Breaking News

Breaking News

ಬಳ್ಳಾರಿಯಲ್ಲಿ ಯುವಕನ ಭೀಕರ ಹತ್ಯೆ: ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬಳ್ಳಾರಿ: ಯುವಕನನ್ನು ಹತ್ಯೆಗೈದು ಸಾಕ್ಷ್ಯ ನಾಶ ಮಾಡಲು ಮೃತದೇಹವನ್ನು 13 ಕಿ.ಮೀ ದೂರ ಸಾಗಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಎಲ್‌ಎಲ್ಸಿ ಕಾಲುವೆ ಬಳಿ ಬೆಳಕಿಗೆ ಬಂದಿದೆ. ಅನಂತಪುರ ಜಿಲ್ಲೆಯ ಬೊಲ್ಲನಗುಡ್ಡಂ ನಿವಾಸಿ ಬಸವನಗೌಡ (27) ಮೃತ ಯುವಕ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಪೂರ್ವಯೋಜಿತವಾಗಿ ಕೃತ್ಯ ಎಸಗಿದ್ದರೂ, ಶನಿವಾರ ಸುರಿದ ಮಳೆಯಿಂದ ಬೆಂಕಿ ನಂದಿಹೋಗಿ ಮೃತದೇಹ ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರೀತಿ-ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ …

Read More »

ಬೆಂಗಳೂರು | ಸೂಪರ್ ಮಾರ್ಕೆಟ್‌ಗೆ ನುಗ್ಗಿ ದರೋಡೆಗೆ ಯತ್ನ: ಮೂವರ ಸೆರೆ

ಬೆಂಗಳೂರು: ಸೂಪರ್ ಮಾರ್ಕೆಟ್‌ಗೆ ನುಗ್ಗಿ ದರೋಡೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಆಸೀಫ್ (22), ಸೈಯದ್ ಸಲೀಂ (26) ಹಾಗೂ ಸಿದ್ದಿಕ್ ಪಾಷಾ (23) ಬಂಧಿತರು. ಜೂನ್ 6ರಂದು ಅರಕೆರೆಯ ‘ಎ ಡೈಲಿ ನೀಡ್ಸ್ ಸೂಪರ್ ಮಾರ್ಕೆಟ್’ಗೆ ಗ್ರಾಹಕರ ಸೋಗಿನಲ್ಲಿ ಬಂದ ಆರೋಪಿಗಳು ಕ್ಯಾಶ್ ಕೌಂಟರ್‌ನಲ್ಲಿದ್ದ ಹಣ ದೋಚಲು ಯತ್ನಿಸಿದ್ದಾರೆ. ಇದನ್ನು ತಡೆದ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿ ಹಣ, ಚಾಕೊಲೇಟ್ ಹಾಗೂ ಪರ್ಫ್ಯೂಮ್ …

Read More »

ವೃದ್ಧೆಯಿಂದ ₹98.40 ಲಕ್ಷ ದೋಚಿದ ವಂಚಕರು

ಬೆಂಗಳೂರು: ವೃದ್ಧೆಯನ್ನು ‘ಡಿಜಿಟಲ್ ಅರೆಸ್ಟ್’ ಮಾಡುವುದಾಗಿ ಬೆದರಿಸಿ ಸೈಬರ್ ವಂಚಕರು ₹98.40 ಲಕ್ಷ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಆಗ್ನೇಯ ವಿಭಾಗದ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಸ್ವರ್ಣಲತಾ ಅವರು ವಂಚನೆಗೆ ಒಳಗಾದವರು. ಮಾರ್ಚ್ 18ರಂದು ಕರೆ ಮಾಡಿದ್ದ ಆರೋಪಿಯೊಬ್ಬ ತಾನು ದೆಹಲಿ ಪೊಲೀಸ್ ಇಲಾಖೆಯ ಡಿಸಿಪಿ ಭೀಷಮ್ ಸಿಂಗ್ ಎಂದು ಪರಿಚಯಿಸಿಕೊಂಡು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ …

Read More »

ಪೇಂಟ್ ಹೊಡೆಯುವ ನೆಪದಲ್ಲಿ ಬಂದವರು ಕೇವಲ 5 ನಿಮಿಷದ ಗ್ಯಾಪ್‌ನಲ್ಲಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಎಸ್ಕೇಪ್

ಬೆಂಗಳೂರು ಉತ್ತರ ತಾಲೂಕಿನ ರಾಮಾಂಜನೇಯ ಬಡಾವಣೆಯಲ್ಲಿ ಮನೆಗೆ ಬಣ್ಣ ಬಳಿಯುವ ನೆಪದಲ್ಲಿ ಬಂದ ಪೇಂಟರ್‌ಗಳು ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ನಿತ್ಯಾ ಮತ್ತು ಚಂದ್ರಶೇಖರ್ ದಂಪತಿಗಳ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, 254 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿವೆ. ಮನೆಗೆ ಪೇಂಟಿಂಗ್ ಕೆಲಸಕ್ಕೆ ಬಂದ ಲಿಂಗರಾಜು ಹಾಗೂ ಆತನ ಸಹಚರರು, ಮಾಲೀಕರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತಿದ್ದರು. ಈ ವೇಳೆ ಬೆಡ್‌ರೂಮ್‌ನಲ್ಲಿ …

Read More »

ಹಾಸನ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್‌ ಬರ್ಬರ ಹತ್ಯೆ

ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಎದುರು ತಡರಾತ್ರಿ ರೌಡಿಶೀಟರ್ ಮಂಜೇಶ್ ಕುಮಾರ್ (43) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ಮೂಲತಃ ಹಾಸನ ಜಿಲ್ಲೆಯವರಾದ ಮಂಜೇಶ್ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದು, ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದರು. ಕೆಲಸದ ನಿಮಿತ್ತ ಹಾಸನಕ್ಕೆ ಬಂದಿದ್ದ ವೇಳೆ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು, ಒಂಟಿಯಾಗಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ತಲೆ, ಹೊಟ್ಟೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗೊಳಿಸಿ ಕೊಲೆ ಮಾಡಿ …

Read More »

ದೆಹಲಿ ವಿಮಾನ ನಿಲ್ದಾಣದಲ್ಲಿ ₹5.38 ಕೋಟಿ ಮೌಲ್ಯದ 15.38 ಕೆ.ಜಿ ಗಾಂಜಾ ವಶ

ದೆಹಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ₹5.38 ಕೋಟಿ ಮೌಲ್ಯದ 15.38 ಕೆ.ಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ. ಕೌಲಾಲಂಪುರದಿಂದ ಬಂದ ಪ್ರಯಾಣಿಕರ ಬ್ಯಾಗ್‌ನಲ್ಲಿದ್ದ ಎರಡು ಗೀಸರ್‌ಗಳ ಒಳಗೆ ಗಾಂಜಾವನ್ನು ಅಡಗಿಸಿಡಲಾಗಿತ್ತು. ಅನುಮಾನಾಸ್ಪದ ವರ್ತನೆಯ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದ ವೇಳೆ ಮಾದಕ ವಸ್ತು ಪತ್ತೆಯಾಗಿದೆ. 145 ವ್ಯಾಕ್ಯೂಮ್-ಸೀಲ್ಡ್ ಪ್ಯಾಕ್‌ಗಳಲ್ಲಿ ಸಂಗ್ರಹಿಸಿದ್ದ ಗಾಂಜಾವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಕಳ್ಳಸಾಗಣೆ ಜಾಲದ ಸಂಪರ್ಕಗಳ …

Read More »

ಕೈ ನರ ಕತ್ತರಿಸಿ, ತಲೆ ಜಜ್ಜಿ ಭೀಕರ ಕೊಲೆ: 1,400 ಕಿಮೀ ದೂರದಿಂದ ಬಂದು ಸ್ಕೆಚ್ ಹಾಕಿದ ದಂಪತಿ!

ದೆಹಲಿ ವಿಶ್ವವಿದ್ಯಾಲಯದ ಮಹಿಳಾ ಸಹಾಯಕ ಪ್ರಾಧ್ಯಾಪಕಿಯೊಬ್ಬರನ್ನು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ದಂಪತಿ ಹಾಗೂ ಅವರ 13 ವರ್ಷದ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನಲ್ಲಿರುವ ಫ್ಲಾಟ್‌ನಲ್ಲಿ ಪ್ರಾಧ್ಯಾಪಕಿಯ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ಬರ್ಧಮಾನ್‌ನಲ್ಲಿದ್ದ ಹಳೆಯ ಮನೆಯನ್ನು ಮಾರಲು ನಿರಾಕರಿಸಿದ್ದ ಕಾರಣ ಆರೋಪಿತ ದಂಪತಿ ಕೊಲೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ದೆಹಲಿಗೆ ಬಂದು ಪರಿಚಯದ ನೆಪದಲ್ಲಿ ಫ್ಲಾಟ್‌ಗೆ ಪ್ರವೇಶಿಸಿ, …

Read More »

ರಸ್ತೆ ಅಪಘಾತ: ವಾಹನಗಳಿಗೆ ಢಿಕ್ಕಿ ಹೊಡೆದ ಬಸ್; ಓರ್ವ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮುಂಬೈನ ದಾದರ್ ರೈಲು ನಿಲ್ದಾಣದ ಸಮೀಪ ಸೋಮವಾರ ಬೆಳಗ್ಗೆ ಬೆಸ್ಟ್ ಬಸ್ ನಿಯಂತ್ರಣ ತಪ್ಪಿ ಐದು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ವೇಗವಾಗಿ ಬಂದ ಬಸ್ ದ್ವಿಚಕ್ರ ವಾಹನ, ಎಲೆಕ್ಟ್ರಿಕ್ ಬೈಕ್, ಎಲೆಕ್ಟ್ರಿಕ್ ಕಾರು, ಟ್ಯಾಕ್ಸಿ ಹಾಗೂ ಬಲೆನೋ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 22-25 ವರ್ಷದ ಅಪರಿಚಿತ ಯುವಕ …

Read More »

ಪೊಲೀಸ್ ಠಾಣೆ ಪಕ್ಕದಲ್ಲೇ ಡೀಲ್‌, ವ್ಯಕ್ತಿಗೆ 70 ಸಾವಿರ ಪಂಗನಾಮ – ಮತ್ತೆ ಕೈಚಳಕ ತೋರಿಸಿದ ಸಿಗ್ಲಿ ಬಸ್ಯಾ!

ದಾವಣಗೆರೆ ಜಿಲ್ಲೆಯಲ್ಲಿ ವಂಚನೆ ಪ್ರಕರಣಗಳಿಗೆ ಕುಖ್ಯಾತನಾಗಿರುವ “ಸಿಗ್ಲಿ ಬಸ್ಯಾ” ವಿರುದ್ಧ ಮತ್ತೊಂದು ಮೋಸ ಪ್ರಕರಣ ದಾಖಲಾಗಿದೆ. ಕಡಿಮೆ ದರದಲ್ಲಿ 10 ಗ್ರಾಂ ಚಿನ್ನ ಕೊಡಿಸುವುದಾಗಿ ನಂಬಿಸಿ ನ್ಯಾಮತಿ ತಾಲೂಕಿನ ಶಿವರಾಜ್ (59) ಅವರಿಂದ ₹70 ಸಾವಿರ ಪಡೆದು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಶಿವರಾಜ್ ಅವರನ್ನು ಜಗಳೂರಿಗೆ ಕರೆತಂದ ಆರೋಪಿ, ಪೊಲೀಸ್ ಠಾಣೆ ಪಕ್ಕದ ಹೋಟೆಲ್‌ನಲ್ಲಿ ಹಣ ಪಡೆದು “ಚಿನ್ನ ತಂದುಕೊಡುತ್ತೇನೆ” ಎಂದು ಹೇಳಿ ನಾಪತ್ತೆಯಾಗಿದ್ದಾನೆ. ಬಳಿಕ ವಿವಿಧ ನೆಪ ಹೇಳಿ …

Read More »

ಟೀ ಕುಡಿಯಲು ಹೋಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ: ಟೀ ಕುಡಿಯಲು ಹೋಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಭದ್ರಾವತಿಯಲ್ಲಿ ಸೋಮವಾರ (ಜೂ.08) ನಡೆದಿದೆ. ವಿಶ್ವ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಭದ್ರಾವತಿ ನಗರದ ಅನ್ವರ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಭದ್ರಾವತಿ ಹಳದಮ್ಮ ಬೀದಿಯ ನಿವಾಸಿಯಾದ ವಿಶ್ವ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಎರಡು ಕೈ ತುಂಡಾಗುವ ರೀತಿ ಹಾಗೂ ಕುತ್ತಿಗೆ ಭಾಗಕ್ಕೆ ಹರಿತವಾದ ಆಯುಧದಿಂದ ಹಲ್ಲೆ …

Read More »