Breaking News

Breaking News

ದೊಡ್ಡಬಳ್ಳಾಪುರದಲ್ಲಿ 6 ಕೆಜಿ ಗಾಂಜಾ ಜಪ್ತಿ: ಉತ್ತರ ಪ್ರದೇಶ ಮೂಲದ ಯುವಕ ಬಂಧನ

6 ಕೆಜಿ 126 ಗ್ರಾಂ ಒಣ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದಡಿ ಯುವಕನೊಬ್ಬನನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರಪ್ರದೇಶ ಮುರಾಬಾದ್ ಮೂಲದ 23 ವರ್ಷದ ಮುಷರಫ್ ಅಲಿ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ನಗರದ ಅರ್ಕಾವತಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು ಎನ್ನಲಾಗಿದೆ. ಆರೋಪಿಯು ನಗರದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಉತ್ತರ ಪ್ರದೇಶದಿಂದ ದೊಡ್ಡಬಳ್ಳಾಪುರಕ್ಕೆ ಒಣ ಗಾಂಜಾವನ್ನು ತಂದು ತನ್ನ ಮನೆಯಲ್ಲಿ ಶೇಖರಿಸಿಟ್ಟಿದ್ದ, ಖಚಿತ ಮಾಹಿತಿ ಮೇರೆಗೆ …

Read More »

ಬೀದರ್‌: 11.775 ಕೆಜಿ ಗಾಂಜಾ ಜಪ್ತಿ; ಇಬ್ಬರ ಬಂಧನ

ಬೀದರ್‌: ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು 11.775 ಕೆಜಿ ಗಾಂಜಾ ಜಪ್ತಿ ಮಾಡಿ, ಇಬ್ಬರನ್ನು ಶುಕ್ರವಾರ ಬಂಧಿಸಿದ್ದಾರೆ. ತಾಲ್ಲೂಕಿನ ಮರ್ಜಾಪುರ (ಟಿ) ಗ್ರಾಮದ ಅರಣ್ಯ ಪ್ರದೇಶದ ಹತ್ತಿರ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ₹5.88 ಲಕ್ಷ ಮೌಲ್ಯದ 11.775 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿ, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಸಹಕರಿಸಿದ ಇನ್ನಿತರೆ ಐವರ …

Read More »

2 ಕೋಟಿ ವಿಮೆ ಹಣಕ್ಕಾಗಿ ಗ್ಲೂಕೋಸ್ ನಲ್ಲಿ ವಿಷಹಾಕಿ ಮಾಜಿ ಸೈನಿಕನ ಹತ್ಯೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಮಾಜಿ ಸೈನಿಕ ಸಂದೀಪ್ ಮಾಂಜರಿ (47) ಅವರ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಂದೀಪ್ ಅವರನ್ನು ಚಿಕಿತ್ಸೆಯ ವೇಳೆ ಗ್ಲೂಕೋಸ್ ಬಾಟಲಿಗೆ ವಿಷ ಬೆರೆಸಿ ಹತ್ಯೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂದೀಪ್ ಪತ್ನಿ ಸುಮಾ ಮಾಂಜರಿ ಹಾಗೂ ಆಕೆಯ ಪ್ರಿಯಕರ ಪುಂಡಲೀಕ ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಮೃತನ …

Read More »

ಆರು ವರ್ಷದ ಮಗು ಸಾವು ಪ್ರಕರಣ | ಕರ್ತವ್ಯ ಲೋಪ: ಮೂವರು ಪೊಲೀಸರ ತಲೆದಂಡ

ಬೆಂಗಳೂರು ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ವರ್ಷದ ಬಾಲಕಿ ವೆನ್ನೆಲಾ ಕೊಲೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಠಾಣೆಯ ಇನ್‌ಸ್ಪೆಕ್ಟರ್, ಪಿಎಸ್‌ಐ ಹಾಗೂ ಕಾನ್‌ಸ್ಟೆಬಲ್ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದ್ದರೂ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬವಾಗಿದ್ದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ತಲೆಮರೆಸಿಕೊಂಡಿದ್ದ ತಾಯಿ ಪ್ರಿಯಾಂಕಾಳನ್ನು ಪೊಲೀಸರು ಬಂಧಿಸಿದ್ದಾರೆ. ಮಗಳ …

Read More »

ಬೆಂಗಳೂರು ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ- ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಬೈಕ್ ಸವಾರ ರಂಜನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ತುಮಕೂರಿನತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಈ ಅಪಘಾತಕ್ಕೆ ಒಳಗಾಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ …

Read More »

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 6 ವರ್ಷದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಹಿನ್ನೆಲೆ ಕಾಡುಗೋಡಿ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ರಂಗಸ್ವಾಮಿ, ಪಿಎಸ್‌ಐ ನಿಂಗರಾಜು ಹಾಗೂ …

Read More »

ಮುಳಬಾಗಿಲು ಶಿಕ್ಷಕರ ಕಾಲೊನಿಯಲ್ಲಿ ಮನೆ ಬಾಗಿಲ ಬೀಗ ಒಡೆದು ಕಳವು

ಮನೆ ಬಾಗಿಲ ಬೀಗ ಒಡೆದು ಬೀರುವಿನಲ್ಲಿದ್ದ ನಗದು ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ನಗರದ ಶಿಕ್ಷಕರ ಕಾಲೊನಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕ್ಷಕರ ಕಾಲೊನಿಯ ಬೇಕರಿ ಮಾಲೀಕ ರವಿಕುಮಾರ್ ಎಂಬುವವರ ಮನೆಯ ಬಾಗಿಲ ಬೀಗ ಒಡೆದು, ಬೀರುವಿನಲ್ಲಿದ್ದ 50 ಗ್ರಾಂ ಬಂಗಾರದ ಆಭರಣ, 1.5 ಕೆಜಿ ಬೆಳ್ಳಿ ಹಾಗೂ ₹1.72 ಲಕ್ಷ ನಗದನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ರವಿಕುಮಾರ್ ಕುಟುಂಬದವರು ಹಾಸನಕ್ಕೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. …

Read More »

ಲೈಂಗಿಕ ಕಿರುಕುಳ: ದೂರು ದಾಖಲು

ಬೆಳ್ತಂಗಡಿ: ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಔಷಧ ಆಸ್ಪತ್ರೆಯ ವಿಭಾಗದ ಮುಖ್ಯಸ್ಥ ಚಂದ್ರಶೇಖ‌ರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ 25 ವರ್ಷಗಳಿಂದ ಕರ್ತವ್ಯದಲ್ಲಿ ಇರುವ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿ ಚಂದ್ರಶೇಖ‌ರ್ ತನ್ನ ಆಸ್ಪತ್ರೆಯ ಮಹಿಳಾ ಸಿಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು, ಬಹಿರಂಗಪಡಿಸಿದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು …

Read More »

ದಾವಣಗೆರೆ ಪೊಲೀಸರಿಂದ ₹57 ಲಕ್ಷ ಮೌಲ್ಯದ ಕಳವು ಸ್ವತ್ತು ವಶ, 5 ಆರೋಪಿಗಳ ಬಂಧನ

ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅಮರಾವತಿ ಕಾಲೊನಿಯ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ವಿಜಯನಗರ ಜಿಲ್ಲೆಯ ಹೊಸಪೇಟೆಯ ಟಿ. ಶ್ರೀಕಾಂತ (30) ಹಾಗೂ ವೈ. ರಮೇಶ್ (28) ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 409 ಗ್ರಾಂ ಚಿನ್ನಾಭರಣ ಸೇರಿದಂತೆ ₹57.40 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ. ಮೇ 18ರಂದು ಪರೀಕ್ಷಿತ್ ನಾಯ್ಡು ಅವರ ಮನೆಗೆ ನುಗ್ಗಿದ ಕಳ್ಳರು ಬೀಗ ಒಡೆದು 483 ಗ್ರಾಂ ಚಿನ್ನಾಭರಣ ಹಾಗೂ ₹10 …

Read More »

ಕೋಲಾರದಲ್ಲಿ ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ : ಬೆಚ್ಚಿ ಬಿದ್ದ ಜನತೆ

ಸಾಲದ ಹಣ ವಾಪಸ್ ನೀಡುವುದಾಗಿ ನಂಬಿಸಿ 70 ವರ್ಷದ ವೃದ್ಧೆ ರೆಡ್ಡಮ್ಮ ಅವರನ್ನು ಕರೆಸಿಕೊಂಡು ಭೀಕರವಾಗಿ ಹತ್ಯೆ ಮಾಡಿದ ಘಟನೆ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಿಮ್ಮರಾಜು ಮತ್ತು ಮುನಿರಾಜು ಎಂಬ ಆರೋಪಿಗಳು ಮೇ 17ರಂದು ವೃದ್ಧೆಯನ್ನು ಕೊಲೆ ಮಾಡಿ, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬಿಸಾಡಿದ್ದರು ಎನ್ನಲಾಗಿದೆ. ವೃದ್ಧೆ ನಾಪತ್ತೆ ಪ್ರಕರಣದ ತನಿಖೆ ವೇಳೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ …

Read More »