More »
BigTv News
January 3, 2022
Breaking News, News, ಚಿಕ್ಕಮಗಳೂರು
ಚಿಕ್ಕಮಗಳೂರು: ರಾಜ್ಯದಲ್ಲಿ ಹೊಸ ವೈರೆಸ್ ಕಾಲಿಟ್ಟಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.ಕೊರೊನಾ ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜನರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಬದ್ಧತೆಯಾಗಿದೆ. ಜನ ಸಹಕಾರ ನೀಡದಿದ್ದರೆ, ಕೋವಿಡ್ ಪ್ರಕರಣಗಳು ಹೆಚ್ಚಿದರೆ ಲಾಕ್ ಡೌನ್ ಕ್ರಮ ಅನಿವಾರ್ಯವಾಗುತ್ತದೆ ಎಂದರು.
Read More »
BigTv News
January 3, 2022
Breaking News, ಧಾರವಾಡ
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಇಬ್ಬರಿಗೆ ಓಮಿಕ್ರಾನ್ ಸೋಂಕು ತಗುಲಿದ್ದು, ಇದರ ಜೊತೆಗೆ ಕೊರೊನಾ ಸೋಂಕು ಕೂಡ ನಿಧಾನವಾಗಿ ಏರುಗತಿಯಲ್ಲಿ ಸಾಗುತ್ತಿದ್ದು, ಜನತೆ ಎಚ್ಚರಿಕೆ ವಹಿಸಬೇಕು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 53 ವರ್ಷದ ಮಹಿಳೆ, 14 ವರ್ಷದ ಬಾಲಕಿಯಲ್ಲಿ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. ಇಬ್ಬರೂ ಹುಬ್ಬಳ್ಳಿಯವರಾಗಿದ್ದಾರೆ. ಡಿ.17 ರಂದು ಒಬ್ಬರಿಗೆ ಹಾಗು ಡಿ.19 ರಂದು ಮತ್ತೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇಬ್ಬರೂ ಸೋಂಕಿತರು …
Read More »
admin
January 3, 2022
Breaking News, ಧಾರವಾಡ
ಧಾರವಾಡ: ಪೊಲೀಸರು ತಮ್ಮ ಒತ್ತಡಗಳನ್ನು ನಿರ್ವಹಿಸಲು ಕ್ರೀಡಾಕೂಟ ಸಹಕಾರಿಯಾಗಿದೆ.ಕಳೆದ ಎರಡು ವರ್ಷಗಳಿಂದ ಇಡೀ ಮಾನವ ಕುಲ ಕೊರೊನಾ ವೈರಾಣುವಿನಿಂದ ತತ್ತರಿಸಿ ಹೋಗಿದೆ.ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕ್ರೀಡೆ, ದೈಹಿಕ ಚಟುವಟಿಕೆಗಳು ಅಗತ್ಯ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು. ಧಾರವಾಡದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾಗೂ ಬಲೂನುಗಳನ್ನು ಹಾರಿ ಬಿಡುವ ಮೂಲಕ …
Read More »
admin
January 3, 2022
Breaking News, ಬೆಂಗಳೂರು
ಬೆಂಗಳೂರು: ಇಲ್ಲಿಯ ಗೋವಿಂದರಾಜನಗರದ ಮೂಡಲಪಾಳ್ಯದಲ್ಲಿ ಬಿಬಿಎಂಪಿ ಪ್ರೌಢಶಾಲೆಯಲ್ಲಿಹಮ್ಮಿಕೊಳ್ಳಲಾಗಿದ್ದ 15-18ನೇ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಕ್ಕಳನ್ನು ನೋಡಿ ಸಂತೋಷವಾಯಿತು. ಬೆಂಗಳೂರಿನ ಪ್ರದೇಶದಲ್ಲಿ ಇಂತಹ ವ್ಯವಸ್ಥಿತ ಶಾಲೆ ಇದೆ ಎನ್ನುವುದನ್ನು ಸೋಮಣ್ಣ ತೋರಿಸಿದ್ದಾರೆ. ಈ ಲಸಿಕೆ ಕಾರ್ಯಕ್ರಮ ಹೊಸ ವರ್ಷದಲ್ಲಿ ನಡೆಯುತ್ತಿದೆ. ಹೊಸವರ್ಷದಂದು ಹೊಸ ಅಭಿಯಾನ ನಡೆಯುತ್ತಿದೆ. ಮೋದಿಜಿಯವರ ದೂರದೃಷ್ಟಿಯ ಪರಿಣಾಮದಿಂದ ಈ ಕಾರ್ಯಕ್ರಮ ನಡೆಯುತ್ತಿದೆ …
Read More »
admin
January 3, 2022
Breaking News, World, ದೆಹಲಿ
ನವದೆಹಲಿ: ಕೊರೋನಾ ನಿಯಂತ್ರಣಕ್ಕಾಗಿ ಕೊವಿಡ್ ಲಸಿಕೆ ಯನ್ನು ಹಾಕಿಕೊಳ್ಳುವಯೋಮಿತಿಯನ್ನು ಹೇಳಲಾಗುತ್ತು. ಸಣ್ಣ ಮಕ್ಕಳಿಗೆ ಲಸಿಕೆಯನ್ನು ನೀಡುಲು ಸರ್ಕಾರ ಆದೇಶ ಹೊರಡಿಸರಲಿಲ್ಲಾ. ಆದರೆ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿರುವ ಸಂದರ್ಭದಲ್ಲಿ ಸದ್ಯಕ್ಕೆ ಕೊವಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲು ಅನುಮೋದನೆ ನೀಡಲಾಗಿದೆ. ಹೀಗಿರುವಾಗ ಲಸಿಕೆ ನೀಡಿಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಬೇರೆ ಲಸಿಕೆಗಳು ಮಿಶ್ರವಾಗದಂತೆ ನೀಡದಂತೆ ತೀವ್ರ ಎಚ್ಚರ ವಹಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ …
Read More »
BigTv News
January 3, 2022
Breaking News
ನವದೆಹಲಿ: ಭಾರತದಲ್ಲಿ ಕೊರೋನಾ ಹಾವಳಿ ಕಡಿಮೆ ಆಗುತ್ತಿದೆ ಎಂದು ನಿಟ್ಟುಸಿರು ನೀಡುತ್ತಿರುವ ಹಿನ್ನಲೆ ಮತ್ತೆ ಹೊಸ ವೈರೆಸ್ ಹಾವಳಿ ಹೆಚ್ಚಾಗುತ್ತದ್ದು, ಜನರಲ್ಲಿ ಮತ್ತೇ ಆತಂಕ ಉಂಟಾಗಿದೆ. ಆದರೆ ಕಳೆದ 24ಗಂಟೆಗಳಲ್ಲಿ 33,750 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,81,893ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜನವರಿ 03) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿದು ಬಂದಿದೆ.
Read More »