Breaking News

Breaking News

ಮಾಜಿ ಸೈನಿಕನ ಮರ್ಡರ್‌ಗೆ ಬಿಗ್‌ ಟ್ವಿಸ್ಟ್: ಪತ್ನಿ ಸುಮಾಳ ಅಸಲಿಯತ್ತು ಬಯಲು: FSL ವರದಿಯನ್ನೇ ತಿರುಚಿದ ದುಷ್ಕರ್ಮಿಗಳು

ಬೆಳಗಾವಿ ಜಿಲ್ಲೆಯಲ್ಲಿ ₹2 ಕೋಟಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತಿಯನ್ನು ಕೊಲೆ ಮಾಡಿರುವ ಭೀಕರ ಪ್ರಕರಣ ಬೆಳಕಿಗೆ ಬಂದಿದೆ. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಸಂದೀಪ್ ಮಂಜರಗಿ (35) ಅವರನ್ನು ಪತ್ನಿ ಸುಮಾ ಹಾಗೂ ಆಕೆಯ ಪ್ರಿಯಕರ ಪುಂಡಲೀಕ ಡೊಂಗರ್ ಸೇರಿ ಆಸ್ಪತ್ರೆಯಲ್ಲೇ ವಿಷ ನೀಡಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆ ಅಪಘಾತದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಸಂದೀಪ್‌ಗೆ ಸಲೈನ್ ಮೂಲಕ ವಿಷ ನೀಡಲಾಗಿದ್ದು, ಸಾವನ್ನು ಹೃದಯಾಘಾತ …

Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಬೆಂಗಳೂರು : ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮೂವರು ಅಧಿಕಾರಿಗಳ ಮನೆ, ಕಚೇರಿ ಹಾಗೂ ಫಾರ್ಮ್ ಹೌಸ್‌ಗಳ ಮೇಲೆ 12 ತಂಡಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳು ಹಾಗೂ ಆಸ್ತಿ-ಪಾಸ್ತಿ ಸಂಬಂಧಿತ ಮಾಹಿತಿಗಳನ್ನು ಪರಿಶೀಲಿಸಲಾಗಿದೆ.ದಾವಣಗೆರೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣ ನಾಯ್ಕ್, NWKRTC ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ …

Read More »

ಭ್ರಷ್ಟಾಚಾರಿಗಳಿಗೆ ನಡುಕ ಶುರುವಾಗಿದೆ..! ಬೆಳ್ಳಂ ಬೆಳಗ್ಗೆ ಲೋಕಾ ಶಾಕ್, ಹುಬ್ಬಳ್ಳಿ ಅಧಿಕಾರಿಗೆ ಬಿಗ್ ಶಾಕ್.

ಭ್ರಷ್ಟರಿಗೆ ನಡುಕ ಶುರು..! ಹುಬ್ಬಳ್ಳಿಯಲ್ಲಿ ಲೋಕಾಯುಕ್ತರ ಖಡಕ್ ದಾಳಿ ಹುಬ್ಬಳ್ಳಿ: ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..! KSRTC ಚೀಫ್ ಮೆಕ್ಯಾನಿಕಲ್ ಮನೆ-ಕಚೇರಿ ಮೇಲೆ ಏಕಕಾಲಕ್ಕೆ ದಾಳಿಹುಬ್ಬಳ್ಳಿ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಕಾರ್ಯಾಚರಣೆ ಮುಂದುವರಿದಿರುವ ನಡುವೆಯೇ, ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ… ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಹುಬ್ಬಳ್ಳಿ …

Read More »

ಕೋಳಿ ಅಂಕಕ್ಕೆ ದಾಳಿ: ಮೂವರ ಸೆರೆ

ವಿಟ್ಲ: ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವನ್ನು ಆಡುತ್ತಿರುವ ವಿಚಾರ ತಿಳಿದ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರ ತಂಡ ದಾಳಿ ಮಾಡಿದ್ದು ಬೋಳಿಯಾರ್ ನಿವಾಸಿ ಲತೇಶ್ ಕುಮಾರ್ (37), ಮಂಚಿ ನಿವಾಸಿ ಸುರೇಶ್ ನಾಯ್ಕ್ ಕೆ.(63), ವಿಟ್ಲಪಡ್ನೂರು ನಿವಾಸಿ ದಯಾನಂದ (40) ಎಂಬವರನ್ನು ವಶಕ್ಕೆ ಪಡೆದು ಜೂಜಾಟಕ್ಕೆ ಬಳಸಿದ ರೂ 1,550 ನಗದು, 3 ಅಂಕದ ಕೋಳಿಗಳು ಹಾಗೂ ಇತರ …

Read More »

ಕಟ್ಟಿ ಹಾಕಿ ಲೈಂಗಿಕ ಕಿರುಕುಳ: ಕೇಸು

ಕಾಸರಗೋಡು: ಯುವತಿಯನ್ನು ವಸತಿ ಗೃಹಕ್ಕೆ ಕರೆದೊಯ್ದು ಕಟ್ಟಿ ಹಾಕಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಸಮೀಪದ ಪಂಚಾಯತ್‌ ವ್ಯಾಪ್ತಿಯ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಯು ಆಕೆಯನ್ನು ವಸತಿ ಗೃಹಕ್ಕೆ ಕರೆದೊಯ್ದು ಅಲ್ಲಿ ಕಟ್ಟಿ ಹಾಕಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಬಳಿಕ ಯುವತಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ …

Read More »

ಪೊಲೀಸರನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ರೌಡಿಶೀಟರ್‌ – ಮಚ್‌ ಮಂಜನ ಹಾವಳಿಗೆ ಖಾಕಿ ಗಡಗಡ

ಹಳಿಯಾಳ: ಮದ್ಯದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ರೌಡಿ ಶೀಟರ್ ಒಬ್ಬ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಆರೋಪಿ ಮಚ್ ಮಂಜ ಮೌರ್ಯ ಹೋಟೆಲ್ ಎದುರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು, ಸ್ಥಳೀಯರೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರ ಮಾತಿಗೂ ಕಿವಿಗೊಡದೆ ಉದ್ಧಟತನ ಪ್ರದರ್ಶಿಸಿದ್ದಾನೆ. ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ …

Read More »

ರಹಸ್ಯ ಮದುವೆ: ಯುವತಿಯನ್ನು ಕೊಂದು ಆತ್ಮಹತ್ಯೆ ನಾಟಕವಾಡಿದ ಆಟೋ ಚಾಲಕ!

ಬೆಂಗಳೂರು: ರಹಸ್ಯವಾಗಿ ಮದುವೆಯಾಗಿದ್ದ ಪತ್ನಿಯ ನಿಶ್ಚಿತಾರ್ಥ ನಡೆಯಲಿದೆಯೆಂಬ ಮಾಹಿತಿ ತಿಳಿದ ಬಳಿಕ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಆಟೋ ಚಾಲಕನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೃತೆಯನ್ನು ಭವಾನಿ ಎಸ್. (33) ಎಂದು ಗುರುತಿಸಲಾಗಿದ್ದು, ಖಾಸಗಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಚಂದ್ರಶೇಖರ್ ಮತ್ತು ಭವಾನಿ ಒಂದು ವರ್ಷದ ಹಿಂದೆ ಕುಟುಂಬದವರಿಗೆ ತಿಳಿಯದಂತೆ ಮದುವೆಯಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಭವಾನಿಗೆ ಮತ್ತೊಂದು ಮದುವೆ ನಿಶ್ಚಯವಾಗುತ್ತಿದ್ದ ವಿಚಾರ ತಿಳಿದು ಕೋಪಗೊಂಡ ಚಂದ್ರಶೇಖರ್, ಆಕೆಯನ್ನು …

Read More »

ತನ್ನದೇ ಇಲಾಖೆಯ ನಿವೃತ್ತ ನೌಕರನಿಂದ ಲಂಚ ಸ್ವೀಕಾರ !; ಹಣ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಸಹಕಾರ ಕಚೇರಿಯ ಅಕ್ಕಮ್ಮ

ಹಾವೇರಿ: ಇತ್ತೀಚೆಗೆ ನಿವೃತ್ತಿ ಹೊಂದಿದ ತನ್ನದೇ ಇಲಾಖೆಯ, ತನ್ನದೇ ಕಚೇರಿಯ ನಿವೃತ್ತ ನೌಕರನ ಗುಂಪು ವಿಮೆ ಮೊತ್ತದ ಬಿಲ್ ಮಾಡಿಕೊಡಲು ಕಚೇರಿಯಲ್ಲಿ ಸೋಮವಾರ 3,000 ರೂ. ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ದ್ವಿತೀಯ ದರ್ಜೆ ಸಹಾಯಕಿ ಅಕ್ಕಮ್ಮ ಎನ್.ಬಿದರೇರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇಲ್ಲಿನ ಜಿಲ್ಲಾಡಳಿತ ಭವನದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮಹದೇವ ಹನುಮಂತಪ್ಪ ಜೇಕಿನಕಟ್ಟಿ ಮೇ 31ರಂದು ಸೇವೆಯಿಂದ …

Read More »

ವಿಮಾ ಹಣಕ್ಕಾಗಿ ಪತಿಯ ಹತ್ಯೆ: ಪತ್ನಿ ಸಹಿತ 9 ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. 2 ಕೋಟಿ ರೂ. ವಿಮಾ ಹಣ ಪಡೆಯುವ ಉದ್ದೇಶದಿಂದ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅಪಘಾತದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಸಂದೀಪ್ ಅವರಿಗೆ ವಿಷ ನೀಡಿ ಹತ್ಯೆ ಮಾಡಲಾಗಿದ್ದು, ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ …

Read More »

ಉಡುಪಿ ನಗರದಲ್ಲಿ ಚಾಕು ಬೀಸಿ ಬಾಲಕಿಯ ರಂಪಾಟ!

ಉಡುಪಿಯ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ 17 ವರ್ಷದ ಬಾಲಕಿಯನ್ನು ರಕ್ಷಿಸಲು ಮುಂದಾದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಮೇಲೆ ಚಾಕು ಹಿಡಿದು ದಾಳಿ ನಡೆಸಿದ ಘಟನೆ ಸೋಮವಾರ ನಡೆದಿದೆ. ವಿಶು ಶೆಟ್ಟಿ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ. ಉತ್ತರ ಕನ್ನಡ ಮೂಲದ ಬಾಲಕಿ ಮನೆಯಿಂದ ಹೊರಟು ಉಡುಪಿಗೆ ಬಂದಿದ್ದಳು. ಮಾಹಿತಿ ಪಡೆದ ವಿಶು ಶೆಟ್ಟಿ, ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಸಿಬ್ಬಂದಿಯ …

Read More »