Breaking News

Breaking News

ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್​ ಪಡೆಯುವ ಸರ್ಕಾರವಿದೆ-ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರು: ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್​ ಪಡೆಯುವ ಸರ್ಕಾರವಿದೆ. ರಾಜ್ಯಪಾಲರು ಇಂತಹ ಸರ್ಕಾರವನ್ನು ವಜಾ ಮಾಡುವಂತೆ ಪತ್ರ ಬರೆಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ಕಾಮಗಾರಿ ತೆಗೆದುಕೊಳ್ಳಬೇಕಾದರೆ ಮಂತ್ರಿಗಳಿಗೆ, ಎಂಎಲ್​ಎಗಳಿಗೆ 40 ಪರ್ಸೆಂಟ್ ಕಮಿಷನ್​ ಕೊಡಬೇಕಾಗಿದೆ ಎಂದು ಗುತ್ತಿಗೆದಾರರ ಸಂಘ ಪ್ರಧಾನಿ ಅವರಿಗೆ ಪತ್ರ ಬರೆದಿದೆ ಎಂದರು. ಇಷ್ಟೊಂದು ಕಮಿಷನ್​ ತೆಗೆದುಕೊಳ್ಳುವ ಸರ್ಕಾರವನ್ನು …

Read More »

ಬಿಜೆಪಿಯವರು ರೈತರಲ್ಲಿ ಕ್ಷಮೆಯಾಚಿಸಲಿ: ಶಾಸಕ ಯು.ಟಿ.ಖಾದರ್

ಮಂಗಳೂರು: ಕೇಂದ್ರ ಸರ್ಕಾರವು ದೇಶಕ್ಕೆ ಮಾರಕವಾಗಿರುವ ರೈತ ವಿರೋಧಿ ಕಾಯ್ದೆಗಳನ್ನು ರೈತರ ಜನಾಂದೋಲನಕ್ಕೆ ಮಣಿದು ಹಿಂಪಡೆದಿದೆ. ಆದರೆ 1 ವರ್ಷ 2 ತಿಂಗಳಲ್ಲಿ ಎಷ್ಟು ಶ್ರೀಮಂತರು ಈ ಕಾಯ್ದೆಯಿಂದ ಲಾಭ ಪಡೆದುಕೊಂಡಿದ್ದಾರೆಂದು ಸರ್ಕಾರ ಬಹಿರಂಗಪಡಿಸಲಿ ಎಂದು ಶಾಸಕ ಯು.ಟಿ ಖಾದರ್ ಹೇಳಿದರು. ‘ಬಿಜೆಪಿ ಮುಖಂಡರು ಕ್ಷಮೆ ಯಾಚಿಸಲಿ’: ಕಾಂಗ್ರೆಸ್ ಸರ್ಕಾರ ರೈತ ಮಸೂದೆಯನ್ನು ಜಾರಿಗೊಳಿಸಿತ್ತು. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಕಾನೂನನ್ನು ತಿದ್ದುಪಡಿ ಮಾಡಿತು. ಹಾಗಾಗಿ ರೈತರು ನಿರಂತರ …

Read More »

ಸೋಮಶೇಖರ್​ ಆಪ್ತ ಸಹಾಯಕನಿಗೆ ಕೈ ಟಿಕೆಟ್.. ಕಾಂಗ್ರೆಸ್ ಬಿಜೆಪಿಯ ‘ಸಿ’ ಟೀಂ.. HDK ವ್ಯಂಗ್ಯ

ಬೆಂಗಳೂರು : ಸಚಿವ ಎಸ್‌ ಟಿ ಸೋಮಶೇಖರ್​ ಅವರ ಆಪ್ತ ಸಹಾಯಕ ದಿನೇಶ್ ಗೂಳಿಗೌಡ ಅವರಿಗೆ ಮಂಡ್ಯದಿಂದ ವಿಧಾನಪರಿಷತ್ತಿಗೆ ಟಿಕೆಟ್ ನೀಡಲು ಹೊರಟಿರುವ ಕಾಂಗ್ರೆಸ್​ ನಡೆಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಸಿ ಟೀಂ​ ಎಂಬುದನ್ನು ಕಾಂಗ್ರೆಸ್ ನಾಯಕರೇ ಹೇಳಬೇಕು ಎಂದರು. ಪಕ್ಷದ ಕಚೇರಿ ಜೆ ಪಿ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಸ್.ಟಿ. ಸೋಮಶೇಖರ್ ಆಪ್ತ ಸಹಾಯಕರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ. ನಮ್ಮ …

Read More »

ನ. 23ರವರೆಗೂ ಭಾರೀ ಮಳೆ ಸಾಧ್ಯತೆ : ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!

ಬೆಂಗಳೂರು : ಕಳೆದು ಹಲವು ದಿನಗಳಿಂದಲೂ ಸುರಿಯುತ್ತಿರುವ ಅಕಾಲಿಕ ಮಳೆ ಬಹುತೇಕ ಜಿಲ್ಲೆಯ ಅನ್ನದಾತರನ್ನ ಕಂಗಾಲು ಮಾಡಿದೆ. ಜತೆಗೆ ನಿರಂತರ ಮಳೆಯಿಂದಾಗಿ ರಾಜ್ಯದಾಂದ್ಯಂತ ಹಲವು ಅವಾಂತರಗಳು ಕೂಡ ಸೃಷ್ಠಿಯಾಗುತ್ತಿವೆ. ಸದ್ಯ ರಾಜ್ಯದಲ್ಲಿ ವರುಣಾರ್ಭಟ ಮುಗಿಯುವ ಲಕ್ಷಣವೂ ಕಾಣುತ್ತಿಲ್ಲ. ಈ ಮಧ್ಯೆ ಹವಾಮಾನ ಇಲಾಖೆಯೂ ಕೂಡ ಮುನ್ನೆಚ್ಚರಿಕೆ ನೀಡಿದ್ದು, ನ.23ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, …

Read More »

ಪ್ರವಾಹ ಭೀತಿ ಇರುವ ಪ್ರದೇಶಗಳಲ್ಲಿನ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಧಾರವಾಡ: ಎಲ್ಲಿ ಹಳ್ಳಗಳನ್ನು ದಾಟಿಕೊಂಡು ಮಕ್ಕಳು ಶಾಲೆಗೆ ಹೋಗುತ್ತಾರೋ ಹಾಗೂ ಪ್ರವಾಹ ಎದುರಾಗುವ ಪ್ರದೇಶಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಾದ್ಯಂತ ಎರಡ್ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಇದರಿಂದ ಹಳ್ಳ, ಕೊಳ್ಳಗಳು ತುಂಬಿ ಬರುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೆಲ್ಲಿ ಹಳ್ಳಗಳನ್ನು ದಾಟಿಕೊಂಡು ಮಕ್ಕಳು ಶಾಲೆಗೆ ಹೋಗಬೇಕೋ ಅಂತಹ ಪ್ರದೇಶದಲ್ಲಿನ ಶಾಲೆಗೆ ರಜೆ …

Read More »

ಪ್ರತಿಷ್ಠೆಗೆ ಮಣಿದು ಕಾಯಿದೆ ಹಿಂಪಡೆದಿಲ್ಲ ರೈತರ ಹಿತ ಮುಖ್ಯ: ಬಿ.ಎಸ್.ವೈ…!

ಹುಬ್ಬಳ್ಳಿ: ಯಾವುದೇ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ಈ ರೀತಿ ತೀರ್ಮಾನ ಮಾಡಿಲ್ಲ.ನಮ್ಮ ಕಾಯ್ದೆಯಲ್ಲಿ ಲೋಪದೋಷ ಇಲ್ಲ ಅಂತ ಹೇಳಿದ್ದು, ನಿಜ. ಆದರೆ ರೈತರ ಹಿತಕ್ಕಾಗಿ ಕೃಷಿ ಕಾಯಿದೆ ನಿಷೇಧ ಮಾಡಲಾಗಿದೆ. ಇದರಲ್ಲಿ ಸೋಲು ಗೆಲುವು ಪ್ರಶ್ನೆ ಇಲ್ಲ, ಇದು ಉತ್ತಮ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕೇಂದ್ರ ಸರ್ಕಾರ ಕೃಷಿ ಕಾಯಿದೆ ಹಿಂಪಡೆದ ಹಿನ್ನೆಲೆಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಐತಿಹಾಸಿಕ ತೀರ್ಮಾನವನ್ನು ಈಗ ತೆಗೆದುಕೊಂಡಿದ್ದಾರೆ. …

Read More »

ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು ಮಾಜಿ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಎರಡನೇ ದಿನದ ಜನಸ್ವರಾಜ್ ಸಮಾವೇಶ. ನಾಳೆ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿಯಲ್ಲಿ ಸಮಾವೇಶ ನಡೆಯಲಿದೆ. ಪರಿಷತ್ ಚುನಾವಣೆಯಲ್ಲಿ ನಾವು 20 ಸೀಟುಗಳನ್ನು ಹಾಕಲಿದ್ದೇವೆ. ಅದರಲ್ಲಿ ಅತೀ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇವತ್ತು ಬಹಳ ಐತಿಹಾಸಿಕ ದಿನ. …

Read More »

ಕಾಂಗ್ರೆಸ್ಸಿಗರು ಪಾರ್ಟ್ ಟೈಮ್ ಲೀಡರ್ಸ್’-ಶ್ರೀ ರಾಮುಲು

ಹುಬ್ಬಳ್ಳಿ: ಕಾಂಗ್ರೆಸ್‌ನ ನಾಯಕರು ಪಾರ್ಟ್ ಟೈಮ್ ಲೀಡರ್ಸ್ ಇದ್ದಂತೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಪಾರ್ಟ್ ಟೈಮ್ ಅಲ್ಲ ಫುಲ್ ಟೈಮ್ ಲೀಡರ್ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ 15ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಹೊಸ ಇತಿಹಾಸವನ್ನು ಬರೆಯುತ್ತೇವೆ. ಹಿಂದುಳಿದವರನ್ನು ಕಾಂಗ್ರೆಸ್ ಕಡೆಗಣಿಸಿದ ಹಾಗೆ ಬಿಜೆಪಿ ಮಾಡಿಲ್ಲ. ಕಾಂಗ್ರೆಸ್ ಹಗರಣದ ರಾಜಕಾರಣ ಮಾಡುತ್ತಾ …

Read More »

ಹಾಡಹಗಲೇ ರೈಲ್ವೆ ನೌಕರನಿಗೆ ಚಾಕು ಇರಿತ: ಗಾಯಾಳು ಆಸ್ಪತ್ರೆಗೆ ದಾಖಲು…!

ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತೃಗಳು ಸದ್ದು ಮಾಡುತ್ತಿವೆ. ದುಷ್ಕರ್ಮಿಗಳು ರೈಲ್ವೆ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ರೇಲ್ವೆ ಶೆಡ್ ಮುಂಭಾಗದಲ್ಲಿ ನಡೆದಿದೆ. ಹುಬ್ಬಳ್ಳಿ- ಗದಗ ರಸ್ತೆಯಲ್ಲಿರುವ ಲೋಕೋ ಶೆಡ್ ಮುಂಭಾಗದಲ್ಲಿಯೇ ಚಂದ್ರಶೇಖರ ನಾಯ್ಡು ಎಂಬುವವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಮೂರ್ನಾಲ್ಕು ಬಾರಿ ಇರಿದಿದ್ದರಿಂದ ತೀವ್ರವಾದ ರಕ್ತಸ್ರಾವವಾಗಿದೆ. ತಕ್ಷಣವೇ ರೈಲ್ವೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಧಾರವಾಡದ ಸತ್ತೂರ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ …

Read More »

ಜನ ಸ್ವರಾಜ್‌ ಯಾತ್ರೆಗೆ ಚಾಲನೆ

ಬೆಂಗಳೂರು : ರಾಜ್ಯ ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಲ್ಕು ತಂಡಗಳಿಂದ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ವಿಜಯದ ಕಹಳೆ ಊದುವ ಮೂಲಕ ಚಾಲನೆ ನೀಡಿ, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಾಯಿತು. ಪಕ್ಷದ ರಾಜ್ಯಾಧ್ಯಕ್ಷರದ ಶ್ರೀ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಭಾ, ಸಚಿವರಾದ ಮುರುಗೇಶ್ ನಿರಾಣಿ ಹಾಲಪ್ಪ ಆಚಾರ್ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರೆ …

Read More »