Breaking News

Breaking News

ಕಿಮ್ಸ್ ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಹೃದಯ ರೋಗಕ್ಕೆ ಸರಿಯಾದ ಚಿಕಿತ್ಸೆ: ತಜ್ಞ ವೈದ್ಯರಿಲ್ಲ, ಅಗತ್ಯ ಸಲಕರಣೆ ಇಲ್ಲವೇ ಇಲ್ಲ…!

ಹುಬ್ಬಳ್ಳಿ : ಅದು ಇಡೀ ಉತ್ತರ ಕರ್ನಾಟಕ ಭಾಗದ ಬಡರೋಗಿಗಳಿಗೆ ಸಂಜೀವಿನಿ ಎಂದೇ ಹೆಸರು ವಾಸಿಯಾಗಿರುವ ಆಸ್ಪತ್ರೆ.‌ ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಆ ಆಸ್ಪತ್ರೆಯಲ್ಲಿ ಹೃದ್ರೋಗ ಶಸ್ತ್ರ ಚಿಕಿತ್ಸೆಗೆ ಬೇಕಾದ ನುರಿತ ತಜ್ಞರೂ ಇಲ್ಲ, ಅಗತ್ಯ ಸಲಕರಣೆಗಳೂ ಇಲ್ಲ. ಹೌದು.. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಯ ವ್ಯವಸ್ಥೆಯಿಲ್ಲದೇ ಹೃದಯ ರೋಗಿಗಳು ಪರದಾಡುವಂತಾಗಿದೆ. ಉತ್ತರ ಕರ್ನಾಟಕದ ಐದಾರೂ ಜಿಲ್ಲೆಯ ರೋಗಿಗಳಿಗೆ ಆಧಾರವಾದ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರತಿ …

Read More »

ಎರಡು ತಲೆ, ಮೂರು ಕಣ್ಣುಳ್ಳ ವಿಚಿತ್ರ ಕರು ಜನನ- ಕರು ನೋಡಲು ಮುಗಿಬಿದ್ದ ಜನರು

ಮೈಸೂರು: ಎರಡು ತಲೆ, ಮೂರು ಕಣ್ಣುಗಳಿರುವ ವಿಚಿತ್ರ ಕರುವೊಂದು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಗ್ರಾಮದಲ್ಲಿ ಜನಿಸಿದ್ದು, ಕರು ನೋಡಲು ಜನರು ಮುಗಿ ಬೀಳುತ್ತಿದ್ದಾರೆ. ಹೊಮ್ಮರಗಳ್ಳಿ ನಿವಾಸಿ ಮಹದೇವಪ್ಪ ಅವರ ಮನೆಯ ಸೀಮೆ ಹಸು‌ ಈ ವಿಚಿತ್ರ ಕರುವಿಗೆ ಜನ್ಮ ನೀಡಿದೆ. ಎರಡು ತಲೆ, ಮೂರು ಕಣ್ಣನ್ನು ಈ ಕರು ಹೊಂದಿದ್ದು, ಈ ಅದ್ಭುತವನ್ನು ನೋಡಿದ ಮನೆ ಮಂದಿ‌ ಸಂತಸಗೊಂಡಿದ್ದಾರೆ. ಈ ಕುರಿತು ‘ಈಟಿವಿ ಭಾರತ’ದ ಜೊತೆ ದೂರವಾಣಿಯಲ್ಲಿ ಮಾತನಾಡಿದ …

Read More »

ಮೈಸೂರಿನ 48 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ತಗುಲಿದ ಕೊರೊನಾ ಸೋಂಕು!

ಮೈಸೂರು: ಬೆಂಗಳೂರು ಹಾಗೂ ಧಾರವಾಡದ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್​​ ದೃಢಪಟ್ಟ ಬೆನ್ನಲ್ಲೇ ಇದೀಗ ಮೈಸೂರಿನ ಕಾಲೇಜು ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಒಂದು ವಾರದ ಅವಧಿಯಲ್ಲಿ ಮೈಸೂರಿನ ಎರಡು ಖಾಸಗಿ ಕಾಲೇಜುಗಳ 48 ನರ್ಸಿಂಗ್‌ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲಾಡಳಿತದ ಅಧಿಕಾರಿಗಳು ನೀಡಿರುವ ಮಾಹಿತಿಗಳ ಪ್ರಕಾರ, ಎರಡು ಖಾಸಗಿ ನರ್ಸಿಂಗ್ ಕಾಲೇಜುಗಳ 48 ವಿದ್ಯಾರ್ಥಿಗಳಲ್ಲಿ ಕೋವಿಡ್ ತಗುಲಿರುವುದು​​ ದೃಢಪಟ್ಟಿದೆ. ಈ ಎಲ್ಲ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ನರ್ಸಿಂಗ್‌ …

Read More »

ಕೋವಿಡ್ ಸೋಂಕಿನ ಹೊಸ ತಳಿ ಸಂಬಂಧ ಸಂಜೆ ಸಿಎಂ ಸಭೆ: ಕೋವಿಡ್ ನಿಯಂತ್ರಣ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚೆ

ಬೆಂಗಳೂರು: ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿ ಸಂಬಂಧ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರಿ ನಿವಾಸದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಈ ಸಂಬಂಧ ಆರ್.ಟಿ. ನಗರದ ತಮ್ಮ ನಿವಾಸದ ಬಳಿ ಮಾತನಾಡಿರುವ ಸಿಎಂ, ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ‌ ಶಾಲೆಗಳಲ್ಲಿ ಕೋವಿಡ್ ಉಲ್ಬಣವಾಗಿದೆ. ಕೇರಳದಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಇದನ್ನು ಗಮನಿಸಿ ಶೀಘ್ರದಲ್ಲೇ ಮುಂಜಾಗ್ರತಾ …

Read More »

ದೆವ್ವ ಬಿಡಿಸ್ತಿನಿ ಅಂತಾ ಈ ಬಾಬಾ ಮಾಡಿದ್ದೇನು-5 ವರ್ಷಗಳಿಂದ ಈ ಫಕೀರ ಮಾಡಿದ್ದು ನೋಡಿ ನಿಮಗೆ ಗೊತ್ತಾಗುತ್ತೆ

ಹೈದರಾಬಾದ್‌: ದೆವ್ವ ಬಿಡಿಸುವ ನೆಪದಲ್ಲಿ ನಕಲಿ ಬಾಬ ಹಾಗೂ ಆತನ ಪುತ್ರ ಮಹಿಳೆ, ಆಕೆಯ ತಂಗಿಯ ಮೇಲೆ 5 ವರ್ಷಗಳಿಂದ ಅತ್ಯಾಚಾರ ಮಾಡಿರುವ ಆರೋಪ ಹೈದರಾಬಾದ್‌ನ ಪಾತ ಬಸ್ತಿಯಲ್ಲಿ ಕೇಳಿ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ತಮ್ಮ ಸಂಬಂಧಿಕರ ಸೂಚನೆ ಮೇರೆಗೆ ನಕಲಿ ಬಾಬ ಬಳಿಗೆ ಬಂದಿದ್ದಾಳೆ. ಈಕೆಗೆ ದೆವ್ವ ಹಿಡಿದಿದೆ ಎಂದು ನಂಬಿಸಿ ಅದನ್ನು ಹೋಗಲಾಡಿಸಬೇಕೆಂದು ಮನೆಯೊಳಗೆ ಕರೆದೊಯ್ದು ಕಿರಾತಕ, ಇದು ಭೂತದ ವೈದ್ಯಕೀಯ ಅಂತ ಹೇಳಿ ಅತ್ಯಾಚಾರ ಮಾಡಿದ್ದಾನೆ …

Read More »

ಶಕ್ತಿಧಾಮಕ್ಕೆ ಭೇಟಿಕೊಟ್ಟ ಶಿವರಾಜ್‍ಕುಮಾರ್ ದಂಪತಿ

ಮೈಸೂರು: ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಅವರು ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರ ಜೊತೆಗೆ ಮೈಸೂರಿಲ್ಲಿರುವ ಶಕ್ತಿಧಾಮಕ್ಕೆ ಭೆಟಿಕೊಟ್ಟು ಅಲ್ಲಿಯ ನಿರ್ವಹಣೆಯ ಕುರಿತಾಗಿ ವಿಚಾರಿಸಿದ್ದಾರೆ. ಶಕ್ತಿಧಾಮ ನಿರ್ವಹಣೆ ಕುರಿತಂತೆ ಧರ್ಮದರ್ಶಿಗಳ ಸಭೆ ಮಾಡಿದ್ದಾರೆ. ಟ್ರಸ್ಟ್ ಅಧ್ಯಕ್ಷೆ ಗೀತಾ ಶಿವರಾಜ್‍ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದೆ. ಸಭೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ಮ್ಯಾನೇಂಜಿಂಗ್ ಟ್ರಸ್ಟಿ ಜಯದೇವ್, ಖಜಾಂಚಿ ಸುಮನ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. 150 ಮಕ್ಕಳ ಹಾರೈಕೆ, ಶಿಕ್ಷಣ …

Read More »

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಲಕ್ನೋ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮ್ಯಾನ್‌ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಸಂಭ್ರಮಿಸಿದ ಪರಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಪರ ನಿಗದಿತ ಓವರ್‌ಗಳ ತಂಡದಲ್ಲಿ ಈಗಾಗಲೇ ಆಡಿದ್ದಾರೆ. ಇದೀಗ ಟೆಸ್ಟ್ ತಂಡಕ್ಕೂ ಪಾದಾರ್ಪಣೆ ಮಾಡಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ, ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಆಟಗಾರ …

Read More »

2 ಗುಂಪಿನ ಯುವಕರ ನಡುವೆ ಮಾರಾಮಾರಿ-ಚಿಕ್ಕಮಗಳೂರಲ್ಲಿ ನೆಡೆದ ಘಟನೆ

ಚಿಕ್ಕಮಗಳೂರು: ನಗರದಲ್ಲಿ ಪುಂಡರ ದಾಂಧಲೆ ಮಿತಿ ಮೀರಿ ಹೋಗುತ್ತಿದೆ. ನಗರದ ಹೃದಯಭಾಗ ಐ.ಜಿ ರಸ್ತೆಯಲ್ಲಿ 2 ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಸೌಟು, ಬಾಂಡ್ಲಿ, ಸೌದೆ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪೊಲೀಸರ ಭಯವಿಲ್ಲದೇ ರೌಡಿಗಳಂತೆ ರಸ್ತೆ ಮಧ್ಯೆದಲ್ಲಿ ಪುಂಡರ ಬಡಿದಾಟ ನೋಡಿ ಜನರು ದಂಗಾಗಿದ್ದಾರೆ. ಯಾವ ಕಾರಣಕ್ಕಾಗಿ ಪುಂಡರು ಈ ರೀತಿ ಹೊಡೆದಾಡಿಕೊಂಡಿದ್ದಾರೆ, ಎಂಬುದು ತಿಳಿದು ಬಂದಿಲ್ಲ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ …

Read More »

ಪೆನ್ಸಿಲ್​​ ಕದ್ದ ವಿಚಾರಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪುಟಾಣಿಗಳು: ಮಕ್ಕಳ ಮಾತು ಕೇಳಿದ್ರೆ ನೀವೂ ನಗ್ತೀರಾ!

ಕರ್ನೂಲ್​(ಆಂಧ್ರಪ್ರದೇಶ): ಪೊಲೀಸರೆಂದರೆ ಭಯ ಸಾಮಾನ್ಯ. ಅವರಿಂದ ಆದಷ್ಟು ದೂರ ಇರುವುದಕ್ಕೆ ಜನರು ಇಷ್ಟಪಡುತ್ತಾರೆ. ಏನಾದ್ರು ಸಣ್ಣಪುಟ್ಟ ಕಳ್ಳತನ ಪ್ರಕರಣಗಳು ನಡೆದರೂ ಕೂಡ ಕೆಲವರು ಪೊಲೀಸ್ ಠಾಣೆ ಮೆಟ್ಟಿಲೇರದೆ ಸುಮ್ಮನಾಗಿ ಬಿಡುತ್ತಾರೆ. ಆದರೆ, ಕೆಲವೊಬ್ಬರು ವಿಚಿತ್ರ ಕಾರಣಕ್ಕಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿ ದೂರು ನೀಡಿರುವ ಉದಾಹರಣೆಗಳಿವೆ. ಆಂಧ್ರದ ಕರ್ನೂಲ್‌ನಲ್ಲಿ ಇದೇ ರೀತಿಯ ಕುತೂಹಲಕಾರಿ ಘಟನೆ ನಡೆದಿದೆ. ಇಲ್ಲಿ ಪೆನ್ಸಿಲ್​ ಕದ್ದಿದ್ದಕ್ಕಾಗಿ 3ನೇ ತರಗತಿ ಬಾಲಕನೋರ್ವ ಶಿಕ್ಷಕರಿಗೆ ಹೇಳದೆ, ತನ್ನ ಸ್ನೇಹಿತನ ವಿರುದ್ಧವೇ ಪೊಲೀಸ್ …

Read More »

ಹಾಸನದಲ್ಲಿ ಮಾರಕಾಸ್ತ್ರ ಹಿಡಿದು ಪುಂಡರ ಬೈಕ್ ವೀಲಿಂಗ್

ಹಾಸನ: ಒಂದೆಡೆ ಪೆಟ್ರೋಲ್ ಬೆಲೆ ಗಗನಕ್ಕೇರಿದೆ, ಮತ್ತೊಂದೆಡೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಕೆಲ ಪುಂಡ ಹುಡುಗರು ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ನಡುರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ವೀಲಿಂಗ್ ಮಾಡುತ್ತಿದ್ದಾರೆ. ಇದನ್ನು ಕಂಡ ಜನರು ಭಯಭೀತರಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಲಸಿಂದ ಪಾರ್ಕ್ ಬಳಿ ಐದಾರು ಮಂದಿ ಯುವಕರು ಬೈಕ್ ವೀಲಿಂಗ್ ಮಾಡುವ ಜೊತೆಗೆ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಪುಂಡಾಟಿಕೆ ಮಾಡಿರುವ ಘಟನೆ ನಡೆದಿದೆ. ಗುತ್ತಿಗೆದಾರರ ಸಂಘದ …

Read More »