Breaking News

Breaking News

ಭೂ ತೆರಿಗೆ ಪಾವತಿಗೆ ಬಂದ ವ್ಯಕ್ತಿಯಿಂದ 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ನೌಕರನ ಬಂಧನ

ಉಪ್ಪಳ: ಭೂ ತೆರಿಗೆಯನ್ನು ಸಮಿತಿಯ ಹೆಸರಿಗೆ ಬದಲಾಯಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ₹5 ಸಾವಿರ ಲಂಚ ಪಡೆಯುತ್ತಿದ್ದ ಉಪ್ಪಳ ಗ್ರೂಪ್ ವಿಲೇಜ್ ಆಫೀಸ್‌ನ ನೌಕರ ಕೆ. ಶಿವಪ್ರಸಾದ್ (42) ಅವರನ್ನು ಕಾಸರಗೋಡು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಅರ್ಜಿದಾರರಿಂದ ಹಣದ ಬೇಡಿಕೆ ಇಟ್ಟಿದ್ದ ಶಿವಪ್ರಸಾದ್, ದಾಖಲೆಗಳ ಕೆಲಸವನ್ನು ಶೀಘ್ರವಾಗಿ ಮಾಡಿಕೊಡುವುದಾಗಿ ಹೇಳಿ ಲಂಚ ಕೇಳಿದ್ದ ಎನ್ನಲಾಗಿದೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ವಿಜಿಲೆನ್ಸ್ ಅಧಿಕಾರಿಗಳು ಬಲೆ …

Read More »

ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕಲಬುರಗಿ: ಅಪ್ರಾಪ್ತ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿ ರಝಾಕ್ ಸಾಬಶೇಖ(20)ಗೆ ವಿಶೇಷ ಪೊಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿದೆ. 16 ವರ್ಷದ ಬಾಲಕಿಯನ್ನು ರಾಮನಗರದ ರೇಷ್ಮೆ ಕಾರ್ಖಾನೆಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ ಆರೋಪದಡಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಬಳಿಕ ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ನೊಂದ …

Read More »

ಕಲಬುರಗಿ | ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಪತಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಮೇಳಕುಂದಾ(ಕೆ) ಗ್ರಾಮದ ಸಮೀಪದ ಹೊಲದ ಬಾವಿಯಲ್ಲಿ 30 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತೆಯನ್ನು ಲಕ್ಷ್ಮಿ ಅಂಬ್ರಿಶ್ ಕುಂಬಾರ ಎಂದು ಗುರುತಿಸಲಾಗಿದೆ. ಲಕ್ಷ್ಮಿಗೆ ಪತಿ ಹಾಗೂ ಕುಟುಂಬದವರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ, ಪತಿ ಅಂಬ್ರಿಶ್ ಕುಂಬಾರ, ಮಾವ ನರಸಿಂಗ, ಅತ್ತೆ ದೇವತಾ ಮತ್ತು ಮೈದುನ ಲೋಕೇಶ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಳ ಕುಟುಂಬಸ್ಥರು ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿರುವ ಶಂಕೆ ವ್ಯಕ್ತಪಡಿಸಿದ್ದು, …

Read More »

ಹಾಲಿನ ಟ್ಯಾಂಕರ್ ಡಿಕ್ಕಿಗೆ ಜೋಳ ಹೊತ್ತ ಲಾರಿ ಭಸ್ಮ; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಎರಡು ವಾಹನಗಳು

ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಮತ್ತು ಜೋಳದ ಮೂಟೆ ಸಾಗಿಸುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ವೇಗವಾಗಿ ಬಂದ ಟ್ಯಾಂಕರ್, ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಜ್ವಾಲೆಗಳು ವ್ಯಾಪಕವಾಗಿ ಹರಡಿವೆ. ಹೆದ್ದಾರಿ ಮಧ್ಯೆ ವಾಹನಗಳು ಹೊತ್ತಿ ಉರಿಯುತ್ತಿದ್ದ …

Read More »

ಫೇಕ್ ಅಟ್ರಾಸಿಟಿ ಕೇಸ್ ಕಿರುಕುಳಕ್ಕೆ ಮನನೊಂದ ವ್ಯಾಪಾರಿ ಆತ್ಮಹತ್ಯೆ – ಸಾವಿಗೂ ಮುನ್ನ ವಿಡಿಯೋ ಮಾಡಿ ಕಣ್ಣೀರು!

ಬೆಂಗಳೂರು ನಗರದ ಕಾಡುಗೋಡಿಯಲ್ಲಿ ಸುಳ್ಳು ಅಟ್ರಾಸಿಟಿ ಪ್ರಕರಣ ದಾಖಲಿಸಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿ, 42 ವರ್ಷದ ವ್ಯಾಪಾರಿ ಪಾಪಣ್ಣ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಸಾವಿಗೂ ಮುನ್ನ ಅವರು ವಿಡಿಯೋ ಸಂದೇಶ ದಾಖಲಿಸಿ, ಕೆಲವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಡಿಯೋದಲ್ಲಿ ಪಾಪಣ್ಣ ಅವರು, 2021ರಲ್ಲಿಯೂ ತಮ್ಮ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿತ್ತು ಹಾಗೂ ಪ್ರಕರಣ ಹಿಂಪಡೆಯಲು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು ಎಂದು ಆರೋಪಿಸಿದ್ದಾರೆ. ಈಗ …

Read More »

ಹಣಕ್ಕಾಗಿ ಪ್ರಿಯಕರ ಜತೆ ಸೇರಿ ಪತಿಯನ್ನೇ ಕೊಂದ ಮಗಳು, ನೊಂದು ತಾಯಿ ಆತ್ಮಹತ್ಯೆಗೆ ಶರಣು

ಬೆಳಗಾವಿ: 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನಾಗಿದ್ದ ಪತಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಇದೀಗ ಆಘಾತಕಾರಿ ಘಟನೆಯೊಂದು ನಡೆದಿದೆ. ಮಗಳು ಹಣಕ್ಕಾಗಿ ತನ್ನ ಗಂಡನನ್ನೇ ಕೊಂದಿದ್ದಕ್ಕೆ ಜರ್ಜರಿತರಾಗಿದ್ದ ತಾಯಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ತಾಯಿ ಮಹಾದೇವಿ ಬದಾಮಿ (57) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಸುಮಾ ಮತ್ತು ಆಕೆಯ ಪ್ರಿಯಕರ ಸೇರಿ ಅಳಿಯನನ್ನು …

Read More »

ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ಪ್ರಶ್ನಿಸಿದ್ದಕ್ಕೆ ಗಲಾಟೆ…. ಮಚ್ಚು ಬೀಸಿದ ಆರೋಪ

ಚಿಕ್ಕಮಗಳೂರು : ಕಾಫಿನಾಡಲ್ಲಿ ಲಾಂಗು-ಮಚ್ಚುಗಳ ಹಾವಳಿ ಮುಂದುವರಿದಿದ್ದು, ಕ್ಷುಲ್ಲಕ ವಿಚಾರಕ್ಕೂ ಮಾರಕಾಸ್ತ್ರಗಳು ಕೈಗೆತ್ತಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿವೆ.ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದಲ್ಲಿ ಅಕ್ರಮ ಕಟ್ಟಡದ ಬಗ್ಗೆ ಪ್ರಶ್ನೆ ಮಾಡಿದ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಅದು ಬಳಿಕ ಗಲಾಟೆಗೆ ತಿರುಗಿದೆ ಎನ್ನಲಾಗಿದೆ.ಈ ವೇಳೆ ಉದಯ್ ಎಂಬಾತ ತಾರೇಶ್ ಮೇಲೆ ಮಚ್ಚು ಬೀಸಿರುವ ಆರೋಪ ಕೇಳಿಬಂದಿದೆ. ಆರೋಪಿ ಉದಯ್ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಘಟನೆ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ …

Read More »

ಕುಕ್ಕರ್​ನಲ್ಲಿ ಹೊಡೆದು ಪತ್ನಿಯನ್ನೇ ಕೊಂದ ಪತಿ

ಕೋಲಾರ: ಹಸಾಳ ಗ್ರಾಮದಲ್ಲಿ ಪತ್ನಿಗೆ ಕುಕ್ಕರ್​ನಿಂದ ಹೊಡೆದು ಪತಿ ಹತ್ಯೆ ಮಾಡಿದ್ದಾನೆ. ಸಹನಾ (24) ಕೊಲೆಯಾದವರು. ಪತಿ ಮಂಜುನಾಥ್​ ಹತ್ಯೆಗೈದವ. ದಂಪತಿಗೆ ಮದುವೆಯಾಗಿ 5 ವರ್ಷವಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. ಮದುವೆಯಾದಾಗಿನಿಂದ ಪತಿ ಪದೇಪದೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.ಈ ಹಿಂದೆ ಮದುವೆಗೆ ಲಕ್ಷಾಂತರ ರೂಪಾಯಿ ರ್ಖಚಾಗಿದೆ ಎಂದು 2 ಲಕ್ಷ ರೂ. ಪಡೆದಿದ್ದನಂತೆ. ಅಲ್ಲದೇ ಮನೆ ಕಟ್ಟಲೆಂದು 10 ಲಕ್ಷ ರೂ. ಹಣ ಬೇಕು ಎಂದು ಬೇಡಿಕೆ ಇಟ್ಟಿದ್ದ. …

Read More »

ಪುನರ್ವಸತಿ ಕೇಂದ್ರದ ಮಾಲಿಕನ ಕೊಲೆ,ಆತನ ವಾಹನದಲ್ಲೇ ಆರೋಪಿಗಳು ಪರಾರಿ!

ಬೆಂಗಳೂರು ಚಂದ್ರಾಲೇಔಟ್‌ನ ನ್ಯೂ ಲೈಫ್‌ ರಿಹ್ಯಾಬ್‌ ಸೆಂಟರ್‌ನ ಮಾಲಿಕ ಶಿವಲಿಂಗಯ್ಯ (60) ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ನಿತಿನ್‌, ಕಾರ್ತಿಕ್‌, ಸೋಹೆಲ್‌ ಪಾಷ ಸೇರಿ ಹಲವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ನಿತಿನ್‌ ಈ ಹಿಂದೆ ರಿಹ್ಯಾಬ್‌ ಸೆಂಟರ್‌ನಲ್ಲಿ ರೋಗಿಯಾಗಿದ್ದು, ಬಳಿಕ ಅದರ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಶುಕ್ರವಾರ ಜಗಳದ ವೇಳೆ ಆರೋಪಿಗಳು ಶಿವಲಿಂಗಯ್ಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ, ಅವರ ಕಾರು ಹಾಗೂ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. …

Read More »

ಶಿವಮೊಗ್ಗ: ಯುವಕನ ಭೀಕರ ಹತ್ಯೆ

ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪ್ರವೀಣ್ (29) ಕೊಲೆಯಾದ ಯುವಕನಾಗಿದ್ದು, ಟ್ರಾಕ್ಟರ್ ಬಾಡಿಗೆ ಹಾಗೂ ಇತರೆ ಕೆಲಸಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಬರುವಂತೆ ಸಹೋದ್ಯೋಗಿಗಳಿಗೆ ತಿಳಿಸಿದ್ದ ಪ್ರವೀಣ್, ಬಳಿಕ ಅವರ ಕರೆಗಳನ್ನು ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಯುವಕರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಪ್ರವೀಣ್ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಪ್ರವೀಣ್ ಅವರನ್ನು ಮಾರಕಾಸ್ತ್ರದಿಂದ …

Read More »