BigTv News
June 15, 2026
Breaking News
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನೊಬ್ಬ 27 ವರ್ಷದ ಯುವತಿಯನ್ನು ಟ್ರಾಫಿಕ್ ಜಾಮ್ ನೆಪದಲ್ಲಿ ಮಧ್ಯರಾತ್ರಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಹೋದರಿಯ ಮನೆಗೆ ತೆರಳಲು ಕ್ಯಾಬ್ ಬುಕ್ ಮಾಡಿದ್ದ ಯುವತಿಯನ್ನು ಚಾಲಕ ನಿಗದಿತ ಮಾರ್ಗದಲ್ಲಿ ಕರೆದೊಯ್ಯದೆ ಸುಮಾರು ಒಂದೂವರೆ ಗಂಟೆಗಳ ಕಾಲ ನಗರದಲ್ಲಿ ಸುತ್ತಾಡಿಸಿದ್ದಾನೆ ಎನ್ನಲಾಗಿದೆ. ಬಳಿಕ ಆದೂರು ಕ್ರಾಸ್ ಸಮೀಪ ಕಾರು ನಿಲ್ಲಿಸಿ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ …
Read More »
BigTv News
June 15, 2026
Breaking News
ಬೆಂಗಳೂರಲ್ಲಿ ಬೆಟ್ಟಿಂಗ್ ಚಟಕ್ಕೆ ಪತ್ನಿಯನ್ನೇ ಭೀಕರವಾಗಿ ಪ್ರತಿಯೊಬ್ಬ ಕೊಲೆ ಮಾಡಿರುವ ಘಟನೆ ವರದಿಯಾಗಿದೆ ಸೆಲ್ಫಿ ವಿಡಿಯೋ ಮಾಡಿ ಹೋಂ ಗಾರ್ಡ್ ಪತ್ನಿಯ ಬರ ಕೊಲೆ ನಡೆದಿದೆ. ಮಾದೇವಪುರ ಪುಷ್ಪಾಂಜಲಿ ಥಿಯೇಟರ್ ಬಳಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೋಂ ಗಾರ್ಡ್ ಆಗಿದ್ದ ಮಂಜುಳಾ (32) ಕೊಲೆಗೈದ ಪತಿ ಪ್ರದೀಪ್ ಚಾಕುವಿನಿಂದ ಇರಿದು ಪತ್ನಿ ಮಂಜುಳಾಳನ್ನು ಪ್ರದೀಪ್ ಕೊಲೆ ಮಾಡಿದ್ದಾನೆ. ಕೃತ್ಯಕ್ಕೂ ಮೊದಲು ಕೊಲೆ ಮಾಡುವುದಾಗಿ ಪ್ರದೀಪ್ ಸೆಲ್ಫಿ ವಿಡಿಯೋ …
Read More »
Shaikh BigTv
June 14, 2026
Breaking News, Crime, ಕರ್ನಾಟಕ, ಬೆಂಗಳೂರು
ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಕೇಳಿಬರುತ್ತಿರುವ.. ರಾಜಕೀಯ ನಾಯಕರ ಕೈಗೊಂಬೆ ಇನ್ಸ್‌ಪೆಕ್ಟರ್‌ಗಳಿಗೆ ಬ್ರೇಕ್..? ಪೊಲೀಸ್ ವರ್ಗಾವಣೆಯಲ್ಲಿ ಭಾರೀ ಸರ್ಜರಿ..! ಶಾಸಕರ ಮಾತೇ ಕಾನೂನು ಎನ್ನುವ ಇನ್ಸ್‌ಪೆಕ್ಟರ್‌ಗಳಿಗೆ ಶಾಕ್..? ಪೊಲೀಸ್ ಇಲಾಖೆಯಲ್ಲಿ ಹೊಸ ಆಟ ಶುರು! ರಾಜಕೀಯ ಕೈಗೊಂಬೆ ಪೊಲೀಸರಿಗೆ ಬ್ರೇಕ್..? ‘ಮಿನಿಟ್ ಪೊಲೀಸ್’ ವ್ಯವಸ್ಥೆಗೆ ಎಂಡ್ ಕಾರ್ಡ್ ಬರ್ತಾ..? ಶಿಫಾರಸು ಪತ್ರ ರಾಜಕೀಯ ಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಕಾಣಿಸುತ್ತಿದೆ. ಇನ್ನು ಮುಂದೆ ಪೊಲೀಸ್ ವರ್ಗಾವಣೆಗಳಲ್ಲಿ ಶಾಸಕರ ಶಿಫಾರಸು ಪತ್ರಗಳಿಗಿಂತ …
Read More »
BigTv News
June 14, 2026
Breaking News
ಬಳ್ಳಾರಿಯಲ್ಲಿ ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಹಿಳೆ, ಆಕೆಯ ಪತಿ ಹಾಗೂ ಸಹೋದರ ಸೇರಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳಿಕ ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ನಿರ್ಜನ ಪ್ರದೇಶಕ್ಕೆ ಸಾಗಿಸಿ ಪೆಟ್ರೋಲ್ ಸುರಿದು ಸುಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪಾಟೀಲ್ ಬಸವನಗೌಡ (26) ಜೂನ್ 7ರಂದು ನಾಪತ್ತೆಯಾಗಿದ್ದು, ಮರುದಿನ ಎಲ್‌ಎಲ್‌ಸಿ ಕಾಲುವೆ ಬಳಿ ಅರ್ಧ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ತನಿಖೆಯಲ್ಲಿ, ಮಹಿಳೆಗೆ ಕಳೆದ ಒಂದು …
Read More »
BigTv News
June 14, 2026
Breaking News
ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿರುವ ಪಂಜಾಬಿ ತಡ್ಕಾ ರೆಸ್ಟೋರೆಂಟ್‌ನಲ್ಲಿ ಭಾನುವಾರ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಮೂರು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಪೂರ್ಣ ಕಟ್ಟಡ ಬೆಂಕಿಗೆ ಆಹುತಿಯಾಗಿದೆ. ಗೋವಿಂದಪುರಿ ಫ್ಲೈಓವರ್ ಸಮೀಪ ಬೆಳಗ್ಗೆ 4.45ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ನೆಲಮಾಳಿಗೆಯಿಂದ ಮೂರನೇ ಮಹಡಿ ಹಾಗೂ ಟೆರೇಸ್ ಮೇಲಿನ ತಾತ್ಕಾಲಿಕ ನಿರ್ಮಾಣಗಳವರೆಗೆ ವ್ಯಾಪಿಸಿತು. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಆರು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ …
Read More »
BigTv News
June 14, 2026
Breaking News
ಬೆಂಗಳೂರಿನಲ್ಲಿ ಹೂಡಿಕೆ ಮೇಲೆ ಅಧಿಕ ಲಾಭ ನೀಡುವುದಾಗಿ ನಂಬಿಸಿದ ಸೈಬರ್ ಕಳ್ಳರು ವ್ಯಕ್ತಿಯೊಬ್ಬರಿಗೆ 55.88 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಮಹದೇವಪುರ ಸಮೀಪದ ನಾರಾಯಣಪುರ ನಿವಾಸಿ ಪಿ.ಕೆ. ಪಟೇಲ್ ವಂಚನೆಗೆ ಒಳಗಾದವರು. ವಾಟ್ಸ್‌ಆಯಪ್ ಗ್ರೂಪ್‌ಗೆ ಸೇರಿಸಿ ಟ್ರೇಡಿಂಗ್ ಮತ್ತು ಹೂಡಿಕೆ ಕುರಿತು ನಂಬಿಕೆ ಮೂಡಿಸಿದ ಆರೋಪಿಗಳು, ಆ್ಯಪ್ ಡೌನ್‌ಲೋಡ್ ಮಾಡಿಸಿ ಆರಂಭದಲ್ಲಿ ಹೂಡಿಕೆ ಮಾಡಲು ಪ್ರೇರೇಪಿಸಿದ್ದಾರೆ. ಬಳಿಕ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 55.88 ಲಕ್ಷ ರೂ. ವರ್ಗಾವಣೆ …
Read More »
BigTv News
June 14, 2026
Breaking News
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ವಿಚಾರಾಧೀನ ಕೈದಿಗಳು ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೈಲಿನ ಆವರಣದಲ್ಲಿ ಮುಕ್ತವಾಗಿ ಓಡಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕೈದಿಗಳು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಆರೋಪಿಗಳಾದ ರಿಹಾನ್, ಕಾಶಿಫ್ ಹಾಗೂ ಡ್ರಗ್ಸ್ ಪ್ರಕರಣದ ಆರೋಪಿ ಫೈಜಲ್ ಜೈಲು ಸೆಲ್‌ನಿಂದ ಹೊರಬಂದು ವಾರ್ಡನ್ ಕಿರಣ್ ಘೋರ್ಪಡೆ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ …
Read More »
BigTv News
June 14, 2026
Breaking News
ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಹಾಗೂ ಆಕೆಯ ತಾಯಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲಾವಣ್ಯ (32) ಮತ್ತು ಅವರ ತಾಯಿ ವೆಂಕಟರತ್ನಮ್ಮ ಗಾಯಗೊಂಡಿದ್ದು, ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ರಾಣಿ, ನೀಲಜಾ, ನಿತಿನ್ ರಾಜ್, ಶಶಿಕಲಾ ಹಾಗೂ ಪ್ರಿಯಾಂಕಾ ವಿರುದ್ಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚ್ಛೇದನ ಪ್ರಕರಣದ …
Read More »
BigTv News
June 14, 2026
Breaking News
ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ಆರೋಪಿ ಮಧುಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ನಡೆದಿದೆ. ಆರೋಪಿಯನ್ನು ಮಹಜರಿಗೆ ಕರೆದೊಯ್ಯುವ ವೇಳೆ ಆತ ಪೊಲೀಸ್ ಸಿಬ್ಬಂದಿ ಅಂಜನಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಎಚ್ಚರಿಕೆ ನೀಡಿದರೂ ಹಾಗೂ ಏರ್ ಫೈರ್ ಮಾಡಿದರೂ ಮಧು ಶಾಂತವಾಗದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡ ಮಧು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »
BigTv News
June 14, 2026
Breaking News
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಗರಗ ಪೊಲೀಸ್ ಇನ್ಸ್‌ಪೆಕ್ಟರ್ ಶಿವಯೋಗಿ ಲೋಹಾರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅಮಾನತುಗೊಳಿಸಿದ್ದಾರೆ. ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದೆ ಮುಚ್ಚಿಹಾಕಲು ಯತ್ನಿಸಿದ್ದರೆಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣವನ್ನು ‘ಲವ್ ಜಿಹಾದ್’ ಎಂದು ಆರೋಪಿಸಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮಸೇನೆ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ಜೂನ್ …
Read More »