Breaking News

Breaking News

ನಿವೃತ್ತ ಯೋಧನಿಗೆ ಅಪಮಾನ – ನಡುರಸ್ತೆಯಲ್ಲಿ ಪೊಲೀಸರಿಂದ ಕಿರುಕುಳ ಆರೋಪ!

ಗುರುಗ್ರಾಮ: ನಿವೃತ್ತ ಸೇನಾ ಮೇಜರ್ ಹಮೇಂದ್ರ ಸಿಂಗ್ ಹಾಗೂ ಅವರ ಕುಟುಂಬಕ್ಕೆ ಸಂಚಾರಿ ಪೊಲೀಸರು ತಡರಾತ್ರಿ ಸುಮಾರು ಒಂದೂವರೆ ಗಂಟೆ ಕಾಲ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಜೂನ್ 7ರಂದು ಪತ್ನಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗೆ ಪೊಲೀಸರು ಕಾರು ತಡೆದಿದ್ದಾರೆ. ಪರೀಕ್ಷೆಯಲ್ಲಿ ಆಲ್ಕೋಹಾಲ್ ಪ್ರಮಾಣ 13 mg/100 ml ಮಾತ್ರ ಕಂಡುಬಂದಿದ್ದು, ಇದು ಕಾನೂನುಬದ್ಧ ಮಿತಿಯೊಳಗೇ ಇತ್ತು. ಯಾವುದೇ ನಿಯಮ ಉಲ್ಲಂಘನೆ …

Read More »

ಟ್ಯಾಟೊ-313 ಗ್ಯಾಂಗ್‌ನ ಇಬ್ಬರು ಕಳ್ಳರ ಬಂಧನ, ಚಿನ್ನಾಭರಣ ವಶ

ಉಡುಪಿ: ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ “ಟ್ಯಾಟೊ-313” ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿ ₹7.90 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬೆಂಗಳೂರಿನ ದರ್ಶನ್ ಆರ್. (21) ಹಾಗೂ ದಾವಣಗೆರೆಯ ಚಂದ್ರು (26). ಫೆಬ್ರವರಿಯಲ್ಲಿ ಕುಂಜಿಬೆಟ್ಟಿನ ಮನೆಯಲ್ಲಿ ನಡೆದ ₹7 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಇವರ ಪಾತ್ರ ಬೆಳಕಿಗೆ ಬಂದಿದೆ. ಗಸ್ತಿನ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಶಿವಮೊಗ್ಗದ ಲಾಡ್ಜ್‌ನಿಂದ …

Read More »

ಮುಂಬೈ ಕ್ರೈಂ ಬ್ರಾಂಚ್ ಹೆಸರಿನಲ್ಲಿ ಬಾಗಲಕೋಟೆ ಸರ್ಕಾರಿ ನೌಕರನಿಗೆ ಧಮ್ಕಿ!

ಬಾಗಲಕೋಟೆ: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು ಹಿರಿಯ ಸರ್ಕಾರಿ ನೌಕರರೊಬ್ಬರಿಗೆ ಭಯ ಹುಟ್ಟಿಸಿ ₹83.82 ಲಕ್ಷ ಹಣ ದೋಚಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಯುಕೆಪಿ ಪುನರ್ವಸತಿ ಕಚೇರಿಯ ಹಿರಿಯ ಬೆರಳಚ್ಚುಗಾರ ಎಚ್.ವಿ. ಸುರೇಶ್ ರಾವ್ (59) ಅವರಿಗೆ TRAI ಹಾಗೂ ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ವಂಚಕರು, ದೇಶವಿರೋಧಿ ಚಟುವಟಿಕೆ ಹಾಗೂ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿಸಿದ್ದಾಗಿ ನಂಬಿಸಿ ಬೆದರಿಕೆ ಹಾಕಿದ್ದಾರೆ. ವಿಡಿಯೋ …

Read More »

ಮಹಿಳೆಯ ಸಾಮೂಹಿಕ ಅತ್ಯಾಚಾರ ಆರೋಪ : 10 ಮಂದಿ ಪೊಲೀಸರ ವಶಕ್ಕೆ!

ಚನ್ನಗಿರಿ : ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹಾಗೂ ಫೋಟೋ-ವಿಡಿಯೋಗಳನ್ನು ಚಿತ್ರೀಕರಿಸಿ ವೈರಲ್‌ ಮಾಡಿರುವ ಆರೋಪದಡಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಘಟನೆ ಸಂಬಂಧ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದ ಚಟಾಕಿ ನಾಗರಾಜ, ಇಸ್ತ್ರೀ ನಾಗರಾಜ, ಮಧು, ಅರ್ಜುನ, ಬಸವಂತ, ಕುಂದೂರ ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ …

Read More »

ಬೆಂಗಳೂರಲ್ಲಿ ವೇಶ್ಯಾವಾಟಿಕೆ: ಮಹಿಳೆ ಬಂಧನ

ಚಿಕ್ಕಬಾಣಾವರ ಠಾಣಾ ವ್ಯಾಪ್ತಿಯ ದಾಸಪ್ಪನಪಾಳ್ಯದಲ್ಲಿ ಮನೆ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.‌ ಮಾಹಿತಿ ಮೇರೆಗೆ ರುದ್ರಪ್ಪ ಲೇಔಟ್‌ನ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ದೂರವಾಣಿ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಮನೆಗೆ ಕರೆಸಿಕೊಳ್ಳುತ್ತಿದ್ದುದ್ದಾಗಿ ಆರೋಪಿ ಒಪ್ಪಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ, ಮಗಳು ಸೆರೆ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 40ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಡಿ ತಂದೆ-ಮಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರ್‌.ಟಿ.ನಗರದ ಎಂ.ಎ. ಮನ್ಸೂರ್ ಅಹಮದ್ (75) ಮತ್ತು ಅವರ ಪುತ್ರಿ ಶಂಶಾದ್ ಬೇಗಂ (48) ಬಂಧಿತರಾಗಿದ್ದು, ಇದುವರೆಗೆ ಸುಮಾರು ₹5.30 ಕೋಟಿ ವಂಚನೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನಕಲಿ ನೇಮಕಾತಿ ಪತ್ರಗಳನ್ನು ನೀಡಿ ಅಭ್ಯರ್ಥಿಗಳನ್ನು ವಂಚಿಸುತ್ತಿದ್ದರೆಂದು ಆರೋಪಿಸಲಾಗಿದೆ. ಪ್ರಕರಣ …

Read More »

ಮಸೀದಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಧರ್ಮಗುರು

ಫಿರೋಜಾಬಾದ್‌ (ಉತ್ತರ ಪ್ರದೇಶ): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಮಸೀದಿಯ ಧರ್ಮಗುರು ಜಾಕೀರ್ ಅಲಿ (48) ವಿರುದ್ಧ ಪೋಕ್ಸೊ ಹಾಗೂ ಬಿಎನ್‌ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ಕುಟುಂಬದ ದೂರಿನ ಪ್ರಕಾರ, ಆರೋಪಿ ಬಾಲಕಿಯನ್ನು ಮಸೀದಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. …

Read More »

ಸ್ಪೀಡ್‌ ಆಗಿ ಗಾಡಿ ಓಡಿಸಿದ್ದಕ್ಕೆ ಗಲಾಟೆ, ಕಬ್ಬಿಣದ ರಾಡ್‌ನಿಂದ ಭೀಕರ ಹಲ್ಲೆ

ಚಿಕ್ಕಮಗಳೂರು: ಅಜ್ಜಂಪುರ ಪಟ್ಟಣದಲ್ಲಿ ದ್ವಿಚಕ್ರ ವಾಹನವನ್ನು ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ಕಬ್ಬಿಣದ ರಾಡ್ ಹಾಗೂ ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಯಲ್ಲಿ ಗಾಯಗೊಂಡ ಮೊಹಮ್ಮದ್ ಜೈದ್ ಅವರ ಬಲಗೈ ಮೂಳೆ ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಮಾಳೆ ಎಂಬಾತ ಯುವಕನನ್ನು ಅವಾಚ್ಯವಾಗಿ ನಿಂದಿಸಿ, ಲಾಠಿ ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.bಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. …

Read More »

ನಕಲಿ ಆಯಿಲ್​ ತಯಾರಿಸುತ್ತಿದ್ದ ಟಕ ಪತ್ತೆ

ಚಿಕ್ಕಬಳ್ಳಾಪುರ: ಕೃಷಿಗೆ ಸಬ್ಸಿಡಿ ದರದಲ್ಲಿ ಪೂರೈಕೆಯಾಗುವ ಯೂರಿಯಾ ಗೊಬ್ಬರ ಬಳಸಿ ನಕಲಿ ವಾಹನ ಆಯಿಲ್ ತಯಾರಿಸುತ್ತಿದ್ದ ಅಕ್ರಮ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚದಲಪುರ ಸಮೀಪದ ಘಟಕದಲ್ಲಿ 260 ಯೂರಿಯಾ ಮೂಟೆಗಳು, ವಿವಿಧ ವಾಹನ ಕಂಪನಿಗಳ ಲೇಬಲ್‌ಗಳು ಹಾಗೂ ಇತರೆ ಸಾಮಗ್ರಿಗಳು ಪತ್ತೆಯಾಗಿವೆ. ಈ ಘಟಕಕ್ಕೆ ಯಾವುದೇ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, …

Read More »

ದಾವಣಗೆರೆಯಲ್ಲಿ ನೀಚ ಕೃತ್ಯ; ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ 41 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ದಾವಣಗೆರೆ ಜಿಲ್ಲೆಯ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಗೆ ತಂಪು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿ, ಬಳಿಕ ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಘಟನೆಯ ಬಳಿಕ ಆರೋಪಿಗಳು ಫೋಟೋ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆಯ ದೂರಿನ ಮೇರೆಗೆ …

Read More »