BigTv News
November 7, 2026
Breaking News
ಚಾಮರಾಜನಗರ: ಯಳಂದೂರು ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಋತುಸ್ರಾವವಾಗದ ಹಿನ್ನೆಲೆಯಲ್ಲಿ ಬಾಲಕಿಯ ತಾಯಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ ಎನ್ನಲಾಗಿದೆ. ತಾಯಿಯ ದೂರಿನ ಮೇರೆಗೆ ಯಳಂದೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ರಕ್ಷಿಸಿ ಹೆಚ್ಚಿನ ಆರೈಕೆ ಹಾಗೂ ರಕ್ಷಣೆಗಾಗಿ …
Read More »
BigTv News
November 7, 2026
Breaking News
ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಲಕಿಯನ್ನು ಪುಸಲಾಯಿಸಿ, ಚಾಕು ತೋರಿಸಿ ದೌರ್ಜನ್ಯ ಎಸಗಿದ್ದಲ್ಲದೆ, ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಬಾಲಕಿ ಹೊಟ್ಟೆನೋವಿನಿಂದ ಬಳಲಿದಾಗ ಆಕೆ ಒಂಬತ್ತು ತಿಂಗಳ ಗರ್ಭಿಣಿಯಾಗಿರುವ ವಿಚಾರ ಕುಟುಂಬಸ್ಥರಿಗೆ ತಿಳಿದುಬಂದಿದೆ. ವಿಷಯ ತಿಳಿದ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು …
Read More »
BigTv News
November 7, 2026
Breaking News
ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಅ.28ರಂದು ಹಲ್ಲೆಗೊಳಗಾಗಿದ್ದ ಪ್ರದೀಪ್ ಪೂಜಾರಿ, ಅಜ್ಜರಕಾಡು ಆಸ್ಪತ್ರೆಯ ಬಾತ್‌ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗಾಗಲೇ ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ …
Read More »
BigTv News
November 7, 2026
Breaking News
ಬೆಳಗಾವಿ: ಮದುವೆಯಾಗುವ ವಿಚಾರವಾಗಿ ಮಾತುಕತೆ ನಡೆಸುವ ನೆಪದಲ್ಲಿ ಪ್ರಿಯತಮೆಯನ್ನು ಗೋಕಾಕ್ ಜಲಪಾತಕ್ಕೆ ಕರೆದೊಯ್ದು ಕೊಲೆ ಮಾಡಿದ ಆರೋಪದ ಮೇಲೆ ಎಸ್‌ಎಸ್‌ಬಿ ಕಾನ್‌ಸ್ಟೆಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ 23 ವರ್ಷದ ರಕ್ಷಿತಾ ಸರಿಕಾರ್ ಕೊಲೆಯಾದ ಯುವತಿ. ಅಕ್ಟೋಬರ್ 28ರಂದು ಮದುವೆ ವಿಚಾರವಾಗಿ ಚರ್ಚಿಸುವ ನೆಪದಲ್ಲಿ ಆಕೆಯನ್ನು ಜಲಪಾತಕ್ಕೆ ಕರೆದೊಯ್ದಿದ್ದ ಬಸಪ್ಪ ಸತನ್ನವರ (29), ಜಗಳದ ವೇಳೆ ಹಲ್ಲೆ ನಡೆಸಿ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು …
Read More »
BigTv News
November 7, 2026
Breaking News
ದಾವಣಗೆರೆ: ಜಿಲ್ಲೆಯ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಾಲಕಿಯ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಾಗಿದೆ. ಚಿಕ್ಕಪ್ಪನೇ ಪುಸಲಾಯಿಸಿ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
Read More »
Shaikh BigTv
November 7, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ ಹಾಲಿನ ಪುಡಿಯೂ ಅಂಗಡಿಗಳ ಪಾಲು..! ಅಂಗಡಿಗಳಲ್ಲಿ ಸರ್ಕಾರಿ ಹಾಲಿನ ಪುಡಿ ರಾಜಾರೋಷವಾಗಿ ಮಾರಾಟದ ಆರೋಪ..! ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯವಾಗುತ್ತಿದೆಯೇ…? ಅಕ್ರಮಕೋರರಿಗೆ ಇಲಾಖೆಯ ಭಯವೇ ಇಲ್ವಾ…? ಹುಬ್ಬಳ್ಳಿ: ಬಡವರಿಗಾಗಿ ಸರ್ಕಾರ ನೀಡುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟದ ಆರೋಪ ಒಂದೆಡೆಯಾದರೆ, ಮತ್ತೊಂದೆಡೆ …
Read More »
BigTv News
November 7, 2026
Breaking News
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮ ಪಂಚಾಯಿತಿ ಪಿಡಿಒ ವಿವೇಕ್ ತೇಜಸ್ವಿ ವಿರುದ್ಧ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂರನೇ ತರಗತಿ ವಿದ್ಯಾರ್ಥಿನಿಗೆ ₹1,000 ಹಣ ನೀಡಿ, ತನ್ನ ಮೊಬೈಲ್ ಸಂಖ್ಯೆಯನ್ನು ನೀಡಿದ್ದಾಗಿ ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಮನೆಯಲ್ಲೇ ಪೋಷಕರು ಇಲ್ಲದ ಸಮಯದಲ್ಲಿ ಫೋನ್ ಮಾಡುವಂತೆ ಅಧಿಕಾರಿ ಬಾಲಕಿಗೆ ತಿಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಬಾಲಕಿಯ ಪೋಷಕರು ಹಿರಿಯೂರು …
Read More »
BigTv News
November 7, 2026
Breaking News
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ತೋಟದ ಮನೆಯೊಂದರಲ್ಲಿ 52 ವರ್ಷದ ಕಾರ್ಮಿಕ ಲಕ್ಷ್ಮಣ ಎಂಬುವವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತಿರುಪತಿಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ತೋಟದ ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದರು. ನವೆಂಬರ್ 6ರ ರಾತ್ರಿ ತೋಟದ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಲಕ್ಷ್ಮಣ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ …
Read More »
BigTv News
November 7, 2026
Breaking News
ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಎದೆಗೆ ಗುಂಡು ಹಾರಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಡಿಜೆ ವಿಚಾರವಾಗಿ ನಡೆದ ಗಲಾಟೆಯೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವ ಅನುಮಾನವಿದೆ. ಘಟನಾ ಸ್ಥಳದಲ್ಲಿ ಎರಡು ಖಾಲಿ ಬುಲೆಟ್‌ಗಳು ಪತ್ತೆಯಾಗಿವೆ. ಗಾಂಧಿಚೌಕ ಠಾಣೆ ಪೊಲೀಸರು ಸ್ಥಳಕ್ಕೆ …
Read More »
BigTv News
November 7, 2026
Breaking News
ಕುಂದಾಪುರದ ಗುಲ್ವಾಡಿ ಗ್ರಾಮದ ಸೌಕೂರಿನಲ್ಲಿ ಪಾರ್ಟ್‌ಟೈಮ್ ಉದ್ಯೋಗದ ಜಾಹೀರಾತು ನಂಬಿದ ಮಹಿಳೆಯೊಬ್ಬರು ಸೈಬರ್ ವಂಚಕರಿಂದ ₹1,86,570 ಕಳೆದುಕೊಂಡಿದ್ದಾರೆ. ರೇಣುಕಾ ಗಣೇಶ ದೇವಾಡಿಗ ಹಣ ಕಳೆದುಕೊಂಡವರು. ಸೆಪ್ಟೆಂಬರ್ 16ರಂದು ಸಾಮಾಜಿಕ ಜಾಲತಾಣದಲ್ಲಿ ಉದ್ಯೋಗದ ಜಾಹೀರಾತು ನೋಡಿ ಕ್ಲಿಕ್ ಮಾಡಿದ ಅವರಿಗೆ ವಂಚಕರು ವಿವಿಧ ಟಾಸ್ಕ್‌ಗಳನ್ನು ನೀಡಿದ್ದಾರೆ. ಆರಂಭದಲ್ಲಿ ₹120 ಹಾಗೂ ₹10,130 ಪಾವತಿಸಿ ವಿಶ್ವಾಸ ಗಳಿಸಿದ್ದಾರೆ. ನಂತರ ಹೆಚ್ಚಿನ ಹಣ ಗಳಿಸುವ ಆಮಿಷವೊಡ್ಡಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದ್ದಾರೆ. …
Read More »