admin
December 2, 2021
Breaking News, ಕ್ರಿಕೆಟ್, ದೇಶ-ವಿದೇಶ
ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯಿಂದ ವಿರಾಟ್ ಕೊಹ್ಲಿಯ ಏಕದಿನ ನಾಯಕತ್ವದ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ರೂಪಾಂತರಿ ಕೋವಿಡ್ 19 ಭಿತಿಯ ನಡುವೆಯೂ ಭಾರತ ತಂಡ ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದ್ದು, ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಅತ್ಯುತ್ತಮವಾದ ಬಯೋಬಬಲ್ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದೆ. 2022ರಲ್ಲಿ ಸಂಪೂರ್ಣ ಟಿ20 ಕ್ರಿಕೆಟ್ ಪಂದ್ಯಗಳಿಗೆ ಹೆಚ್ಚು ಒತ್ತು …
Read More »
admin
December 2, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಜಿಲ್ಲೆ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ ತೆಕ್ಕೆಯಿಂದ ಮರಳಿ ಸ್ಥಾನವನ್ನು ದಕ್ಕಿಸಿಕೊಳ್ಳುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಮುಂದಾಗಿದ್ದಾರೆ. ಉಪ ಸಮರದಲ್ಲಿ ಸಿಎಂ ತವರಿನ ಸೋಲು ಪರಿಷತ್ ಚುನಾವಣೆಯಲ್ಲಿ ಮಾಜಿ ಸಿಎಂ ತವರಿನಲ್ಲಿ ಅಗಬಾರದು ಎನ್ನುವ ಕಾರಣಕ್ಕೆ ಆದ್ಯತೆ ಮೇಲೆ ಬಿಎಸ್ವೈ ಪ್ರಚಾರದ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಪರಿಷತ್ ಚುನಾವಣಾ ಪ್ರಚಾರ : ಇತ್ತೀಚಿನ ವರ್ಷಗಳಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೂ ಕೊಡದಷ್ಟು ಸಮಯ …
Read More »
admin
December 2, 2021
Breaking News, ಕರ್ನಾಟಕ, ಬೆಳಗಾವಿ, ರಾಜಕೀಯ ಸುದ್ದಿ
ಅಥಣಿ: ನನಗೆ ವೈರಿಗಳು ಹೆಚ್ಚಾಗಿದ್ದಾರೆ. ಇದರಿಂದ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಜೊತೆ ನಡೆದ ಸಭೆಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಮತ್ತು ಎರಡನೇ ಪ್ರಾಶಸ್ತ್ಯದ ಮತ ಯಾರಿಗೆ ಹಾಕಬೇಕು ಎಂಬುದನ್ನು ಯಾರಿಗೆ ಹಾಕಬೇಕು ಎಂಬುದನ್ನು ಪಕ್ಷದ ವರಿಷ್ಠರ ಜೊತೆ ಮಾತನಾಡಿ ಶೀಘ್ರವೇ ತಿಳಿಸುವೆ ಎಂದು ಹೇಳಿದರು. ಮೊದಲ ಮತ ಲಖನ್ಗೋ? …
Read More »
admin
December 2, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಉಳ್ಳಾಲ (ಮಂಗಳೂರು): ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಲಪಾಡಿಯ ಬಳಿ ಶಾಲೆಗೆ ತೆರಳುವ ವೇಳೆ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ ಪರಾರಿಯಾಗಿದ್ದ. ಈ ಸಂಬಂಧ ಉಳ್ಳಾಲ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಸುತ್ತಲಿನ ಸಿಸಿಟಿವಿ ದೃಶ್ಯಗಳ ಆಧರಿಸಿ ಆರೋಪಿ ರಾಶಿಕ್ (22) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಮಂಗಳೂರಿನ ಕೆ.ಸಿ ರೋಡ್ನ ಮುಳ್ಳುಗುಡ್ಡೆ ನಿವಾಸಿಯಾಗಿದ್ದು, ನಿನ್ನೆ …
Read More »
admin
December 2, 2021
Breaking News, ಆರೋಗ್ಯ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕೋವಿಡ್ ಸೋಂಕು ಕಡಿಮೆಯಾಯ್ತು, ಅನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದ್ದು ಮತ್ತಷ್ಟು ಆತಂಕ ಮನೆ ಮಾಡಿದ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ. ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಭೀತಿ ಮತ್ತಷ್ಟು …
Read More »
admin
December 2, 2021
Breaking News, ಅಪರಾಧ, ಕರ್ನಾಟಕ, ಚಾಮರಾಜನಗರ
ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.ಗಾಯಾಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ …
Read More »
admin
December 2, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಕುಟುಂಬವನ್ನು ಭೇಟಿಯಾಗಿ ಆದಿಚುಂಚನಗಿರಿ ಶ್ರೀಗಳು ಸಾಂತ್ವನ ಹೇಳಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಆಗಮಿಸಿದ ಆದಿಚುಂಚನಗಿರಿ ಶ್ರೀಗಳು ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಕನ್ನಡ ಕಲಾ ಕ್ಷೇತ್ರಕ್ಕೆ ಪುನೀತ್ ರಾಜ್‍ಕುಮಾರ್ ಅವರು ನೀಡಿದ ಕೊಡುಗೆ ಅಪಾರ. ಮೊದೊಲಿನಿಂದಲೂ ರಾಜ್‍ಕುಮಾರ್ ಕುಟುಂಬಕ್ಕೆ ಮತ್ತು ಮಠಕ್ಕೆ ಅವಿನಾಭಾವ ಸಂಬಂಧ ಇದೆ ಎಂದರು. ರಾಜ್‍ಕುಮಾರ್ ಕುಟುಂಬದ ಕುಡಿ …
Read More »
admin
December 2, 2021
Breaking News, ಕರ್ನಾಟಕ, ಬೆಂಗಳೂರು ಗ್ರಾಮಾಂತರ
ಆನೇಕಲ್(ಬೆಂ.ನಗರ ಜಿಲ್ಲೆ): ರಾಮೋಜಿ ಗೌಡ ಅವರಿಗೆ ಸೇರಿದ ಬಿಎಸ್‌ಆರ್ ಡೆವಲಪರ್ಸ್ ಹಾಗೂ ಟುಟೋರಿಯಲ್ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ಹೆಚ್‌ಎಸ್‌ಆರ್ ಲೇಔಟ್‌ನ ಬಿಡಿಎ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಮೋಜಿ ಗೌಡ ಹಿರಿಯ ಕಾಂಗ್ರೆಸ್ ನಾಯಕರ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ.
Read More »
admin
December 2, 2021
Breaking News, ಕರ್ನಾಟಕ, ಬೆಂಗಳೂರು, ಮೈಸೂರು
ಮೈಸೂರು: ಉಡುಪಿಯ ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪ ಸಂಬಂಧ ಬಸವನಗುಡಿ ಠಾಣೆಯಲ್ಲಿ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿರುವುದು ನ್ಯಾಯಕ್ಕೆ ಸಂದ ಜಯ ಎಂದು ನಟ ಚೇತನ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕೆ ಬಲವಿದೆ. ಪೊಲೀಸರು ನ್ಯಾಯದ ಪರವಾಗಿದ್ದಾರೆ. ಹಂಸಲೇಖ ಹೇಳಿಕೆ ಸಂವಿಧಾನ ಬದ್ಧವಾಗಿದೆ. ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿದೆ ಎಂದರು. ಪಿರಿಯಾಪಟ್ಟಣ …
Read More »
admin
December 2, 2021
Breaking News, ಕರ್ನಾಟಕ, ಶಿವಮೊಗ್ಗ
ಶಿವಮೊಗ್ಗ: ನಂಜಪ್ಪ ನರ್ಸಿಂಗ್ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ವಿದ್ಯಾರ್ಥಿಗಳೆಲ್ಲರೂ ಕೇರಳದಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ಇರಿಸಲಾಗಿದೆ. ನಂಜಪ್ಪ ಲೈಫ್ ಕೇರ್ ಹಾಗೂ ನಂಜಪ್ಪ ನರ್ಸಿಂಗ್ ಕಾಲೇಜನ್ನು ಸೀಲ್ಡೌನ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ. ಧಾರವಾಡ ಮತ್ತು ಮೈಸೂರು ಜಿಲ್ಲೆಗಳ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಮೊದಲು ಕೋವಿಡ್ ಕಂಡು ಬಂದಿತ್ತು. ಧಾರವಾಡ ಜಿಲ್ಲೆಯಲ್ಲಿ ಭಾನುವಾರದಿಂದ …
Read More »