BigTv News
June 20, 2026
Breaking News
ಹುಬ್ಬಳ್ಳಿ ಸಮೀಪದ ಅಂಚಟಗೇರಿ ಬಳಿ ಅನ್ಯಕೋಮಿನ ಯುವ ಜೋಡಿಯೊಂದು ಹೋಟೆಲ್‌ಗೆ ತೆರಳಿದ್ದ ವೇಳೆ 8-10 ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಹುಬ್ಬಳ್ಳಿಯ ಬಾಸೆಲ್ ಮಿಷನ್ ಕಾಂಪೌಂಡ್ ನಿವಾಸಿ ಶರವೀನ ಜೋಗುಳ ಎಂದು ಗುರುತಿಸಲಾಗಿದೆ. ಶರವೀನ ಅವರು ಧಾರವಾಡ ಮೂಲದ ಯುವತಿಯನ್ನು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಶುಕ್ರವಾರ ಇಬ್ಬರೂ ಅಂಚಟಗೇರಿ ಬಳಿಯ ರಾಸ್ತಾ-63 ಹೋಟೆಲ್‌ಗೆ ತೆರಳಿದ್ದರು. ಈ …
Read More »
BigTv News
June 20, 2026
Breaking News
ಹೊಸಪೇಟೆ: ನಗರದ ಲಾಡ್ಜ್ ಒಂದರ ಮೇಲೆ ಇಲ್ಲಿನ ಬಡಾವಣೆ ಠಾಣೆ ಪೊಲೀಸರು ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ, ವೇಶ್ಯಾವಾಟಿಕೆ ದಂಧೆಯಲ್ಲಿದ್ದ ಮೂವರು ಮಹಿಳೆಯರನ್ನು ರಕ್ಷಿಸಿ ಏಳು ಜನರ ವಿರುದ್ಧ ಪ್ರಕರ ದಾಖಲಾಗಿದೆ. ಇಲ್ಲಿನ ಎಪಿಎಂಸಿ ಮಾರುಕಟ್ಟೆ ಬಳಿ ಇರುವ ‘ಬಾಲಾಜಿ ಲಾಡ್ಜ್’ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಬಡಾವಣೆ ಠಾಣೆಯ ಪೊಲೀಸರು ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ …
Read More »
BigTv News
June 20, 2026
Breaking News
ಚಿಕ್ಕಮಗಳೂರಿನ ಕಡೂರು ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ಶಿಕ್ಷಕ ನಾಗರಾಜ್ ಅಶ್ಲೀಲ ವಿಡಿಯೋ ತೋರಿಸಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದ್ದು, ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರು ಬಂದರೂ ಕ್ರಮ ಕೈಗೊಳ್ಳದ ಆರೋಪದಡಿ ಮುಖ್ಯ ಶಿಕ್ಷಕ ಲೋಕೇಶ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Read More »
BigTv News
June 20, 2026
Breaking News
ಚಿಕ್ಕಮಗಳೂರಿನ ಐದಳ್ಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ಮುಖಂಡ ತೇಜಸ್ ಕ್ಷುಲ್ಲಕ ವಿಚಾರಕ್ಕೆ ಲಾಂಗ್ ಹಿಡಿದು ಪುಂಡಾಟ ಮೆರೆದಿರುವ ಘಟನೆ ನಡೆದಿದೆ. ಹಬ್ಬದ ಸಂದರ್ಭದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಂದಿಗೆ ವಾಗ್ವಾದ ನಡೆಸಿದ ತೇಜಸ್, ಕಾರಿನಿಂದ ಮಾರಕಾಸ್ತ್ರ ತೆಗೆದು ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »
BigTv News
June 20, 2026
Breaking News
ಬಗರ್ ಹುಕುಂ ಭೂ ಅಕ್ರಮ ಪ್ರಕರಣದಲ್ಲಿ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ 12 ಮಂದಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 2016ರಿಂದ 2022ರವರೆಗೆ 1,430 ಮಂದಿಗೆ 2,750 ಎಕರೆ ಜಮೀನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಬಂಧಿತರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Read More »
BigTv News
June 19, 2026
Breaking News
ಕುಂದಾಪುರ: ಅಂಪಾರು ಗ್ರಾಮದ ಗುಡಿಬೆಟ್ಟು ಎಂಬಲ್ಲಿ ಜೂ.18ರಂದು ಕೋಳಿ ಅಂಕಕ್ಕೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮೊವಾಡಿಯ ನಾರಾಯಣ(48), ಉಡುಪಿ ನಿಟ್ಟೂರಿನ ಪ್ರಶಾಂತ್ (43), ನಿಟ್ಟೂರು ವಿಷ್ಣುಮೂರ್ತಿ ನಗರದ ನವರಾಜ್(51) ಬಂಧಿತ ಆರೋಪಿಗಳು. ಉಳಿದವರು ಹಾಡಿಯಲ್ಲಿ ಓಡಿ ತಪ್ಪಿಸಿಕೊಂಡಿದ್ದಾರೆ. ಬಂಧಿತರಿಂದ 1,600ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 19, 2026
Breaking News
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಶ್ರೀಗಂಧ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಅಂತರಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ. ಮೈಸೂರು ಮೂಲದ ವೆಂಕಟೇಶ್ (26) ಹಾಗೂ ತುಮಕೂರು ಮೂಲದ ಅರುಣ್ (34) ಬಂಧಿತ ಆರೋಪಿಗಳು. ಇವರು ಕುರುಬರಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸ್ಮಶಾನ ಹಾಗೂ ಸರ್ಕಾರಿ ಶಾಲೆಗಳ ಆವರಣದಲ್ಲಿದ್ದ ಗಂಧದ ಮರಗಳನ್ನು ಕಳವು ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆ.ಜಿ. ಶ್ರೀಗಂಧ, ಪೆಟ್ರೋಲ್ …
Read More »
BigTv News
June 19, 2026
Breaking News
ಬೆಂಗಳೂರು ನಗರದ ಕಬ್ಬನ್‌ಪೇಟೆ ಪ್ರದೇಶದಲ್ಲಿ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳನೊಬ್ಬ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಜುನೈದ್ ಎಂದು ಗುರುತಿಸಲಾಗಿದೆ. ಮೊಬೈಲ್ ಕಸಿದು ಓಡುತ್ತಿದ್ದ ಜುನೈದ್‌ನನ್ನು ಸ್ಥಳೀಯರು ಬೆನ್ನಟ್ಟಿದ ವೇಳೆ ಆತ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ ಅಷ್ಟರಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅತಿಯಾದ ಓಟ ಹಾಗೂ ಆತಂಕದಿಂದ ಹೃದಯಾಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿನ ನಿಖರ ಕಾರಣ …
Read More »
BigTv News
June 19, 2026
Breaking News
ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ತುರ್ತು ತಪಾಸಣೆ ನಡೆಸಿದರು. ನ್ಯಾಯಾಲಯದ ಎಲ್ಲಾ ಕೊಠಡಿಗಳು, ಸಭಾಂಗಣಗಳು ಮತ್ತು ವಕೀಲರ ಭವನದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರೂ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಲಿಲ್ಲ. ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ದೃಢಪಡಿಸಿದರು. ಪದೆಪದೆ ನ್ಯಾಯಾಲಯಗಳಿಗೆ ಇಂತಹ ಬೆದರಿಕೆ ಇ-ಮೇಲ್‌ಗಳು ಬರುತ್ತಿರುವುದರಿಂದ ಆತಂಕ …
Read More »
BigTv News
June 19, 2026
Breaking News
ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನನ್ನು ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಶಿವಲಿಂಗಯ್ಯ (60) ಕೊಲೆಯಾದ ದುರ್ದೈವಿ. ರಿಹ್ಯಾಬ್ ಸೆಂಟರ್ ಗೆ ಚಿಕಿತ್ಸೆಗೆಂದು ಬಂದವರಿಂದಲೇ ಮಾಲೀಕನ ಹತ್ಯೆಯಾಗಿದೆ.ರಾಡ್ ನಿಂದ ಹೊಡೆದು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ …
Read More »