Breaking News

Breaking News

ಬಳ್ಳಾರಿಯಲ್ಲಿ ವಿವಾಹಿತ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಕುತ್ತಿಗೆಗೆ ಹಗ್ಗ ಬಿಗಿದು ಯುವಕನ ಹತ್ಯೆ!

ವಿವಾಹಿತ ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಹಿಳೆ, ಆಕೆಯ ಪತಿ ಹಾಗೂ ಸಹೋದರ ಸೇರಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಸವನಗೌಡನ್ ಕೊಲೆಯಾದ ಯುವಕನಾಗಿದ್ದು, ಶ್ವೇತಾ, ಆಕೆಯ ಪತಿ ದೊಡ್ಡ ಬಸವನಗೌಡ ಹಾಗೂ ಸಹೋದರ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷಗಳ ಹಿಂದೆ ನಡೆದ ಮದುವೆ ಕಾರ್ಯಕ್ರಮದಲ್ಲಿ ಶ್ವೇತಾಗೆ ಪರಿಚಯವಾಗಿದ್ದ ಬಸವನಗೌಡನ್, ಬಳಿಕ ನಿರಂತರವಾಗಿ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. …

Read More »

ಕುಡಿದ ಮತ್ತಿನಲ್ಲಿ ಹಲ್ಲೆ: ಮುಳಬಾಗಿಲು ವ್ಯಕ್ತಿ ಸೆರೆ, ಇತರರಿಗಾಗಿ ಬಲೆ

ಕುಡಿದ ಅಮಲಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ ನಡೆಸಿ, ಕಾರಿನ ಗಾಜುಗಳನ್ನು ಒಡೆದು ಹಾಕಿದ ಆರೋಪದ ಮೇರೆಗೆ ಹೇಮಂತ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರ್‌ನಲ್ಲಿ ಮದ್ಯಪಾನ ಮಾಡುತ್ತಿದ್ದ ಹೇಮಂತ್, ಪಕ್ಕದಲ್ಲಿದ್ದ ವ್ಯಕ್ತಿಯೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ. ಮಧ್ಯ ಪ್ರವೇಶಿಸಿದ ಕ್ಯಾಷಿಯರ್ ದೇವರಾಜ್ ಮೇಲೂ ಹಲ್ಲೆ ಮಾಡಿ, ಅವರ ಕಾರಿನ ಗಾಜುಗಳನ್ನು ಬಿಯರ್ ಬಾಟಲಿಯಿಂದ ಪುಡಿ ಮಾಡಿದ್ದಾನೆ ಎಂದು ಪೊಲೀಸರು …

Read More »

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧ ದುರಂತ ಅಂತ್ಯ ಕಂಡಿದ್ದು, ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮುಂಜಾನೆ ನಡೆದಿದೆ. ಸಿಕ್ಕಿಂ ಮೂಲದ ಐಪಿ ಹಂಗ್ಮಾ (22) ಮೃತ ಯುವತಿಯಾಗಿದ್ದು, ಫುರ್ಬಾ ಲೇಪ್ಸಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆ ವಿಚಾರವಾಗಿ ಅವರ ನಡುವೆ ಮಾತುಕತೆ ನಡೆಯುತ್ತಿತ್ತು. ಆದರೆ ಈಗಲೇ ಮದುವೆಯಾಗಲು ಯುವತಿ ನಿರಾಕರಿಸಿದ್ದರಿಂದ ಹಾಗೂ ಆಕೆಗೆ ಬೇರೆ ಸಂಬಂಧ ಇರಬಹುದೆಂಬ ಅನುಮಾನದಿಂದ …

Read More »

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ತೆಲಂಗಾಣ ಮೂಲದ ಯುವತಿಯ ರಕ್ಷಣೆ

ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಆಯೇಶಾ ಶಬ್ಬಿರ್ ಶೇಖ್ ಅಲಿಯಾಸ್ ರೇಷ್ಮಾ ಅಂಕಲೆವಾಲೆ (31) ಬಂಧಿತ ಆರೋಪಿ. ತೆಲಂಗಾಣ ಮೂಲದ ಯುವತಿಯನ್ನು ಮನೆಯಲ್ಲಿ ಇರಿಸಿಕೊಂಡು, ಗಿರಾಕಿಗಳನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಸಿಪಿಐ ಪರಶುರಾಮ ಪೂಜೇರಿ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಯುವತಿಯನ್ನು ರಕ್ಷಿಸಿದ್ದು, …

Read More »

ದಕ್ಷಿಣ ಕನ್ನಡದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ : ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಿರುಕುಳ ಹಾಗೂ ಬೆದರಿಕೆಯಿಂದ ಬೇಸತ್ತ ಮಹಿಳೆ ಕೆಲಸಕ್ಕೆ ರಾಜೀನಾಮೆ ನೀಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಪ್ರಕಾರ, ಆರೋಪಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ವಿಷಯ ಬಹಿರಂಗಪಡಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ನೊಂದ ಮಹಿಳೆ ಕೊನೆಗೆ …

Read More »

ಹೆದ್ದಾರಿಯಲ್ಲಿ ವ್ಹೀಲಿಂಗ್‌: ಬೈಕ್‌ ವಶ, ಎಫ್‌ ಐಆರ್‌ ದಾಖಲು

ಶಿವಮೊಗ್ಗ – ಭದ್ರಾವತಿ ಮಾರ್ಗದ ಮಲವಗೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಯುವಕನ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿ ಬೈಕ್‌ ವಶಪಡಿಸಿಕೊಂಡಿದ್ದಾರೆ. ಜೂ.12ರಂದು ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ನಗರದ ಮಲವಗೊಪ್ಪದ NH-69 ರಸ್ತೆಯಲ್ಲಿ KA-14-HE0823 ಸಂಖ್ಯೆಯ ಬೈಕ್ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ದೂರಿನ ಆಧಾರದ ಮೇಲೆ ಬೈಕ್‌ವಾಹನವನ್ನು ವಶಪಡಿಸಿಕೊಂಡು ಸವಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ …

Read More »

ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣ: ಆರೋಪಿ ಬಂಧನ

ಮಣಿಪಾಲ: ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 80 ಬಡಗಬೆಟ್ಟು ಗ್ರಾಮದ ರಾಜೀವನಗರ ಎರಡನೇ ಕ್ರಾಸ್‌ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಜೂ.12ರಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಮಣಿಪಾಲ ಮತ್ತು ಸೆನ್‌ ಅಪರಾಧ ಪೊಲೀಸ್‌ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿ ಒಟ್ಟು 3 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ 2 ಪ್ರಕರಣ ದಾಖಲಾಗಿವೆ. ಸಾಗಾಟ ಮತ್ತು ಮಾರಾಟಕ್ಕೆ …

Read More »

10 ದಿನದಲ್ಲಿ ಪೂಜೆ ಮಾಡಿಸದಿದ್ರೆ ಸೋದರನ ಸಾವು: ಬೆಂಗಳೂರಿನ ಮಹಿಳಾ ಟೆಕ್ಕಿಗೆ ವಂಚನೆ

ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಪೂಜೆಯ ನೆಪದಲ್ಲಿ ಸುಮಾರು ₹7 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪದಡಿ ನವೀದಾ ಸುಲ್ತಾನ ಮತ್ತು ಪರ್ವೇಜ್ ವಿರುದ್ಧ ಪ್ರಕರಣ ದಾಖಲಾಗಿದೆ. ದೂರುದಾರ ಮೋಯಿನ್ ಪಾಷಾ ಅವರ ಸಹೋದರನಿಗೆ ಗಂಡಾಂತರವಿದೆ ಎಂದು ನಂಬಿಸಿ, ಪೂಜೆಯ ವೇಳೆ 35 ಗ್ರಾಂ ಚಿನ್ನಾಭರಣವನ್ನು ಪೆಟ್ಟಿಗೆಯಲ್ಲಿ ಇಡಲು ಆರೋಪಿಗಳು ಸೂಚಿಸಿದ್ದರು. ಬಳಿಕ ಪೆಟ್ಟಿಗೆಯನ್ನು ಪರಿಶೀಲಿಸಿದಾಗ ಚಿನ್ನಾಭರಣ ನಾಪತ್ತೆಯಾಗಿರುವುದು ಗೊತ್ತಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಸ್ವರ್ಣೕೊದ್ಯಮಿಯನ್ನು ಅಡ್ಡಗಟ್ಟಿ ನಗ-ನಗದು ದರೋಡೆ: ಬಂಧನ

ಕುಂಬಳೆ: ಪಯ್ಯನ್ನೂರು ಎಡಾಟ್‌ನಲ್ಲಿ ಮಹಾರಾಷ್ಟ್ರ ನಿವಾಸಿ ಸ್ವರ್ಣೕೊದ್ಯಮಿಯ ಕಾರನ್ನು ಅಡ್ಡಗಟ್ಟಿ 55 ಲಕ್ಷ ರೂ. ನಗದು ಸಹಿತ ಚಿನ್ನಾಭರಣ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ಅಂಜಾಪೀಡಿಗ ನಿವಾಸಿ ಸನು ಯಾನೆ ಸಂತೋಷ್‌ನನ್ನು ಉಪ್ಪಳದಿಂದ ಪೊಲೀಸರು ಬಂಧಿಸಿದ್ದಾರೆ. ಆಕ್ರಮಣಕ್ಕೆ ಬಳಸಿದ ಕಾರನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಈ ತಂಡ ಬಾಡಿಗೆಗೆ ಪಡೆದಿದ್ದ ಇನ್ನೊಂದು ಕಾರನ್ನು ಕಣ್ಣೂರಿನ ಚೋಕ್ಲಿಯಲ್ಲಿ ಪತ್ತೆಹಚ್ಚಲಾಗಿದೆ. ಪಯ್ಯನ್ನೂರು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

Read More »

ಹಳೆ ಹುಬ್ಬಳ್ಳಿ ಸುಭಾಷ್ ನಗರದಲ್ಲಿ ಅನ್ನೋನ್ ಬಾಡಿ ಪತ್ತೆ..! ಗುರುತು ಸಿಕ್ಕಿಲ್ಲ – ಸಾರ್ವಜನಿಕರ ಸಹಕಾರಕ್ಕೆ ಪೊಲೀಸರ ಮನವಿ..

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಭಾಷ್ ನಗರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.. ಮೃತ ವ್ಯಕ್ತಿಯನ್ನು ಯಾರಾದರೂ ನೋಡಿದ್ದರೆ ಅಥವಾ ಅವರ ಪರಿಚಯ ಇರುವವರು ಇದ್ದರೆ, ತಕ್ಷಣ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ… ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಅಥವಾ ಕುಟುಂಬದವರ …

Read More »