Breaking News

Breaking News

ಬೆಂಗಳೂರು: ಹಲ್ಲೆ ನಡೆಸಿ ಆಭರಣ ದೋಚಿದ್ದ ಆರೋ‍ಪಿ ಸೆರೆ

ಬೆಂಗಳೂರು: ಮನೆಗೆ ನುಗ್ಗಿ ಗೃಹಿಣಿಯ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗೇನಹಳ್ಳಿಯ ಅಸ್ಲಂ ಪಾಷಾ ಬಂಧಿತನಾಗಿದ್ದು, ಆತನಿಂದ ₹6.70 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಸಿಐಎಲ್ ಲೇಔಟ್ ನಿವಾಸಿ ಜಯಶ್ರೀ ಅವರ ಮನೆಗೆ ನುಗ್ಗಿ ಕೃತ್ಯ ಎಸಗಿದ್ದ ಎನ್ನಲಾಗಿದೆ. ಮನೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ …

Read More »

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಪ್ರಕಟ

ದಾವಣಗೆರೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿದೆ. 2023ರಲ್ಲಿ ಬಾಲಕಿಯನ್ನು ಪುಸಲಾಯಿಸಿ ಬಳ್ಳಾರಿ ಜಿಲ್ಲೆಯ ಕುಡಿತಿನಿಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ವಿರೂಪಾಕ್ಷಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಬಿಳಿಚೋಡು ಠಾಣೆ ಪೊಲೀಸರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಆರೋಪ ಸಾಬೀತಾದ …

Read More »

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ ₹1 ಲಕ್ಷ ವಂಚನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತೆ ಎಂದು ಪರಿಚಯಿಸಿಕೊಂಡ ಮಹಿಳೆ, ವಿದೇಶಿ ವಿನಿಮಯ ಶುಲ್ಕವಿಲ್ಲದೆ ಹಣ ತಲುಪಿಸುವುದಾಗಿ ನಂಬಿಸಿ ತನ್ನ ಪರಿಚಿತರ ಖಾತೆಗೆ ಹಣ ಜಮಾ ಮಾಡಿಸಿಕೊಂಡಿದ್ದಾಳೆ. ಹಣ ವರ್ಗಾವಣೆಯಾದ ಬಳಿಕ ಆಕೆ ಸಂಪರ್ಕ ಕಡಿತಗೊಳಿಸಿ ನಾಪತ್ತೆಯಾಗಿದ್ದಾಳೆ. ವಂಚನೆ ಅರಿತ ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, …

Read More »

ಬಳ್ಳಾರಿಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ : ಅತ್ಯಾಚಾರವೆಸಗಿ ಕೊಲೆ ಮಾಡಿರೋ ಶಂಕೆ!

ಬಳ್ಳಾರಿಯ ಅಂದ್ರಾಳ ಹಳ್ಳದಲ್ಲಿ ಬ್ಯಾಂಕ್ ಉದ್ಯೋಗಿ ಅನಿಷ ಫಾತಿಮಾ (38) ಅವರ ಮೃತದೇಹ ನಿಗೂಢವಾಗಿ ಪತ್ತೆಯಾಗಿದ್ದು, ಪ್ರಕರಣ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಸಹೋದ್ಯೋಗಿಗಳೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಅವರು ರಾತ್ರಿ ಪತಿಗೆ ಕರೆ ಮಾಡಿದ ಬಳಿಕ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮರುದಿನ ಬೆಳಗ್ಗೆ ಅವರ ಶವ ಅಂದ್ರಾಳ ಹಳ್ಳದ ಸಮೀಪ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಘಟನೆಯಿಂದ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆಘಾತಕ್ಕೊಳಗಾಗಿದ್ದಾರೆ. ಎಪಿಎಂಸಿ ಠಾಣೆ ಪೊಲೀಸರು, ಶ್ವಾನದಳ ಹಾಗೂ …

Read More »

ಅಂಗನವಾಡಿಯಿಂದ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ

ಭೋಪಾಲ್: ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರದ ಪ್ಯಾಕೆಟ್‌ ನಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಪಾಂಡುರ್ಣ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರ್ಘಾಟ್ ಕಮಠಿ ಗ್ರಾಮದ ಗರ್ಭಿಣಿ ವಚಲಾ ಬಾಯಿ ಧುರ್ವೆ ಅವರಿಗೆ ಅಂಗನವಾಡಿ ಕೇಂದ್ರದಿಂದ ಪೌಷ್ಟಿಕ ಆಹಾರದ ಲಡ್ಡುಗಳ ಪ್ಯಾಕೆಟ್ ನೀಡಲಾಗಿತ್ತು. ಅದರಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಮನೆಗೆ ತೆಗೆದುಕೊಂಡು ಹೋಗಿ ಪ್ಯಾಕೆಟ್ ತೆರೆದಾಗ ಅದರೊಳಗೆ ಇದ್ದ ಸತ್ತ …

Read More »

ಲಂಚ ಪಡೆಯುವಾಗಲೇ ಎಎಸ್‌ಐ, ಲೇಡಿ ಕಾನ್ಸ್‌ಟೇಬಲ್ ಲಾಕ್! ಪೋಕ್ಸೋ ಕೇಸ್ ಡೀಲ್ ವೇಳೆ ತಗ್ಲಾಕೊಂಡಿದ್ದು ಹೇಗೆ?

ಕಲಬುರಗಿಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಹೇಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಎಎಸ್‌ಐ ಶಿವಶರಣಪ್ಪ ಹಾಗೂ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಜ್ಯೋತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರರಿಂದ ಮೊದಲು ₹1,000 ಪಡೆದು, ಬಳಿಕ ₹10,000 ಲಂಚ ನೀಡುವಂತೆ ಒತ್ತಾಯಿಸಿದ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣ ಸ್ವೀಕರಿಸುವ ವೇಳೆ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ನಡೆದ …

Read More »

ನಡು ರಸ್ತೆಯಲ್ಲೇ ರೌಡಿಶೀಟರ್ ಕೊಚ್ಚಿ ಕೊಲೆ!

ದೇವನಹಳ್ಳಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅಡ್ಡಗಟ್ಟಿ ತಲವಾರಿನಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಖಲೀಮ್ ಖಾನ್ (35) ಎಂದು ಗುರುತಿಸಲಾಗಿದೆ. ಸೂಲಿಬೆಲೆಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಈತ ಇಂದು ಬೆಳಿಗ್ಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಬೈಕ್ ಅಡ್ಡಗಟ್ಟಿದ ಆಸಾಮಿಗಳು ತಲವಾರ್ ಬಳಸಿ ಖಲೀಮ್ …

Read More »

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ತಲ್ವಾರ್‌ನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಖಲೀಮ್ ಖಾನ್ (35) ಕೊಲೆಯಾದ ವ್ಯಕ್ತಿ. ಸೂಲಿಬೆಲೆಯಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದ ಖಲೀಮ್ ಖಾನ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತಲ್ವಾರ್‌ ಸೇರಿದಂತೆ ಮಾರಕಾಸ್ತ್ರಗಳನ್ನು ಬಳಸಿ ದೇಹದ ವಿವಿಧ ಭಾಗಗಳಿಗೆ ಸುಮಾರು 8ರಿಂದ 10 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ …

Read More »

ಜೂಜು ಅಡ್ಡೆ ಮೇಲೆ ದಾಳಿ : 16 ಜನ ಪೊಲೀಸರ ವಶಕ್ಕೆ!

ಬೀದರ್ : ಎರಡು ಪ್ರತ್ಯೇಕ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಗಾಂಧಿ ಗಂಜ್ ಠಾಣೆ ಪೊಲೀಸರು 16 ಜನರನ್ನು ವಶಕ್ಕೆ ಪಡೆದುಕೊಂಡಿದ್ಧಾರೆ. ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯಕುಮಾರ್ ಪಾಟೀಲ್ ಅವರ ಕಟ್ಟಡದ ಮೊದಲನೇ ಮಹಡಿಯಲ್ಲಿ 9 ರಿಂದ 10 ಜನರು ಜೂಜಾಟ ಆಡುತ್ತಿದ್ದಾರೆ ಎಂದು ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 99,100 ರೂ. ನಗದು, 4 ಲಕ್ಷ ರೂ. ಮೌಲ್ಯದ …

Read More »

ಭಾನುವಾರವೇ ಬಿಗ್ ಶಾಕ್..! ಐಎಎಸ್–ಐಪಿಎಸ್ ಅಧಿಕಾರಿಗಳ ದಿಢೀರ್ ಸಾಮೂಹಿಕ ವರ್ಗಾವಣೆ, ಸರ್ಕಾರದ ಗುಪ್ತ ನಡೆ ಏನು..?

ಭಾನುವಾರವೇ ದಿಢೀರ್ ಅಧಿಕಾರಿಗಳ ವರ್ಗಾವಣೆ..! ಐಎಎಸ್–ಐಪಿಎಸ್ ಅಧಿಕಾರಿಗಳ ಸಾಮೂಹಿಕ ಬದಲಾವಣೆ ಬೆಂಗಳೂರು: ರಾಜ್ಯದ ಆಡಳಿತ ಮತ್ತು ಪೊಲೀಸ್‌ ವಲಯದಲ್ಲಿ ಭಾನುವಾರವೇ ಅಚ್ಚರಿಯ ಬೆಳವಣಿಗೆ ನಡೆದಿದೆ. ಸಾಮಾನ್ಯವಾಗಿ ಕೆಲಸದ ದಿನಗಳಲ್ಲಿ ನಡೆಯುವ ಹಿರಿಯ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು, ಕರ್ನಾಟಕ ಸರ್ಕಾರ ಈ ಬಾರಿ ರಜಾದಿನದಲ್ಲೇ ನಡೆಸಿ ಹಲವು ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆ ರಾಜಕೀಯ ಹಾಗೂ ಆಡಳಿತ …

Read More »