admin
December 9, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ
ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಆತಂಕ ಹಾಗೂ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ …
Read More »
admin
December 9, 2021
Breaking News, World, ಕರ್ನಾಟಕ, ದೇಶ-ವಿದೇಶ
ಟಿಬೆಟ್: ಮಾರಣಾಂತಿಕ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರರ ನಿಧನಕ್ಕೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಗುರುವಾರ ಸಂತಾಪ ಸೂಚಿಸಿದ್ದಾರೆ. ‘ನಾನು ಜನರಲ್ ಬಿಪಿನ್ ರಾವತ್ ಮತ್ತು ಅವರ ಸಹಚರರಿಗಾಗಿ ಪ್ರಾರ್ಥಿಸುತ್ತೇನೆ ಮತ್ತು ಈ ದುರದೃಷ್ಟಕರ ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲ ಕುಟುಂಬಗಳ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ. ರಾಷ್ಟ್ರದ ಸೇವೆಯಲ್ಲಿ ಜನರಲ್ ರಾವತ್ ಅವರ ದೀರ್ಘಕಾಲದ ಕೊಡುಗೆಯನ್ನು ನಾನು ವಂದಿಸುತ್ತೇನೆ’ …
Read More »
admin
December 9, 2021
Breaking News, ಕರ್ನಾಟಕ, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಸಕ್ತ ವರ್ಷದ ತರಗತಿ ಆರಂಭಿಸಬೇಕು ಹಾಗೂ ಆನ್ ಲೈನ್ ಪರೀಕ್ಷೆ ನಡೆಸಬೇಕು ಎಂಬ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ನವನಗರದಲ್ಲಿ ಕಾನೂನಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಹಲವು ದಿನಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಕೆಲ ದಿನಗಳಿಂದಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೂ ಬೇಡಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ನವನಗರದ ಆರ್.ಟಿ.ಓ ಕಚೇರಿಯಿಂದ ಕಾನೂನು ವಿವಿವರೆಗೂ ವಿವಿಧ …
Read More »
admin
December 9, 2021
Breaking News, ಅಪರಾಧ, ಕರ್ನಾಟಕ, ತುಮಕೂರು
ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಗೆಳತಿಯ ಮನೆಗೆ ಪುಸ್ತಕ ತೆಗೆದುಕೊಂಡು ಹೋಗಲು ಬಂದಿದ್ದಳು. ಈ ವೇಳೆ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ತುಮಕೂರು: ಕುಡಿಯುವ ನೀರಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿಕೊಟ್ಟು ನಂತರ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ …
Read More »
admin
December 9, 2021
Breaking News, ದೆಹಲಿ, ದೇಶ-ವಿದೇಶ
ನವದೆಹಲಿ: ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಇಂದು ಬೆಳಿಗ್ಗೆ ನಿಗೂಢ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರರಾಜಧಾನಿ ದೆಹಲಿಯ ನ್ಯಾಯಾಲಯದಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನ್ಯಾಯಾಲಯದಲ್ಲಿ ಲ್ಯಾಪ್ ಟಾಪ್ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದ್ದು, ಸದ್ಯಕ್ಕೆ ಘಟನಾ ಸ್ಥಳಕ್ಕೆ ಏಳು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ ಎಂದು ವರದಿಯಾಗಿದೆ.
Read More »
admin
December 9, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಕ್ರಮ ಮದ್ಯ ಸಾಗಾಟ ಜೋರಾಗಿ ಸಾಗಿದ್ದು, ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಂತೆ ಇಂದು ನಗರದ ಮಂಟೂರ ರಸ್ತೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೆರೆಗೆ ವಾಹನ ಸಂಖ್ಯೆ ಕೆಎ.63k.1560(ಹೊಂಡಾ ಡಿಯೋ ದ್ವಿಚಕ್ರ)ದಲ್ಲಿ ಅಕ್ರಮವಾಗಿ 30.24 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಿದ ವೇಳೆ ಆರೋಪಿತ ಪರಾರಿಯಾಗಿದ್ದಾನೆ. …
Read More »
admin
December 9, 2021
Breaking News, ಅಪರಾಧ, ಕರ್ನಾಟಕ, ಧಾರವಾಡ
ಧಾರವಾಡ: ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ಗೃಹಿಣಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ. ನಿರ್ಮಲಾ ಕೋಟೂರ (40) ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡವರು. ವಿವಾಹವಾಗಿದ್ದ ನಿರ್ಮಲಾ, ಮಾನಸಿಕವಾಗಿ ಅಸ್ವಸ್ಥಗೊಂಡ ನಂತರ ಗಂಡನ ಮನೆಯಾದ ಅಮ್ಮಿನಬಾವಿ ಗ್ರಾಮದಿಂದ ತನ್ನ ತವರು ಮನೆ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಬಂದಿದ್ದರು. ಇಂದು ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ …
Read More »
admin
December 9, 2021
Breaking News, ಆರೋಗ್ಯ, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಕುರಿತು ಯಾರೂ ಕೂಡಾ ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ಒಂದು ವಾರದ ಬಳಿಕ ಈ ಕುರಿತು ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ, ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ …
Read More »
admin
December 9, 2021
Breaking News, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ
ಧಾರವಾಡ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಆರ್.ಮೋರೆ (84) ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಧಾರವಾಡ ಕ್ಷೇತ್ರದಿಂದ ನಾಲ್ಕು ಬಾರಿ ಅವರು ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಎಸ್.ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಹಕಾರ ಸಚಿವರಾಗಿದ್ದರು. ಧರ್ಮಸಿಂಗ್ ಅವರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ಈ ಭಾಗದಲ್ಲಿ ಆಶ್ರಯ ಮನೆಗಳನ್ನು ಸಾಕಷ್ಟು ಬಡವರಿಗೆ ಕೊಡಿಸಿದ್ದರಿಂದ ಅವರನ್ನು ಆಶ್ರಯ ಮನೆಗಳ ಹರಿಕಾರ ಎಂದೇ ಕರೆಯಲಾಗುತ್ತಿತ್ತು. ಜತೆಗೆ ಹುಬ್ಬಳ್ಳಿ ಧಾರವಾಡ ಜನರಿಗೆ ಕುಡಿಯುವ ನೀರು …
Read More »
admin
December 9, 2021
Breaking News, ಕರ್ನಾಟಕ, ದಾವಣಗೆರೆ
ದಾವಣಗೆರೆ: ದೇಶ-ವಿದೇಶಗಳಿಂದ ಜಿಲ್ಲಾಗೆ ಬಂದಿರುವ 66 ಮಂದಿ ಪೈಕಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಂಡ ದೇಶಗಳಿಂದ 21 ಜನ ಬಂದಿದ್ದಾರೆ. ಅವರರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.ಜನ ಭಯಪಡುವ ಅಗತ್ಯ ಇಲ್ಲವೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬೆಣ್ಣೆ ನಗರಿ ಮಂದಿಗೆ ಹೇಳಿದ್ದಾರೆ. ನಗರದಲ್ಲಿ ಮನೆ ಮನೆಗೆ ಲಸಿಕೆ ಅಭಿಯಾನ ಆರಂಭಿಸಿ ಮಾತನಾಡಿದ ಅವರು, 66 ಜನರು ಕೂಡ ಕೊರೊನಾ ನೆಗೆಟಿವ್ ವರದಿ ತಂದಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಿದ್ದೇವೆ. 7 ದಿನಗಳ ಹೋಂ …
Read More »